Ganiga Office Bearers: ವಿಜಯಪುರ ಜಿಲ್ಲಾ ಗಾಣಿಗ ಸಮಾಜದ ನೂತನ ಪದಾಧಿಕಾರಿಗಳ ನೇಮಕ

ವಿಜಯಪುರ: ಜಿಲ್ಲಾ ಗಾಣಿಗ‌ ಸಮಾಜ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಸಭೆ ವಿಜಯಪುರ ನಗರದ ವನಶ್ರೀ‌ ಸಭಾಭವನದಲ್ಲಿ ನಡೆಯಿತು. ವಿಜಯಪುರ ಜಿಲ್ಲಾ ಸಮಾಜ‌ ಸಂಘದ ನೂತನ ಗೌರವ ಅಧ್ಯಕ್ಷರಾಗಿ ಹಿರಿಯರಾದ ಬಿ. ಎಂ. ಪಾಟೀಲ್ ಕತ್ನಳ್ಳಿ, ಜಿಲ್ಲಾಧ್ಯಕ್ಷರಾಗಿ ಬಿ. ಬಿ. ಪಾಸೋಡಿ, ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಡಾ. ಅಶೋಕ ಸಿ. ತರಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶರಣಬಸಪ್ಪ ಮ. ಮಸಳಿ, ಜಿಲ್ಲಾ ಸಹ ಕಾರ್ಯದರ್ಶಿಯಾಗಿ ನ್ಯಾಯವಾದಿ ಸಂಗಮೇಶ ಪಿ. ಪುಟ್ಟಿ ಹಾಗೂ ಜಿಲ್ಲಾ ಖಜಾಂಚಿಯಾಗಿ ಬಸವಂತ್ರಾಯ ಕೆ. ಚೌಧರಿ […]

University Protest: ರಾಣಿ ಚನ್ನಮ್ಮ ವಿವಿ ಸಮಸ್ಯೆಗಳ ಆಗರವಾಗುತ್ತಿದೆ- ಎಬಿವಿಪಿ ಮಹಾನಗರ ಕಾರ್ಯದರ್ಶಿ ಸುರೇಖಾ ಕುಲಕರ್ಣಿ ಆರೋಪ

ವಿಜಯಪುರ:ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಜೀವನವನ್ನು ರೂಪಿಸಬೇಕಾದ ಶಿಕ್ಷಣದ ಕಾರ್ಖಾನೆಗಳಾಗಬೇಕು.  ವಿದ್ಯಾರ್ಥಿಗಳಿಗೆ ಪೂರಕವಾದ ಶೈಕ್ಷಣಿಕ ವಾತಾವರಣವನ್ನು ನಿರ್ಮಾಣ ಮಾಡುವುದು ವಿಶ್ವವಿದ್ಯಾಲಯಗಳ ಕರ್ತವ್ಯವಾಗಿದೆ ಎಂದು ಎಬಿವಿಪಿ ಮಹಾನಗರ ಕಾರ್ಯದರ್ಶಿ ಸುರೇಖಾ ಕುಲಕರ್ಣಿ ಹೇಳಿದ್ದಾರೆ.  ವಿಜಯಪುರ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಅವರು ಮಾತನಾಡಿದರು. ಬೆಳಗಾವಿಯ ರಾಣಿ ಚೆನ್ನಮ್ಮ ವಿವಿಯ ವಿರುದ್ಧ ಎಬಿವಿಪಿ ಪ್ರತಿಭಟನಾ ಮೆರವಣಿಗೆಯ ಆಯೋಜಿಸಿತ್ತು.  ವಿಜಯಪುರ ನಗರದ ಗ್ರಾಮದೇವತೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿಯವರೆಗೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇತ್ತೀಚಿಗೆ ರಾಣಿ […]

Domestic Violence Workshop: ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ ಕುರಿತು ಕಾರ್ಯಾಗಾರ

ವಿಜಯಪುರ:  ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005ರ ಕುರಿತು ಆಯೋಜಿಸಲಾದ  ತರಬೇತಿಗಳು ಅತೀ ಮುಖ್ಯವಾಗಿದ್ದು, ಎಲ್ಲ ಅಧಿಕಾರಿ-ಸಿಬ್ಬಂದಿಗಳು ಕಾಯಿದೆಯಡಿ ಬರುವ ಕಾನೂನು ಮತ್ತು ನಿಯಮಗಳ ಕುರಿತು ಅರಿವು ಹೊಂದಬೇಕು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ(ಪ್ರಭಾರ) ನ್ಯಾಯಾಧೀಶ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸತೀಶ ಎಲ್. ಪಿ. ಹೇಳಿದರು. ವಿಜಯಪುರ ಜಿಲ್ಲಾಢಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಜಯಪುರ ರವರ ಸಂಯುಕ್ತಾಶ್ರಯದಲ್ಲಿ ಕೌಟುಂಬಿಕ ಹಿಂಸೆಯಿಂದ […]

Doctors Mudhol: ವೈದ್ಯರು ಸುಧಾರಿತ ಶಸ್ತ್ರಚಿಕಿತ್ಸೆಗಳನ್ನು ಅಳವಡಿಸಿಕೊಳ್ಳಬೇಕು- ಡಾ. ಆರ್. ಎಸ್. ಮುಧೋಳ

ವಿಜಯಪುರ: ವೈದ್ಯರು ಸುಧಾರಿತ ಶಸ್ತ್ರಚಿಕಿತ್ಸೆಗಳ ಬಗ್ಗೆ ಅರಿತುಕೊಂಡು ಹೊಸ ಹೊಸ ತಂತ್ರಜ್ಞಾನಗಳನ್ನು ಬಳಸಿ ರೋಗಿಗಳಿಗೆ ಗುಣಮಟ್ಟದ ಶಸ್ತ್ರಚಿಕಿತ್ಸೆ ನೀಡುವುದು ಅಗತ್ಯವಾಗಿದೆ ಎಂದು ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್.ಎಸ್.ಮುದೋಳ ಹೇಳಿದರು. ಬಿ.ಎಲ್.ಡಿ.ಇ. ವಿವಿಯ ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜಿನ ಇ.ಎನ್.ಟಿ. ವಿಭಾಗ ಆಯೋಜಿಸಿದ್ದ ಸ್ಕಲ್ ಬೇಸ್ ಸರ್ಜರಿ ಮತ್ತು ಕಾಕ್ಲಿಯರ್ ಇನ್ ಪ್ಲಾಂಟ್ ಕುರಿತ ಅಂತಾರಾಷ್ಟ್ರೀಯ ಕಾರ್ಯಾಗಾರದಲ್ಲಿ ಮಾತನಾಡಿದರು. ವೈದ್ಯರು ಬದಲಾಗುತ್ತಿರುವ ಅವಶ್ಯಕತೆಗಳಿಗೆ ಅನುಗುಣವಾಗಿ ತಮ್ಮ ವೃತ್ತಿ ಕೌಶಲ್ಯವನ್ನು ಉನ್ನತಿಕರಿಸಿಕೊಳ್ಳಬೇಕು. ಈ ಮೂಲಕ ರೋಗಿಗಳಿಗೆ ಗುಣಮಟ್ಟದ […]

Airport Karjol: ಫೆ. 15ರೊಳಗೆ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಿ- ಅಧಿಕಾರಿಗಳಿಗೆ ಸಚಿವ ಗೋವಿಂದ ಕಾರಜೋಳ ಸೂಚನೆ

ವಿಜಯಪುರ: ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗಳು ಭರದಿಂದ ಸಾಗಿದ್ದು, ಫೆ. 15ರೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ವಿಜಯಪುರ ನಗರದ ಹೊರವಲಯದ ಬುರಣಾಪುರ ಬಳಿ ನಡೆದಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಪ್ಯಾಸೆಂಜರ್ ಟರ್ಮಿನಲ್ ಬಿಲ್ಡಿಂಗ್, ಇಟಿಸಿ. ಬಿಲ್ಡಿಂಗ್, ಬೌಂಡ್ರಿ ವಾಲ್ಸ್, ಸೇರಿದಂತೆ ರನವೇ ಕಾಮಗಾರಿಗಳನ್ನು ವೀಕ್ಷಿಸಿ ಕಾಮಗಾರಿಯನ್ನು ತಾಂತ್ರಿಕವಾಗಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣ […]

ವಿಜಯಪುರದಲ್ಲಿ ಸಶಸ್ತ್ರ ಪಡೆಗಳ ಧ್ವಜ ದಿನ ಆಚರಣೆ

ವಿಜಯಪುರ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಈ ಸಂದರ್ಭದಲ್ಲಿ ಸಶಸ್ತ್ರ ಪಡೆಗಳ ಸಾಂಕೇತಿಕ ಧ್ವಜ ಹಾಗೂ ವಾಹನ ಧ್ವಜಗಳನ್ನು ಬಿಡುಗಡೆ ಮಾಡಿದರು. ಅಲ್ಲದೇ, ಸಾಂಕೇತಿಕವಾಗಿ ಧ್ವಜ ಸ್ವೀಕರಿಸಿ, ದೇಣಿಗೆ ನೀಡುವುದರ ಮೂಲಕ ಸಾರ್ವಜನಿಕರಿಗೆ ಧ್ವಜಗಳನ್ನು ಮಾರಾಟ ಮಾಡಿ ದೇಣಿಗೆ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ಸೈನಿಕ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿವೇಕಾನಂದ ಹೂವಿನಹಳ್ಳಿ, ಮಾಜಿ ಸುಬೇದಾರ ಕ್ಯಾ. […]

Advocates Day: ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ವಕೀಲರ ದಿನ ಆಚರಣೆ

ವಿಜಯಪುರ: ಜಿಲ್ಲಾ ನ್ಯಾಯಾಲಯ ಸಂಕೀರ್ಣದ ವಕೀಲರ ಭವನದಲ್ಲಿ ವಕೀಲರ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ನ್ಯಾಯಾಂಗ ಇಲಾಖೆ, ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ, ಹಾಗೂ ಬಿ.ಎಲ್.ಡಿ.ಈ. ಆಸ್ಪತ್ರೆ, ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಶಂಕರ ಹೃದಯಾಲಯ ಸಂಯುಕ್ತಾಶ್ರಯದಲ್ಲಿ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಈ ಕಾರ್ಯಕ್ರಮವನ್ನು ಜಿಲ್ಲಾ ಒಂದನೇಯ ಹೆಚ್ಚುವರಿ ಸತ್ರ ನ್ಯಾಯಾಧೀಶ ಸತೀಶ ಎಲ್.ಪಿ ಉದ್ಘಾಟಿಸಿದರು. ಹಿರಿಯ ನ್ಯಾಯವಾದಿಗಳು ಎಂ.ಜಿ.ಮಠಪತಿ ಅವರು ವಕೀಲರ ದಿನಾಚರಣೆ ಕುರಿತು ಮಾತನಾಡಿದರು. […]

Voter List DC: ಮತದಾರರ ಪಟ್ಟಿ ಪರಿಷ್ಕರಣೆ: ಗೊಳಸಂಗಿ, ಮುತ್ತಗಿ, ಅಗಸಬಾಳ, ಹಳ್ಳೂರ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿಸಿ ಡಾ. ದಾನಮ್ಮನವರ

ವಿಜಯಪುರ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಖುದ್ದಾಗಿ ಪರಿಶೀಲನೆ ನಡೆಸುವ ಕಾರ್ಯ ಮುಂದುವರೆಸಿದ್ದಾರೆ.  ಬಸವನ ಬಾಗೇವಾಡಿ ಹಾಗೂ ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪರಿಶೀಲನೆ ನಡೆಸಿದರು.  ಬಸವನ ಬಾಗೇವಾಡಿ ಮತಕ್ಷೇತ್ರದ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದ ಮತಗಟ್ಟೆ ಸಂ.139 ಹಾಗೂ 141ರಲ್ಲಿ ಹಾಗೂ ಮುತ್ತಗಿ ಗ್ರಾಮದ ಮತಗಟ್ಟೆ ಸಂಖ್ಯೆ 100 ಹಾಗೂ 101ರ ವ್ಯಾಪ್ತಿಯಲ್ಲಿನ ಮನೆ ಮನೆಗೆ  ಹಾಗೂ ಮುದ್ದೇಬಿಹಾಳ ತಾಲೂಕಿನ ಅಗಸಬಾಳ ಗ್ರಾಮದಲ್ಲಿ ಮತಗಟ್ಟೆ ಸಂಖ್ಯೆ […]

Students Distnction: ಜೆ ಎಸ್ ಎಸ್ ಶಿಕ್ಷಣ ಮಹಾವಿದ್ಯಾಲಯದ ಎಲ್ಲ ವಿದ್ಯಾರ್ಥಿಗಳು ಎಂ.ಇಡ್ ಪರೀಕ್ಷೆಯಲ್ಲಿ ಡಿಸ್ಚಿಂಕ್ಷನ್ ನಲ್ಲಿ ಉತ್ತೀರ್ಣ

ವಿಜಯಪುರ: ನಗರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ಜೆ ಎಸ್ ಎಸ್ ಸ್ನಾತಕೋತ್ತರ ಶಿಕ್ಷಣ ಅಧ್ಯಯನ ಕೇಂದ್ರದ(ಎಂ.ಇ.ಡಿ)ದ ಎಲ್ಲ ವಿದ್ಯಾರ್ಥಿಗಳು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನಡೆಸಿದ ಸ್ನಾತಕೋತ್ತರ ಪರಿಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಾಸಾಗುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಪ್ರಾಚಾರ್ಯ ಡಾ. ಬಿ. ವೈ. ಖಾಸನೀಸ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಎಂ. ಇಡಿ ನಾಲ್ಕನೇ ಸೆಮಿಸ್ಟರ್ ಪರಿಕ್ಷೆಯಲ್ಲಿ ಕಾಲೇಜಿನ ಎಲ್ಲ 10 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯೊಂದಿಗೆ ಡಿಸ್ಟಿಂಕ್ಷನ್‍ನಲ್ಲಿ ಪಾಸಾಗಿದ್ದಾರೆ.  […]

ಬಸವ ನಾಡಿನಲ್ಲಿ ವಿಶ್ವ ವಿಲಕಚೇತನರ ದಿನಾಚರಣೆ- ವಿಕಲಚೇತನರಿಗೆ ಅನುಕಂಪ ಬೇಡ, ಅವಕಾಶ ಕೊಡಿ- ನಿಂಗಪ್ಪ ಗೋಠೆ

ವಿಜಯಪುರ: ವಿಕಲಚೇತನರು ಅಸಾಹಯಕರಲ್ಲ.  ಸದೃಢರಿಗಿಂತಲೂ ವಿಶಿಷ್ಟ ಸಾಧನೆ ಮಾಡಬಲ್ಲರು.  ಅವರಿಗೆ ಬೇಕಿರುವುದು ಅನುಕಂಪ ಅಲ್ಲ, ಅವಕಾಶ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಹೇಳಿದ್ದಾರೆ.  ನಗರದ ಕಂದಗಲ್ ಹನಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಕಲಚೇತನರ […]