ಪೊಲೀಸ್ ಹುತಾತ್ಮ ದಿನ ಆಚರಣೆ: ನಮ್ಮ ಸಂರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ಪೊಲೀಸರ್ ಸ್ಮರಣೆ ನಮ್ಮ ಕರ್ತವ್ಯ- ಟಿ. ಭೂಬಾಲನ
ವಿಜಯಪುರ: ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡುತ್ತಾ ಸಮಾಜದ ಭದ್ರತೆ ಹಾಗೂ ಸುರಕ್ಷತೆಗಾಗಿ ಪ್ರಾಣ ಮುಡುಪಾಗಿಟ್ಟ ಪೊಲೀಸ್ ಅವರನ್ನು ಸ್ಮರಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಹೇಳಿದ್ದಾರೆ. ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು. ನಮ್ಮ ರಕ್ಷಣೆ ಮಾಡುವ ಸಂದರ್ಭ ಹೋರಾಡಿ ತಮ್ಮ ಜೀವನ ತ್ಯಾಗ ಮಾಡಿದ ಪೊಲೀಸರಿಗೆ ಕಾಶ್ಮೀರದಿಂದ […]
ರಾಜ್ಯ ಸರಕಾರದ ವಿರುದ್ಧ ಗುಮ್ಮಟ ನಗರಿಯಲ್ಲಿ ಬಿಜೆಪಿ ಪ್ರತಿಭಟನೆ
ವಿಜಯಪುರ: ಸರಕಾರಿ ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ವಿದ್ಯುತ್ ಕಡಿತ ಹಾಗೂ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ನಗರದಲ್ಲಿ ಬೃಹತ್ ಪ್ರತಿಭಟನೆ ಜಾಥಾ ನಡೆಸಿದರು. ನಗರದ ಡಾ. ಬಿ. ಆರ್. ಅಂಬೇಡ್ಕರ ವೃತ್ತದಿಂದ ಆರಂಭವಾದ ಜಾಥಾ ಜಿಲ್ಲಾಧಿಕಾರಿಗಳ ಕಚೇರಿ ತಲುಪಿತು. ಈ ಸಂದರ್ಭದಲ್ಲಿ ಯಾವ ಅಧಿಕಾರಿಗಳೂ ಸ್ಥಳದಲ್ಲಿ ಇರದ ಕಾರಣ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಕೆಲ ಹೊತ್ತು ಧರಣಿ […]
ಕಾನಿಪ 37ನೇ ರಾಜ್ಯಮಟ್ಟದ ಪತ್ರಕರ್ತರ ಸಂಘದ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಚಿವ ಎಂ. ಬಿ. ಪಾಟೀಲ
ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕಳೆದ ಫೆ. 4 ಮತ್ತು 5 ರಂದು ನಡೆದ 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಸವಿ ನೆನಪಿಗಾಗಿ ಹೊರ ತಂದ ಕರ್ನಾಟಕ ಪತ್ರಕರ್ತರ ಸ್ಮರಣ ಸಂಚಿಕೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ನಗರದಲ್ಲಿ ಬಿಡುಗಡೆ ಮಾಡಿದರು. ಜಿ. ಪಂ. ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ […]
ಅಕ್ಟೋಬರ್ 16, 17 ರಂದು ಸಚಿವ ಎಂ. ಬಿ. ಪಾಟೀಲ ವಿಜಯಪುರ ಜಿಲ್ಲಾ ಪ್ರವಾಸ- ಇಲ್ಲಿದೆ ಕಾರ್ಯಕ್ರಮಗಳ ವೇಳಾಪಟ್ಟಿ
ವಿಜಯಪುರ: ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ಅಕ್ಟೋಬರ್ 16 ರಂದು ಸೋಮವಾರ ಮತ್ತು ಅಕ್ಟೋಬರ್ 17ರಂದು ಮಂಗಳವಾರ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅ. 16ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಸಭೆ ನಡೆಸಲಿದ್ದಾರೆ. ನಂತರ ಜಿಲ್ಲೆಯಲ್ಲಿರುವ ವಿದ್ಯುತ್ ಲೋಡ್ ಶೆಡ್ಡಿಂಗ್ ಸಮಸ್ಯೆ, ಮುಂದಿನ ಜನತಾ ದರ್ಶನ ಕಾರ್ಯಕ್ರಮ ನಿಗದಿ ಮಾಡುವುದು, ಕೋಟಿ ವೃಕ್ಷ ಅಭಿಯಾನ ಅಂಗವಾಗಿ ಆಯೋಜಿಸಲಾಗಿರುವ […]
ನೀರು ಪೂರೈಕೆ ವಿಳಂಬ ಸಹಿಸಲ್ಲ- 10 ದಿನಗಳಲ್ಲಿ ವಿಜಯಪುರ ನಗರಕ್ಕೆ ಸಮರ್ಪಕ ನೀರು ಪೂರೈಸಿ- ಡಿಸಿ ಟಿ. ಭೂಬಾಲನ ಖಡಕ್ ಸೂಚನೆ
ವಿಜಯಪುರ: ನಗರದ ಕುಡಿಯುವ ನೀರಿನ ಪೂರೈಕೆಯಲ್ಲಿ ಆಗುವ ವಿಳಂಬವನ್ನು ಸಹಿಸುವುದಿಲ್ಲ. ಯಾವುದೇ ತಾಂತ್ರಿಕ, ಸಿವಿಲ್ ಕಾಮಗಾರಿ ಸಮಸ್ಯೆ ನಿವಾರಿಸಿಕೊಂಡು 10 ದಿನಗಳೊಳಗಾಗಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ವಿಷಯದಲ್ಲಿ ಲೋಪ-ವಿಳಂಬ ಅನುಸರಿಸಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ನಗರದ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ […]
ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿದ ಜೆಡಿಎಸ್ ಮುಖಂಡರು- ಶ್ರೀ ಸಿದ್ದೇಶ್ವರ ಸ್ವಾಮೀಜಿ ಭಾವಚಿತ್ರದ ದರ್ಶನ ಪಡೆದ ನಾಯಕರು
ವಿಜಯಪುರ: ಕೋರ್ ಕಮಿಟಿ ಸಭೆಯ ಹಿನ್ನೆಲೆಯಲ್ಲಿ ಬಸವನಾಡು ವಿಜಯಪುರ ನಗರಕ್ಕೆ ಆಗಮಿಸಿದ್ದ ಜೆಡಿಎಸ್ ಮುಖಂಡರು ಜ್ಞಾನಯೋಗಾಶ್ರಮಕ್ಕೆ ತೆರಳಿ ವೇಂದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮೀಜಿಯವರ ಗದ್ದುಗೆ ಮತ್ತು ನಡೆದಾಡುವ ದೇವರು ಶ್ರೀ ಸಿದ್ಧೇಶ್ವರ ಅವರ ಭಾವಚಿತ್ರದ ದರ್ಶನ ಪಡೆದರು. ಈ ಸಂದರ್ಭದಲ್ಲಿ ಆಶ್ರಮಕ್ಕೆ ಆಗಮಿಸಿದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ. ಟಿ. ದೇವೇಗೌಡ, ಮಾಜಿ ಸಚಿವ ಬಂಡಪ್ಪ ಕಾಶೆಂಪೂರ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ, ಮಾಜಿ ಶಾಸಕ ಡಾ. ದೇವಾನಂದ ಚವ್ಹಾಣ, ನಾಡಗೌಡ, […]
ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ- ಉಕ್ಕಲಿಯಲ್ಲಿ ರೈತರಿಂದ ಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ
ವಿಜಯಪುರ: ಪಂಪಸೆಟ್ ಗಳಿಗೆ ಕನಿಷ್ಠ ಏಳು ಗಂಟೆ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ರೈತರು ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿಯಲ್ಲಿ ಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾದ್ಯಂತ ಬರ ಆವರಿಸಿರುವ ಹಿನ್ನೆಲೆಯಲ್ಲಿ ನೀರಿಲ್ಲದೆ ಬೆಳೆಗಳು ಒಣಗುತ್ತಿವೆ. ಮತ್ತೋಂದೆಡೆ ಭಾವಿ ಮತ್ತು ಕೊಳವೆ ಭಾವಿಗಳಿಗೆ ಕೆಲವು ಕಡೆಗಳಲ್ಲಿ ನೀರಿದ್ದರೂ ಅಸಮರ್ಪಕ ವಿದ್ಯುತ್ ಪೂರೈಕೆಯಿಂದಾಗಿ ರೈತರ ಸಂಕಷ್ಟಗಳಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ದಿನಕ್ಕೆ ಕೇವಲ 2-3 ಗಂಟೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದ್ದು, ಅದೂ ಕೂಡ ಮಧ್ಯೆ ಕಡಿತವಾಗುತ್ತಿದೆ. ಸರಕಾರ […]
ಕಾನೂನು ಪಾಲನೆಯೊಂದಿಗೆ ಮಾನವೀಯ ಮನೋಭಾವದಿಂದ ಕಾರ್ಯನಿರ್ವಹಿಸಿ- ಜಿ. ಪಂ. ಸಿಇಓ ರಾಹುಲ್ ಶಿಂಧೆ
ವಿಜಯಪುರ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕಟ್ಟುನಿಟ್ಟಾಗಿ ನಿಯಮ ಪಾಲಿಸುವುದರೊಂದಿಗೆ ಮಾನವೀಯ ನೆಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಹೇಳಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಮನರೇಗಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಪ್ರಸ್ತುತ ಜಿಲ್ಲೆಯ 12 ತಾಲೂಕುಗಳಲ್ಲಿ ಬರ ಘೋಷಣೆಯಾಗಿದೆ. ಗ್ರಾಮೀಣ ಜನರು ಸಂಕಷ್ಟಕ್ಕೆ […]
ಬಸವನ ಬಾಗೇವಾಡಿ ತಾ. ಪಂ. ಗೆ ಜಿ. ಪಂ. ಸಿಇಓ ರಾಹುಲ್ ಶಿಂಧೆ ಭೇಟಿ- ಸಮರ್ಪಕವಾಗಿ ಕಾರ್ಯ ನಿರ್ವಹಣೆಗೆ ಸೂಚನೆ
ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಅವರು ಬಸವನ ಬಾಗೇವಾತಿ ತಾಲೂಕು ಪಂಚಾಯಿತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾ. ಪಂ. ಯ ನಾನಾ ವಿಭಾಗಗಳ ಪರಿಶೀಲನೆ ನಡೆಸಿದ ಅವರು, ಕಚೇರಿಗೆ ನಾನಾ ಕಾರ್ಯಗಳಿಗಾಗಿ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಯಾವುದೇ ಕಾರ್ಯಕ್ಕಾಗಿ ವಿಳಂಭ ಧೋರಣೆ ಅನುಸರಿಸದೇ ನಿಗದಿತ ಕಾಲಾವಧಿಯಲ್ಲಿ ಸಾರ್ವಜನಿಕರ ಕೆಲಸ ಮಾಡಿಕೊಡಬೇಕು. ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು. […]
ವಿಜಯಪುರ ಸಂಚಾರ ಸಮಸ್ಯೆಗಳಿಗೆ 8277971008 ಸಹಾಯವಾಣಿ ಆರಂಭ- ಎಸ್ಪಿ ಸೋನಾವಣೆ- ಕರೆ ಮಾಡಿ ಇಲ್ಲವೆ ವಾಟ್ಸಾಪ್ ಮೂಲಕ ಮಾಹಿತಿ ನೀಡಲು ಸಲಹೆ
ವಿಜಯಪುರ: ನಗರದ ಸಂಚಾರ ದಟ್ಟಣೆ ಮತ್ತೀತರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಲು ಪೊಲೀಸ್ ಇಲಾಖೆ ಹೊಸ ಹೆಲ್ಪಲೈನ್ ವ್ಯವಸ್ಥೆ ಮಾಡಿದೆ. ಈ ಕುರಿತು ಮಾಹಿತಿ ನೀಡಿರುವ ಎಸ್ಪಿ ಸೋನಾವಣೆ ರಿಷಿಕೇಶ ಭಗವಾನ, ಸಾರ್ವಜನಿಕರು 827791008 ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಅಥವಾ ವಾಟ್ಸಾಪ್ ಗೆ ಸಂದೇಶ ಕಳುಹಿಸುವ ಮೂಲಕ ದೂರು ನೀಡಬಹುದು ಎಂದು ತಿಳಿಸಿದ್ದಾರೆ. ಈ ಹೊಸ ನಂಬರಿಗೆ ಕರೆ ಮಾಡಿ ಅಥವಾ ವಾಟ್ಸಾಪ್ ಮೂಲಕ ಮಾಹಿತಿ ನೀಡಿದರೆ, ಟ್ರಾಫಿಕ್ ಜಾಮ್ ಸೇರಿದಂತೆ ಸಂಚಾರಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ […]