ಕೇಂದ್ರ ಪುರಸ್ಕೃತ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಲಾಭ ದೊರಕಿಸಿ-ಸಂಸದ ರಮೇಶ ಜಿಗಜಿಣಗಿ ಸೂಚನೆ
ವಿಜಯಪುರ: ಕೇಂದ್ರ ಪುರಸ್ಕೃತ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ ಸಂಬಂಧಿಸಿದ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಅರ್ಹ ಫಲಾನುಭವಿಗಳಿಗೆ ಲಾಭ ದೊರಕಿಸುವಂತೆ ಸಂಸದ ರಮೇಶ ಜಿಗಜಿಣಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2023-24ನೇ ವರ್ಷದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಜುಲೈ ತಿಂಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ವಿವಿಧ ಇಲಾಖೆಯಡಿ ಗಂಗಾ ಕಲ್ಯಾಣ ಯೋಜನೆಯಡಿ ಕೊರೆಸುವ ಬೊರವೆಲ್‌ಗಳನ್ನು […]
ಗ್ರಾಮೀಣ ಕೂಲಿ ಕಾರ್ಮಿಕರ ಶಿಶು ಪೋಷಣೆ ಸರಕಾರದ ಮಡಿಲಿಗೆ: ಜಿ. ಪಂ. ಸಿಇಓ ರಾಹುಲ್ ಶಿಂಧೆ
ವಿಜಯಪುರ: ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರ ಮತ್ತು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವವರ 6 ತಿಂಗಳಿಂದ 3 ವರ್ಷದ ಶಿಶುಗಳನ್ನು ವ್ಯವಸ್ಥಿತ ಪಾಲನೆ ಪೋಷಣೆ ಮಾಡುವ ಜವಾಬ್ದಾರಿ ವಹಿಸಿಕೊಳ್ಳಲು ರಾಜ್ಯ ಸರಕಾರ ಕೂಸಿನ ಮನೆ (ಶಿಶು ಪಾಲನಾ ಕೇಂದ್ರ) ಎಂಬ ಮಹತ್ವದ ಯೋಜನೆ ಜಾರಿಗೆ ತಂದಿದೆ. ಈ ಮೂಲಕ ಕೂಲಿ ಕಾರ್ಮಿಕರ ಶಿಶುಗಳ ಪೋಷಣೆ ಮಾಡುವ ಜವಾಬ್ದಾರಿಯನ್ನು ಸರಕಾರ ತನ್ನ ಮಡಿಲಿಗೆ ಹಾಕಿಕೊಂಡಿದೆ ಎಂದು ಜಿಲ್ಲಾ ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ […]
ಸಿಂದಗಿ ತಾಲೂಕು ಕಚೇರಿಗಳಿಗೆ ಭೇಟಿ ಟಿ. ಭೂಬಾಲನ ಭೇಟಿ, ಪರಿಶೀಲನೆ- ತಾಲೂಕಾದ್ಯಂತ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ಸೂಚನೆ
ವಿಜಯಪುರ: ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಸಿಂದಗಿ ತಾಲೂಕಿನ ನಾನಾ ಕಚೇರಿಗಳಿಗೆ ದಿಢೀರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯ ಸಿಂದಗಿ ತಾಲೂಕಿನ ನಾನಾ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ತಾಲೂಕಿನಾದ್ಯಂತ ಕುಡಿಯುವ ನೀರಿನ ತೊಂದರೆಯಾಗದಂತೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು. ಸಿಂದಗಿ ನೂತನ ತಾಲೂಕು ಆಡಳಿತ ಸೌಧ ಕಟ್ಟಡದ ಸ್ಥಳ ಪರಿಶೀಲನೆ ನಡೆಸಿದ ಅವರು, ಕಾಮಗಾರಿಗೆ ವೇಗ ನೀಡಿ, ತೀವ್ರಗತಿಯಲ್ಲಿ […]
ಬಬಲೇಶ್ವರ, ತಿಕೋಟಾ ಪಟ್ಟಣಗಳಿಗೆ 24×7 ನೀರು ಪೂರೈಸುವ ಗುರಿಯಿದೆ- ಕುಡಿಯುವ ನೀರು ಯೋಜನೆ ಪರಿಷ್ಕರಿಸಲು ತೀರ್ಮಾನ- ಎಂ ಬಿ ಪಾಟೀಲ
ಬೆಂಗಳೂರು: ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿರುವ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾ ಪಟ್ಟಣಗಳ ಜನರಿಗೆ 24×7 ನೀರು ಪೂರೈಸುವ ಗುರಿ ಹೊಂದಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ವಿಜಯಪುರ ನಗರ, ಬಬಲೇಶ್ವರ ಮತ್ತು ತಿಕೋಟಾ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಕೆ ಯೋಜನೆಗಳಿಗೆ ಸಂಬಂಧಿಸಿದಂತೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ನಾನಾ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿ ಮಾತನಾಡಿದರು. ಬಬಲೇಶ್ವರ ಮತ್ತು ತಿಕೋಟಾಗಳಿಗೆ […]
ದೇವರ ಹಿಪ್ಪರಗಿ ತಾಲೂಕು ಕಚೇರಿಗಳಿಗೆ ಡಿಸಿ ಭೇಟಿ, ಪರಿಶೀಲನೆ- ಸಾರ್ವಜನಿಕರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಲು ಸೂಚನೆ
ವಿಜಯಪುರ: ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ನಾನಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವರ ಹಿಪ್ಪರಗಿ ತಾಲೂಕಾ ಕಚೇರಿ, ಪಟ್ಟಣ ಪಂಚಾಯಿತಿ ಕಚೇರಿ, ರೈತ ಸಂಪರ್ಕ ಕೇಂದ್ರ, ಪಟ್ಟಣ ಪಂಚಾಯಿತಿ ಹೊಸ ಕಟ್ಟಡ, ಹೊಸದಾಗಿ ನಿರ್ಮಿಸಲು ಉದ್ದೇಶಿಸಿರುವ ಮಿನಿ ವಿಧಾನಸೌಧದ ಸ್ಥಳ ಪರಿಶೀಲನೆ ನಡೆಸಿದ ಅವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚಾಲ್ತಿಯಲ್ಲಿರುವ ತಾಲೂಕಿನ ನಾನಾ ಅಭಿವೃದ್ದಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಪಟ್ಟಣ ಪಂಚಾಯಿತಿ ನೂತನ ಕಟ್ಟಡ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ […]
ಚಡಚಣ, ಇಂಡಿ ತಾಲೂಕಿಗೆ ಡಿಸಿ ಟಿ. ಭೂಬಾಲನ ಭೇಟಿ- ನಾನಾ ಕಾಮಗಾರಿಗಳ ಪರಿಶೀಲನೆ
ವಿಜಯಪುರ: ಚಡಚಣ ಮತ್ತು ಇಂಡಿ ತಾಲೂಕಿಗೆ ಮಂಗಳವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ, ನಾನಾ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಚಡಚಣ ತಾಲೂಕಿನ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ, ಪಟ್ಟಣಕ್ಕೆ ಕುಡಿಯುವ ನೀರು ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ಒದಗಿಸಬೇಕು. ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ಕುಂದುಕೊರತೆಯ ಬಗ್ಗೆ ಸಾರ್ವಜನಿಕರಿಂದ ದೂರುಗಳಿದ್ದಲ್ಲಿ ನಿಯಮಾನುಸಾರ ಪರಿಶೀಲಿಸಿ ಕ್ರಮ ವಹಿಸಬೇಕು. ಸ್ವೀಕರಿಸುವ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಬೇಕು. ಯಾವುದೇ ದೂರುಗಳಿಗೆ ಆಸ್ಪದಕ್ಕೆ ಎಡೆ ಮಾಡದೇ ಕಾರ್ಯ ನಿರ್ವಹಿಸಬೇಕು ಎಂದು […]
ಗುಮ್ಮಟ ನಗರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ವಿಜಯಪುರ: ರಾಜ್ಯ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಡಾ. ಬಿ. ಆರ್. ಅಂಬೇಡ್ಕರ ವೃತ್ತದಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಪ್ರಮುಖ ರಸ್ತೆಗಳ ಮೂಲಕ ಸಂಚರಿಸಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕುಚಬಾಳ ಮಾತನಾಡಿ, ಕಾಂಗ್ರೆಸ್ ಸರಕಾರ ರೈತ ವಿರೋಧಿಯಾಗಿದೆ. ಕೇವಲ ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ಯಾಮಾರಿಸಿ […]
ವಿಜಯಪುರ ತಾಲೂಕಿನ ನಾನಾ ಗ್ರಾ. ಪಂ. ಗಳಿಗೆ ಭೇಟಿ ನೀಡಿ, ನಾನಾ ಕಾಮಗಾರಿಗಳನ್ನು ಪರಿಶೀಲಿಸಿದ ಜಿ. ಪಂ. ಸಿಇಓ ರಾಹುಲ ಶಿಂಧೆ
ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ ಶಿಂಧೆ ಅವರು ವಿಜಯಪುರ ತಾಲೂಕಿನ ಕನ್ನೂರ ಮತ್ತು ಮಖನಾಪುರ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕನ್ನೂರ ಗ್ರಾಮದಲ್ಲಿ ಮನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಅಮೃತ ಸರೋವರ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿದರು. ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರತಿ ದಿನ 300ಕ್ಕೂ ಹೆಚ್ಚಿನ ಜನರಿಗೆ ಈ ಕಾಮಗಾರಿಯಲ್ಲಿ ಉದ್ಯೋಗ ಕಲ್ಪಿಸಿಕೊಡಬೇಕು. ನಿತ್ಯವೂ ಗ್ರಾಮದಲ್ಲಿ ಸ್ವಚ್ಛತಾ ವಾಹನ ಸಂಚರಿಸುವುದರ ಖಾತ್ರಿಪಡಿಸಿಕೊಂಡು ಮೆಚ್ಚುಗೆ […]
ವಿಶಿಷ್ಠ ಸ್ವಾತಂತ್ರ್ಯೋತ್ಸವ ಆಚರಣೆ- ಜಿಲ್ಲೆಯ ಎಲ್ಲ 78 ಅಮೃತ ಸರೋವರಗಳ ಅಂಗಳದಲ್ಲಿ ಆ. 15 ರಂದು ಕಾರ್ಯಕ್ರಮ- ಜಿ. ಪಂ. ಸಿಇಓ ರಾಹುಲ್ ಶಿಂಧೆ
ವಿಜಯಪುರ: ಜಿಲ್ಲೆಯಲ್ಲಿ ಈ ಸಲ ಮಹಾತ್ಮಾ ಗಾಂಧಿ ನರೇಗಾ ಯೋಜನೆ ಮಿಷನ್ ಅಮೃತ ಸರೋವರ ಅಭಿಯಾನದಡಿ 78 ಅಮೃತ ಸರೋವರಗಳ, ಜಲಮೂಲ ಪುನಶ್ವೇತನ ಹಾಗೂ ಹೊಸದಾಗಿ ನಿರ್ಮಿಸಲಾಗಿದೆ. ಈ ಅಮೃತ ಸರೋವರಗಳ ಅಂಗಳದಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲು ಸಕಲ ಸಿದ್ಧತೆ ಕೈಗೊಳ್ಳಲು ಈಗಾಗಲೇ ಜಿಲ್ಲೆಯ ಎಲ್ಲ ತಾಲೂಕಿನ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಮತ್ತು ಪಿಡಿಓ ಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ತಿಳಿಸಿದ್ದಾರೆ. […]
ವಿಜಯಪುರ ನ್ಯಾಯಾಲಯಗಳಲ್ಲಿ ಸರಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ವಿಜಯಪುರ: ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ವಿಜಯಪುರ ಜಿಲ್ಲೆಗೆ ಸಂಬಂಧಿಸಿದ 13 ಸಹಾಯಕ ಸರಕಾರಿ ಅಭಿಯೋಜಕರು ಮತ್ತು ಸಹಾಯಕ ಸರಕಾರಿ ವಕೀಲರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 37 ವರ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 40 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 42 ವರ್ಷ ವಯೋಮಿತಿ ನಿಗದಿ ಪಡಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30 ಸಾವಿರ […]