Ganga Kalyan: ಗಂಗಾ ಕಲ್ಯಾಣ-ವಸತಿ ಯೋಜನೆಗಳ ಫಲಾನುಭವಿಗಳನ್ನು ನಿಗದಿತ ಅವಧಿಯೊಳಗೆ ಆಯ್ಕೆ ಮಾಡಿ- ಕೋಟಾ ಶ್ರೀನಿವಾಸ ಪೂಜಾರಿ

ವಿಜಯಪುರ: ಅಂಬೇಡ್ಕರ್ ಅಭಿವೃದ್ದಿ ನಿಗಮ ಹಾಗೂ ಡಿ. ದೇವರಾಜ್ ಅರಸು ಅಭಿವೃದ್ದಿ ನಿಗಮ ವತಿಯಿಂದ ಗಂಗಾ ಕಲ್ಯಾಣ ಹಾಗೂ ನಾನಾ ವಸತಿ ಯೋಜನೆಗಳ ಫಲಾನುಭವಿಗಳನ್ನು ನಿಗದಿತ ಅವಧಿಯೊಳಗೆ ಆಯ್ಕೆ ಮಾಡುವಂತೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರ ಜಿಲ್ಲಾ ಪ್ರವಾಸದಲ್ಲಿರುವ ಅವರು ತಿಕೋಟಾ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಈ ಸಭೆಯಲ್ಲಿ ಮಾತನಾಡಿದ ಅವರು, ನಿಗದಿತ ಅವಧಿಯೊಳಗೆ ಆಯ್ಕೆ […]

KUWJ Conference: ಕಾರ್ಯನಿರತ ಪತ್ರಕರ್ತರಕ್ಕೆ ನಾನಾ ಸಮಿತಿಗಳ ರಚನೆ- ಕಾರ್ಯಕ್ರಮ ಯಶಸ್ಸಿಗೆ ಪೂರ್ವಭಾವಿ ಸಭೆ

ವಿಜಯಪುರ: ಬಸವ ನಾಡು ವಿಜಯಪುರದಲ್ಲಿ ನಡೆಯಲಿರುವ ಪತ್ರಕರ್ತರ 37 ನೇ ರಾಜ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ನಾನಾ ಸಮಿತಿಗಳನ್ನು ರಚನೆ ಮಾಡಲಾಗಿದೆ.  ಈ ಹಿನ್ನೆಲೆಯಲ್ಲಿ ನಗರದ ಪತ್ರಿಕಾ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ಮತ್ತು ಕಾನಿಪ ಜಿಲ್ಲಾ ಸಲಹಾ ಸಮಿತಿ ಸದಸ್ಯ ಗೋಪಾಲ ನಾಯಕ, ವಿಜಯಪುರದಲ್ಲಿ ನಡೆಸಲು ಅವಕಾಶ ದೊರೆತಿದ್ದು ಹೆಮ್ಮೆಯ ವಿಷಯ.  ಜಿಲ್ಲೆಯ ಎಲ್ಲ ಪತ್ರಕರ್ತರು ಒಗ್ಗೂಡಿ ಈ ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದು ಹೇಳಿದರು. ಸಮ್ಮೇಳನದ ಸಿದ್ಧತೆಗೆ ರಚಿಸಲಾದ ನಾನಾ ಸಮಿತಿಗಳ ಸದಸ್ಯರು ತಮ್ಮ […]

Model Teachers Award: ಎ. ಎಸ್. ಅತ್ತಾರ ಸೇರಿದಂತೆ ನಾನಾ ಶಿಕ್ಷಕರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ ಮತ್ತು ಉಪನ್ಯಾಸ ಹಾಗೂ ಸನ್ಮಾನ ಸಮಾರಂಭ ಬಸವನ ಬಾಗೇವಾಡಿ ಪಟ್ಟಣದ ಬಸವ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಉದ್ಘಾಟಿಸಿದ ಮಾತನಾಡಿದರು. ಬಸವನ ಬಾಗೇವಾಡಿ ವಿರಕ್ತಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು.  ಕರ್ನಾಟಕ ಸಹಕಾರ ಮಹಾಮಂಡಳದ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ […]

Children CEO: ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆ ಪರಿಣಾಮಕಾರಿ ಅನುಷ್ಠಾನಗೊಳಿಸಿ- ಜಿ. ಪಂ. ಸಿಇಓ ರಾಹುಲ ಶಿಂಧೆ ಸೂಚನೆ

ವಿಜಯಪುರ: ಮಕ್ಕಳ ಆರೋಗ್ಯ ಸುರಕ್ಷತೆ ಮತ್ತು ಚಿಕಿತ್ಸೆಗಾಗಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದು ವಿಜಯಪುರ ಜಿ. ಪಂ. ಸಿಇಓ ರಾಹುಲ ಶಿಂಧೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿ. ಪಂ. ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಬಾಲಸ್ವಾಸ್ಥ್ಯ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ ಸ್ವಾಸ್ಥಯ ಯೋಜನೆಯಡಿ ಮಕ್ಕಳ ಆರೋಗ್ಯ ತಪಾಸಣೆ ಮಾಡಿ, ತೀವ್ರತರ ಖಾಯಿಲೆ ಕಂಡು […]

Bank Elected: ಹನುಮಂತನ ಪೂಜಾರಿಗೆ ಒಲಿದ ಮಹಾಲಕ್ಷ್ನಿ- ಬ್ಯಾಂಕ್ ಉಪಾಧ್ಯಕ್ಷೆಯಾಗಿ ಅರ್ಚರ ಮನೆಗೆ ಶೋಭೆ ತಂದ ಗೃಹಿಣಿ

ವಿಜಯಪುರ: ನಗರದ ಐತಿಹಾಸಿಕ ಮದಲಾ ಮಾರುತಿ ದೇವಸ್ಥಾನದ ಪೂಜಾರಿಯ ಪತ್ನಿಗೆ ವಿಜಯಪುರದ ಪ್ರತಿಷ್ಠಿತ ಮಹಾಲಕ್ಷ್ಮಿ ಬ್ಯಾಂಕ್ ಉಪಾಧ್ಯಕ್ಷ ಸ್ಥಾನ ಒಲಿದು ಬಂದಿದೆ. ಶ್ರೀ ಮಹಾಲಕ್ಷ್ಮಿ ಬ್ಯಾಂಕಿನ ಅಧ್ಯಕ್ಷರಾಗಿ ಮುಕುಂದ ಕುಲಕರ್ಣಿ ಅಧ್ಯಕ್ಷರಾಗಿ ಮತ್ತು ಶೋಭಾ ಗೋವಿಂದ ಜೋಶಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನ್ಯಾಯವಾದಿಯೂ ಆಗಿರುವ ಗೋವಿಂದ ಜೋಶಿ ಕಳೆದ ಹಲವಾರು ವರ್ಷಗಳಿಂದ ವಿಜಯಪುರ ನಗರದ ಐತಿಹಾಸಿಕ ಮಧಲಾ ಮಾರುತಿ ದೇವಸ್ಥಾನದ ಅರ್ಚಕರಾಗಿ ಹಣಮಂತನ ಪೂಜೆ, ಯಜ್ಞ-ಯಾಗಾದಿಗಳನ್ನು ಮಾಡುತ್ತಿದ್ದಾರೆ. ಅಲ್ಲದೇ, ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಗೋವಿಂದ ಜೋಶಿ […]

CEO Visit: ಇಂಡಿ ತಾಲೂಕಿನ ನಾನಾ ಗ್ರಾ. ಪಂ. ವ್ಯಾಪ್ತಿಯ ಕಾಮಗಾರಿ ಸ್ಥಳಗಳಿಗೆ ಜಿ. ಪಂ. ಸಿಇಓ ರಾಹುಲ ಶಿಂಧೆ ಭೇಟಿ, ಪರಿಶೀಲನೆ

ವಿಜಯಪುರ: ವಿಜಯಪುರ ಜಿ. ಪಂ. ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ ಶಿಂಧೆ ಅವರು ಇಂಡಿ ತಾಲೂಕಿನ ಹೊರ್ತಿ, ಕೊಳೂರಗಿ, ಬಬಲಾದ ಮತ್ತು ಕಪನಿಂಬರಗಿ ಗ್ರಾ. ಪಂ. ವ್ಯಾಪ್ತಿಗಳಲ್ಲಿ ನಡೆಯುತ್ತಿರುವ ನಾನಾ ಅಭಿವೃದ್ಧಿ ಕಾಮಗಾರಿಗಳ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಳೂರಗಿ ಗ್ರಾ. ಪಂ. ವ್ಯಾಪ್ತಿಯ ಸಾವಳಸಂಗ ಗ್ರಾಮದ ಅರಣ್ಯ ಇಲಾಖೆ ಮತ್ತು ನರೇಗಾ ಯೋಜನೆಯಡಿ ಕೈಗೊಂಡ ಅಮೃತ ಸರೋವರ, ಸಸಿ ನೆಟ್ಟಿರುವ ಕಾಮಗಾರಿಗಳ ವೀಕ್ಷಿಸಿದ ಅವರು, ಹೊರ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, […]

Banajiga Protest: ಯತ್ನಾಳ, ಕಾಶಪ್ಪನವರ ವಿರುದ್ಧ ಬಸವ ನಾಡಿನಲ್ಲಿ ಬಣಜಿಗರ ಬಲ ಪ್ರದರ್ಶನ

ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಣಜಿಗ ಸಮಾಜದ ವತಿಯಿಂದ ವಿಜಯಪುರ ನಗರದಲ್ಲಿ ಬಣಜಿಗ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ವಿಜಯಪುರ ನಗರದ ಗ್ರಾಮ ದೇವತೆ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಜನರು ಪಾಲ್ಗೊಂಡು ಶಕ್ತಿ ಪ್ರದರ್ಶನ ಮಾಡಿದರು. ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಹಾಗೂ ಜಿಲ್ಲಾ ಘಟಕ ವಿಜಯಪುರ […]

TET Preparation: ನ. 6ರಂದು ನಗರದ 52 ಪರೀಕ್ಷಾ ಕೇಂದ್ರಗಳಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ- ಪರೀಕ್ಷಾರ್ಥಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ- ಡಿಸಿ ಸೂಚನೆ

ವಿಜಯಪುರ: ನ. 6 ರಂದು ನಡೆಯಲಿರುವ(ಟಿಇಟಿ) ಶಿಕ್ಷಕರ ಅರ್ಹತಾ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ಅಡೆ-ತಡೆ ಉಂಟಾಗದಂತೆ ಗಮನವಹಿಸಿ, ಅಭ್ಯರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ, ವ್ಯವಸ್ಥಿತವಾಗಿ ಪರೀಕ್ಷೆಗಳು ನಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರ ನಗರದ ಜಿ. ಪಂ. ಸಭಾಂಗಣದಲ್ಲಿ ನಡೆದ ಟಿಇಟಿ-2022ರ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪರೀಕ್ಷಾರ್ಥಿಗಳಿಗೆ ನೀರು, ಬೆಳಕು, ಶೌಚಾಲಯ ಸೇರಿದಂತೆ ಎಲ್ಲ ಮೂಲಭೂತ ವ್ಯವಸ್ಥೆ ಕಲ್ಪಿಸಬೇಕು.  ಪರೀಕ್ಷೆ ಬರೆಯುವ […]

Ibrahimpur RoB: ಇಬ್ರಾಹಿಂಪುರ ರೇಲ್ವೆ ಮೇಲ್ಸೇತುವೆ ಕಾಮಗಾರಿ- ನವೆಂಬರ ಮಾಸಾಂತ್ಯದೊಳಗೆ ಪೂರ್ಣಗೊಳಿಸಲು ಡಿಸಿ ಸೂಚನೆ

ವಿಜಯಪುರ: ನಗರದಲ್ಲಿ ಇಬ್ರಾಹಿಂಪೂರ ಬಳಿ ನಡೆಯುತ್ತಿರುವ ರೇಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನವೆಂಬರ ಮಾಸಾಂತ್ಯದೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಇಬ್ರಾಹಿಂಪುರ ರೇಲ್ವೆ ಗೇಟ್ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, 36 ಮೀಟರ್ ಸ್ಪ್ಯಾನ್, ಬೊಸ್ಟರಿಂಗ್ ಸ್ಟೀಲ್ ಗ್ರೈಡರ್, ಮೂವಮೇಂಟ್, ಪ್ಲೇಸಮೆಂಟ್ ಆನ್ ಬೇರಿಂಗ್ಸ್, ಮೇಲ್ಗಡೆ ಎರಡು ಬದಿಯಲ್ಲಿ ಕಾಂಕ್ರೀಟ್ ಹಾಕುವುದು(ಕಾಂಕ್ರಿಟಿಂಗ್ ಆನ್ ಗರ್ಡರ್), ಪಾದಚಾರಿ ಮಾರ್ಗ, ಮ್ಯಾಟಿಕ್ ಆಸ್ಪಾಟಿಂಗ್, ಗಣೇಶನಗರ ಹಾಗೂ  […]

Niketraj Mourya: ನೀರಾವರಿ ಕ್ಷೇತ್ರದಲ್ಲಿ ಎಂ. ಬಿ. ಪಾಟೀಲ ರಾಜ್ಯದ ಇತಿಹಾಸದಲ್ಲಿ ಎಲ್ಲ ಸಚಿವರಿಗಿಂತ ಹೆಚ್ಚು ಕೆಲಸಗಳನ್ನು ಮಾಡಿದ್ದಾರೆ- ನಿಕೇತರಾಜ ಮೌರ್ಯ

ವಿಜಯಪುರ: ಕರ್ನಾಟಕದ ಇತಿಹಾಸದಲ್ಲಿ ಜಲಸಂಪನ್ಮೂಲ ಸಚಿವರಾಗಿ ಎಂ.ಬಿ.ಪಾಟೀಲರು ಈ ಹಿಂದೆ ಯಾರೂ ಮಾಡದಷ್ಟು ನೀರಾವರಿ ಕೆಲಸಗಳನ್ನು ಮಾಡುವ ಮೂಲಕ ಛಾಪು ಮೂಡಿಸಿದ್ದಾರೆ.  ಇದು ರಾಜಕಾರಣಿಯಾಗಿ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳ ಒಂದು ಮುಖವಾದರೆ, ಫ.ಗು.ಹಳಕಟ್ಟಿ, ಆದಿಲಶಾಹಿ ಮತ್ತು ಡಾ. ಎಂ.ಎಂ.ಕಲಬುರ್ಗಿ ಕುರಿತ ಸಂಪುಟಗಳನ್ನು ಕನ್ನಡ ಸೇರಿದಂತೆ ನಾನಾ ಭಾμÉಗಳಿಗೆ ಅನುವಾದ ಮಾಡಿ ಪ್ರಕಟ ಮಾಡುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೂ ಅಮೋಘ ಕೊಡುಗೆ ನೀಡಿದ್ದಾರೆ ಎಂದು ಖ್ಯಾತ ವಾಗ್ಮಿ ನಿಕೇತರಾಜ ಮೌರ್ಯ ಹೇಳಿದರು. ವಿಜಯಪುರದಲ್ಲಿ ವಿಧಾನ ಪರಿಷತ್ ಸದಸ್ಯ […]