ವಿಕಲಚೇತನ 49 ಜನ ಫಲಾನುಭವಿಗಳಿಗೆ ತ್ರಿ- ಚಕ್ರ ವಾಹವ ವಿತರಿಸಿದ ಸಚಿವ ಎಂ. ಬಿ. ಪಾಟೀಲ

ವಿಜಯಪುರ: ವಿಕಲಚೇತನರಿಗೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ನೆರವು ನೀಡುವುದು ಸರಕಾರ, ಸಂಘ-ಸಂಸ್ಥೆಗಳು ಮತ್ತು ಸಮಾಜದ ಎಲ್ಲ ಗಣ್ಯರ ಕರ್ತವ್ಯವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಗೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದರು. ವಿಜಯಪುರದಲ್ಲಿ ಶಾಸಕರ 2022-23ರ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಕಲಚೇತನರಿಗೆ ಇಂಧನ ಚಾಲಿತ ತ್ರಿ- ಚಕ್ರ ವಾಹನಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು. ಅಂಗವಿಕಲತೆ ಶಾಪವಲ್ಲ. ಯಾರಿಗೆ ಬೇಕಾದರೂ ಈ ಸಮಸ್ಯೆ ಎದುರಾಗಬಹುದು. ಅವರನ್ನು ಗೌರವದಿಂದ ಕಾಣಬೇಕು. […]

ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ -ಅಧಿಕಾರಿಗಳಿಗೆ ಸಚಿವ ಎಂ. ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ

ವಿಜಯಪುರ: ಮಹಾರಾಷ್ಟ್ರ ಮತ್ತು ನೆರೆಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಆಲಮಟ್ಟಿ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದ್ದು, ಜಲಾಶಯದಲ್ಲಿರುವ ನೀರನ್ನು ಕಾಲುವೆಗಳ ಮೂಲಕ ಕೆರೆಗೆ ನೀರು ತುಂಬಿಸುವ ಯೋಜನೆಯಡಿ ನೀರು ಹರಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಎಂ. ಬಿ. ಪಾಟೀಲ ತಿಳಿಸಿದರು. ಜಿ. ಪ. ಸಭಾಂಗಣದಲ್ಲಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಹಿಂದೆ ಆಲಮಟ್ಟಿ ಜಲಾಶಯದಲ್ಲಿ ಲೈವ್ ಸ್ಟೋರೇಜ್ ಕೇವಲ 2 ಟಿಎಂಸಿಗೆ ಇಳಿಕೆಯಾಗಿತ್ತು.  […]

ಪ್ರವಾಹ ಕುರಿತು ಆತಂಕ ಪಡುವ ಅಗತ್ಯವಿಲ್ಲ- ಮುನ್ನೆಚ್ಚರಿಕೆ ವಹಿಸಿ- ಜಿಲ್ಲಾಧಿಕಾರಿ ಟಿ. ಭೂಬಾಲನ್

ವಿಜಯಪುರ: ಜಿಲ್ಲೆಯಲ್ಲಿ ಪ್ರವಾಹ ಕುರಿತು ಸದ್ಯದ ಪರಿಸ್ಥಿತಿಯಲ್ಲಿ ಆತಂಕ ಪಡುವ ಅವಶ್ಯಕತೆಯಿಲ್ಲ ಅದಾಗ್ಯೂ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಯಾವುದೇ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದರು.  ಮುಖ್ಯಮಂತ್ರಿಗಳಿಂದ ಮಳೆಹಾನಿ ಸ್ಥಿತಿಗತಿ ಕುರಿತು ವಿಡಿಯೋ ಸಂವಾದ ನಡೆಸಿದ ನಂತರ ಅಧಿಕಾರಿಗಳೊಂದಿಗೆ ಸಂಜೆ ಸಭೆ ನಡೆಸಿ ಅವರು ಮಾತನಾಡಿದರು. ಜಿಲ್ಲೆಯ ವಿಪತ್ತು ನಿರ್ವಹಣೆಗಾಗಿ ಮುಖ್ಯಮಂತ್ರಿಗಳು ಸೂಕ್ತ ನಿರ್ದೇಶನ ನೀಡಿದ್ದು, ಮಳೆಯಿಂದ ಜೀವ, ಜಾನುವಾರು ಹಾಗೂ ಮನೆ ಹಾನಿಗಳನ್ನು ತಡೆಗಟ್ಟಲು ಎಲ್ಲ ಅಗತ್ಯ […]

ಜಿಲ್ಲಾ ಪಂಚಾಯಿತಿ ವತಿಯಿಂದ ಮಹಾತ್ಮ ಗಾಂಧಿ ನರೇಗಾ ಯೋಜನೆ ಸಹಾಯವಾಣಿ ಆರಂಭ

ವಿಜಯಪುರ: ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನ ಹಾಗೂ ಸಾರ್ವಜನಿಕರಿಂದ ಬರುವ ದೂರುಗಳನ್ನು ಆಲಿಸಿ ಪರಿಹಾರ ಕಲ್ಪಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತಿ ವತಿಯಿಂದ ನೂತನವಾಗಿ ಸಹಾಯವಾಣಿ (9480831699)ಯನ್ನು ಆರಂಭಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹನಾಧಿಕಾರಿ ರಾಹುಲ್ ಶಿಂಧೆ ಅವರು ತಿಳಿಸಿದ್ದಾರೆ. ಗ್ರಾಮೀಣ ಭಾಗದ ಜನರ ಗುಳೆ ತಪ್ಪಿಸುವ ಮತ್ತು ಅವರಿಗೆ ಉದ್ಯೋಗ ಖಾತರಿ ನೀಡುವ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕುರಿತು ಗ್ರಾಮೀಣ ಜನರಿಗೆ ಮಾಹಿತಿ […]

ಕನ್ನೂರಿಗೆ ಸಚಿವ ಎಂ. ಬಿ. ಪಾಟೀಲ ಭೇಟಿ- ಮನೆ ಕುಸಿದು ಸಾವಿಗೀಡಾದ ವೃದ್ಧೆಯ ಮಹಿಳೆಯ ಕುಟುಂಬಕ್ಕೆ ಸಾಂತ್ವನ- ರೂ. 5 ಲಕ್ಷ ಪರಿಹಾರದ ಚೆಕ್ ವಿತರಣೆ

ವಿಜಯಪುರ: ಕನ್ನೂರ ಗ್ರಾಮದಲ್ಲಿ ತೋಟದ ಮನೆ ಮೇಲ್ಛಾವಣಿ ಕುಸಿದ ಪರಿಣಾಮ ಶಿವಮ್ಮ ನೂರುಂದಪ್ಪ ಸಾವಳಗಿ(60) ಮೃತಪಟ್ಟಿದ್ದಾರೆ‌. ಈ ಹಿನ್ನೆಲೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಗ್ರಾಮಕ್ಕೆ ಭೇಟಿ ನೀಡಿದರು. ಮೃತರ ಅಂತಿಮ ದರ್ಶನ ಪಡೆದ ಅವರು ಮೃತರ ಕುಟುಂಬ ಸದಸ್ಯರಿಗೆ ಸರಕಾರದ ವತಿಯಿಂದ ರೂ. 5 ಲಕ್ಷ ಪರಿಹಾರ ಧನದ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ನಾಗಠಾಣ ಶಾಸಕ‌ ವಿಠ್ಠಲ ಧೋಂಡಿಬಾ […]

ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವು- ಮಕ್ಕಳ ಕುಟುಂಬಸ್ಥರಿಗೆ ಸಚಿವ ಎಂ. ಬಿ. ಪಾಟೀಲರಿಂದ ಸಾಂತ್ವನ, ವೈಯಕ್ತಿಕ ರೂ. 1 ಲಕ್ಷ ಧನಸಹಾಯ

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಅಡವಿ ಸಂಗಾಪುರ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಕಾಲುಜಾರಿ ಬಿದ್ದು ಸಾವನ್ನಪ್ಪಿರುವ ತಿಕೋಟಾ ತಾಲೂಕಿನ ಅತಾಲಟ್ಟಿ ಗ್ರಾಮದ ಸುಭಾಷ ಬಿಳೂರ(12) ಮತ್ತು ಸಂತೋಷ ಪಾಶು ಬಿಳೂರ (9) ಬಾಲಕರ ಮನೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ. ಬಿ. ಪಾಟೀಲ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು. ಕಳೆದ ರವಿವಾರ ಬಾಲಕರು ಆಟವಾಡುವಾಗ ಕೃಷಿ ಹೊಂಡದಲ್ಲಿ ಇಬ್ಬರೂ ಸಾವನ್ನಪ್ಪಿದ್ದರು. ಮಂಗಳವಾರ ಸಚಿವರು […]

ಬಸವನಾಡಿನಲ್ಲಿ ಲಘು ಭೂಕಂಪನ- ಎಲ್ಲಿ? ಎಷ್ಟು ತೀವ್ರತೆ ಗೊತ್ತಾ?

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಬೆಳಿಗ್ಗೆ ಲಘು ಭೂಕಂಪನ ಉಂಟಾಗಿದೆ. ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಸುತ್ತಮುತ್ತ ಬೆಳಿಗ್ಗೆ 9.55ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಮನೆಯಲ್ಲಿದ್ದ ಜನ ಹೊರಗಡೆ ಓಡಿ ಬಂದಿದ್ದಾರೆ.  ಮನಗೂಳಿ ಪಟ್ಟಣದ ಆಗ್ನೆಯ ಭಾಗದಲ್ಲಿ 2.90 ಕಿ. ಮೀ. ದೂರದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ. ಭೂಮಿಯ ಕೆಳಗಡೆ ಸುಮಾರು 5 ಕಿ. ಮೀ. ಆಳದಲ್ಲಿ ಈ ಭೂಕಂಪನ ಉಂಟಾಗಿದ್ದು, ರಿಕ್ಚರ್ ಮಾಪಕದಲ್ಲಿ 2.4 ತೀವ್ರತೆ ದಾಖಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ ಮಾಹಿತಿ […]

ವಿಪತ್ತಿಗೆ ತುತ್ತಾಗುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜನಜಾಗೃತಿ ಮೂಡಿಸಿ- ಡಿಸಿ ಟಿ. ಭೂಬಾಲನ ಸೂಚನೆ

ವಿಜಯಪುರ: ಜಿಲ್ಲೆಯಲ್ಲಿ ಸಂಭವಿಸಬಹುದಾದ ಪ್ರವಾಹವನ್ನು ಸಮರ್ಥವಾಗಿ ಎದುರಿಸಲು ವಿಪತ್ತುಗಳಿಗೆ ತುತ್ತಾಗುವಂಥ ಪ್ರದೇಶಗಳನ್ನು ಗುರುತಿಸಿಕೊಂಡು ಗ್ರಾಮ ವಿಪತ್ತು ನಿರ್ವಹಣಾ ಸಮಿತಿ ಎಲ್ಲ ಅವಶ್ಯ ಕ್ರಮಗಳನ್ನು ಕೈಗೊಳ್ಳಬೇಕು.  ಜನರಲ್ಲಿ ಜಾಗೃತಿ ಮೂಡಿಸಿ ಯಾವುದೇ ಅನಾಹುತಗಳು ಸಂಭವಿಸದAತೆ ನೋಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಕೇಸ್ವಾನ್ ಕೊಠಡಿಯಲ್ಲಿ ನಡೆದ ಮುಂಗಾರು ಮಳೆಯ ಮುಂಜಾಗ್ರತೆ ಕ್ರಮ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಕೃಷ್ಣಾ, ಭೀಮಾ ಮತ್ತು ಡೋಣಿ ನದಿ ಪಾತ್ರದಲ್ಲಿ 54 […]

ಅನುದಾನಿತ-ಅನುದಾನ ರಹಿತ ಕಾಲೇಜ್ ಪ್ರಾಚಾರ್ಯರ ಸಭೆ: ಶಿಕ್ಷಕ ಮಿತ್ರ ತಂತ್ರಾಂಶದ ಸದುಪಯೋಗ ಪಡೆದುಕೊಳ್ಳಲು ಡಾ. ಹೊಸಮನಿ ಕರೆ

ವಿಜಯಪುರ: ಪ್ರಥಮ ಮತ್ತು ದ್ವೀತಿಯ ಪಿಯುಸಿಯಲ್ಲಿ ಪ್ರಾಯೋಗಿಕ ಪರೀಕ್ಷೆ ಹೊಂದಿಲ್ಲದ ವಿಷಯಗಳಲ್ಲಿ 20 ಆಂತರಿಕ ಅಂಕಗಳ ಪರೀಕ್ಷೆ ಹಾಗೂ ಇಎಲ್‍ಸಿ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಶಿಕ್ಷಕ ಮಿತ್ರ ತಂತ್ರಾಂಶವನ್ನು ಅಭಿವೃದ್ದಿಪಡಿಸಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಪದವಿಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ. ಚಂದ್ರಶೇಖರ ಕೆ. ಹೊಸಮನಿ ಕರೆ ನೀಡಿದ್ದಾರೆ.  ನಗರದ ಬಾಗಲಕೊಟೆ ರಸ್ತೆಯ ಪಿಡಿಜೆ ಪದವಿ ಪೂರ್ವ ಕಾಲೇಜ್‍ನಲ್ಲಿ ನಡೆದ ಬಬಲೇಶ್ವರ ಹಾಗೂ ತಿಕೋಟಾ ತಾಲೂಕಿನ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ […]

ದರ್ಗಾ ಎಂ. ಎಂ. ತೆಲಗಿ ಸರಕಾರಿ ಶಾಲೆಯ ಎಸ್. ಡಿ. ಎಂ. ಸಿ. ಅಧ್ಯಕ್ಷರಾಗಿ ಸುನೀಲ ಕೃಷ್ಣಪ್ಪ ಬೋರಗಿ, ಮಲ್ಲಿಕಾರ್ಜುನ ಗಂಗನಗೌಡ ಬಿರಾದಾರ ಆಯ್ಕೆ

ವಿಜಯಪುರ: ನಗರದ ದರ್ಗಾದಲ್ಲಿರುವ ಎಂ. ಎಂ. ತೆಲಗಿ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಶಾಲೆ ಸಂಖ. 12ರ ನೂತನ ಎಸ್.ಡಿ.ಎಂ.ಸಿ(ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ) ರಚನೆ ಮಾಡಲಾಗಿದ್ದು, ನೂತನ ಅಧ್ಯಕ್ಷರಾಗಿ ಸುನೀಲ ಕೃಷ್ಣಪ್ಪ ಭೋರಗಿ ಮತ್ತು ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ ಗಂಗನಗೌಡ ಬಿರಾದಾರ ಅವರನ್ನು ಆಯ್ಕೆ ಮಾಡಲಾಗಿದೆ. ಇನ್ನಿತರ 16 ಜನ ಸದಸ್ಯರನ್ನು ಈ ಸಮಿತಿ ಹೊಂದಿದ್ದು, ಇದರಲ್ಲಿ ತಲಾ ಎಂಟು ಜನ ಪುರುಷ ಮತ್ತು ಮಹಿಳಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.  ಈ ಸಮಿತಿ ಮೊದಲ ಸಭೆ […]