ಸ್ವಪ್ನಾ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಗೆ ಶಿವಾನಂದ ತಗಡೂರ ಭೇಟಿ- ಸರಕಾರದಿಂದ ನೆರವು ಕೊಡಿಸುವ ಭರವಸೆ

ವಿಜಯಪುರ: ಕಿವುಡ ಮತ್ತು ಮೂಕ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ನಗರದ ಸ್ವಪ್ನಾ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಗೆ ಸರಕಾರದಿಂದ ನೆರವು ಕೊಡಿಸಲು ಪ್ರಯತ್ನಿಸುವುದಾಗಿ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಹೇಳಿದ್ದಾರೆ. ಶಾಲೆಗೆ ಭೇಟಿ ನೀಡಿ ಮಾತನಾಡಿದ ಅವರು, ಇಲ್ಲಿರುವ ಮಕ್ಕಳನ್ನು ನೋಡಿದರೆ ತಮ್ಮಲ್ಲಿರುವ ಅತೀಂದ್ರೀಯ ಶಕ್ತಿಗಳಿಂದ ಇವರು ಸಮಾಜದಲ್ಲಿ ನಡೆಯುವ ಪ್ರತಿಯೊಂದು ಆಗುಹೋಗುಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ.  ಅಲ್ಲದೇ, ತಮ್ಮದೇ ಆದ ಶೈಲಿಯಲ್ಲಿ ಸಂವಹನ ನಡೆಸುವ ಮೂಲಕ ಪ್ರೀತಿ ತೋರಿಸುತ್ತಾರೆ.  ಇಂಥ ವಿಶೇಷ […]

ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯ ವಾಮಮಾರ್ಗದ ರಾಜಕೀಯಕ್ಕೆ ಮತದಾರರಿಂದ ತಕ್ಕ ಪಾಠ- ಕಾಂತಾ ನಾಯಕ

ವಿಜಯಪುರ: ಬಿಜೆಪಿ ಸರಕಾರ ವಾಮಮಾರ್ಗದಿಂದ ಅಧಿಕಾರಕ್ಕೆ ಬರುವ ಚಾಳಿ ರೂಢಿಸಿಕೊಂಡಿದೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಅದರ ಆಟ ನಡೆಯುವುದಿಲ್ಲ.  ಜನ ಕಾಂಗ್ರೆಸ್ ಸರಕಾರವನ್ನು ಖಂಡಿತವಾಗಿ ಅಧಿಕಾರಕ್ಕೆ ತರುತ್ತಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ನಾಗಠಾಣ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕಾಂತಾ ನಾಯಕ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬಿಜೆಪಿ ಸದಾ ಸುಳ್ಳುಗಳನ್ನು ಹೇಳುವ ಮೂಲಕ ಅಧಿಕಾರಕ್ಕೆ ಬಂದು ಜನರನ್ನು ಸಂಕಷ್ಟಕ್ಕೀಡು ಮಾಡುತ್ತಿದೆ. ಆದರೆ ಈ ಬಾರಿ ಬಿಜೆಪಿಯ ಸುಳ್ಳು […]

ಕಾನಿಪ ರಾಜ್ಯ ಮಟ್ಟದ ಸಮ್ಮೇಳನದ ಯಶಸ್ಸು ವಿಜಯಪುರ ಜನತೆಯ ಶ್ರೇಯಸ್ಸು- ಶಿವಾನಂದ ತಗಡೂರ

ವಿಜಯಪುರ: ಬಸವನಾಡು ವಿಜಯಪುರದಲ್ಲಿ ನಡೆದ 37ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಸಂಪೂರ್ಣ ಯಶಸ್ವಿಯಾಗಿದ್ದು, ಎಲ್ಲರ ಮನದಲ್ಲಿ ಸಮ್ಮೇಳನ ಚೆನ್ನಾಗಿ ನಡೆಯಿತು ಎಂಬ ಛಾಪು ಮೂಡಿಸಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಹೇಳಿದರು. ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಯಶಸ್ವಿಗೆ ಶ್ರಮಿಸಿದ ಸದಸ್ಯರಿಗೆ, ಹಿರಿಯರಿಗೆ ಹಾಗೂ ಹಿತೈಷಿಗಳಿಗೆ ನಗರದ ಚಾಂದನಿ ಫಂಕ್ಷನ್ ಹಾಲ್ ನಲ್ಲಿ ಕಾನಿಪ ಸಂಘದಿಂದ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪತ್ರಕರ್ತರ ಸಮ್ಮೇಳನದ ಯಶಸ್ವಿಯ ಶ್ರೇಯಸ್ಸು ವಿಜಯಪುರ ಜಿಲ್ಲೆಯ ಜನತೆಗೆ […]

ಮಾ. 1 ರಿಂದ ಅನಿರ್ಧಿಷ್ಠಾವಧಿ ಮುಷ್ಕರ- ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೇಡಶ್ಯಾಳ

ವಿಜಯಪುರ: ರಾಜ್ಯ ಸರಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಮಾರ್ಚ್ 1 ರಿಂದ ಅನಿರ್ಧಿಷ್ಠಾವಧಿ ಮುಷ್ಕರ ನಡೆಸಲಾಗುವುದು ಎಂದು ವಿಜಯಪುರದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೇಡಶ್ಯಾಳ ಹೇಳಿದ್ದಾರೆ.  ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ. 21ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ, ತಾಲೂಕು, ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳ ತುರ್ತು ರಾಜ್ಯ […]

ಸಫಾಯಿ ಕರ್ಮಚಾರಿಗಳ ಮಕ್ಕಳ ಶಿಕ್ಷಣ-ಆರೋಗ್ಯ, ಕೌಶಲ್ಯಾಭಿವೃದ್ದಿಗೆ ಒತ್ತು- ಎಂ. ಶಿವಣ್ಣ ಕೋಟೆ

ವಿಜಯಪುರ: ಪೌರಕಾರ್ಮಿಕರ ಮಕ್ಕಳ ಶಿಕ್ಷಣ, ಕಾರ್ಮಿಕರ ಆರೋಗ್ಯ, ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಕೋಟೆ ಅವರು ಹೇಳಿದರು. ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಮತ್ತು ಅಭಿವೃದ್ದಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಾಭಿವೃದ್ದಿ ಕೋಶ ಹಾಗೂ ಸಮಾಜ ಕಲ್ಯಾಣ ಇಲಾಖೆ ವಿಜಯಪುರ ಇವರ ಸಂಯುಕ್ತಾಶ್ರದಲ್ಲಿ ಗುರುವಾರ ಹಮ್ಮಿಕೊಂಡ ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಫಾಯಿ ಕರ್ಮಚಾರಿಗಳಿಗೆ […]

ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸ್ವಾಗತ- ಹೆಚ್ಚಿಗೆ ಅನುದಾನ ಮೀಸಲಿಡಲು ಸಮಾಜ ಮುಖಂಡರ ಆಗ್ರಹ

ವಿಜಯಪುರ: ರಾಜ್ಯ ಸರಕಾರ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ಸಂತಸ ತಂದಿದ್ದು, ಈ ನಿಗಮಕ್ಕೆ ಹೆಚ್ಚಿಗೆ ಅನುನಾದ ಮೀಸಲಿಡಬೇಕು ಎಂದು ಜಿಲ್ಲಾ ಗಾಣಿಗ ಸಂಘದ ಜಿಲ್ಲಾಧ್ಯಕ್ಷ ಬಿ. ಬಿ. ಪಾಸೋಡಿ ಮತ್ತು ಸಮಾಜದ ಮುಖಂಡ ಮಲ್ಲಿಕಾರ್ಜುನ ಲೋಣಿ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಜಗತ್ತಿಗೆ ಜ್ಯೋತಿ ನೀಡಿದ ಗಾಣಿಗ ಸಮಾಜದ ಬಹುದಿನಗಳ ಬೇಡಿಕೆಯನ್ನು ಗಾಣಿಗ ನಿಗಮ ಸ್ಥಾಪನೆಯ ಘೋಷಣೆಯ ಮೂಲಕ ಈಡೇರಿಸಿದೆ.  ಈ ಹಿನ್ನೆಲೆಯಲ್ಲಿ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ.  ಈ ನಿಗಮ ಸ್ಥಾಪಿಸಲು ಪ್ರಯತ್ನಿಸಿರುವ […]

ಲೋಹಗಾಂವ, ಸಿದ್ದಾಪುರ ಕೆ ಗ್ರಾ. ಪಂ. ಗಳಿಗೆ ಸಿಇಓ ರಾಹುಲ ಶಿಂಧೆ ಭೇಟಿ- ನಾನಾ ಕಾಮಗಾರಿಗಳ ಪರಿಶೀಲನೆ

ವಿಜಯಪುರ: ತಿಕೋಟಾ ತಾಲೂಕಿನ ಲೋಹಗಾಂವ ಮತ್ತು ಸಿದ್ಧಾಪುರ(ಕೆ) ಗ್ರಾ. ಪಂ. ಗಳಿಗೆ ಜಿಲ್ಲಾ ಪಂಚಾಯfತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಭೇಟಿ ನೀಡಿ ನಾನಾ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಹುಲ ಶಿಂಧೆ ಅವರು, ಕಾಮಗಾರಿಗಳ ಗುಣ್ಣಮಟ್ಟದಲ್ಲಿ ಯಾವದೇ ಕಾರಣಕ್ಕೂ ರಾಜಿ ಮಾಡಿಕೊಳ್ಳದೇ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು.  ಮುಖ್ಯವಾಗಿ ಶಾಲಾ ಅಭಿವೃದ್ಧಿ ಕಾಮಗಾರಿಗಳನ್ನು ಅತ್ಯಂತ ಉತ್ತಮ ಗುಣಮಟ್ಟದಿಂದ ನಿರ್ವಹಣೆ ಮಾಡಬೇಕು. ಹೆಚ್ಚುವರಿ ಕ್ರಿಯಾ ಯೋಜನೆಗಳ ಬದಲಿಗೆ ಹಳೆ ವರ್ಷದ ಕ್ರಿಯಾ ಯೋಜನೆಗಳಲ್ಲಿರುವ […]

ಜಿ. ಪಂ. ಸಿಇಓ ರಾಹುಲ ಶಿಂಧೆ ಮುದ್ರಣಾಲಯಕ್ಕೆ ಭೇಟಿ: ಪರಿಶೀಲನೆ

ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಅವರು ಜಿ. ಪಂ. ಅಧೀನದಲ್ಲಿರುವ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದ ಮುದ್ರಣಾಲಯಕ್ಕೆ ಭೇಟಿ ನೀಡಿ ಕಾರ್ಯಚಟುವಟಿಕೆಗಳ ಪರಿಶೀಲನೆ ನಡೆಸಿದರು. ನಗದು ಪುಸ್ತಕ, ಸ್ಟಾಕ್ ರಜಿಸ್ಟರ್, ಡೆಡ್‍ಸ್ಟಾಕ್ ರಜಿಸ್ಟರ !ಹಾಗೂ ಇತರೆ  ಕಡತವನ್ನು ಪರಿಶೀಲಿಸಿದರು. ಮುದ್ರಣಾಲಯದಲ್ಲಿ ನಡೆಯುತ್ತಿರುವ ವಿವಿಧ ಪ್ರಿಂಟಿಂಗ್ ಕೆಲಸಗಳನ್ನು ವೀಕ್ಷಿಸಿ ತೃಪ್ತಿ ವ್ಯಕ್ತಪಡಿಸಿದ್ದಲ್ಲದೆ, ಜಿಲ್ಲೆಯ ವಿವಿಧ ಕಛೇರಿಗಳಿಂದ ಬೇಕಾಗುವ ನಮೂನೆಗಳು, ಕರಪತ್ರಗಳು ಮತ್ತು ಇತರೆ ಅವಶ್ಯಕ ಪ್ರಿಂಟಿಂಗ್ ಕೆಲಸಗಳನ್ನು ಪಡೆದು ಕೆಲಸ ನಿರ್ವಹಿಸಬೇಕು […]

ಬಜೆಟ್ ನಲ್ಲಿ ಬಸವನಾಡಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ ಕೊಡುಗೆಗಳೇನು ಗೊತ್ತಾ?

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್ ನಲ್ಲಿ ವಿಜಯಪುರ ಜಿಲ್ಲೆಗೂ ಕೆಲವು ಯೋಜನೆಗಳನ್ನು ನೀಡಿದ್ದಾರೆ.  ಆ ಯೋಜನೆಗಳು ಮತ್ತು ಪ್ರಸ್ತಾಪಿಸಿರುವ ಅಂಶಗಳು ಯಾವವು ಎಂಬುದರ ಮಾಹಿತಿ ಇ್ಲಲಿವೆ. ವಿಜಯಪುರ, ಬೀದರ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ತೊಗರಿ ಬೆಳೆ ಹಾನಿಯಾಗಿರುವ ರೈತರ ಪ್ರತಿ ಹೆಕ್ಟೇರ್ ಗೆ ರೂ. 10000 ದಂತೆ ಒಟ್ಟು ರೂ. 223 ಕೋ. ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ದ್ರಾಕ್ಷಿ ಬೆಳೆಗಾರರಿಗೆ ನೆರವಾಗಲು ಕರ್ನಾಟಕ ದ್ರಾಕ್ಷಿ ಹಾಗೂ ದ್ರಾಕ್ಷಾರಸ ಮಂಡಳಿ […]

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ- ಡಾ. ದಾನಮ್ಮನವರ ಅಧಿಕಾರಿಗಳಿಗೆ ಸೂಚನೆ

ವಿಜಯಪುರ: ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೇಸಿಗೆ ಕಾಲದಲ್ಲಿ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಈಗಿನಿಂದಲೇ ಮುಂಜಾಗ್ರತಾ ಕ್ರಮ ಕೈಗೊಂಡು, ನೀರಿನ ಮೂಲಗಳ ಮಾಹಿತಿ ಪಡೆದು, ಅಚ್ಚುಕಟ್ಟು ನಿರ್ವಹಣೆ ಮಾಡುವ ಮೂಲಕ ಮುಂದಿನ ಬೇಸಿಗೆ […]