ಎನ್ಎಸ್ಎಸ್ ಸ್ವಯಂ ಸೇವಕರ ಜೀವನವನ್ನೇ ಬದಲಿಸುತ್ತದೆ- ಶಂಕರ ಮಾರಿಹಾಳ

ವಿಜಯಪುರ: ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕರ ಜೀವನವನ್ನೇ ಬದಲಿಸುತ್ತದೆ ಎಂದು ವಿಜಯಪುರ ಎಎಸ್ಪಿ ಶಂಕರ ಮಾರಿಹಾಳ ಹೇಳಿದ್ದಾರೆ. ವಿಜಯಪುರ ತಾಲೂಕಿನ ಬರಟಗಿ ಗ್ರಾಮದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕ 1 ಮತ್ತು 2ರ ಆಶ್ರಯದಲ್ಲಿ ಆಯೋಜಿಸಲಾಗಿದ್ದ 2023ರ ವಿಶೇಷ ಸೇವಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಸ್ವಯಂ ಸೇವಕರಾಗಿದ್ದಾಗ ಇಷ್ಟಪಟ್ಟು ಇನ್ನೂ ಕೆಲವರು ಕಷ್ಟಪಟ್ಟು ಮಾಡಿದ ಶ್ರಮದಾನ, ಕಾರ್ಯಕ್ರಮಗಳ ಆಯೋಜನೆ, ಯೋಜನಾಧಿಕಾರಿಗಳ ಮಾರ್ಗದರ್ಶನ ಎಲ್ಲವೂ ಮುಂದೊಂದು ದಿನ […]

ಹುಂಡೈ ಎಕ್ಸ್ಟರ್ ಕಾರ್ ಬಿಡುಗಡೆ ಮಾಡಿದ ಮಹಾನಗರ ಪಾಲಿಕೆ ಆಯುಕ್ತ ಬದರುದ್ದೀನ್ ಸೌದಾಗರ

ವಿಜಯಪುರ: ನಗರದ ಹೊರವಲಯದಲ್ಲಿರುವ ನಾರಾಯಣ ಹುಂಡೈ ಕಾರ್ ಶೋರೂಂ ನಲ್ಲಿ ಹುಂಡೈ ಎಕ್ಸ್ ಟರ್ ನೂತನ ವಾಹನವನ್ನು ಮಹಾನಗರ ಪಾಲಿಕೆ ಆಯುಕ್ತ ಬದರುದ್ದಿನ್ ಸೌದಾಗರ ಮಾರುಕಟ್ಟೆಗೆ ಬಿಡುಗಡೆ ಮಾಡಿದರು.  ಕಾರ್ ಶೋರೂಂ ಮಾಲೀಕ ಗೋವಿಂದ ಜೋಶಿ ನೂತನ ಕಾರಿನ ಕುರಿತು ಮಾತನಾಡಿ, ನೂತನ ಕಾರು ತನ್ನದೇಯಾದ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು,  ಹೊಸ ಎಕ್ಸ್ಟರ್ ಧ್ವನಿ ಆಜ್ಞೆಗಳೊಂದಿಗೆ ಎಲೆಕ್ಟ್ರಿಕ್ ಸನ್‌ರೂಫ್ (ಮೊದಲ-ಸೆಗ್ಮೆಂಟ್) ಮತ್ತು ಡ್ಯುಯಲ್ ಕ್ಯಾಮೆರಾಗಳೊಂದಿಗೆ ಡ್ಯಾಶ್‌ಕ್ಯಾಮ್ ಅನ್ನು ತೆರೆದುಕೊಳ್ಳುತ್ತದೆ ಎಂದು ತಿಳಿಸಿದರು. ಎರಡನೆಯದು 2.31 ಇಂಚಿನ […]

ರಾಷ್ಟ್ರೀಯ ಲೋಕ್ ಅದಾಲತ್ ಯಶಸ್ವಿ- ವಿಚಾರಣೆಗೆ ಬಾಕಿ ಇದ್ದ 7914 ಪ್ರಕರಣಗಳು ಇತ್ಯರ್ಥ

ವಿಜಯಪುರ: ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿಯಾಗಿದ್ದು, ಜಿಲ್ಲಾದ್ಯಂತ ವಿಚಾರಣಗೆಗೆ ಬಾಕಿಯಿದ್ದ 7914 ಪ್ರಕರಣಗಳ್ನು ಇತ್ಯರ್ಥ ಪಡಿಸಲಾಗಿದೆ. ಆಸ್ತಿ ವಿಭಾಗಕ್ಕೆ ಸಂಬಂಧಿಸಿದ 141 ಪ್ರಕರಣಗಳು, 174 ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರ ವಾಹನ ಅಪಘಾತ ಪರಿಹಾರಕ್ಕೆ ಸಂಬಂಧಿಸಿದ 125 ಪ್ರಕರಣಗಳು ಹಾಗೂ ರಾಜಿಯಾಗಬಹುದಾದ 71 ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದ್ದ ಒಟ್ಟು 7914 ಪ್ರಕರಣಗಳು ಲೋಕ್ ಅದಾಲತ್‌ನಲ್ಲಿ ಇತ್ಯರ್ಥವಾಗಿವೆ. ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ಕಕ್ಷಿದಾರರು ಹಾಗೂ ಸರಕಾರಕ್ಕೆ ಒಟ್ಟು ರೂ. […]

ವಿಜಯಪುರ ನೂತನ ಡಿಸಿಯಾಗಿ ಭೂಬಾಲನ ಟಿ. ಅಧಿಕಾರ ಸ್ವೀಕಾರ- ಡಾ. ದಾನಮ್ಮನವರ ವರ್ಗಾವಣೆ

ವಿಜಯಪುರ: ನೂತನ ಜಿಲ್ಲಾಧಿಕಾರಿಯಾಗಿ ಭೂಬಾಲನ ಟಿ. ಅಧಿಕಾರ ಸ್ವೀಕಾರಿಸಿದ್ದಾರೆ. ಸರಕಾರ ವರ್ಗಾವಣೆ ಆದೇಶ ಹೊರಡಿಸಿದ ತಕ್ಷಣವೇ ವಿಜಯಪುರಕ್ಕೆ ಆಗಮಿಸಿದ ಭೂಬಾಲನ ಟಿ. ಅಧಿಕಾರ ಸ್ವೀಕರಿಸಿದರು.  ನಿರ್ಗಮಿತ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ನೂತನ ಡಿಸಿಯನ್ನು ಸ್ವಾಗತಿಸಿ ಬರಮಾಡಿಕೊಂಡರು.  ನಂತರ ಅಧಿಕಾರ ಹಸ್ತಾಂತರಿಸಿದರು. ನೂತನ ಜಿಲ್ಲಾಧಿಕಾರಿ ಹಿನ್ನೆಲೆ ಭೂಬಾಲನ ಟಿ.  ಅವರು ಈವರೆಗೆ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿದ್ದರು.  ವರ್ಗಾವಣೆ ಆದೇಶ ಹೊರಬರುತ್ತಿದ್ದಂತೆ ವಿಜಯಪುರಕ್ಕೆ ಬಂದು ಅಧಿಕಾರ ಸ್ವೀಕರಿಸಿದರು. 2015ರ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿರುವ […]

ಯುವ ಜನಾಂಗ ಪಾಶ್ಚಾತ್ಯ ಸಂಸ್ಕೃತಿಯತ್ತ ವಾಲುತ್ತಿರುವುದು ವಿಷಾದನೀಯ- ಎಎಸ್ಪಿ ಶಂಕರ ಮಾರಿಹಾಳ

ವಿಜಯಪುರ: ಇಂದಿನ ಯುವ ಜನಾಂಗ ನಮ್ಮ ಸಂಸ್ಕೃತಿಯ ಸೊಬಗು ಬಿಟ್ಟು ಪಾಶ್ಚಾತ್ಯ ಸಂಸ್ಕೃತಿಯತ್ತ ವಾಲುತ್ತಿರುವುದು ಅತ್ಯಂತ ವಿಷಾದದ ಸಂಗತಿ ಎಂದು ವಿಜಯಪುರ ಜಿಲ್ಲಾ ಎಎಸ್ಪಿ ಶಂಕರ ಮಾರಿಹಾಳ ಹೇಳಿದ್ದಾರೆ. ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿಯಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಕೋಶದ ಮುಕ್ತ ಹಾಗೂ ಬ ಘಟಕದ ವತಿಯಿಂದ ಆಯೋಜಿಸಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಯುವ ಪೀಳಿಗೆ ಶಿಬಿರದ ಸದುಪಯೋಗ ಪಡೆದುಕೊಂಡು ಉನ್ನತ ಹುದ್ದೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜ […]

ಪರಿಸರ ರಕ್ಷಣೆ ನಮ್ಮೆಲ್ಲರ ಕರ್ತವ್ಯ- ಡಾ. ಜಾಯ್ ಹೊಸಕೇರಿ

ವಿಜಯಪುರ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ.  ಮನುಷ್ಯನು ಪರಿಸರವನ್ನು ಬಿಟ್ಟು ಬದುಕಲಾರ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜೈವಿಕ ಮಾಹಿತಿ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಜಾಯ್ ಹೊಸಮನಿ ಹೇಳಿದರು. ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿಯಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾನಿಲಯದ ರಾಷ್ಟಿçÃಯ ಸೇವಾ ಯೋಜನೆ ಕೋಶ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಷ್ಟಿçÃಯ ಸೇವಾ ಯೋಜನೆಯ ಸಹಯೋಗದಲ್ಲಿ ಎನ್‌.ಎಸ್‌.ಎಸ್ ಮುಕ್ತ ಹಾಗೂ ಬ ಘಟಕದ ವತಿಯಿಂದ ಅಮೃತ […]

ಬಸವನ ಬಾಗೇವಾಡಿ ತಾಲೂಕಿಗೆ ಭೇಟಿ ನೀಡಿ ನಾನಾ ಕಾಮಗಾರಿಗಳನ್ನು ಪರಿಶೀಲಿಸಿದ ಜಿ. ಪಂ ಸಿಇಓ ರಾಹುಲ ಶಿಂಧೆ

ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ರಾಹುಲ ಶಿಂಧೆ ಅವರು ಬಸವನ ಬಾಗೇವಾಡಿ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿ, ನಾನಾ ಯೋಜನೆಗಳ ಕಾಮಗಾರಿ ಪರಿಶೀಲನೆ ನಡೆಸಿದರು.  ಉಕ್ಕಲಿ ಗ್ರಾಮದ ಸರಕಾರಿ ಉರ್ದು ಶಾಲೆಯ ಪ್ರಗತಿಯಲ್ಲಿರುವ ಶಾಲಾ ಕೊಠಡಿ, ನರೇಗಾ ಯೋಜನೆಯಲ್ಲಿ ನಿರ್ಮಾಣಗೊಂಡಿರುವ ಅಡುಗೆ ಕೊಠಡಿ ವೀಕ್ಷಿಸಿದರು.ಎನ್.ಆರ್.ಎಲ್.ಎಮ್ ಯೋಜನೆಯಡಿ ಸಿದ್ಧಪಡಿಸಿರುವ ಸಮವಸ್ತ್ರಗಳನ್ನು ಪಡೆದುಕೊಂಡು, ಅಡುಗೆಯವರ ಹಾಗೂ ಅಡುಗೆ ಸಹಾಯಕರಿಗೆ ವಿತರಿಸುವಂತೆಯೂ ಸಮವಸ್ತ್ರಗಳನ್ನು ಶುಚಿಗೊಳಿಸಿ ಸಮವಸ್ತ್ರ ಬಳಸುವಂತೆ ಶಾಲೆಯ ಮುಖ್ಯೋಪಾಧ್ಯಾಯರಿಗೆ ಸೂಚಿಸಿದ ಅವರು, ಶಾಲೆಯ ಸ್ಮಾರ್ಟ್ ಕ್ಲಾಸ್ […]

ಶ್ರೀಗಂಧದ ಮರ ಇಬ್ಬರು ಕಳ್ಳರಿಗೆ 5 ವರ್ಷ ಜೈಲು, ತಲಾ ರೂ. 1 ಲಕ್ಷ ದಂಡ ವಿಧಿಸಿದ ನ್ಯಾಯಾಲಯ- ಎಸ್. ಎಚ್. ಹಕೀಂ

ವಿಜಯಪುರ: ಶ್ರೀಗಂಧದ ಮರ ಕಳ್ಳತನ ಮಾಡಿದ ಆರೋಪಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐದು ವರ್ಷ ಜೈಲು ಶಿಕ್ಷೆ ಮತ್ತು ರೂ. 2 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ. ಈ ಕುರಿತು ಮಾದ್ಯಮ ಪ್ರಕಟಣೆ ನೀಡಿರುವ ಪ್ರಧಾನ ಸರಕಾರಿ ಅಭಿಯೋಜಕ ಎಸ್. ಎಚ್. ಹಕೀಂ, ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರ್ಜಗಿ ಗ್ರಾಮದ ದಸ್ತಗೀರ ಜಾಫರಸಾಬ ಚಂದನ ಮತ್ತು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಾಲೋಟಗಿ ಗ್ರಾಮದ ಹಾಜಿಮಲಂಗ ಮೈಬೂಬಸಾಬ ವಾಲಿಕಾರ ಅವರಿಗೆ ಶಿಕ್ಷೆ […]

ಬದರುದ್ದೀನ್ ಅ. ಸೌದಾಗರ ವಿಜಯಪುರ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕಾರ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಬದರುದ್ದೀನ್ ಅ. ಸೌದಾಗರ ಅವರನ್ನು ಸರಕಾರ ವರ್ಗವಾಣೆ ಮಾಡಿದ್ದು, ಅವರು ಈಗಾಗಲೇ ಅಧಿಕಾರ ಸ್ವೀಕರಿಸಿದ್ದಾರೆ. ಬಳ್ಳಾರಿಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಅವರನ್ನು ಸರಕಾರ ವಿಜಯಪುರಕ್ಕೆ ವರ್ಗಾವಣೆ ಮಾಡಿದೆ.  ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ವಿಜಯ ಮೆಕ್ಕಳಕಿ ಅವರನ್ನು ವಿಜಯಪುರದಿಂದ ಪೌರಾಡಳಿತ ಇಲಾಖೆಗೆ ವರ್ಗಾವಣೆ ಮಾಡಲಾಗಿದ್ದು, ಯಾವುದೇ ಸ್ಥಳ ತೋರಿಸಿಲ್ಲ. ನೂತನ ಆಯುಕ್ತರನ್ನು ವಿಜಯಪುರ ಮಹಾನಗರ ಪಾಲಿಕೆಯ ಎಲ್ಲ ಸಿಬ್ಬಂದಿ ಬರಮಾಡಿಕೊಂಡು ಸ್ವಾಗತ ಕೋರಿದ್ದಾರೆ.  ಬದರುದ್ದೀನ್ ಅ. ಸೌದಾಗರ ಅವರು […]

ಸಾಗುವಳಿ ಜಮೀನನ್ನು ಸಕ್ರಮಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ

ವಿಜಯಪುರ: ವಿಜಯಪುರ, ಇಂಡಿ, ಸಿಂದಗಿ ಮತ್ತು ಬಸವನ ಬಾಗೇವಾಡಿ ತಾಲೂಕುಗಳಲ್ಲಿ ಬಡ ರೈತರು ಸರಕಾರಿ ಪಡಾ ಜಮೀನನ್ನು ಸುಮಾರು 20 ರಿಂದ 30 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದಿದ್ದು, ಇದನ್ನು ಸಕ್ರಮಗೊಳಿಸಿ ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಸಂಘಟನೆ ಮುಖಂಡರು ಮತ್ತು ಕಾರ್ಯಕರ್ತರು ಸರ್ಕಾರದ ಆದೇಶದಂತೆ ಅಕ್ರಮ ಸಾಗುವಳಿ ಜಮೀನನ್ನು ಸಕ್ರಮಗೊಳಿಸಿ ಹಕ್ಕು ಪತ್ರ ವಿತರಿಸಬೇಕು ಎಂದು ಆಗ್ರಹಿಸಿದರು.  ಅಲ್ಲದೇ, ಅಪರ ಜಿಲ್ಲಾಧಿಕಾರಿ […]