ಭೂಹಗರಣ ಸಿಓಡಿ ತನಿಖೆಗೆ ವಹಿಸಿ- ಸಚಿವ ಎಂ. ಬಿ. ಪಾಟೀಲ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿಿ

ವಿಜಯಪುರ ಜಿಲ್ಲೆಯಲ್ಲಿ ನಡೆದಿರುವ ಭೂ ಹಗರಣ ಕುರಿತು ಸಿಓಡಿ ತನಿಖೆ ನಡೆಸುವಂತೆ ಆಗ್ರಹಿಸಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅಪ್ಪು ಪಟ್ಟಣಶೆಟ್ಟಿ, ತಮ್ಮ ಬೇಡಿಕೆಗೆ ಸ್ಪಂದಿಸಿರುವ ಸಚಿವರು ತಾವೂ ಕೂಡ ಈ ನಿಟ್ಟಿನಲ್ಲಿ ಸರಕಾರಕ್ಕೆ ಮನವರಿಗೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ತಾವು ಸಚಿವರನ್ನು ಭೇಟಿಯಾದ ಸಂದರ್ಭದಲ್ಲಿ ವಿಜಯಪುರ ನಗರದಲ್ಲಿ ನಕಲಿ ಭೂ-ದಾಖಲೆ […]

ಮತ ಎಣಿಕೆ ಪೂರ್ವ ಸಿದ್ಧತೆ ತರಬೇತಿ: ವ್ಯವಸ್ಥಿತ ಮತ ಎಣಿಕೆಗೆ ಜಿಲ್ಲಾಧಿಕಾರಿ ಸೂಚನೆ

ವಿಜಯಪುರ: ಮತ ಎಣಿಕೆಗೆ ನಿಗಧಿಪಡಿಸಿರುವ ಸೂಚನೆಗಳ ಕ್ರಮಬದ್ಧತೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗದಂತೆ ನಿಯಮಗಳನ್ನು ಪರಿಪಾಲಿಸಿ ಮತ ಎಣಿಕೆ ಕಾರ್ಯವನ್ನು ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ.   ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಲೋಕಸಭಾ ಚುನಾವಣೆ – 2024ರ ಮತ ಎಣಿಕೆ ಪೂರ್ವ ಸಿದ್ಧತೆ ತರಬೇತಿಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಮತ ಎಣಿಕೆಗೆ ನಿಯೋಜನೆಗೊಂಡ ಅಧಿಕಾರಿ ಮತ್ತು ಸಿಬ್ಬಂದಿಗೆ ಅವರು ಸಲಹೆ ಸೂಚನೆ ನೀಡಿದರು. ಮತ ಎಣಿಕೆ ಪ್ರಕ್ರಿಯೆ ಜೂ. 4ರಂದು ವಿಜಯಪುರ ಸೈನಿಕ ಶಾಲೆಯಲ್ಲಿ […]

ವಿಜಯಪುರ ನಗರದ ಪ್ರತಿಷ್ಠಿತ ಹೋಟೇಲುಗಳಿಗೆ ದಿಡೀರ್ ಭೇಟಿ ನೀಡಿದ ಎಸಿ ಶ್ವೇತಾ ಮೋಹನ ಬೀಡಿಕರ- ಯಾಕೆ ಗೊತ್ತಾ?

ವಿಜಯಪುರ: ಉಪವಿಭಾಗಾಧಿಕಾರಿ ಶ್ವೇತಾ ಮೋಹನ ಬಿಡಿಕರ ನಗರದ ನಾನಾ ಹೋಟೇಲುಗಳಿಗೆ ದಿಢೀರ್ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು. ಸ್ವಚ್ಛ ಗ್ರೀನ್ ಲೀಫ್ ರೇಟಿಂಗ್ ಇನ್ ಹಾಸ್ಪಿಟ್ಯಾಲಿಟಿ ಫೆಸಿಲಿಟೀಸ್(Swachchta Green Leaf Rating in Hospitality facilities) ಗೆ ಸಂಬಂಧಿಸಿದಂತೆ ರೇಟಿಂಗ್ ನೀಡುವ ಸಂಬಂಧ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ಪ್ರವಾಸೋದ್ಯಮ ತಾಣದ ಸುತ್ತಮುತ್ತಲಿರುವ ಹೋಟೆಲ್ ಗಳಾದ ಕೆರೈಡ್ ಹೋಟೆಲ್, ಹೊಟೇಲ್ ಮಧುವನ ಇಂಟರನ್ಯಾಷನಲ್, ದಿ ಗ್ರಾಂಡ್ ಪರ್ಲ್ ಹೋಟೆಲ್, ಸ್ಪೂರ್ತಿ ರೆಸಾರ್ಟ್, ದಿ […]

ಭೂತನಾಳ ಕೆರೆಗೆ ಆಲಮಟ್ಟಿ ನೀರು ಹರಿದು ಬಂತು- ವಿಜಯಪುರ ಜನರಲ್ಲಿ ಸಂತಸ ತಂತು

ವಿಜಯಪುರ: ನಗರದ ಕುಡಿಯುವ ನೀರಿನ ತೊಂದರೆ ನೀಗಿಸಲು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಕೈಗೊಂಡ ಪ್ರಯತ್ನ ಫಲ ನೀಡಿದ್ದು, ಈಗ ಭೂತನಾಳ ಕೆರೆಗೆ ನೀರು ಹರಿದು ಬರುತ್ತಿದೆ. ಭೀಕರ ಬರ ಹಾಗೂ ಬೇಸಿಗೆ ಇರುವದರಿಂದ ಕಾಲುವೆಗಳ ಮೂಲಕ ಕುಡಿಯುವ ನೀರು ಪೂರೈಸಲು ಸಚಿವರು ಒಂದು ತಿಂಗಳಿನಿಂದ ನಿರಂತರವಾಗಿ ಜಿಲ್ಲಾಧಿಕಾರಿಗಳ ಮೂಲಕ ಪ್ರಾದೇಶಿಕ ಆಯುಕ್ತರಿಗೆ ಕೋರಿದ್ದರು.  ಅದಕ್ಕೆ ಆಯುಕ್ತರು ಸ್ಪಂದಿಸಿದ್ದು, ಚುನಾವಣೆ ಆಯೋಗದ ಅನುಮತಿ ಪಡೆದು ನೀರು ಬಿಡುಗಡೆ […]

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆಗೈದ ಇಂಗ್ಲಿಷ್, ಕನ್ನಡ, ಉರ್ದು ಮಾಧ್ಯಮ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತದಿಂದ ಸನ್ಮಾನ

ವಿಜಯಪುರ: ಸತತ ಪರಿಶ್ರಮ ಹಾಗೂ ಆತ್ಮಸ್ಥೈರ್ಯದಿಂದ ಬದುಕಿನಲ್ಲಿ ಸಾಧನೆ ಮಾಡಲು ಸಾಧ್ಯ.  ಬಡತನ ಮತ್ತು ಬದುಕಿನ ಕಷ್ಟ ಕಾರ್ಪಣ್ಯಗಳೊಂದಿಗೆ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಸತತ ಓದಿನಿಂದ ಏನನ್ನಾದರೂ ಸಾಧನೆ ಮಾಡಬೇಕೆಂಬ ಛಲದೊಂದಿಗೆ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳು ಇತರರಿಗೆ ಮಾದರಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ.  ‘ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯೊಂದಿಗೆ 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಇಂಗ್ಲಿಷ್, ಕನ್ನಡ ಹಾಗೂ ಉರ್ದು ಮಾಧ್ಯಮಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಮೊದಲ ಮೂರು […]

ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಜಿಲ್ಲೆ ಉತ್ತಮ ಸಾಧನೆ: ಡಿಸಿ ಟಿ. ಅಭಿನಂದನೆ

ವಿಜಯಪುರ: ರಾಜ್ಯದಲ್ಲಿ ಮಾರ್ಚ್– ಏಪ್ರಿಲ್‌ ನಲ್ಲಿ ನಡೆದ ಎಸ್. ಎಸ್. ಎಲ್. ಸಿ ಪರೀಕ್ಷೆಯ ಫಲಿತಾಂಶದಲ್ಲಿ ಜಿಲ್ಲೆಯು ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ತೋರಿದ್ದು, ಇದಕ್ಕಾಗಿ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕ ವೃಂದ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಭಿನಂದನೆ ತಿಳಿಸಿದ್ದಾರೆ. ಈ ಬಾರಿಯ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ವಿಜಯಪುರ ಶೈಕ್ಷಣಿಕ ಜಿಲ್ಲೆಯು ರಾಜ್ಯದಲ್ಲಿ 11 ನೇ ಸ್ಥಾನ (ಕಳೆದ ಬಾರಿಯೂ 11 ನೇ ಸ್ಥಾನ) ಪಡೆದಿದ್ದು, ಶೇ. 79.31 ಫಲಿತಾಂಶ ಹೊಂದಿದೆ. ಪರೀಕ್ಷೆಗೆ […]

ದ್ವಿತೀಯ ಪಿಯುಸಿ ಪರೀಕ್ಷೆ- 2 ಸೂಸುತ್ರವಾಗಿ ನಡೆಸಲು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೂಚನೆ

ವಿಜಯಪುರ: ಜಿಲ್ಲೆಯಲ್ಲಿ ಒಟ್ಟು 5 ಕೇಂದ್ರಗಳಲ್ಲಿ ಏಪ್ರೀಲ್ 29 ರಿಂದ ಮೇ 16ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿವೆ. ಮುಕ್ತ ಹಾಗೂ ಪಾರದರ್ಶಕವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಾರ್ಯೋನ್ಮುಖರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೂಚನೆ ನೀಡಿದರು. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಭಗಣದಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷೆ- 2ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ದಿನದಂದು ಜಿಲ್ಲಾ ಖಾಜಾನೆ ಭದ್ರತಾ ಕೊಠಡಿಯಿಂದ ಗೌಪ್ಯ ಬಂಡಲ್ ಗಳನ್ನು […]

ಮೂರ್ನಾಲ್ಕು ದಿಗಳಿಗೊಮ್ಮೆಯಾದರೂ ವಿಜಯಪುರ ನಗರಕ್ಕೆ ಕುಡಿಯಲು ನೀರು ಪೂರೈಸಲು ಕ್ರಮ ಕೈಗೊಳ್ಳಿ- ಅಧಿಕಾರಿಗಳಿಗೆ ಡಿಸಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ವಿಜಯಪುರ ನಗರಕ್ಕೆ ಕನಿಷ್ಠ ಮೂರ್ನಾಲ್ಕು ದಿನಗಳಿಗೊಮ್ಮೆಯಾದರೂ ಕುಡಿಯಲು ನೀರು ಪೂರೈಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರಿನ ನಿರ್ವಹಣೆ ಕುರಿತು ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸಧ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ ಆದ್ಯಾಗೂ ಅಧಿಕಾರಿಗಳು ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಜಿಲ್ಲೆಯಲ್ಲಿ ಲಭ್ಯವಿರುವ ನೀರಿನ ಸದ್ಭಳಕೆಯೊಂದಿಗೆ ಸಮರ್ಪಕವಾಗಿ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು. ನಗರದಲ್ಲಿರುವ […]

ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ: ಪೊಲೀಸ್ ಸೇವೆ ಸ್ಮರಣೀಯ- ಡಿಸಿ ಟಿ. ಭೂಬಾಲನ್

ವಿಜಯಪುರ: ಪೊಲೀಸ್ ಪೇದೆಯಿಂದ ಹಿಡಿದು ಐಜಿಪಿ ವರೆಗಿನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯು ಸದಾ ಸ್ಮರಿಸುವಂತಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ. ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಲಾಗಿದ್ದ ವಿಜಯಪುರ ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದಲ್ಲಿ ಎಷ್ಟೇ ಸಮಸ್ಯೆಗಳು ಉಧ್ವ್ಬವಿಸಿದರೂ ಕಾನೂನನ್ನು ಅನುಷ್ಠಾನಗೊಳಿಸಿ ಸಾರ್ವಜನಿಕರು ನೆಮ್ಮದಿಯಿಂದ ಇರಲು ಪೊಲೀಸ್ ಇಲಾಖೆ ಶ್ರಮಿಸುವದರಿಂದ ಪೊಲೀಸ್ ಸೇವೆ ಸ್ಮರಣೀಯವಾಗಿದೆ.  ನಿವೃತ್ತ ಪೊಲೀಸ್ ಸಿಬ್ಬಂದಿ […]

ಬಿರುಗಾಳಿ ಸಹಿತ ಮಳೆಗೆ ಧರೆಗುರುಳಿದ 1000ಕ್ಕೂ ಹೆಚ್ಚು ಬಾಳೆಗಿಡಗಳು- ಕೈಗೆ ಬಂದ ತುತ್ತು ಬಾಯಿಗೆ ಬಾರದೆ ಕಂಗಾಲಾದ ರೈತ

ವಿಜಯಪುರ: ಬಿರುಗಾಳಿ ಸಹಿತ ಮಳೆಗೆ ಬಾಳೆ ತೋಟ ನಾಶವಾದ ಘಟನೆ ವಿಜಯಪುರ ತಾಲೂಕಿನ ಬೊಮ್ಮನಳ್ಳಿಯಲ್ಲಿ ಶನಿವಾರ ಸಂಜೆ ನಡೆದಿದೆ. ಮುರುಗೆಪ್ಪ ಚೌಗುಲಾ ಎಂಬುವರಿಗೆ ಸೇರಿದ ತೋಟದಲ್ಲಿ ಈ ಘಟನೆ ನಡೆದಿದ್ದು, ಶನಿವಾರ ಸಂಜೆ ಬೀಸಿದ ಬಿರುಗಾಳಿ ಸಹಿತ ಮಳೆಗೆ ಇಡೀ ಬಾಳೆ ತೋಟ ಹಾಳಾಗಿದೆ.  ಮುರುಗೆಪ್ಪ ಚೌಗುಲಾ ಸುಮಾರು ಒಂದು ಕಾಲು ಎಕರೆ ಪ್ರದೇಶದಲ್ಲಿ ಬಾಳೆ ಗಿಡಗಳನ್ನು ಬೆಳೆದಿದ್ದರು.  ಫಸಲು ಕೂಡ ಉತ್ತಮವಾಗಿತ್ತು.  ಇನ್ನು ಕೆಲವೇ ದಿನಗಳಲ್ಲಿ ಕಟಾವು ಮಾಡಬೇಕಿತ್ತು.   ಆದರೆ, ಶನಿವಾರ ಸಂಜೆ ಬೀಸಿದ […]