ಗುಂಟಾ ನಿವೇಶನಗಳ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಡಿಸಿ ಟಿ.‌ ಭೂಬಾಲನ್ ಸೂಚನೆ

ವಿಜಯಪುರ: ನಗರಾದ್ಯಂತ ವಿಜಯಪುರ ನಗರಾಭಿವೃದ್ದಿ ಪ್ರಾಧಿಕಾರದಿಂದ ಅನುಮೋದನೆ ಪಡೆಯದೆ ಕೆಲ ಭೂ ಮಾಲೀಕರು ತಮ್ಮ ಕೃಷಿ ಜಮೀನುಗಳನ್ನು ಖಾಸಗಿಯಾಗಿ ವಿಭಾಗಿಸಿ ಗುಂಟೆವಾರು ನಿವೇಶನಗಳನ್ನು ರಚಿಸಿ ಮಾರಾಟ ಮಾಡುವುದು ನಿಯಮ ಬಾಹಿರವಾಗಿದ್ದು, ಈ ರೀತಿಯ ಅನಧಿಕೃತ ಗುಂಟಾ ನಿವೇಶನಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ನಗರದ ಸ್ಥಳೀಯ ಯೋಜನಾ ಪ್ರದೇಶಕ್ಕೆ ಸರಕಾರದಿಂದ ಅನುಮೋದನೆಯಾದ ಮಹಾಯೋಜನೆಯಲ್ಲಿ ಪ್ರಸ್ತಾಪಿಸಿರುವ ರಸ್ತೆಗಳಲ್ಲಿ ನಿವೇಶನ-ಕಟ್ಟಡಗಳನ್ನು […]

ಗುಮ್ಮಟ ನಗರಿಯಲ್ಲಿ ಜೆಸಿಬಿ‌ ಘರ್ಜನೆ- ಬೆಳ್ಳಂಬೆಳಿಗ್ಗೆ ಅತೀಕ್ರಮಣ ತೆರವು

ವಿಜಯಪುರ: ಗುಮ್ಮಟ ನಗರಿ‌ ವಿಜಯಪುರದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ‌ ಘರ್ಜಿಸಿವೆ. ನಗರದ ಗಾಂಧಿಚೌಕಿನ ಆಜಾದ್ ರಸ್ತೆಯಲ್ಲಿರುವ ಅಂಗಡಿಗಳ ಅಕ್ರಮ ಭಾಗ ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ. ಮಹಾನಗರ ಪಾಲಿಕೆಯ ಆಯುಕ್ತ ವಿಜಯ ಮೆಕ್ಕಳಕಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದೆ. 10ಕ್ಕೂ ಹೆಚ್ಚು ಅಕ್ರಮ ಅಂಗಡಿಗಳು ಅತೀಕ್ರಮಿಸಿರುವ ಕಟ್ಟೆದ ಭಾಗವನ್ನು ತೆರವು ಮಾಡಲಾಗುತ್ತಿದೆ. ಒಟ್ಟು ನಾಲ್ಕು ಜೆಸಿಬಿಗಳನ್ನು ಈ ಕಾರ್ಯಾಚರಣೆಗೆ ಬಳಸಲಾಗುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗಾಂಧಿಚೌಕ್ ಪೊಲೀಸರು ಬಿಗೀ ಬಂದೋಬಸ್ತ್ ಕೈಗೊಂಡಿದ್ದಾರೆ.   ಅಂಗಡಿ ಮಾಲಿಕರ ವಿರೋಧ […]

ನಂದಿ ಸಕ್ಕರೆ ಕಾರ್ಖಾನೆ ಉಳಿಸಿ, ಈ ಬಾರಿ ಕಬ್ಬು ನುರಿಸಲು ಶಕ್ತಿ ಮೀರಿ ಪ್ರಯತ್ನಿಸುವೆ- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿಸಿ ಈ ವರ್ಷದ ಹಂಗಾಮಿನಲ್ಲಿ ಕಬ್ಬು ನುರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಭರವಸೆ ನೀಡಿದ್ದಾರೆ. ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದಲ್ಲಿರುವ ನಂದಿ ಕಾರ್ಖಾನೆಗೆ ಶನಿವಾರ ಭೇಟಿ ನೀಡಿದ ಸಂದರ್ಭದಲ್ಲಿ ಉಪಸ್ಥಿತರಿದ್ದ ಇಲ್ಲಿನ ಕಾರ್ಮಿಕರು ಕಾರ್ಖಾನೆ ಉಳಿಸಿ ಎಂದು ಕೈಮುಗಿದು ಬೇಡಿಕೊಂಡ ಘಟನೆ ನಡೆಯಿತು. ಈ ಸಂದರ್ಭದಲ್ಲಿ ಅಲ್ಲಿದ್ದವರ ಕರುಳು […]

ಜು. 13ರಂದು ಜಿಲ್ಲಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್- ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ- ಜಿಲ್ಲಾ ನ್ಯಾಯಾಧೀಶ ಶಿವಾಜಿ ನಲವಡೆ

ವಿಜಯಪುರ: ಜಿಲ್ಲೆಯಲ್ಲಿರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಜು. 13 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತ್‍ನಲ್ಲಿ ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿದೆ.  ಕಕ್ಷಿದಾರರು ಈ ಅದಾಲತ್ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವಾಜಿ ಅನಂತ ನಲವಡೆ ಹೇಳೀದ್ದಾರೆ.  ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಎಡಿಆರ್ ಕಟ್ಟಡದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರವಾನ್ವಿತ ರಾಷ್ಟ್ರೀಯ ಕಾನೂನು […]

ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಜಾಗೃತಿ ಮೂಡಿಸಲು ಡಿಸಿ ಟಿ. ಭೂಬಾಲನ ಸೂಚನೆ

ವಿಜಯಪುರ: ಜಲಮೂಲಗಳಾದ ನದಿ, ಕೆರೆ, ಕಾಲುವೆ ಮತ್ತು ಭಾವಿಗಳು ಮಾಲಿನ್ಯಕ್ಕೊಳಗಾಗದಂತೆ ಸಂರಕ್ಷಿಸುವ ಉದ್ದೇಶದಿಂದ ಪರಿಸರ ಸ್ನೇಹಿ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಔಷದೀಯ ಗುಣವುಳ್ಳ ಸಸಿಗಳನ್ನು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆ ಮುಂದಾಗುವಂತೆ ಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಸೂಚಿಸಿದ್ದಾರೆ. ಜಿಲ್ಲಾದ್ಯಂತ ಪರಿಸರ ಸ್ನೇಹಿ ಗಣೇಶ ವಿಗ್ರಹ ಪ್ರತಿಷ್ಠಾಪನೆ ಕುರಿತು ಇತ್ತೀಚೆಗೆ ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಪರಿಸರ ಅಧಿಕಾರಿಗಳು, ವಿಜ.ಯಪುರ ಕೆ. ಎಸ್. ಪಿ. ಎ. ಸಿ. ಬಿ ಮತ್ತು ಮುಖ್ಯಾಧಿಕಾರಿಗಳೊಂದಿಗೆ ನಡೆದ ಸಭೆಯ […]

ಮೇಯರ್, ಉಪಮೇಯರ್, ಆಯುಕ್ತರಿಂದ ನಗರ ಪ್ರದಕ್ಷಿಣೆ- ಸ್ವಚ್ಛತೆ, ಅಭಿವೃದ್ದಿ ಕಾರ್ಯಗಳ ಪರಿಶೀಲನೆ

ವಿಜಯಪುರ: ಮಹಾನಗರ ಪಾಲಿಕೆಯ ಮೇಯರ್ ಮಹೇಜಬಿನ್ ಅಬ್ದುಲ್ ರಜಾಕ್ ಹೊರ್ತಿ, ಉಪಮೇಯರ್ ದಿನೇಶ ಹಳ್ಳಿ, ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ನಾನಾ ಸದಸ್ಯರು ಇಂದು ಬೆಳಿಗ್ಗೆ ವಿಜಯಪುರ ನಗರದ ನಾನಾ ಕಡೆಗಳಲ್ಲಿ ಪರಿವೀಕ್ಷಣೆ ನಡೆಸಿ, ನಗರದ ಸ್ವಚ್ಛತೆ ಹಾಗೂ ಅಭಿವೃದ್ದಿ ಕಾರ್ಯಗಳ ಪರಿಶೀಲನೆ ನಡೆಸಿದರು. ಬೆಳಿಗ್ಗೆ ನಗರದ ಗಾಂಧಿಚೌಕಿನಿಂದ ಪರಿವೀಕ್ಷಣೆ ಆರಂಭಿಸಿದ ಅವರು, ಲಾಲಬಹಾದ್ದೂರ ಶಾಸ್ತ್ರಿ, ಮಾರುಕಟ್ಟೆ ಹಾಗೂ ನೆಹರು ಮಾರುಕಟ್ಟೆಯಲ್ಲಿ  ಕೆಲವೊಂದು ಉದ್ದಿಮೆದಾರರು ಅಂಗಡಿಯ ಮುಂಭಾಗದಲ್ಲಿ ಅತಿಕ್ರಮಣ ಮಾಡಿರುವುದನ್ನು ಕಂಡು, ಕೂಡಲೇ ಅತಿಕ್ರಮಣವಾದ ಜಾಗವನ್ನು ತೆರವುಗೊಳಿಸುವಂತೆ […]

ಮತ್ತೆ ಬಾಯ್ಲರ್ ಸ್ಪೋಟ- 15 ಕಾರ್ಮಿಕರು ಬಚಾವ್- ನಂದಿ ಸರಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಘಟನೆ

ವಿಜಯಪುರ: ಪ್ರತಿಷ್ಠಿತ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಮತ್ತೆ ಬಾಯ್ಲರ್ ಸ್ಪೋಟಗೊಂಡಿದ್ದು, ಅದೃಷ್ಟವಶಾತ ಅಲ್ಲಿ ಕೆಲಸ ಮಾಡುತ್ತಿದ್ದ 15 ಜನ ಕಾರ್ಮಿಕರು ಕೆಲವೇ ಕ್ಷಣಗಳಲ್ಲಿ ಪಾರಾಗಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಸುಕಿನ ಜಾವ ಈ ಸ್ಪೋಟ ಸಂಭವಿಸಿದೆ.  ಈ ಸಂದರ್ಭದಲ್ಲಿ ಅಲ್ಲಿ ಕೆಲಸ ನಿರ್ವಹಿಸುತ್ತಿದ್ದ 15 ಜನ ಕಾರ್ಮಿಕರು ಚಹ ಸೇವಿಸಲು ಹೊರಗಡೆ ತೆರಳಿದ್ದರು.  ಅಲ್ಲಿ ಯಾರೂ ಇಲ್ಲದಿರುವಾಗ ಈ ಸ್ಪೋಟ ಸಂಭವಿಸಿದೆ.  ಇದರಿಂದ ಬಾರಿ ಅನಾಹುತ ತಪ್ಪಿದಂತಾಗಿದೆ. […]

ಸರಕಾರದ ಯೋಜನೆಗಳ ಲಾಭ ದೊರಕಿಸಿ ತಾಂಡಾಗಳ ಅಭಿವೃದ್ದಿಗಾಗಿ ಒತ್ತು ನೀಡಿ- ನಿಗಮದ ಅಧ್ಯಕ್ಷ ಜಯದೇವ ನಾಯಕ ಸೂಚನೆ

ವಿಜಯಪುರ: ಅತಿ ಹೆಚ್ಚು ತಾಂಡಾಗಳನ್ನು ಹೊಂದಿರುವ ವಿಜಯಪುರ ಜಿಲ್ಲೆಯಲ್ಲಿನ ತಾಂಡಾಗಳಲ್ಲಿ ವಾಸಿಸುತ್ತಿರುವ ಜನರ ಜೀವನಮಟ್ಟ, ಶೈಕ್ಷಣಿಕ ಸುಧಾರಣೆಗೆ ಸರಕಾರ ಜಾರಿಗೊಳಿಸಿರುವ ಯೋಜನೆಗಳ ಲಾಭ ದೊರಕಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿ ಜನರಿಗೆ ಸವಲತ್ತುಗಳನ್ನು ದೊರಕಿಸುವಂತೆ ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷ ಎನ್. ಜಯದೇವ ನಾಯಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಕುರಿತು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ತಾಂಡಾಗಳಲ್ಲಿನ ಜನರ ಆರೋಗ್ಯ ಹಿತದೃಷ್ಟಿಯಿಂದ ಕಾಲಕಾಲಕ್ಕೆ ಆರೋಗ್ಯ- […]

ಗ್ರಾ. ಪಂ ಶೇ. 10ರಷ್ಟು ತೆರಿಗೆ ಸಂಗ್ರಹಿಸುವ ಗುರಿ ಸಾಧಿಸಿ- ಜಿ, ಪಂ ಸಿಇಒ ರಿಷಿ ಆನಂದ

ವಿಜಯಪುರ: ಗ್ರಾ. ಪಂ ಗಳಿಂದ ಪ್ರಸ್ತುತ ಶೇ.4 ರಷ್ಟು ಮಾತ್ರ ತೆರಿಗೆ ಸಂಗ್ರಹಣೆಯಾಗಿದ್ದು, ಮುಂದಿನ ಒಂದು ವಾರದಲ್ಲಿ ಶೇ. 10ರಷ್ಟು ಗುರಿ ತೆರಿಗೆ ಸಂಗ್ರಹಿಸುವ ಗುರಿ ಸಾಧಿಸಬೇಕು ಎಂದು ಜಿ. ಪಂ. ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಿಷಿ ಆನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.   ಸಿಂದಗಿ ತಾಲೂಕಿನ ಕನ್ನೊಳ್ಳಿ ಹಾಗೂ ಆಲಮೇಲ ತಾಲೂಕಿನ ಗಬಸಾವಳಗಿ ಗ್ರಾ. ಪಂ. ಗಳಿಗೆ ಭೇಟಿ ನೀಡಿ ನಾನಾ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ಸಂಗ್ರಹವಾದ ತೆರಿಗೆಯಲ್ಲಿ ಶೇ.6ರಷ್ಟು ಗ್ರಂಥಾಲಯಗಳಿಗೆ ಪುಸ್ತಕಗಳು […]

ಗಾಂಧೀಜಿಯವರ ಗ್ರಾಮ ಸ್ವರಾಜ್ಯ ನನಸು ಮಾಡಲು ಎನ್.ಎಸ್.ಎಸ್ ಶಿಬಿರಗಳು ಸಹಕಾರಿಯಾಗಿವೆ- ಶ್ರೀ ನರೇಶಾನಂದ ಸ್ವಾಮೀಜಿ

ವಿಜಯಪುರ: ಮಹಾತ್ಮ ಗಾಂಧೀಜಿಯವರ ಕನಸಿನಂತೆ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ನನಸು ಮಾಡಲು ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ(ಎನ್.ಎಸ್.ಎಸ್.)ಗಳು ಸಹಕಾರಿಯಾಗಿವೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ನರೇಶಾನಂದ ಸ್ವಾಮೀಜಿ ಹೇಳಿದ್ದಾರೆ. ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ರಾಷ್ಟ್ರೀಯ ಸೇವಾ ಯೋಜನೆಯ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯಡಿ ನಗರದ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಸೋಮವಾರ ನಡೆದ ಎನ್.ಎಸ್.ಎಸ್ ವಿಶೇಷ ಶಿಬಿರವನ್ನು […]