ಬಬಲೇಶ್ವರದಲ್ಲಿ ಪಿಕೆಪಿಎಸ್ ನೂತನ ಕಟ್ಟಡ ಉದ್ಘಾಟನೆ ಸಮಾರಂಭ

ವಿಜಯಪುರ: ಬಬಲೇಶ್ವರ ಪಟ್ಟಣದ ಶ್ರೀ ಶಾಂತವೀರ ಸರ್ಕಲ್ ಹತ್ತಿರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟನೆ ಸಮಾರಂಭ ನೆರವೇರಿತು. ಮನಗೂಳಿಯ ಶ್ರೀ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಅವರು ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ರೈತರು ಮತ್ತು ಕಾರ್ಮಿಕರಿಗೆ ಸಹಕಾರಿ ಬ್ಯಾಂಕುಗಳು ಅವಶ್ಯಕವಾಗಿದ್ದು, ಸರಕಾರದ ಸಾಲ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು, ಮರಳಿ ನೀಡುವ ಮೂಲಕ ಈ ಬ್ಯಾಂಕುಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಸಹಕಾರಿ ಧುರೀಣ […]

ಶರಣರ ವಚನ ಸಾಹಿತ್ಯವನ್ನು ಜಗತ್ತಿಗೆ ಪರಿಚಯಿಸುವಲ್ಲಿ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಅವರ ಕೊಡುಗೆ ಅನನ್ಯ: ಪ್ರಕಾಶ ಬಗಲಿ

ವಿಜಯಪುರ: ಶರಣ ಸಾಹಿತ್ಯವನ್ನು ಜಗತ್ತಿಗೆ  ಪರಿಚಯಿಸುವಲ್ಲಿ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಅವರ ಕೊಡುಗೆ ಅನನ್ಯ ಎಂದು ನಗರದ ಪ್ರತಿಷ್ಠತಿ ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಪ್ರಕಾಶ ಎಸ್. ಬಗಲಿ ಹೇಳಿದ್ದಾರೆ. ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಡಾ. ಫ. ಗು. ಹಳಕಟ್ಟೀಯವರ 143ನೇ ಜನ್ಮದಿನದ ಅಂಗವಾಗಿ ವಿಜಯಪುರ ಪ್ರಿಂಟಿಂಗ್ ಪ್ರೆಸ್ ಮತ್ತು ವರ್ಕರ್ಸ್ ಅಸೋಶಿಯೇಷನ್ ಆಯೋಜಿಸಿದ್ದ ಮುದ್ರಣ ಸಾಧಕರಿಗೆ ಮುದ್ರೋಧ್ಯಮಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಮುದ್ರಣ ಸಾಧಕರನ್ನು ಗುರುತಿಸಿ […]

ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯಗಳು ಪ್ರಮುಖ ಪಾತ್ರ ವಹಿಸುತ್ತವೆ- ಸಿ. ಬಿ. ಕುಂಬಾರ

ವಿಜಯಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯಗಳು ಪ್ರಮುಖ ಪಾತ್ರ ವಹಿಸುವುದರಿಂದ ಆಧುನಿಕತೆಗೆ ತಕ್ಕಂತೆ ಕಲಿಕಾ ಹಂತದಿಂದಲೇ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ವಿಜಯಪುರ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಸಿ. ಬಿ. ಕುಂಬಾರ ಹೇಳಿದ್ದಾರೆ. ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಎಸ್. ಬಿ. ಕಲಾ ಮತ್ತು ಕೆ. ಸಿ. ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ರಾಜ್ಯ ಸರಕಾರದ ಕೌಶಲ್ಯ ಅಭಿವೃದ್ದಿ ನಿಗಮ, ಕೌಶಲ್ಯಾಭಿವೃದ್ದಿ,ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ದಿ ಸಹಯೋಗದಲ್ಲಿ ವಿಶ್ವ ಯುವ ಕೌಶಲ್ಯ […]

ಶಾಲಾ ಸಂಸತ್ ರಚನೆಯಿಂದ ಮಕ್ಕಳಲ್ಲಿ ಚುನಾವಣೆ ಬಗ್ಗೆ ಅರಿವು ಸಿಗುತ್ತದೆ- ಶ್ರೀದೇವಿ ಉಮೇಶ ಕಾರಜೋಳ

ವಿಜಯಪುರ: ಶಾಲಾ ಸಂಸತ್ ರಚನೆಯಿಂದ ವಿದ್ಯಾರ್ಥಿಗಳಿಗೆ ಚುನಾವಣೆ ಬಗ್ಗೆ ಅರಿವು ಸಿಗುತ್ತದೆ ಎಂದು ಶ್ರೀದೇವಿ ಉಮೇಶ ಕಾರಜೋಳ ಹೇಳಿದ್ದಾರೆ. ನಗರದ ಪದ್ಮಶ್ರೀ ಕಾಕಾ ಕಾರಖಾನೀಸ್ ಸ್ಮಾರಕ ಪ್ರೌಢಶಾಲೆಯ 2023 -24 ನೇ ಶೈಕ್ಷಣಿಕ ವರ್ಷದ ಶಾಲಾ ಸಂಸತ್ ಉದ್ಘಾಟನೆ ಮತ್ತು ಪ್ರತಿನಿಧಿಗಳಿಗೆ ಪ್ರಮಾಣ ವಚನ ಬೋಧನೆ ಸಮಾರಂಭದಲ್ಲಿ ಪಾಲ್ಗೋಂಡು ಅವರು ಮಾತನಾಡಿದರು. ಶಾಲಾ ಸಂಸತ್ತು ವಿದ್ಯಾರ್ಥಿಗಳಿಗೆ ನಾಯಕತ್ವ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳಲು, ಆಡಳಿತದ ಬಗ್ಗೆ ಕಲಿಯಲು ಹಾಗೂ ಸರಕಾರ ತೆಗೆದುಕೊಳ್ಳುವ ಪ್ರಕ್ರಿಯೆಗಳ ಬಗ್ಗ ತಿಳಿದುಕೊಳ್ಳಲು ವೇದಿಕೆಯನ್ನು ಒದಗಿಸುತ್ತದೆ.  ಶಾಲಾ […]

ಜಿಪಿಟಿ ಶಿಕ್ಷಕರಿಗೆ ನ್ಯಾಯ ಒದಗಿಸಲು ಸಂಗಮೇಶ ಬಬಲೇಶ್ವರ ಆಗ್ರಹ

ವಿಜಯಪುರ: ಆರನೇ ತರಗತಿಯಿಂದ ಎಂಟನೇ ತರಗತಿವರೆಗ ಪಾಠ ಮಾಡುತ್ತಿರುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಕೌನ್ಸಲಿಂಗ್ ನಲ್ಲಿ ವರ್ಗಾವಣೆಗೆ ಅವಕಾಶ ನೀಡದೇ ತಾರತಮ್ಮ ಮಾಡುತ್ತಿರುವುದು ಖಂಡನೀಯ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಬೇಸರ ವ್ಯಕ್ತಪಡಿಸಿದ್ದಾರೆ.  ಜಿಪಿಟಿ ಶಿಕ್ಷಕರು ತಮ್ಮ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಸಂಗಮೇಶ ಬಬಲೇಶ್ವರ ಅವರ ನಿವಾಸಕ್ಕೆ ತೆರಳಿ ಮನವಿ ಮಾಡಿದರು.  ಈ ಸಂದರ್ಭದಲ್ಲಿ ಈ ಶಿಕ್ಷಕರ ಸಮಸ್ಯೆ ಬಗೆಹರಿಸುವಂತೆ ಡಿಡಿಪಿಐ ಎನ್. ಎಚ್. ನಾಗೂರ ಹಾಗೂ ವಾಯುವ್ಯ ಶಿಕ್ಷಕರ […]

ಸರಕಾರಿ ಶಾಲೆ ಅಡುಗೆ ಸಾಮಗ್ರಿ, ಆಡು ಕಳ್ಳರ ಬಂಧನ- ವಿಜಯಪುರ ಗ್ರಾಮೀಣ ಪೊಲೀಸರ ಯಶಸ್ವಿ ಕಾರ್ಯಾಚರಣೆ

ವಿಜಯಪುರ: ಸರಕಾರಿ ಶಾಲೆಯ ಅಡುಗೆ ಸಾಮಗ್ರಿಗಳು ಮತ್ತು ಆಡುಗಳನ್ನು ಕಳ್ಳತನ ಮಾಡಿದ್ದ ಐದು ಜನ ಆರೋಪಿಗಳನ್ನು ವಿಜಯಪುರ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. 27.02.2023 ರಂದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹುಣಶ್ಯಾಳ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಸಾಮಗ್ರಿಗಳನ್ನು ಕಳ್ಳತನ ಮಾಡಲಾಗಿತ್ತು.  ಅಲ್ಲದೇ, 01.07.2023ರಂದು ಇದೇ ಪೊಲೀಸ್ ಠಾಣೆಯ ವ್ಯಾಪ್ತಿಯ ಖಂಡಸಾರಿ ತಾಂಡಾದ ಕ್ರಾಸ್ ಹತ್ತಿರ ಇರುವ ಕಾಳೆ ಇವರ ಹೊಲದಲ್ಲಿದ್ದ 14 ಆಡುಗಳನ್ನು ಕಳ್ಳತನ ಮಾಡಲಾಗಿತ್ತು. ಈ ಪ್ರಕರಣಗಳಗಳನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ […]

ಜೈನಮುನಿ ಹತ್ಯೆ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ- ಗುಮ್ಮಟ ನಗರಿಯಲ್ಲಿ ಬಿಜೆಪಿ ಪ್ರತಿಭಟನೆ- ಕೇಶ ಮುಂಡನ ಮಾಡಿಕೊಂಡು ಆಕ್ರೋಶ ವ್ಯಕ್ತಪಡಿಸಿದ ಯುವಕರು

ವಿಜಯಪುರ: ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿಯ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.  ನಂತರ ಮೆರವಣಿಗೆ ನಡೆಸಿದರು.  ಅಲ್ಲದೇ, ಈ ಸಂದರ್ಭದಲ್ಲಿ ಕಾಂಗ್ರೆಸ್ ಸರಕಾರ ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸಿ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.  ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು ಈ ಸಂದರ್ಭದಲ್ಲಿ ಮಾತನಾಡಿದ […]

ವಿಶ್ವ ಜನಸಂಖ್ಯಾ ದಿನ ಆಚರಣೆ: ಜನಸಂಖ್ಯೆ ನಿಯಂತ್ರಣ ಅತ್ಯವಶ್ಯಕ- ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ

ವಿಜಯಪುರ: ಶರವೇಗದಿಂದ ಬೆಳೆಯುತ್ತಿರುವ ಜನಸಂಖ್ಯೆ ಅಪಾಯದ ಸಂಕೇತ ಮತ್ತು ಅಭಿವೃದ್ದಿಗೆ ಮಾರಕವಾಗಿದ್ದು, ಜನಸಂಖ್ಯೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದ್ದಾರೆ.  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ನಗರ ಆರೋಗ್ಯ ಕೇಂದ್ರ ನವಬಾಗ ಹಾಗೂ ಸರಕಾರಿ ಬಾಲಕೀಯರ ಪದವಿಪೂರ್ವ ಕಾಲೇಜ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿರುವ ವಿಶ್ವಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜನಸಂಖ್ಯೆ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ವಿಶ್ವ […]

ಎನ್ಎಸ್ಎಸ್ ಸ್ವಯಂ ಸೇವಕರ ಜೀವನವನ್ನೇ ಬದಲಿಸುತ್ತದೆ- ಶಂಕರ ಮಾರಿಹಾಳ

ವಿಜಯಪುರ: ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕರ ಜೀವನವನ್ನೇ ಬದಲಿಸುತ್ತದೆ ಎಂದು ವಿಜಯಪುರ ಎಎಸ್ಪಿ ಶಂಕರ ಮಾರಿಹಾಳ ಹೇಳಿದ್ದಾರೆ. ವಿಜಯಪುರ ತಾಲೂಕಿನ ಬರಟಗಿ ಗ್ರಾಮದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕ 1 ಮತ್ತು 2ರ ಆಶ್ರಯದಲ್ಲಿ ಆಯೋಜಿಸಲಾಗಿದ್ದ 2023ರ ವಿಶೇಷ ಸೇವಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಸ್ವಯಂ ಸೇವಕರಾಗಿದ್ದಾಗ ಇಷ್ಟಪಟ್ಟು ಇನ್ನೂ ಕೆಲವರು ಕಷ್ಟಪಟ್ಟು ಮಾಡಿದ ಶ್ರಮದಾನ, ಕಾರ್ಯಕ್ರಮಗಳ ಆಯೋಜನೆ, ಯೋಜನಾಧಿಕಾರಿಗಳ ಮಾರ್ಗದರ್ಶನ ಎಲ್ಲವೂ ಮುಂದೊಂದು ದಿನ […]

ಹುಂಡೈ ಎಕ್ಸ್ಟರ್ ಕಾರ್ ಬಿಡುಗಡೆ ಮಾಡಿದ ಮಹಾನಗರ ಪಾಲಿಕೆ ಆಯುಕ್ತ ಬದರುದ್ದೀನ್ ಸೌದಾಗರ

ವಿಜಯಪುರ: ನಗರದ ಹೊರವಲಯದಲ್ಲಿರುವ ನಾರಾಯಣ ಹುಂಡೈ ಕಾರ್ ಶೋರೂಂ ನಲ್ಲಿ ಹುಂಡೈ ಎಕ್ಸ್ ಟರ್ ನೂತನ ವಾಹನವನ್ನು ಮಹಾನಗರ ಪಾಲಿಕೆ ಆಯುಕ್ತ ಬದರುದ್ದಿನ್ ಸೌದಾಗರ ಮಾರುಕಟ್ಟೆಗೆ ಬಿಡುಗಡೆ ಮಾಡಿದರು.  ಕಾರ್ ಶೋರೂಂ ಮಾಲೀಕ ಗೋವಿಂದ ಜೋಶಿ ನೂತನ ಕಾರಿನ ಕುರಿತು ಮಾತನಾಡಿ, ನೂತನ ಕಾರು ತನ್ನದೇಯಾದ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು,  ಹೊಸ ಎಕ್ಸ್ಟರ್ ಧ್ವನಿ ಆಜ್ಞೆಗಳೊಂದಿಗೆ ಎಲೆಕ್ಟ್ರಿಕ್ ಸನ್‌ರೂಫ್ (ಮೊದಲ-ಸೆಗ್ಮೆಂಟ್) ಮತ್ತು ಡ್ಯುಯಲ್ ಕ್ಯಾಮೆರಾಗಳೊಂದಿಗೆ ಡ್ಯಾಶ್‌ಕ್ಯಾಮ್ ಅನ್ನು ತೆರೆದುಕೊಳ್ಳುತ್ತದೆ ಎಂದು ತಿಳಿಸಿದರು. ಎರಡನೆಯದು 2.31 ಇಂಚಿನ […]