ಚುನಾವಣೆ ಪ್ರಕ್ರಿಯೆ ಸಮಗ್ರ ಜ್ಞಾನ ಹೊಂದಿ ಪಾರದರ್ಶಕ ಚುನಾವಣೆಗೆ ಸನ್ನದ್ಧರಾಗಿ- ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ಮುಂಬರುವ ಚುನಾವಣೆಗೆ ನಿಯೋಜಿತ ಸೆಕ್ಟರ್ ಅಧಿಕಾರಿಗಳು ಯಾವುದೇ ಗೊಂದಲಕ್ಕೆ ಒಳಗಾಗದೇ ಕ್ಲೀಷ್ಟಕರ ಹಾಗೂ ಕಷ್ಟಕರ ಪರಿಸ್ಥಿತಿಯನ್ನು ನಿಭಾಯಿಸುವ ಕೌಶಲ್ಯ ರೂಢಿಸಿಕೊಳ್ಳಬೇಕು. ಚುನಾವಣಾ ಪ್ರಕ್ರಿಯೆ ಬಗ್ಗೆ ಸಮಗ್ರ ಜ್ಞಾನ ಹೊಂದುವ ಮೂಲಕ ಪಾರದರ್ಶಕ ಚುನಾವಣೆಗೆ ಸನ್ನದ್ಧರಾಗುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಮತದಾನ ಪೂರ್ವಸಿದ್ಧತೆ ಹಾಗೂ ಚುನಾವಣೆಗೆ ನಿಯೋಜಿತ 29-ಬಬಲೇಶ್ವ್ವರ, 30-ಬಿಜಾಪುರ ನಗರÀ, 31-ನಾಗಠಾಣ ಮತಕ್ಷೇತ್ರದ ಸೆಕ್ಟರ್ ಅಧಿಕಾರಿಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಕ್ರಮದಲ್ಲಿ ಅವರು […]

ಮಾ. 31ರಿಂದ ಏ.15ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ- ಪಾರದರ್ಶಕ ಹಾಗೂ ಸುಸೂತ್ರ ಪರೀಕ್ಷೆ ನಡೆಸಲು ಡಿಸಿ ಡಾ. ದಾನಮ್ಮನವರ ಸೂಚನೆ

ವಿಜಯಪುರ: ಜಿಲ್ಲೆಯಲ್ಲಿ ಇದೇ ಮಾ.31 ರಿಂದ ಏಪ್ರಿಲ್ 15ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆ ಪಾರದರ್ಶಕ ಹಾಗೂ ಸುಸೂತ್ರವಾಗಿ ನಡೆಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ  ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷಾ ಪೂರ್ವಸಿದ್ಧತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ಒಟ್ಟು 147 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಯಾವುದೇ ರೀತಿಯ ಅನಾನೂಕೂಲವಾಗದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡು ಪಾರದರ್ಶಕ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ […]

ಜೂನ್ 24ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್- ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ

ವಿಜಯಪುರ: ಜಿಲ್ಲಾದ್ಯಂತ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಜೂನ್ 24 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತನಲ್ಲಿ ಕಕ್ಷಿದಾರರು ಭಾಗವಹಿಸಿ, ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿದೆ.  ಇದನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರು ತಿಳಿಸಿದ್ದಾರೆ. ರಾಜ್ಯ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿಗಳು ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧ್ಯಕ್ಷರ ನಿರ್ದೇಶನದಂತೆ ಎಲ್ಲ ವರ್ಗದ ಕಕ್ಷಿದಾರರಿಗೆ ಅನುಕೂಲವಾಗುವ […]

ಬಿ.ಎಲ್.ಡಿ. ಸೌಹಾರ್ದ ಸಹಕಾರ ಸಂಘದ ನೂತನ ಶಾಖೆ ಕಾರ್ಯಾರಂಭ

ವಿಜಯಪುರ: ಬಿಜಾಪುರ ಲಿಂಗಾಯತ ಡೆವಲೆಪಮೆಂಟ್ ಸೌಹಾರ್ದ ಸಂಘದ ನೂತನ ಶಾಖೆಯ ಉದ್ಘಾಟನೆ ಸಮಾರಂಭ ಬಿ.ಎಲ್.ಡಿ.ಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಆವರಣದಲ್ಲಿ ನಡೆಯಿತು. ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ನೂತನ ಶಾಖೆಯನ್ನು ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಅಧಿಕಾರಿಗಳಿಂದ ಸೌಹಾರ್ಧದ ಬಗ್ಗೆ ಮಾಹಿತಿ ಪಡೆದ ಅವರು, ಶುಭ ಕೋರಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ, ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, […]

ವಿಜಯಪುರ ಜಿಲ್ಲೆಯಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿಯಿದ್ದು, ಈಗಾಗಲೇ 2.87 ಸಾವಿರ ಮನೆಗಳಿಗೆ ನೀರು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.   ಜಿಲ್ಲಾಡಳಿತ ವಿಜಯಪುರ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮುದ್ದೇಬಿಹಾಳದ ನಾಲತಾವಾಡ ಪಟ್ಟಣದಲ್ಲಿ ಆಯೋಜಿಸಿರುವ ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಕಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯವನ್ನು ಹಾಗೂ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ನೆರವೇರಿಸಿ ಅವರು ಮಾತನಾಡಿದರು . ಜಲ್ ಜೀವನ್ ಮಿಷನ್ ಅಡಿಯಲ್ಲಿ […]

ಬಿ ಎಲ್ ಡಿ ಇ ಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ ಪ್ರೋಜೆಕ್ಟ್ ಪ್ರದರ್ಶನ

ವಿಜಯಪುರ: ಬಿ ಎnd ಡಿ ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗವು ನವದೆಹಲಿಯ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ (ISTE) ಸಹಯೋಗದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಮಿನಿ ಪ್ರೋಜೆಕ್ಟ್ ಪ್ರದರ್ಶನ ಆಯೋಜಿಸಿದ್ದರು. ಈ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಚಾರ್ಯ ಡಾ. ವಿ. ಜಿ. ಸಂಗಮ, ಉಪಪ್ರಾಚಾರ್ಯ ಡಾ. ಜಿ. ವಿ. ಪಾಟೀಲ, ವಿಭಾಗದ ಮುಖ್ಯಸ್ಥ ಡಾ. ಆರ್. ಎನ್. ಜೀರಗಾಳ ಉದ್ಘಾಟಿಸಿದರು. ಸುಮಾರು 17 ಗುಂಪುಗಳು ಭಾಗವಹಿಸಿ […]

ಆರೋಗ್ಯ ಸೌಧ ಕಾಮಗಾರಿ ಪರಿಶೀಲನೆ ನಡೆಸಿದ ಜಿ. ಪಂ. ಸಿಇಓ ರಾಹುಲ್ ಶಿಂಧೆ

ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಗೆ ಭೇಟಿ ನೀಡಿ, ಕಾರ್ಯಾಲಯದ ಆವರಣದಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಆರೋಗ್ಯ ಸೌಧ ಕಾಮಗಾರಿಯನ್ನು ವೀಕ್ಷಿಸಿದರು. ಹಳೆಯ ಕಟ್ಟಡ ನಿಯಮಾನುಸಾರ ನೆಲಸಮಗೊಳಿಸಬೇಕು.  ಕಚೇರಿ ಆವರಣ, ಜಿಲ್ಲಾ ಮಧ್ಯಸ್ಥಿಕೆ ಕೇಂದ್ರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು.  ರೆಡಸ್ ರಕ್ತನಿಧಿ ಕೇಂದ್ರದಲ್ಲಿ 1000 ರಕ್ತದ ಯುನಿಟ್ ಗಳ ಸಂಗ್ರಹಣೆಯ ಸಾಮಥ್ರ್ಯವಿದ್ದು, ಈಗ 80 ರಿಂದ 100 ರಕ್ತದ ಯುನಿಟ್ ಗಳನ್ನು ಮಾತ್ರ ಪ್ರತಿ […]

ನೆರೆ ರಾಜ್ಯದ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ ಅಂತಾರಾಜ್ಯ ಚುನಾವಣೆ ಅಕ್ರಮಕ್ಕೆ ಕಡಿವಾಣ- ಡಾ. ದಾನಮ್ಮನವರ

ವಿಜಯಪುರ: ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಗಡಿ ಭಾಗದ ವಿಜಯಪುರ ಜಿಲ್ಲೆಯಲ್ಲಿ ್ಲ ಅಂತಾರಾಜ್ಯ ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಅಧಿಕಾರಿಗಳಿಗೆ ಅಧಿಕಾರವಿದ್ದು, ನೆರೆ ರಾಜ್ಯದ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿಕೊಂಡು ಅಕ್ರಮ ತಡೆಗಟ್ಟುವಂತೆ ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದ್ದಾರೆ.  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮುಂಬರುವ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಗಡಿ ಜಿಲ್ಲೆಗಳಾದ ಸಾಂಗಲಿ ಹಾಗೂ ಸೋಲಾಪೂರ ಜಿಲ್ಲೆಗಳ ಕಂದಾಯ, ಜಿ ಎಸ್ ಟಿ, ಅಬಕಾರಿ, ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಅಂತಾರಾಜ್ಯ […]

ಇಂಟೆಲ್ ಇಂಡಿಯಾ ಸ್ಟೇಮ್ ದಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಕಾರ್ಯಕ್ಕೆ ಪ್ರಶಂಸೆ, ನಗದು ಬಹುಮಾನ ವಿತರಣೆ

ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ. ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೆಷನ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿಯರಾದ ಸಮೃದ್ಧಿ ಹಿರೇಮಠ ಮತ್ತು ಸೌಭಾಗ್ಯ ಮುದ್ದೇಬಿಹಾಳ ಅವರು ಇಂಟೆಲ್ ಇಂಡಿಯಾ ಪೌಂಡೆಷನ್ ಮಹಿಳೆಯರಿಗಾಗಿ ಲಿಂಕ್ಸ ಸ್ಕಿಲ್ಸ್ ಮತ್ತು ಲರ್ನಿಂಗ್ ಆಯೋಜಿಸಿದ್ದ ವಿ. ಎಲ್. ಎಸ್. ಐ ಹ್ಯಾಕಥಾನ್‌ನಲ್ಲಿ ಭಾಗವಹಿಸಿ ಪ್ರಶಂಸೆ ಪತ್ರ ಮತ್ತು ರೂ. 5000 ನಗದು ಬಹುಮಾನ ಪಡೆದಿದ್ದಾರೆ. ಈ ಕುರಿತು ಜಂಟಿ ಮಾಧ್ಯಮ […]

ಸಿಇಎನ್ ಪೊಲೀಸರ ಕಾರ್ಯಾಚರಣೆ- ಗಾಂಜಾ ಮಾರಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ- ರೂ. 5 ಲಕ್ಷ ಮೌಲ್ಯದ ಗಾಂಜಾ, ಕಾರು ವಶ

ವಿಜಯಪುರ: ಧಾಬಾದಲ್ಲಿ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿಜಯಪುರ ಸಿಇಎನ್ ಅಪರಾಧ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸೋನಕನಹಳ್ಳಿ ಬಳಿ ಎನ್. ಎಚ್. 52ರಲ್ಲಿ ಬರುವ ಸಾಗರ ಧಾಭಾದ ಬಳಿ ಧಾಳಿ ನಡೆಸಿದ ಸಿಇಎನ್ ಸಿಪಿಐ ಸಂಜೀವ ಕಾಂಬಳೆ ಮತ್ತು ಸಿಬ್ಬಂದಿ ಇಬ್ಬರು ಆರೋಪಿಗಳನ್ನು ಬಂಧಿಸಿ ರೂ. 5 ಲಕ್ಷ ಮೌಲ್ಯದ 70 ಕೆಜಿ ಗಾಂಜಾ, ರೂ. 5 ಲಕ್ಷ ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಬಂಧಿಸಲಾದ ಆರೋಪಿಗಳನ್ನು ಮಹಾರಾಷ್ಟ್ರದ ಸೋಲಾಪುರ […]