ಕನಮಡಿ, ಬಾಬಾನಗರ, ತಿಕೋಟಾಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ- ಲಿಂ. ಸಿದ್ದೇಶ್ವರ ಸ್ವಾಮೀಜಿ ಜಿ ಸ್ಮರಿಸಿದ ಸುನೀಲಗೌಡ ಪಾಟೀಲ

ವಿಜಯಪುರ: ಲಿಂ. ಸಿದ್ಧೇಶ್ವರ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಅವರ ಆಶಯದಂತೆ ನೀರಾವರಿ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕನಮಡಿ, ಬಾಬಾನಗರ ಮತ್ತು ತಿಕೋಟಾ ಪಟ್ಟಣದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಬಾಬಾನಗರದಲ್ಲಿ ಪಿ ಆರ್ ಇ ಡಿ ಇಲಾಖೆ ವತಿಯಿಂದ ರೂ. 2 ಕೋ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಬಾಬಾನಗರ- ಹೊನವಾಡ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ […]

ಮೊಸರ ನಾಡು ಕೋಲ್ಹಾರ ತಾಲೂಕು ಕಚೇರಿಗೆ ಡಿಸಿ ಡಾ. ದಾನಮ್ಮನವರ ಭೇಟಿ- ನಾನಾ ಕೆಲಸ ಕಾರ್ಯಗಳ ಪರಿಶೀಲನೆ

ವಿಜಯಪುರ: ಜಿಲ್ಲಾಧಿಕಾರಿಗಳ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಪ್ರತಿ ಮಂಗಳವಾರ ತಾಲೂಕು ಕಚೇರಿಕೆ ಭೇಟಿ ನೀಡುವ ಕಾರ್ಯಕ್ರಮದ ಅಂಗವಾಗಿ ಮೊಸರ ನಾಡು ಕೊಲ್ಹಾರಕ್ಕೆ ಭೇಟಿ ನೀಡಿ ನಾನಾ ಕೆಲಸ ಕಾರ್ಯಗಳ ಪರಿಶೀಲನೆ ನಡೆಸಿದರು.  ಮತಗಟ್ಟೆ ನಂ. 169, 171, 173, 175, 174, 176, 177 ಮತಗಟ್ಟೆಗಳನ್ನು ಪರಿಶೀಲನೆ ನಡೆಸಿ, ನೀರು, ವಿದ್ಯುತ್, ಶೌಚಾಲಯ, ಇಳಿಜಾರು(Ramp), ದುರಸ್ತಿಗಳಿದ್ದರೆ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು. ನಂತರ ಕೊಲ್ಹಾರ ನಗರದ ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿ ವೀಕ್ಷಣೆ ಮಾಡಿದರು. […]

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ದೇಶದ ಚಿತ್ರಣ ಬದಲಾಗಲಿದೆ- ಹಿರಿಯ ಐಎಎಸ್ ಅಧಿಕಾರಿ ಎಂ. ಮದನಗೋಪಾಲ

ವಿಜಯಪುರ: ಹೊಸ ಶಿಕ್ಷಣ ನೀತಿಯಿಂದ ದೇಶದ ಚಿತ್ರಣ ಬದಲಾಗಲಿದೆ ಎಂದು ಹಿರಿಯ ಐಎಎಸ್ ಅಧಿಕಾರಿ ಎಂ. ಮದನಗೋಪಾಲ ಹೇಳಿದ್ದಾರೆ. ವಿಜಯಪುರದಲ್ಲಿ ಜಿ. ಪಂ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ವಿಜಯಪುರ ಹಾಗೂ ಜಿಲ್ಲಾ ಗಣಿತ ಮತ್ತು ವಿಜ್ಞಾನ ಶಿಕ್ಷಕರ ಸಂಘ ಜಂಟಿಯಾಗಿ ಆಯೋಜಿಸಿದ್ದ 2022-23ನೇ ವರ್ಷದ ಎಸ್. ಎಸ್. ಎಲ್.  ಸಿ ಗಣಿತ ಮತ್ತು ವಿಜ್ಞಾನ ಪರೀಕ್ಷಾ ಮಾರ್ಗದರ್ಶಿ ಸಾಹಿತ್ಯಗಳಾದ ಸಂಪ್ರತಿ ಹಾಗೂ ಸನ್ಮತಿ ಪುಸ್ತಕಗಳ ಬಿಡುಗಡೆ ಸಮಾರಂಭ, ಡಾ. ಶ್ರೀನಿವಾಸ ರಾಮಾನುಜನ್, ಸ್ವಾಮಿ ವಿವೇಕಾನಂದರ […]

ಸಿಂದಗಿ, ಆಲಮೇಲ ತಾಲೂಕಿನ ನಾನಾ ಮತಗಟ್ಟೆಗಳಿಗೆ ಡಿಸಿ ಡಾ. ದಾನಮ್ಮನವರ ಭೇಟಿ- ಮೂಲಭೂತ ಸೌಕರ್ಯಗಳ ಪರಿಶೀಲನೆ

ವಿಜಯಪುರ: ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆ ಆಯೋಗದ ನಿರ್ದೇಶನದಂತೆ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸಿಂದಗಿ ಮತ್ತು ಆಲಮೇಲ ತಾಲೂಕಿನ ನಾನಾ ಮತಗಟ್ಟೆಗಳಿಗೆ ಭೇಟಿ ನೀಡಿ, ಮೂಲಭೂತ ಸೌಕರ್ಯ ಪರಿಶೀಲನೆ ನಡೆಸಿದರು.  ಆಲಮೇಲ ತಾಲೂಕಿನ ಮೋರಟಗಿಯ ಎಂಪಿಎಸ್ ಶಾಲೆಯ ಮತಗಟ್ಟೆ ಸಂಖ್ಯೆ 112 ರಿಂದ 115ರ, ಮೋರಟಗಿಯ ಮತಗಟ್ಟೆ ಸಂಖ್ಯೆ 116 ಹಾಗೂ 117 ಬರುವ ಸಿದ್ಧರಾಮೇಶ್ವರ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿದರು. ಅದೇ ತಾಲೂಕಿನ ಗಬಸಾವಳಗಿ ಗ್ರಾಮದ ಮತಗಟ್ಟೆ ಸಂಖ್ಯೆ […]

ಹುತಾತ್ಮ ಯೋಧನ ಪುತ್ಥಳಿ ನಿರ್ಮಾಣಕ್ಕೆ ರೂ. 50 ಸಾವಿರ ಆರ್ಥಿಕ ನೆರವು ನೀಡಿದ ಪೊಲೀಸ್ ಅಧಿಕಾರಿ ಮಹೇಂದ್ರಕುಮಾರ ನಾಯಕ

ವಿಜಯಪುರ: ಹುತಾತ್ಮ ಯೋಧನ ಪುತ್ಥಳಿ ನಿರ್ಮಾಣಕ್ಕೆ ರೂ. 50 ಸಾವಿರ ಆರ್ಥಿಕ ನೆರವು ನೀಡುವ ಮೂಲಕ ಲೋಕಾಯುಕ್ತ ಸಿಪಿಐ ಮಹೇಂದ್ರಕುಮಾರ ನಾಯಕ ಗಮನ ಸೆಳೆದಿದ್ದಾರೆ.  ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಬಿ. ಕೆ. ಗ್ರಾಮದ ವೀರಯೋಧ ದಯಾನಂದ ಪಾಟೀಲ ದೇಶಸೇವೆ ಮಾಡುವಾಗ 12.04.2022 ರಂದು ಹುತಾತ್ಮರಾಗಿದ್ದರು.  ಹೀಗಾಗಿ ಅವರ ಸ್ಮರಣಾರ್ಥ ಲೋಣಿ ಬಿ. ಕೆ. ಗ್ರಾಮದಲ್ಲಿ ಯೋಧನ ಪುತ್ಥಳಿ ನಿರ್ಮಾಣ ಮಾಡಲಾಗುತ್ತಿದೆ.  ಈ ಪುತ್ಥಳಿ ನಿರ್ಮಾಣಕ್ಕೆ ಲೋಕಾಯುಕ್ತ ಇಲಾಖೆಯಲ್ಲಿ ಸಿಪಿಐ ಆಗಿರುವ ಮಹೇಂದ್ರಕುಮಾರ ನಾಯಕ ವೈಯಕ್ತಿಕವಾಗಿ […]

ನೀರಾವರಿ ಕೆಲಸಗಳಿಗೆ ಸಿದ್ಧೇಶ್ವರ ಸ್ವಾಮೀಜಿಗಳ ಮಾಡಿರುವ ಆಶೀರ್ವಾದ ನನಗೆ ನೋಬೆಲ್ ಪ್ರಶಸ್ತಿಗಿಂತಲೂ ಹೆಚ್ಚು ಸಂತೋಷ ತಂದಿದೆ- ಎಂ. ಬಿ. ಪಾಟೀಲ

ವಿಜಯಪುರ: ಜಲಸಂಪನ್ಮೂಲ ಸಚಿವನಾಗಿ ನಾನು ಮಾಡಿರುವ ಕಾರ್ಯಗಳನ್ನು ಮೆಚ್ಚಿ ಸಿದ್ಧೇಶ್ವರ ಸ್ವಾಮೀಜಿ ಯಶಸ್ವಿ ಸಚಿವ ಎಂದು ಆಶೀರ್ವಾದ ಮಾಡಿದ್ದಾರೆ.  ಇದು ನನಗೆ ನೋಬೆಲ್ ಪ್ರಶಸ್ತಿಗಿಂತಲೂ ಹೆಚ್ಚು ಸಂತೋಷ ತಂದಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರ ನಗರದ ಬಿ ಎಲ್ ಡಿ ಇ ಸಂಸ್ಥೆಯ ವಚನಪಿತಾಮಡ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಾನೂ ಕೂಡ ಇದೇ […]

ಜ. 7 ರಂದು ಶನಿವಾರ ಬಿ ಎಲ್ ಡಿ ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ

ವಿಜಯಪುರ: ನಗರದ ಪ್ರತಿಷ್ಠಿತ ಬಿ ಎಲ್ ಡಿ ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿಗಳ ಪುನರ್ಮಿಸಲ ಕಾರ್ಯಕ್ರಮ ನಡೆಯಲಿದೆ. 1980 ರಲ್ಲಿ ಪ್ರಾರಂಭವಾದ ಈ ಕಾಲೇಜಿನಲ್ಲಿ ಈವರೆಗೆ ಸುಮಾರು 15000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡಿದ್ದಾರೆ.  ಅಷ್ಟೇ ಅಲ್ಲ, ಇಲ್ಲಿ ಎಂಜಿನಿಯರಿಂಗ್ ಓದಿರುವ ವಿದ್ಯಾರ್ಥಿಗಳು ದೇಶ-ವಿದೇಶಗಳಲ್ಲಿ ನಾನಾ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.  ಹಲವರು ತಮ್ಮದೇ ಆದ ಸಂಸ್ಥೆಗಳನ್ನು ಕಟ್ಟಿ ಉದ್ಯಮಿಯಾಗಿದ್ದಾರೆ. ಈ ಕಾಲೇಜಿನ ಅಲ್ಯೂಮಿನಿ ಅಸೊಸಿಯನ್ ಸಕ್ರಿಯವಾಗಿದ್ದು, 1984 ರಿಂದ 1997 ವರ್ಷದವರೆಗಿನ ವಿದ್ಯಾರ್ಥಿಗಳ ಸಭೆಯನ್ನು […]

ಬಿ ಎಲ್ ಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೊಹಾ ಓಪನ್ ಕೋರ್ಸ್ ಲೈಬ್ರರಿ ಸಿಸ್ಟಂ ಉದ್ಘಾಟನೆ

ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಸಂಸ್ಥೆಯ ವಚನಪಿತಾಮಹ ಡಾ. ಪ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಗ್ರಂಥಾಲಯ ವಿಭಾಗವು ಪೂರ್ಣ ಪ್ರಮಾಣದಲ್ಲಿ ಕೊಹಾ- ಓಪನ್ ಸೊರ್ಸ್ ಲೈಬ್ರರಿ ಸಿಸ್ಟಮ್ ಉದ್ಘಾಟನೆ ಸಮಾರಂಭ ನಡೆಯಿತು. ಈ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಚಾರ್ಯ ಡಾ. ವಿ. ಜಿ. ಸಂಗಮ ಚಾಲನೆ ನೀಡಿದರು. ಈ ಸಿಸ್ಟಮ್ ನ್ನು ಉಪಯೋಗಿಸುವುದರಿಂದ ವಿದ್ಯಾರ್ಥಿಗಳು ಸುಲಭವಾಗಿ ಪುಸ್ತಕಗಳ ಶಿರ್ಷಿಕೆ, ಲೇಖಕರ ಮಾಹಿತಿ, ಪ್ರಕಾಶಕರ ಮಾಹಿತಿ, ಲಭ್ಯವಿರುವ ಪುಸ್ತಕಗಳ ಮಾಹಿತಿ ಸಿಗುತ್ತಲಿದೆ. ಇದಲ್ಲದೆ ಓಪೆಕ್‍ನಲ್ಲಿ ಸಾಕಷ್ಟು […]

ಅಂತಿಮ ಮತದಾರರ ಪಟ್ಟಿ ಪ್ರಕಟ: ಮತದಾರರು ಒಂದು ಸಲ ಪಟ್ಟಿ ಚೆಕ್ ಮಾಡಿಕೊಳ್ಳಿ- ಡಿಸಿ ಡಾ. ದಾನಮ್ಮನವರ

ವಿಜಯಪುರ: ಜಿಲ್ಲೆಯ ಎಲ್ಲ ಎಂಟು ವಿಧಾನ ಸಭೆ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿಯನ್ನು ಜನೇವರಿ 5 ರಂದು ಗುರುವಾರ ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ 939813 ಪುರುಷ, 898405 ಮಹಿಳಾ ಮತ್ತು 234 ಇತರೆ ಮತದಾರರು ಸೇರಿದಂತೆ ಒಟ್ಟು 1838452 ಮತದಾರರಿದ್ದಾರೆ.  ಅಂತಿಮ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಮತದಾರರು ಪರಿಶೀಲಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದ್ದಾರೆ.  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲೆಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, […]

ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯಗಳ ಬಳಕೆ ಸಹಕಾರಿ- ಜಿಲ್ಲಾಧಿಕಾರಿ ಡಾ. ದಾನಮ್ಮನವರ

ವಿಜಯಪುರ: ಇಂದಿನ ಒತ್ತಡದ ಬದುಕಿನಲ್ಲಿ ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಲು ಸಿರಿಧಾನ್ಯಗಳ ಬಳಕೆ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹೇಳಿದರು. ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆಯೋಜಿಸಲಾದ ಜಿಲ್ಲಾ ಮಟ್ಟದ ಸಿರಿಧಾನ್ಯ ಜಾಗೃತಿ ನಡಿಗೆಗೆ ಬಲೂನ್‍ಗಳನ್ನು ಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಸಿರಿಧಾನ್ಯ ನಡಿಗೆ ಶ್ರೀ ಸಿದೇಶ್ವರ ದೇವಸ್ಥಾನದಿಂದ ಆರಂಭಗೊಂಡು ಗಾಂಧಿ ವೃತ್ತ, ಬಸವೇಶ್ವರ ವೃತ್ತ ಮಾರ್ಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಸಂಚರಿಸುವ ಮೂಲಕ ಸಿರಿಧಾನ್ಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಿತು. […]