ವಿಜಯಪುರ ನೂತನ ಎಸ್ಪಿ ಸೋನಾವಣೆ ರಿಷಿಕೇಶ ಭಗವಾನ ಅಧಿಕಾರ ಸ್ವೀಕಾರ
ವಿಜಯಪುರ: ವಿಜಯಪುರ ಜಿಲ್ಲಾ ನೂತನ ಎಸ್ಪಿಯಾಗಿ 2014ರ ಬ್ಯಾಚಿನ ಐಪಿಎಸ್ ಅಧಿಕಾರಿ ಸೋನಾವಣೆ ರಿಷಿಕೇಶ ಭಗವಾನ ಅಧಿಕಾರ ಸ್ವೀಕರಿಸಿದ್ದಾರೆ. ಸೆಪ್ಟೆಂಬರ್ 5 ರಂದು ರಾಜ್ಯ ಸರಕಾರ ಸೋನಾವಣೆ ರಿಷಿಕೇಶ ಭಗವಾನ ಅವರನ್ನು ವಿಜಯಪುರ ಎಸ್ಪಿಯಾಗಿ ವರ್ಗಾವಣೆ ಮಾಡಿತ್ತು. ಇಂಟಲಿಜನ್ಸ್ ವಿಭಾಗದ ಎಸ್ಪಿಯಾಗಿದ್ದ ಸೋನಾವಣೆ ರಿಷಿಕೇಶ ಭಗವಾನ ಅವರು ಈಗ ಸ್ವಲ್ಪ ಹೊತ್ತಿನ ಮುಂಚೆ ವಿಜಯಪುರ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಎಸ್ಪಿ ಎಚ್. ಡಿ. ಆನಂದ ಕುಮಾರ ಬ್ಯಾಟನ್ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ವಿಜಯಪುರ ಎಸ್ಪಿಯಾಗಿದ್ದ […]
ಕೇಂದ್ರ ಪುರಸ್ಕೃತ ಅನುದಾನ ಸಮರ್ಪಕವಾಗಿ ಬಳಸಿ- ಗುಣಮಟ್ಟದ ಕಾಮಗಾರಿ ಕೈಗೊಳ್ಳಿ- ಸಂಸದ ರಮೇಶ ಜಿಗಜಿಣಗಿ
ವಿಜಯಪುರ: ಕೃಷಿ, ಗ್ರಾಮೀಣಾಭಿವೃದ್ದಿ, ಸ್ವಚ್ಛ ಭಾರತ ಮಿಷನ್, ಪ್ರಧಾನಮಂತ್ರಿ ಆವಾಸ್ ಯೋಜನೆ, ಸರ್ವ ಶಿಕ್ಷಣ ಅಭಿಯಾನ ಸೇರಿದಂತೆ ಕೇಂದ್ರ ಪುರಸ್ಕøತ ಯೋಜನೆಯಡಿಯ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಗುಣಮಟ್ಟದ ಕಾಮಗಾರಿ ಕೈಗೊಂಡುವ ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಸೂಚನೆ ನೀಡಿದ್ದಾರೆ. ನಗರದ ಜಿ. ಪಂ. ಸಭಾಂಗಣದಲ್ಲಿ ನಡೆದ ಕೇಂದ್ರ ಸರಕಾರದ ನಾನಾ ಯೋಜನೆಗಳ 1ನೇ ತ್ರೈಮಾಸಿಕ ದಿಶಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕೇಂದ್ರ ಪುರಸ್ಕøತ ಯೋಜನೆಗಳನ್ನು ನಿಗದಿತ ಕಾಲಾವಧಿಯಲ್ಲಿ […]
ಜಿಲ್ಲಾ ಪಂಚಾಯಿತಿಯಲ್ಲಿ ಮಿನಿ ಗ್ರಂಥಾಲಯ ನಿರ್ಮಾಣ- ಸಿಇಓ ಅವರ ನಡೆ ಇತರರಿಗೆ ಪ್ರೇರಣೆ- ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ
ವಿಜಯಪುರ: ಜಿ. ಪಂ. ಸಿಇಓ ಕಚೇರಿ ಮುಂದೆ ಹೊಸದಾಗಿ ನಿರ್ಮಿಸಲಾಗಿರುವ ಮಿನಿ ಗ್ರಂಥಾಲಯವನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ತಮ್ಮನ್ನು ಭೇಟಿಯಾಗಲು ಬರುವ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಮತ್ತು ಅವರ ಸಮಯವನ್ನು ಹಾಳು ಮಾಡಬಾರದು ಎಂಬ ಸದುದ್ದೇಶದಿಂದ ಜಿ. ಪಂ. ಸಿಇಓ ರಾಹುಲ ಶಿಂಧೆ ಅವರು ತಮ್ಮ ಸ್ವ ಇಚ್ಚೆಯಿಂದ ಮಿನಿ ಗ್ರಂಥಾಲಯ ಸ್ಥಾಪಿಸಿರುವುದು ನಿಜಕ್ಕೂ ಶ್ಲಾಘನೀಯವಾಗಿದೆ. ಇದು ಸಾರ್ವಜನಿಕರ ಮೇಲೆ ಅವರಿಗಿರುವ ಸೇವಾ ಮನೋಭಾವನೆಯನ್ನು ತೋರಿಸುತ್ತದೆ. […]
ಸೆ. 2 ರಂದು ಸಿಎಂ ಭೇಟಿ ಹಿನ್ನೆಲೆ ಆಲಮಟ್ಟಿ ಜಲಾಷಯಕ್ಕೆ ಡಿಸಿ ಟಿ. ಭೂಬಾಲನ ಭೇಟಿ, ಸಿದ್ಧತೆ ಪರಿಶೀಲನೆ
ವಿಜಯಪುರ: ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಇದೇ ಸೆಪ್ಟೆಂಬರ್ 2ರಂದು ಆಲಮಟ್ಟಿಯ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಿಸುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು. ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಮುಖ್ಯಮಂತ್ರಿಗಳು ಆಗಮಿಸುವ ಹಿನ್ನೆಲೆಯಲ್ಲಿ ಹೆಲಿಪ್ಯಾಡ ಸ್ಥಳ ಹಾಗೂ ಅಲ್ಲಿನ ಭದ್ರತೆ, ಬಾಗಿನ ಅರ್ಪಿಸುವ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಪೂಜಾ ಸ್ಥಳ, ಅಲ್ಲಿ ಹೂವಿನ ಅಲಂಕಾರ, ಶಾಮಿಯಾನ ವ್ಯವಸ್ಥೆ […]
ಬಾಲ್ಯವಿವಾಹ ತಡೆಗಟ್ಟುವಲ್ಲಿ ತಂಡವಾಗಿ ಕಾರ್ಯ ನಿರ್ವಹಿಸಿ- ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ
ವಿಜಯಪುರ: ಸಾಮಾಜಿಕ ಪಿಡುಗಾದ ಬಾಲ್ಯವಿವಾಹ ತಡೆಗಟ್ಟುವಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳೂ ಆದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶಿಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಪಂಚಾಯಿತಿ ಹಾಗೂ ತಾಲೂಕಾ ಮಟ್ಟದಲ್ಲಿ ಅರಿವು ಹಾಗೂ ಅಭಿಯಾನ ಕಾರ್ಯಕ್ರಮ ವ್ಯವಸ್ಥಿತವಾಗಿ ಆಯೋಜಿಸಬೇಕು. ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ […]
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಚಿವ ಎಂ. ಬಿ. ಪಾಟೀಲ- ಅರಕೇರಿ ಕೆರೆಗೆ ನೀರು ತುಂಬಿಸಲು ಸೂಚನೆ
ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ತಮ್ಮ ಗೃಹ ಕಚೇರಿಯಲ್ಲಿ ದಿನವಿಡೀ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಸಚಿವರ ಗೃಹ ಕಚೇರಿಗೆ ಆಗಮಿಸಿದ ಬಬಲೇಶ್ವರ ಮತಕ್ಷೇತ್ರ ಮತ್ತು ಜಿಲ್ಲೆಯ ನಾನಾ ಭಾಗಗಳ ಹಾಗೂ ಹೊರ ಜಿಲ್ಲೆಗಳ ಜನರು ನಾನಾ ಅಹವಾಲು ಸಲ್ಲಿಸಿದರು. ಕುಡಿಯುವ ನೀರು, ರಸ್ತೆ ಸೇರಿದಂತೆ ನಾನಾ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಚಿವರು, ಇದೇ ಸಂದರ್ಭದಲ್ಲಿ ಸಂಬAಧಿಸಿದ ಅಧಿಕಾರಿಗಳಿಗೆ ಕರೆ […]
ಅರಕೇರಿಯಲ್ಲಿ ಆಪ್ಟೆ ಫೌಂಡೇಶನ್ ವತಿಯಿಂದ ಸ್ವಾಭಿಮಾನ ವೃದ್ಧಾಶ್ರಮದಲ್ಲಿ ನಿಸರ್ಗದ ಜೊತೆಗೆ ಒಂದು ದಿನ ಕಾರ್ಯಕ್ರಮ
ವಿಜಯಪುರ: ಅರಕೇರಿಯಲ್ಲಿ ಆಷ್ಟೆ ಫೌಂಡೇಶನ್ ವತಿಯಿಂದ ಸ್ವಾಭಿಮಾನ ವೃದ್ಧಾಶ್ರಮದಲ್ಲಿ ನಿಸರ್ಗದ ಜೊತೆ ಒಂದು ದಿನ ವಿನೂತನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಅಂಗವಾಗಿ ತುಳಸಿಗಿರೀಶ ಫೌಂಡೇಶನ್ ವತಿಯಿಂದ ಮಧುಮೇಹ ಮತ್ತು ರಕ್ತದೊತ್ತಡ ಉಚಿತ ತಪಾಸಣೆ ಕೂಡ ಆಯೋಜಿಸಲಾಗಿತ್ತು. ಮಧುಮೇಹ ತಜ್ಞ ಮತ್ತುಸಮಾಜ ಸೇವಕ ಬಾಬುರಾಜೇಂದ್ರ ನಾಯಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಇಳಿ ವಯಸ್ಸಿನಲ್ಲಿ ಕ್ರಮಬದ್ಧವಾದ ಆರೋಗ್ಯದ ಕಾಳಜಿ ವಹಿಸುವುದು ಅನಿವಾರ್ಯವಾಗಿದೆ. ನಮ್ಮ ದೇಹ ಮತ್ತು ಪ್ರಕೃತಿಯ ನಡುವೆ ಇರುವ ಸಂಬಂಧಗಳನ್ನು ಚೆನ್ನಾಗಿ ಇಟ್ಟುಕೊಂಡರೆ ನಾವೆಲ್ಲರೂ ಆರೋಗ್ಯವಂತರಾಗಿ ಇರಲು […]
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಲು ಜಿ. ಪಂ. ಸಿಇಓ ರಾಹುಲ ಶಿಂಧೆ ಅಧಿಕಾರಿಗಳಿಗೆ ಸೂಚನೆ
ವಿಜಯಪುರ: ಕುಡಿಯುವ ನೀರು ಪೂರೈಕೆ ಕಾರ್ಯದಲ್ಲಿ ಯಾವುದೇ ಲೋಪಗಳಾಗದಂತೆ ಎಚ್ಚರಿಕೆ ವಹಿಸಿ, ಶುದ್ಧ ಕುಡಿಯುವ ನೀರು ಪೂರೈಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯತಿಯಲ್ಲಿ ಕುಡಿಯುವ ನೀರು ಮತ್ತು ಗೃಹಲಕ್ಷ್ಮೀ ಯೋಜನೆ ಪೂರ್ವಸಿದ್ಧತಾ ಕುರಿತು ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಲಭ್ಯವಿರುವ ಎಲ್ಲ ಜಲಮೂಲಗಳಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಬೇಕು. ಜಲ ಮೂಲಗಳನ್ನು ಪ್ರತಿ ತಿಂಗಳು ಸ್ವಚ್ಛಗೊಳಿಸಬೇಕು.ಕುಡಿಯುವ ನೀರಿನ ಪರೀಕ್ಷೆ […]
ಭೂತನಾಳ ಕೆರೆಯ ಬಳಿ ನಿರ್ಮಿಸಲಾಗುತ್ತಿರುವ ಲೇಕ್ ಫ್ರಂಟ್ ಗಾರ್ಡನ್ ಪರಿಶೀಲನೆ ನಡೆಸಿದ ಡಿಸಿ ಟಿ. ಭೂಬಾಲನ್
ವಿಜಯಪುರ: ಮಹಾನಗರ ಪಾಲಿಕೆ ವತಿಯಿಂದ ನಗರದ ಭೂತನಾಳ ಕೆರೆ ಹತ್ತಿರ ಅಭಿವೃದ್ದಿ ಪಡಿಸಲಾಗುತ್ತಿರುವ ಲೇಕ್ ಫ್ರಂಟ್ ಗಾರ್ಡನ್ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭೂತನಾಳ ಕೆರೆ ಪ್ರದೇಶದಲ್ಲಿ ಅಭಿವೃದ್ದಿಪಡಿಸಲಾಗುತ್ತಿರುವ ಲೇಕ್ ಫ್ರಂಟ್ ಗಾರ್ಡನ್ ಅತ್ಯಂತ ಗುಣಮಟ್ಟದ ಕಾಮಗಾರಿ ಕೈಗೊಂಡು, ಅತ್ಯಾಕರ್ಷಕವಾದ ಗಾರ್ಡನ್ ನಿರ್ಮಾಣ ಕಾಮಗಾರಿಯನ್ನು ತೀವ್ರವಾಗಿ ಕೈಗೊಂಡು ಪೂರ್ಣಗೊಳಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು. ಭೂತನಾಳ ಕೆರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ […]
ದಿ. ಡಿ.ದೇವರಾಜ್ ಅರಸು ಅವರ 108ನೇ ಜನ್ಮ ದಿನಾಚರಣೆ ಸಾಮಾಜಿಕ ಪರಿವರ್ತನೆಯಲ್ಲಿ ಡಿ.ದೇವರಾಜ್ ಅರಸು ಅವರ ಕೊಡುಗೆ ಅಪಾರ- ಟಿ. ಭೂಬಾಲನ್
ವಿಜಯಪುರ: ಹಿಂದುಳಿದ ವರ್ಗಗಳ, ಶೋಷಿತರ ಅಭಿವೃದ್ಧಿಗೆ ಶ್ರಮಿಸಿದ ಡಿ. ದೇವರಾಜ ಅರಸು ಅವರು ಉಳುವವನೇ ಭೂ ಒಡೆಯ ಎನ್ನುವ ಭೂ ಸುಧಾರಣಾ ಕಾಯಿದೆ ಜಾರಿಗೆ ತರುವ ಮೂಲಕ ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಸಾಮಾಜಿಕ ಪರಿವರ್ತನೆಯ ಹರಿಕಾರ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ […]