ಪ್ರಾಥಮಿಕ, ಪ್ರೌಢ ಶಾಲೆಗಳ ಶಿಕ್ಷಕರ ವರ್ಗಾವಣೆ ಕೌನ್ಸಲಿಂಗ್: ಜಿ. ಪಂ. ಸಿಇಓ ರಿಷಿ ಆನಂದ ಪರಿಶೀಲನೆ
ವಿಜಯಪುರ: ಕೌನ್ಸಲಿಂಗ್ ಪ್ರಕ್ರಿಯೆ ಮೂಲಕ ನಾನಾ ಪ್ರಾಧಾನ್ಯತೆಗಳಡಿಯಲ್ಲಿ ತಮಗೆ ಅನುಕೂಲವಾಗುವ ಸ್ಥಳಗಳಲ್ಲಿ ವರ್ಗಾವಣೆ ಪಡೆಯುವ ಶಿಕ್ಷಕರು ಸಂತೃಪ್ತಿಯಿಂದ ಬೋಧನಾ ಕಾರ್ಯವನ್ನು ನಿರ್ವಹಿಸಿ ಇಲಾಖೆಯ ಗುರಿ ಉದ್ದೇಶಗಳ ಸಫಲತೆಗೆ ಹೆಚ್ಚು ಪರಿಶ್ರಮವಹಿಸಬೇಕು ಎಂದು ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಹೇಳಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ನಡೆಯುತ್ತಿರುವ 2024-25ನೇ ವರ್ಷದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್‌ನಲ್ಲಿ ಭಾಗವಹಿಸಿರುವ ಶಿಕ್ಷಕರು ಆನ್-ಲೈನ್ ಪ್ರಕ್ರಿಯೆ ಮೂಲಕ ಸ್ಥಳ ಆಯ್ಕೆ ಮಾಡಿಕೊಳ್ಳುವ […]
ಪತ್ರಕರ್ತರಾದ ಅಶೋಕ ಯಡಳ್ಳಿ, ಇರಫಾನ್ ಶೇಖ್ ಕಾನಿಪ ಜಿಲ್ಲಾ ಕಾರ್ಯಕಾರಿ ಸಮಿತಿಗೆ ನಾಮನಿರ್ದೆಶನ
ವಿಜಯಪುರ :ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿಣಿ ಸಮಿತಿಗೆ ಇಬ್ಬರು ಹಿರಿಯ ಪತ್ರಕರ್ತರನ್ನು ನಾಮನಿರ್ದೇಶನ ಸದಸ್ಯರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಹೊಸ ಪತ್ರಿಕಾ ಭವನದಲ್ಲಿ ಸಂಗಮೇಶ ಚೂರಿ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಟಿವಿ ವರದಿಗಾರ ಅಶೋಕ ಯಡಳ್ಳಿ ಮತ್ತು ಗುಮ್ಮಟ ನಗರಿ ವ್ಯವಸ್ಥಾಪಕ ಮಹಮ್ಮ ಇರ್ಇಾನ್ ಶೇಖ ಅವರನ್ನು ಕಾರ್ಯಕಾರಿ ಸಮಿತಿಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಒಕ್ಕೋರಲಿನಿಂದ ಆಯ್ಕೆ ಮಾಡಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ ಪಿ. ಕುಲಕರ್ಣಿ ಮಾಧ್ಯಮ ಪ್ರಕಟಣೆಯಲ್ಲಿ […]
ಕಾನಿಪ ಜಿಲ್ಲಾ ಪ್ರಶಸ್ತಿ ಪ್ರಕಟ- ರಮೇಶ, ಗೌಡರ, ಪ್ರಕಾಶ, ಇರ್ಫಾನ್, ವಿಜಯ, ಸುನೀಲಧ್ವಯರು ಸೇರಿ 31 ಪತ್ರಕರ್ತರು ಪ್ರಶಸ್ತಿಗೆ ಆಯ್ಕೆ
ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನೀಡಲಾಗುವ 2024ನೇ ವರ್ಷದ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸ್ಥಾನಿಕ ಸಂಪಾದಕರು, ಜಿಲ್ಲಾ, ತಾಲೂಕು ವರದಿಗಾರರು, ಕ್ಯಾಮೆರಾಮನ್‌ಗಳು ಹಾಗೂ ಪತ್ರಿಕಾ ವಿತರಕರು ಸೇರಿದಂತೆ ಒಟ್ಟು 31 ಜನರಿಗೆ ವಾರ್ಷಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು. ಜು. 28ರಂದು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆ […]
ಬೆಳೆ ಅಂದಾಜು ಸಮೀಕ್ಷೆ ತರಬೇತಿ ಕಾರ್ಯಕ್ರಮ- ಜಿ. ಪಂ. ಸಿಇಓ ರಿಶಿ ಆನಂದ ಉದ್ಘಾಟನೆ
ವಿಜಯಪುರ: ಗ್ರಾಮ ಆಡಳಿತ ಅಧಿಕಾರಿಗಳು ತೋಟಗಾರಿಕೆ ಅಧಿಕಾರಿಗಳು, ಪಿಡಿಓಗಳು, ಸಹಾಯಕ ಕೃಷಿ ಅಧಿಕಾರಿಗಳು ಹಾಗೂ ಉಪತಹಸೀಲ್ದಾರರು, ಕಂದಾಯ ನಿರೀಕ್ಷಕರು ಮತ್ತು ತಾ. ಪಂ. ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಗುರುವಾರ ನಗರದ ಜಿ. ಪಂ. ಸಭಾಂಗಣದಲ್ಲಿ ಬೆಳೆ ಅಂದಾಜು ಸಮೀಕ್ಷೆ ತರಬೇತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯ ಸಹಾಯಕ ನಿರ್ದೇಶಕಕ ಅಲ್ತಾಫ […]
ರಸ್ತೆ ಕಾಮಗಾರಿ: ನಾನಾ ಪ್ರದೇಶ, ಕಚೇರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಭೇಟಿ, ಪರಿಶೀಲನೆ
ವಿಜಯಪುರ: ನಗರದ ಜಿಲ್ಲಾ ಪಂಚಾಯಿತಿ ಪ್ರವೇಶ ದ್ವಾರದಿಂದ ಜಿಲ್ಲಾ ಪಂಚಾಯಿತಿ ಕಚೇರಿಯವರೆಗೆ ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ರಸ್ತೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗುರುವಾರ ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದವರಿಗೆ ಸೂಚನೆ ನೀಡಿದರು. ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಬಾಲಮಂದಿರ, ಗಾಂಧಿಭವನದ ಪಕ್ಕದಲ್ಲಿ ಜಿಲ್ಲಾಡಳಿತ ಕಚೇರಿಗಳ […]
ರಾಷ್ಟ್ರೀಯ ಲೋಕ ಅದಾಲತ: ಕಕ್ಷಿದಾರರ ಅಭೂತಪೂರ್ವ ಸ್ಪಂದನೆ- 13400 ಪ್ರಕರಣಗಳು ಇತ್ಯರ್ಥ
ವಿಜಯಪುರ: ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಕಕ್ಷಿದಾರರು ಹಾಗೂ ವಕೀಲರ ಸಹಕಾರದಿಂದ ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಬಾಕಿ ಇದ್ದ ಒಟ್ಟು 134000 ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಹಾಗೂ 2,19,475 ವ್ಯಾಜ್ಯ ಪೂರ್ವ ಪ್ರಕರಣಗಳು ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಇತ್ಯರ್ಥಗೊಂಡಿವೆ. ಈ ಲೋಕ ಅದಾಲತ್‌ನಲ್ಲಿ ನಾನಾ ಕಾರಣಗಳಿಂದ ವಿಚ್ಚೇದನಕ್ಕೆ ಮೊರೆ ಹೋಗಿದ್ದ ಏಳು ದಂಪತಿಗಳನ್ನು ನ್ಯಾಯಾಧೀಶರು ಹಾಗೂ ವಕೀಲರ ಮಧ್ಯಸ್ಥಿಕೆಯಲ್ಲಿ ನಡೆದ ರಾಜಿ ಸಂಧಾನದಲ್ಲಿ ಮೂಲಕ ಒಂದಾಗಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು. ಈ ರಾಷ್ಟ್ರೀಯ ಲೋಕ್ ಅದಾಲತನ […]
ನಾನಾ ಬೇಡಿಕೆ ಈಡೇರಿಸಲು ಆಗ್ರಹ- ಅರುಣ ಶಹಾಪುರ ನೇತೃತ್ವದಲ್ಲಿ ಸಹಶಿಕ್ಷಕರಿಂದ ಮನವಿ ಪತ್ರ ಸಲ್ಲಿಕೆ
ವಿಜಯಪುರ: ಶಿಕ್ಷಕರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ ವಿಧಾನ ಪರಿಷತ ಮಾಜಿ ಶಾಸಕ ಅರುಣ ಶಹಾಪುರ ನೇತೃತ್ವದಲ್ಲಿ ಜಿ. ಪಂ. ಡಿ. ಎಸ್. ವಿಜಯಕುಮಾರ ಆಜೂರ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಸರಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ ನಾನಾ ಬೇಡಿಕೆಗಳಾದ ಓಪಿಎಸ್ ಜಾರಿ, ಏಪ್ರಿಲ್/ಮೇ ತಿಂಗಳಲ್ಲಿ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಜಾರಿ, ನಿಯಮಿತವಾಗಿ ಸರಕಾರಿ ಆರ್ ಎಂ ಎಸ್ ಎ, ಸಾಮಾನ್ಯ […]
ಶಿಸ್ತಿನ ಸಿಪಾಯಿಗಳ ನಿರ್ಮಾಣದಲ್ಲಿ ಭಾರತ ಸೇವಾದಳದ ಕಾರ್ಯ ಶ್ಲಾಘನೀಯ- ಡಾ. ಅಶೋಕ ಜಾಧವ
ವಿಜಯಪುರ: ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಭಾವೈಕ್ಯತೆ ಮನೋಭಾವ ಬೆಳೆಸಿ ಅವರನ್ನು ಭಾರತದ ಆದರ್ಶ ನಾಗರಿಕರನ್ನಾಗಿ ಮಾಡಲು ಭಾರತ್ ಸೇವಾದಳ ಶ್ರಮಿಸುತ್ತಿದೆ ಎಂದು ಡಾ. ಅಶೋಕ ಜಾದವ ಹೇಳಿದ್ದಾರೆ. ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ನಂಬರ್- 24 ರಲ್ಲಿ ಪಿಯು ಕಾಲೇಜಿನ ಉಪನ್ಯಾಸಕರಿಗಾಗಿ ಆಯೋಜಿಸಲಾದ ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರಧ್ವಜ ಹಾಗೂ ಭಾರತ ಸೇವಾದಳ ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಶಿಸ್ತು, ಪ್ರಾಮಾಣಿಕತೆಯೊಂದಿಗೆ ಇಂದಿನ […]
ಡಾ. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಡಿಸಿ, ಜಿ. ಪಂ ಸಿಇಓ, ಎಸ್ಪಿ ದಿಢೀರ್ ಭೇಟಿ, ಪರಿಶೀಲನೆ, ಅಹವಾಲು ಆಲಿಕೆ
ವಿಜಯಪುರ: ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿ. ಪಂ. ಸಿಇಓ ರಿಷಿ ಆನಂದ, ಎಸ್ಪಿ ಋಷಿಕೇಶ ಸೋನಾಚಣೆ ಅವರು ಬೆಳಿಗ್ಗೆ ನಗರದ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕ್ರೀಡಾಂಗಣದ ಆವರಣ ಪರಿವೀಕ್ಷಣೆ ನಡೆಸಿದ ಅವರು, ಕ್ರೀಡಾಂಗಣದಲ್ಲಿ ಒದಗಿಸಿರುವ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು. ಕ್ರೀಡಾಂಗಣ ಸ್ವಚ್ಛತೆಯೂ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿರುವ ಮಾಹಿತಿ ಪಡೆದುಕೊಂಡ ಅವರು, ಈ ಬಗ್ಗೆ ನಿಯಮಿತವಾಗಿ ಪರಿಶೀಲನೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ […]
ಅಪಘಾತ ತಗ್ಗಿಸಲು ಸುರಕ್ಷತಾ ಉಪಕ್ರಮ ಕೈಗೊಳ್ಳಿ- ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ
ವಿಜಯಪುರ: ಜಿಲ್ಲೆಯಲ್ಲಿ ಅಪಘಾತ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಿಗ್ನಲ್ ರೋಡ ಬ್ಯಾರಿಕೇಡ್, ಮಾಹಿತಿ ಫಲಕ, ತಿರುವು ರಸ್ತೆಗಳ ಮಾಹಿತಿ, ವೃತ್ತಗಳ ಮಾಹಿತಿ ಅಳವಡಿಸುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾಡಿದ ಅವರು, ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳುವಳಿಕೆ ನೀಡಬೇಕು. ರಸ್ತೆಯ ಸುಧಾರಣೆ ಕೈಗೊಂಡು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಿದ […]