ಮಹಾನಗರ ಪಾಲಿಕೆ ಬಜೆಟ್- ರೂ. 8.74 ಲಕ್ಷ ಉಳಿತಾಯ ಆಯವ್ಯಯ ಅನುಮೋದನೆ ನೀಡಿದ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ಬಸವನಾಡು ವಿಜಯಪುರ ಮಹಾನಗರಪಾಲಿಕೆಯ ಬಜೆಟ್ ಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅನುಮೋದನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 2023-24ನೇ ಆರ್ಥಿಕ ವರ್ಷದ ಬಜೆಟ್ ಗೆ ಅನುಮೋದನೆ ನೀಡಿದ ಅವರು, ಈ ಬಾರಿ ರೂ. 8.74 ಲಕ್ಷ ಉಳಿತಾಯ ಬಜೆಟ್ ಮಂಡನೆಯಾಗಿದೆ ಎಂದು ತಿಳಿಸಿದರು. ನಗರದ ಸರ್ವತೋಮುಖ ಅಭಿವೃದ್ಧಿಗಾಗಿ ರಸ್ತೆ, ಒಳಚರಂಡಿ, ಮಳೆ ನೀರು ಚರಂಡಿ ಮತ್ತು ನಾನಾ ಅಭಿವೃದ್ಧಿ ಕಾರ್ಯಗಳಿಗಾಗಿ ನಿಯಾಮವಳಿಗಳ ಪ್ರಕಾರ ಅನುದಾನ ಕಾಯ್ದಿರಿಸಿ ಎಲ್ಲ ಮೂಲಗಳಿಂದ ರೂ. 204.02 […]

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ: ಬಸವನ ಬಾಗೇವಾಡಿ ತಾಲೂಕಿನ ಕಚೇರಿಗಳಿಗೆ ಭೇಟಿ ನೀಡಿದ ಡಾ. ದಾನಮ್ಮನವಕರ

ವಿಜಯಪುರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ಬಸವನ ಬಾಗೇವಾಡಿ ತಾಲೂಕಿಗೆ ನಾನಾ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸವನ ಬಾಗೇವಾಡಿ ತಾಲೂಕಿನ ತಹಸೀಲ್ದಾರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.  ಅಹವಾಲು ಕಾರ್ಯಕ್ರಮದಲ್ಲಿ ಜಮೀನು ಉತಾರೆ, ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ, ಅಕ್ರಮ ಮದ್ಯ ಮಾರಾಟ ತಡೆ, ಬಸ್ ವ್ಯವಸ್ಥೆ, ಬಸ್ ತಂಗುದಾಣ, ಸ್ಮಶಾನ ಭೂಮಿ ಮಂಜೂರು, ತಾಲೂಕಿನ ನಾಗೂರ ಗ್ರಾಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ […]

ನಮ್ಮ ಅಜ್ಜ ಔಂಧ ಸಂಸ್ಥಾನದ ಪ್ರಧಾನಿಯಾಗಿದ್ದರು- ಯಾರು ಬೇಕಾದರೂ ಉನ್ನತ ಸ್ಥಾನಕ್ಕೇರಬಹುದು- ಶ್ರಮದಿಂದ ಗುರಿ ತಲುಪಬೇಕು- ಆಶಾ ಎಂ. ಪಾಟೀಲ

ವಿಜಯಪುರ: ಹೊನಗನಹಳ್ಳಿಯ ನಮ್ಮ ಅಜ್ಜ ದಿ. ರಾಮಪ್ಪ ಬಿದರಿ ಔಂಧ ಸಂಸ್ಥಾನದ ಪ್ರಧಾನಿಯಾಗಿದ್ದರು.  ಎರಡು ಬಾರಿ ಲೋಕಸಭೆ ಸದಸ್ಯರಾಗಿದ್ದರು.  ಈ ಊರಿನಲ್ಲಿರುವ ನಿಮ್ಮಲ್ಲಿಯೂ ಯಾರಾದರೂ ದೇಶದ ಪ್ರಧಾನಿಯಾಗಬಹುದು ಎಂದು ಆಶಾ ಎಂ. ಪಾಟೀಲ ಹೇಳಿದರು. ವಿಜಯಪುರ ಜಿಲ್ಲೆಯ ಹೊನಗನಹಳ್ಳಿಯಲ್ಲಿ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ದಿ. ಡಾ. ಸಿ. ಆರ್. ಬಿದರಿ ಅವರ 10ನೇ ಪುಣ್ಯಸ್ಮರಣೆ ಅಂಗವಾಗಿ ಆಯೋಜಿಸಲಾಗಿದ್ದ […]

ಹುಬನೂರಿನಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ- ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆ

ವಿಜಯಪುರ: ಮಹಿಳೆಯರು ಮತ್ತು ಮಕ್ಕಳ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ತಿಕೋಟಾ ತಾಲೂಕಿನ ಹುಬನೂರ ಗ್ರಾಮದಲ್ಲಿ ನಡೆಯಿತು. ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ತೆ ಮತ್ತು ಸಂಶೋಧನೆ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಈ ಶಿಬಿರದಲ್ಲಿ 46 ಜನ ಮಹಿಳೆಯರ ಆರೋಗ್ಯ ತಪಾಸಣೆ ನಡೆಸಲಾಯಿತು. ಇವರಲ್ಲಿ 10 ಜನ ಮಹಿಳೆಯರಿಗೆ ಹೆಚ್ಚಿನ ಚಿಕಿತ್ಸೆಗೆ ಶಿಫಾರಸು ಮಾಡಲಾಯಿತು. ಅಲ್ಲದೇ, 137 ಮಕ್ಕಳನ್ನೂ ಆರೋಗ್ಯ ತಪಾಸಣೆ ನಡೆಸಲಾಯಿತು. […]

ಪತ್ರಕರ್ತರ 37ನೇ ರಾಜ್ಯಮಟ್ಟದ ಸಮ್ಮೇಳನಕ್ಕೆ ಸಂಪೂರ್ಣ ಸಹಕಾರ: ಶಾಸಕ ಯತ್ನಾಳ

ವಿಜಯಪುರ: ಫೆ.4 ಶನಿವಾರ ಮತ್ತು ಫೆ. 5 ರವಿವಾರ ನಗರದ ಕಂದಗಲ್ಲ ಹಣಮಂತರಾಯ ರಂಗಮಂದಿರದಲ್ಲಿ ನಡೆಯಲಿರುವ ಕಾರ್ಯನಿರತ ಪತ್ರಕರ್ತರ 37 ನೇ ರಾಜ್ಯ ಮಟ್ಟದ ಸಮ್ಮೇಳನಕ್ಕೆ  ಸಂಪೂರ್ಣ ಸಹಕಾರ ನೀಡುವುದಾಗಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದ್ದಾರೆ.  ನಗರದಲ್ಲಿ ಸಮ್ಮೇಳನಕ್ಕೆ ಅಧಿಕೃತ ಆಹ್ವಾನ ನೀಡಲು ಆಗಮಿಸಿದ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ನೇತ್ರತ್ವದ ನಿಯೋಗದೊಂದಿಗೆ ಅವರು ಮಾತನಾಡಿದರು. ನಗರದಲ್ಲಿ ಈ ಬಾರಿ ರಾಜ್ಯ ಸಮ್ಮೇಳನ ನಡೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ.  ವಿಜಯಪುರ […]

ಕಾನಿಪ ಸಮ್ಮೇಳನ: ಹಿರಿಯ ಪತ್ರಕರ್ತರು, ಮಾಜಿ ಜಿಲ್ಲಾಧ್ಯಕ್ಷರಿಗೆ ಸನ್ಮಾನ- ಸಂಗಮೇಶ ಚೂರಿ

ವಿಜಯಪುರ: ಫೆ. 4 ಶನಿವಾರ ಮತ್ತು 5 ರಂದು ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ನಡೆಯಲಿರುವ ಕಾರ್ಯನಿರತ ಪತ್ರಕರ್ತರ 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಜಲ್ಲೆಯ ಹಿರಿಯ ಪತ್ರಕರ್ತರು ಮತ್ತು ಕಾರ್ಯನಿರತರ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನ ಕಾರ್ಯದರ್ಶಿಗಳನ್ನು ಸನ್ಮಾನಿಸಲಾಗುವುದು ಎಂದು ಕಾನಿಪ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ತಿಳಿಸಿದ್ದಾರೆ.  70 ವರ್ಷ ಮೀರಿದ ಹಿರಿಯ ಪತ್ರಕರ್ತರಾದ ವಿಜಯಪುರ ನಗರದ ಮುರಿಗೆಮ್ಮ ಮಿರ್ಜಿ, ಪಿ. ವಿ. ಮಮದಾಪೂರ, ಬಾಬುರಾವ […]

ವಿಜಯಪುರ ಕಾನಿಪ ಸಮ್ಮೇಳನ: ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮ್ಮೇಳನದ ನಾನಾ ಸಮಿತಿಗಳ ಸಭೆ

ವಿಜಯಪುರ: ಬಸವನಾಡು ವಿಜಯಪುರ ನಗರದಲ್ಲಿ ಫೆ. 4 ಮತ್ತು 5 ರಂದು ನಡೆಯಲಿರುವ ಕಾರ್ಯನಿತರ ಪತ್ರಕರ್ತರ 37ನೇ ರಾಜ್ಯ ಮಟ್ಟದ ಸಮ್ಮೇಳನ ಅಂಗವಾಗಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಈ ಸಭೆಯಲ್ಲಿ ಸಮ್ಮೇಳನದ ಯಶಸ್ವಿಗಾಗಿ ರಚಿಸಲಾಗಿರುವ ನಾನಾ ಸಮಿತಿಗಳ ಪದಾಧಿಕಾರಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.  ಈ ಸಭೆಯಲ್ಲಿ ಪ್ರಮುಖವಾಗಿ ವಸತಿಯ ಕುರಿತು ಚರ್ಚೆ ನಡೆಯಿತು.  ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ನಗರದಲ್ಲಿ ಇದೇ ಮೊದಲ ಬಾರಿಗೆ […]

ಸಮಾಜ ಕಲುಷಿತವಾಗಲು ನಾವೇ ಹೊಣೆಗಾರರು- ತಿಂಥಣಿ ಶ್ರೀಗಳ ಅಭಿಮತ

ವಿಜಯಪುರ: ಇಂದು ಸಮಾಜ ವಿವೇಕದ ಹಿಂದೆ ಹೋಗದೆ ಸಮೂಹ ದಾಂಗುಡಿ ಹಾಕುತ್ತ ಕಲುಷಿತಗೊಳ್ಳಲು ನಾವೇ ಹೊಣೆಗಾರರು ಎಂದು ತಿಂಥಣಿ ಕನಕ ಗುರುಪೀಠದ ಶ್ರೀ ಸಿದ್ಧರಾಮಾನಂದ ಮಹಾಸ್ವಾಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ದಿ. ಸಂಗಪ್ಪ ಕಮದಾಳ ಅವರ 26ನೆಯ ಪುಣ್ಯಸ್ಮರಣೆ ಅಂಗವಾಗಿ ಅವರ ಜೀವನ-ಸಾಧನೆ ಕುರಿತಾದ ದಾಂಗುಡಿ‌ ಎಂಬ ಸಂಸ್ಮರಣ ಗ್ರಂಥವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಇಂದು ಸರಕಾರಿ ನೌಕರರು, ಅಧಿಕಾರಿಗಳು ಸಾಮಾಜಿಕ ಕಾಳಜಿಯನ್ನು ಕಳೆದುಕೊಂಡು ಸ್ವಾರ್ಥಕ್ಕೋಸ್ಕರ ಕೆಲಸ ಮಾಡುತ್ತಿದ್ದಾರೆ. ಮನುಷ್ಯನಿಗೆ ಹಣ […]

ನಾನಾ ಬೇಡಿಕೆ ಈಡೇರಿಸಲು ಆಗ್ರಹಿಸಿ ಫೆ. 7 ರಂದು ವಿಧಾನಸೌಧ ಚಲೋ- ರಾಜ್ಯ ಸರಕಾರಿ ನೌಕರರ ಒಕ್ಕೂಟ ರಾಜ್ಯಾಧ್ಯಕ್ಷ ಜೈಕುಮಾರ ಎಚ್. ಎಸ್.

ವಿಜಯಪುರ: ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫೆ. 7 ರಂದು ವಿಧಾನಸೌಧ ಚಲೋ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕರ್ನಾಟಕ ಸರಕಾರಿ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ ಜೈಕುಮಾರ ಎಚ್. ಎಸ್. ತಿಳಿಸಿದ್ದಾರೆ.  ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ 7ನೇ ವೇತನ ಆಯೋಗವನ್ನು ವಿಳಂಬವಾಗಿ ರಚನೆ ಮಾಡಿದೆ.  ಈವರೆಗೂ ಆಯೋಗ ಸರಕಾರಕ್ಕೆ ಶಿಫಾರಸ್ಸುಗಳನ್ನು ಸಲ್ಲಿಸುವ ಮತ್ತು ರಾಜ್ಯ ಸರಕಾರವು ಬಜೆಟ್ ನಲ್ಲಿ ಇದನ್ನು ಜಾರಿಗೊಳಿಸುವ ಲಕ್ಷಣಗಳು ಕಾಣಿಸುತ್ತಿಲ್ಲ ಎಂದು ಆರೋಪಿಸಿದರು. ಇದರಿಂದ ಸರಕಾರಿ ನೌಕರರ ವಲಯದಲ್ಲಿ ಅಸಮಾಧಾನ ಹೆಚ್ಚಾಗುತ್ತಿದೆ.  […]

37ನೇ ರಾಜ್ಯ ಪತ್ರಕರ್ತರ ಸಮ್ಮೇಳನ- ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ಡಿಸಿ,

ವಿಜಯಪುರ: ಬಸವನಾಡು ವಿಜಯಪುರ ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಫೆ. 4 ಮತ್ತು 5 ರಂದು ನಡೆಯಲಿರುವ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ವರ್ಣರಂಜಿತ ಆಕರ್ಷಕ ಆಮಂತ್ರಣ ಪತ್ರಿಕೆಗಳನ್ನು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ.‌ ದಾನಮ್ಮನವರ ಮತ್ತು ಎಸ್ಪಿ ಎಚ್. ಡಿ. ಆನಂದಕುಮಾರ ಪ್ರತ್ಯೇಕವಾಗಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ‌ ಮಾತನಾಡಿದ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಮಾತನಾಡಿ, ಐತಿಹಾಸಿಕ ವಿಜಯಪುರ ನಗರದಲ್ಲಿ ನಡೆಯುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಯಶಸ್ವಿಯಾಗಲಿ ಎಂದು‌ ಶುಭ ಕೋರಿದರು. ಸಮ್ಮೇಳನದ ಯಶಸ್ವಿಗೆ ಜಿಲ್ಲಾಡಳಿತ […]