ಪಂ. ದೀನ ದಯಾಳ ಉಪಾಧ್ಯಾಯ ಅಂತ್ಯೋದಯ ಪರಿಕಲ್ಪನೆಯ ಹರಿಕಾರ: ಪ್ರಕಾಶ ಅಕ್ಕಲಕೋಟ

ವಿಜಯಪುರ: ಪಂ. ದೀನ ದಯಾಳ ಉಪಾಧ್ಯಾಯ ಅಂತ್ಯೋದಯ ಪರಿಕಲ್ಪನೆಯ ಹರಿಕಾರರಾಗಿದ್ದಾರೆ ಎಂದು ಬಿಜೆಪಿ ಬೆಳಗಾವಿ ವಿಭಾಗದ ಸಂಘಟನಾ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಹೇಳಿದ್ದಾರೆ. ನಗರದಲ್ಲಿ ಬಿಜೆಪಿ ನಗರ ಘಟಕದ ವತಿಯಿಂದ ವಾರ್ಡ್ ನಂ. 35 ರಲ್ಲಿ ಪಂ. ದೀನದಯಾಳ ಉಪಾಧ್ಯಾಯ ಅವರ ಜನ್ಮದಿನ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಅವರು ಮಾತನಾಡಿದರು. ಅಂತ್ಯೋತದಯ ಪರಿಕಲ್ಪನೆ ಹರಿಕಾರರಾದ ಪಂ. ದೀನ ದಯಾಳರು ಒಬ್ಬ ಉದಾತ್ತ ಮತ್ತು ಆದರ್ಶವ್ಯಕ್ತಿಯಾಗಿದ್ದಾರೆ.  ಪ್ರಚಂಡ ಸಂಘಟನಾ ಸಾಮರ್ಥ್ಯ ಹೊಂದಿದವರಾಗಿದ್ದ ಅವರು […]

ಸಮಸ್ಯೆ ಮುಕ್ತ ಸಮಾಜ ನಿರ್ಮಾಣಕ್ಕೆ ಸರಕಾರ ಜನತಾ ದರ್ಶನ ಕಾರ್ಯಕ್ರಮದ ಮೂಲಕ ದಿಟ್ಟ ಹೆಜ್ಜೆ ಇಟ್ಟಿದೆ- ವಿಠ್ಠಲ ಧೋಂಡಿಬಾ ಕಟಕದೊಂಡ

ವಿಜಯಪುರ: ಸಂವಿಧಾನದ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಯೋಜನೆಗಳ ಲಾಭ ದೊರಕಿಸಿ, ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಮೂಲಕ ಸಮಸ್ಯೆಗಳ ಮುಕ್ತ ಸಮಾಜ ನಿರ್ಮಾಣಕ್ಕೆ ದಿಟ್ಟ ಹೆಜ್ಜೆಯನ್ನಿಟ್ಟು ಆರಂಭಿಸಿದ ಜನತಾ ದರ್ಶನ ಕಾರ್ಯಕ್ರಮದ ಪ್ರತಿಯೊಬ್ಬರೂ ಸದುಪಯೋಗ ಪಡೆದುಕೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಕೊಳ್ಳುವಂತೆ ನಾಗಠಾಣ ಮತಕ್ಷೇತ್ರದ ಶಾಸಕರಾದ ವಿಠ್ಠಲ ಕಟಕದೊಂಡ ಕರೆ ನೀಡಿದರು. ಜಿಲ್ಲಾಡಳಿತದ ವತಿಯಿಂದ ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ ಜನತಾ ದರ್ಶನಕ್ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಸಮಾಜದ ಕಟ್ಟ ಕಡೆಯ […]

ಶ್ರೀ ಜಗದ್ಗುರು ಪಂಚಾಚಾರ್ಯ ಪತ್ತಿನ ಸಹಕಾರ ಸಂಘಕ್ಕೆ ಈ ವರ್ಷ ರೂ. 4.50 ಲಕ್ಷ ನಿವ್ವಳ ಲಾಭ- ರಾಜಶೇಖರ ಮಗಿಮಠ

ವಿಜಯಪುರ: ನಗರದ ಶ್ರೀ ಜಗದ್ಗುರು ಪಂಚಾಚಾರ್ಯ ಪತ್ತಿನ ಸಹಕಾರ ಸಂಘ ಈ ವರ್ಷ ರೂ. 4.50 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ರಾಜಶೇಖರ ಮಗಿಮಠ ತಿಳಿಸಿದ್ದಾರೆ. ನಗರದಲ್ಲಿ ನಡೆದ ಸಂಘದ 22ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಮಾತನಾಡಿದ ಅವರು, ಬ್ಯಾಂಕು ಈ ವರ್ಷ ರೂ. 4.50 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ತಿಳಿಸಿದರು. 1928 ಸಂಘದ ಸದಸ್ಯರು ಸಹ ಸದಸ್ಯರಿದ್ದು, ಸಂಘ ರೂ. 32.06 ಲಕ್ಷ ಷೇರು ಬಂಡವಾಳ ಹೊಂದಿದೆ.  […]

ಬ್ಯಾಂಕುಗಳಿಂದ ಸಾಲ ಪಡೆಯುವಾಗ ವಹಿಸುವ ಆಸಕ್ತಿ ಮರಳಿಸುವಾಗಲು ಇರಬೇಕು- ಶ್ರೀ ಗುರು ಶಾಂತಲಿಂಗ ಶಿವಾಚಾರ್ಯ

ವಿಜಯಪುರ: ಬ್ಯಾಂಕುಗಳಿಂದ ಸಾಲ ಪಡೆಯುವಾಗ ತೋರಿಸುವ ಆಸಕ್ತಿಯನ್ನು ಸಮಯಕ್ಕೆ ಸಾಲ ಮರುಪಾವತಿ ಮಾಡುವ ಮೂಲಕ ಬ್ಯಾಂಕಿನ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಬೊಮ್ಮನಹಳ್ಳಿಯ ಶ್ರೀ ಗುರು ಶಾಂತಲಿಂಗ ಶಿವಾಚಾರ್ಯರು ಹೇಳಿದ್ದಾರೆ. ನಗರದ ಎಪಿಎಂಸಿಯಲ್ಲಿರುವ ಶ್ರೀ ನೀಲಕಂಠೇಶ್ವರ ಮಂಗಲ ಕಾರ್ಯಾಲಯದಲ್ಲಿ ಶ್ರೀ ಸೌಹಾರ್ದ ಸಹಕಾರಿ ಸಂಘ 2022 -23ನೇ ಆರ್ಥಿಕ ವರ್ಷದ 4ನೇ ವಾರ್ಷಿಕ ಸರ್ವ ಸಾಧಾರಣ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ನೂರು ಜನರ ಹಣ ಕೂಡಿಸಿ ಒಬ್ಬರಿಗೆ ಸಾಲದ ರೂಪದಲ್ಲಿ ಕೊಡಬೇಕಾಗುತ್ತದೆ.  ಹಣ ತರುವುದು ಮತ್ತು ಕೊಡುವುದು […]

ಪ್ರತಿಷ್ಠಿತ ಶ್ರೀ‌ ಸಿದ್ಧೇಶ್ವರ ಸಹಕಾರಿ ಬ್ಯಾಂಕಿಗೆ ಈ ವರ್ಷ ರೂ. 1.22 ಕೋ. ನಿವ್ವಳ ಲಾಭ- ಅಧ್ಯಕ್ಷ ವಿಜಯಕುಮಾರ ಡಿ. ಇಜೇರಿ

ವಿಜಯಪುರ: ಜಿಲ್ಲೆಯ ಪ್ರತಿಷ್ಠಿತ 1.22 ಕೋ. ನಿವ್ವಳ ಲಾಭ- ಅಧ್ಯಕ್ಷ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಪ್ರಸಕ್ತ ಆರ್ಥಿಕ ವರ್ಷದಲ್ಲಿ ರೂ. 1. 22 ಕೋ. ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ವಿಜಯಕುಮಾರ ಡಿ. ಇಜೇರಿ ತಿಳಿಸಿದ್ದಾರೆ. ನಗರದ ಆಶ್ರಮ ರಸ್ತೆಯಲ್ಲಿರುವ ಶ್ರೀ ಪರಮಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಸಮುದಾಯ ಭವನದಲ್ಲಿ ನಡೆದ ಬ್ಯಾಂಕಿನ‌ 111ನೇ ಸರ್ವ ಸಾಧಾರಣ ಸಭೆಯನ್ನು ಉದ್ಘಾಟಿಸಿ ಅವರು‌ ಮಾತನಾಡಿದರು. ರಾಜ್ಯದ ಸಹಕಾರಿ ರಂಗದಲ್ಲಿ ಬೆಳೆದ ಕೆಲವೇ ಬ್ಯಾಂಕುಗಳಲ್ಲಿ ನಮ್ಮ […]

ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ -4ರ ಯೋಜನೆ- ಕಾಮಗಾರಿಗಳ ಪರಿಶೀಲನೆ ನಡಸಿದ ಡಿಸಿ ಟಿ. ಭೂಬಾಲನ್

ವಿಜಯಪುರ: ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಕೋಲ್ಹಾರ, ಮನಗೂಳಿ ಹಾಗೂ ನಿಡಗುಂದಿ ಪಟ್ಟಣ ಪಂಚಾಯಿತಿ ಮತ್ತು ಬಸವನ ಬಾಗೇವಾಡಿ ಪುರಸಭೆ ವ್ಯಾಪ್ತಿಯಡಿ ಕೈಗೊಂಡಿರುವ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ-4ರ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಕೋಲ್ಹಾರ, ಮನಗೂಳಿ ಹಾಗೂ ನಿಡಗುಂದಿ ಮತ್ತು ಬಸವನ ಬಾಗೇವಾಡಿಗೆ ಭೇಟಿ ನೀಡಿದ ಅವರು, ಈ ಕಾಮಗಾರಿಯ ಸಿಸಿ ರಸ್ತೆ ಹಾಗೂ ಡಾಂಬರ ರಸ್ತೆಗಳ ಪರಿಶೀಲನೆ ನಡೆಸಿದರು. ಅಂದಾಜು ಪತ್ರಿಕೆಯಂತೆ ಕಾಮಗಾರಿಯ ಅಳತೆ ಹಾಗೂ ಗುಣಮಟ್ಟ ಕಾಪಾಡಿಕೊಂಡು ಕಾರ್ಯ ನಿರ್ವಹಿಸಲು ಅಭಿಯಂತರರು, […]

ಪೌರ ಕಾರ್ಮಿಕರ ಯೋಜನೆಗಳ ಸದುಪಯೋಗ ಪಡೆದು ಉತ್ತಮ ಬದುಕು ರೂಪಿಸಿಕೊಳ್ಳಿ- ಮಹಾದೇವ ಮುರಗಿ ಕರೆ

ವಿಜಯಪುರ: ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಪೌರ ಕಾರ್ಮಿಕರ ಪಾತ್ರ ಅತೀ ಮುಖ್ಯವಾಗಿದೆ. ಪೌರ ಕಾರ್ಮಿಕರ ಹಿತ ಕಾಪಾಡಲು ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಉತ್ತಮ ಬದುಕು ರೂಪಿಸಿಕೊಳ್ಳುವಂತೆ ಪೌರ ಕಾರ್ಮಿಕರಿಗೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಕರೆ ನೀಡಿದ್ದಾರೆ. ನಗರಾಭಿವೃದ್ದಿ ಇಲಾಖೆ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ವತಿಯಿಂದ ನಗರದ ಬೇಗಂ ತಲಾಬ್ ಆವರಣದಲ್ಲಿ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಪೌರಕಾರ್ಮಿಕರ ಸೇವೆ […]

ವಿಜಯಪುರ ಡಿಸಿಸಿ ಬ್ಯಾಂಕಿಗೆ ರೂ. 14.30 ಕೋ. ನಿವ್ವಳ ಲಾಭ- ಬ್ಯಾಂಕಿನ ಅಧ್ಯಕ್ಷ ಶಿವಾನಂದ ಎಸ್. ಪಾಟೀಲ

ವಿಜಯಪುರ: ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ(DCC) ಬ್ಯಾಂಕು 2022-23ನೇ ಆರ್ಥಿಕ ವರ್ಷದಲ್ಲಿ ರೂ. 14.30 ಕೋ. ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಶಿವಾನಂದ ಎಸ್. ಪಾಟೀಲ ತಿಳಿಸಿದ್ದಾರೆ. ಬ್ಯಾಂಕಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕು ತನ್ನ ಎಲ್ಲ ಕಾರ್ಯಕ್ರಮಗಳನ್ನು ವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸಿ, ಆದಾಯ ತೆರಿಗೆ ಪೂರ್ವ ರೂ. 19.31 ಕೋ. ಲಾಭ ಗಳಿಸಿದ್ದು, ನಿಯಮಾನುಸಾರ ರೂ. 5.01 ಕೋ. ತೆರಿಗೆ ಪಾವತಿಸಿ ನಂತರ ರೂ. 14.30 ಕೋ. ನಿವ್ವಳ ಲಾಭ ಗಳಿಸಿದೆ. ಇದು […]

ಸೆ. 25 ರಂದು ಜನತಾ ದರ್ಶನ- ಅಹವಾಲು ಕುಂದು, ಕೊರತೆ ದಾಖಲಿಸಿ ಪರಿಹಾರ ಪಡೆದುಕೊಳ್ಳಲು ಡಿಸಿ ಟಿ. ಭೂಬಾಲನ ಮನವಿ

ವಿಜಯಪುರ: ಜಿಲ್ಲಾ ಮಟ್ಟದ ಅಹವಾಲುಗಳನ್ನು ಆಲಿಸಲು ಸೆ. 25ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಬೆ. 10 ಗಂಟೆಗೆ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲು-ಕುಂದು ಕೊರತೆ ದಾಖಲಿಸಿ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸಾರ್ವಜನಿಕರು ಹಲವಾರು ರೀತಿಯ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲು ಸಲ್ಲಿಸುತ್ತಿರುವುದರಿಂದ ಸದರಿ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ […]

ವಿಜಯಪುರ ಜಿಲ್ಲೆಯಲ್ಲಿ ಸೆ.25ರಂದು ಜನತಾ ದರ್ಶನ- ವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜನೆಗೆ ಡಿಸಿ ಟಿ. ಭೂಬಾಲನ ಸೂಚನೆ

ವಿಜಯಪುರ: ಜಿಲ್ಲಾ ಮಟ್ಟದ ಸಾರ್ವಜನಿಕರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜನತಾ ದರ್ಶನ  ಕಾರ್ಯಕ್ರಮ ಹಮ್ಮಿಕೊಂಡು ಪರಿಹಾರ ಒದಗಿಸಲು ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಸೆ.25ರಂದು ಬೆಳಿಗ್ಗೆ 10 ಗಂಟೆಗೆ    ನಗರದ ಕಂದಗಲ್ ಹನುಮಂತರಾಯ ರಂಗಮAದಿರದಲ್ಲಿ ಆಯೋಜಿಸಿದ ಜನತಾ ದರ್ಶನ ಕಾರ್ಯಕ್ರಮಕ್ಕೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ ಸೂಚನೆ ನೀಡಿದ್ದಾರೆ.  ನಗರದ ಜಿಲ್ಲಾಧಿಕಾರಿಗಳ ಕಚೇರಿ […]