SBP Birthday Preparation: ಎಂ ಎಲ್ ಸಿ ಸುನೀಲಗೌಡ ಪಾಟೀಲರ 50ನೇ ಜನ್ಮದಿನ- ಯುವ ಸಂಭ್ರಮ ಕಾರ್ಯಕ್ರಮಕ್ಕೆ ಸಿದ್ಧತೆಗಳು ಪೂರ್ಣ

ವಿಜಯಪುರ: ವಿಜಯಪುರ-ಬಾಗಲಕೋಟ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲರ 50 ನೇ ಹುಟ್ಟುಹಬ್ಬವನ್ನು ಯುವ ಸಂಭ್ರಮ ಕಾರ್ಯಕ್ರಮವಾಗಿ ಆಚರಿಸಲು ಸಿದ್ಧತೆಗಳು ಪೂರ್ಣಗೊಂಡಿವೆ. ಅ. 31 ರಂದು ಸೋಮವಾರ ಬೆ.11ಕ್ಕೆ ವಿಜಯಪುರ ನಗರದ ಬಿ. ಎಂ. ಪಾಟೀಲ ರಸ್ತೆಯಲ್ಲಿರುವ ಪಾಟೀಲ ಗಾರ್ಡೇನಿಯಾದಲ್ಲಿ ನಡೆಯುವ ಯುವ ಸಂಭ್ರದಲ್ಲಿ ಆರಂಭದಲ್ಲಿ ನಾನಾ ಜಾನಪದ ಕಲಾ ತಂಡಗಳು ಪ್ರದರ್ಶನ ನೀಡಲಿವೆ.  ವೇದಿಕೆ ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿ ನಿಕೇತರಾಜ್ ಮೌರ್ಯ ಪ್ರದಾನ ಭಾಷಣ ಮಾಡಲಿದ್ದಾರೆ.  ಮಮದಾಪುರ ವಿರಕ್ತಮಠದ ಶ್ರೀ ಅಭಿನವ […]

Thieves Arrest: ಶಾಲೆಗಳ ಬಿಸಿಯೂಟದ ಅಕ್ಕಿ, ಇತರೆ ಸಾಮಗ್ರಿಗಳು ಕಳ್ಳರ ಬಂಧನ

ವಿಜಯಪುರ: ವಿಜಯಪುರ ಗ್ರಾಮೀಣ ಪೊಲೀಸ ಠಾಣೆ ವ್ಯಾಪ್ತಿಯ ಬುರಾಣಪುರ, ಇಟ್ಟಂಗಿಹಾಳ ಹಾಗೂ ಹಿಟ್ನಳ್ಳಿ ಗ್ರಾಮಗಳ  ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕೊಡುವ ಬಿಸಿಯೂಟದ ಸಾಮಗ್ರಿಗಳನ್ಬು ಕಳ್ಳತನ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ ಎಚ್. ಡಿ. ಆನಂದಕುಮಾರ, ಈ ಪ್ರಕರಣಗಳ ತನಿಖೆಗಾಗಿ ಎಎಸ್ಪಿ ಡಾ. ರಾಮ ಲಕ್ಷ್ನಣಸಾ ಅರಸಿದ್ದಿ ಅವರ ಮಾರ್ಗದರ್ಶನದಲ್ಲಿ ವಿಜಯಪುರ ಡಿವೈಎಸ್ಪಿ ಸಿದ್ದೇಶ್ವರ, ವಿಜಯಪುರ ಗ್ರಾಮೀಣ ಸಿಪಿಐ ಸಂಗಮೇಶ ಪಾಲಭಾವಿ, ವಿಜಯಪುರ ಗ್ರಾಮೀಣ ಪಿ ಎಸ್ ಐ ಗಳಾದ ಜಿ. ಎಸ್. […]

Airport Welcome: ವಿಜಯಪುರ ವಿಮಾನ ನಿಲ್ದಾಣಕ್ಕೆ ಬಸವಣ್ಣನವರ ನಾಮಕರಣ ಸ್ವಾಗತಾರ್ಹ: ಬೊಮ್ಮಾಯಿ, ಕಾರಜೋಳಗೆ ಅಭಿನಂನದೆ- ಸಂಗಮೇಶ ಬಬಲೇಶ್ವರ

ವಿಜಯಪುರ: ವಿಜಯಪುರ ವಿಮಾನ ನಿಲ್ದಾಣಕ್ಕೆ ವಿಶ್ವಗುರು ಬಸವಣ್ಣನವರ ಹೆಸರಿಡುವ ನಿರ್ಧಾರ ಅತ್ಯಂತ ಸ್ವಾಗತಾರ್ಹ ಎಂದು ಅಖಿಲ ಭಾರತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ವಕ್ತಾರ ಸಂಗಮೇಶ ಬಬಲೇಶ್ವರ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸಮಾಜ ಸುಧಾರಕ ಸಮಾಜದಲ್ಲಿ ಸಮಾನತೆಯನ್ನು ತರಲು ಹೋರಾಡಿದ ವಿಶ್ವಗುರು ಬಸವಣ್ಣನವರ ಹೆಸರನ್ನು ನಿರ್ಮಾಣ ಹಂತದಲ್ಲಿರುವ ವಿಜಯಪುರದ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವ ಪ್ರಸ್ತಾವನೆಯನ್ನು ಅನುಮೋದಿಸಿರುವ ಕರ್ನಾಟಕ ರಾಜ್ಯ ಸರಕಾರಕ್ಕೆ ಸಮಸ್ತ ಬಸವಾಭಿಮಾನಿಗಳ ಪರವಾಗಿ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ. […]

Police Martyrs Day: ನಮ್ಮ ಒಳಿತಿಗಾಗಿ ಪ್ರಾಣ ಮುಡುಪಾಗಿಟ್ಟವರನ್ನು ಸ್ಮರಣೆ ಮಾಡುವುದು ನಮ್ಮ ಕರ್ತವ್ಯ- ಡಾ. ದಾನಮ್ಮನವರ

ವಿಜಯಪುರ: ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡುತ್ತಾ ಸಮಾಜದ ಭದ್ರತೆ ಹಾಗೂ ಸುರಕ್ಷತೆಗಾಗಿ ಪ್ರಾಣ ಮುಡುಪಾಗಿಟ್ಟ ಪೊಲೀಸ್ ಸಿಬ್ಬಂದಿ ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬ.‌ ದಾನಮ್ಮನವರ ಹೇಳಿದರು. ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನ ಆಚರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಪೊಲೀಸರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು. ಸಾರ್ವಜನಿಕರು ಸಹ ಕಾನೂನು ಪಾಲಿಸುವ ಮೂಲಕ ಪೊಲೀಸರ ಕಾರ್ಯಕ್ಕೆ ಸಹಕರಿಸಬೇಕು […]

Rain Record: ಬ. ಬಾಗೇವಾಡಿಯಲ್ಲಿ 48.9 ಮಿಮಿ, ವಿಜಯಪುರದಲ್ಲಿ 33.2 ಮಿಮಿ ಮಳೆ- ಉಳಿದೆಡೆ ಎಷ್ಟು ಗೊತ್ತಾ?

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲಾದ್ಯಂತ ಕಳೆದ 24 ಗಂಟೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯಾಗಿದೆ. ಬಸವನ ಬಾಗೇವಾಡಿಯಲ್ಲಿ ಜಿಲ್ಲೆಯಲ್ಲಿಯೇ ಅತ್ಯಧಿಕ 48.9 ಮಿಮಿ ಮಳೆಯಾಗಿದೆ. ವಿಜಯಪುರ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗಿದ್ದರೆ, ಕೆಲವೆಡೆ ಭಾರಿ ಮತ್ತೆ ಅನೇಕ ಕಡೆ ಸಾಧಾರಣ ಮಳೆಯಾಗಿದೆ. ವಿಜಯಪುರ ಜಿಲ್ಲೆಯ ನಾನಾ ಕಡೆ ಸುರಿದ ಮಳೆಯ ವಿವರ ಇಲ್ಲಿದೆ. ವಿಜಯಪುರ ತಾಲೂಕು ವಿಜಯಪುರ ನಗರ- 33.2 ಮಿಮಿ ನಾಗಠಾಣ- 10.6 ಮಿಮಿ ಭೂತ್ನಾಳ- 17.6 ಮಿಮಿ ಹಿಟ್ನಳ್ಳಿ- 15/6 ಮಿಮಿ ಕುಮಟಗಿ- 2.2 […]

Canals MB Patil: ಕಾಲುವೆಗಳ ಬಗ್ಗೆ ಮಾಹಿತಿ ಇಲ್ಲದವರು ಮನಸ್ಸಿಗೆ ಬಂದಂತೆ ಮಾತನಾಡುತ್ತಾರೆ- ಅದರ ಬಗ್ಗೆ ಗಮನ ನೀಡುವ ಅಗತ್ಯವಿಲ್ಲ- ಎಂ. ಬಿ. ಪಾಟೀಲ

ವಿಜಯಪುರ: ಕಾಲುವೆಗಳು ಎಲ್ಲೆಲ್ಲಿ ಬರುತ್ತವೆ ಎಂಬುದರ ಬಗ್ಗೆ ಅರಿವೇ ಇಲ್ಲದವರು ತಮ್ಮ ಮನಸ್ಸಿಗೆ ಬಂದಂತೆ ಮಾತಾನಾಡುತ್ತಾರೆ.  ಅದಕ್ಕೆ ಗಮನ ಕೊಡುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೇಳಿದರು. ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ದೇವಾಪುರ ಗ್ರಾಮದಲ್ಲಿ ಬಬಲಾದ-ದೇವರಗೆಣ್ಣೂರ-ಲಿಂಗದಳ್ಳಿ-ದೇವಾಪುರ-ಕೊಡಬಾಗಿವರೆಗೆ ರೂ. 9 ಕೋ. ವೆಚ್ಚದಲ್ಲಿ ನಿರ್ಮಿಸಲಾಗಿರುವ 6.10 ಕಿ. ಮೀ. ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಬಿಜೆಪಿ ರಾಜ್ಯಾದ್ಯಕ್ಷ ನಳೀನಕುಮಾರ ಕಟೀಲ ಅವರು ವಿಜಯಪುರಕ್ಕೆ ಬಂದಾಗ ಮಲಪ್ರಭಾ […]

BLD Souhard: ಬಿ ಎಲ್ ಡಿ ಸೌಹಾರ್ದ ಶುಭಾರಂಭ ಮಾಡಿದ ಕತ್ನಳ್ಳಿ ಶ್ರೀಗಳು- ನೀಡಿದ ಆಶೀರ್ವಚನ ಇಲ್ಲಿದೆ

ವಿಜಯಪುರ: ಅಭಿಮಾನಿಗಳ ಪ್ರೇಮ, ಜನನಿಯ ವಾತ್ಸಲ್ಯ ಮತ್ತು ಜಗದೀಶನ ಕೃಪೆಯನ್ನು ಯಾರು ಮೀರಲು ಸಾಧ್ಯವಿಲ್ಲ ಎಂದು ಬಬಲಾದಿ ಮಠ, ಕತ್ನಳ್ಳಿ, ಚಮಕೇರಿ, ಅರಭಾವಿ ಮಠದ ಶ್ರೀ ಶಿವಯ್ಯ ಮಹಾಸ್ವಾಮಿಗಳು ಹೇಳಿದ್ದಾರೆ. ವಿಜಯಪುರದಲ್ಲಿ ಬಿ.ಎಲ್.ಡಿ. ಸೌಹಾರ್ದ ಸಹಕಾರಿ ಶುಭಾರಂಭ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು. ವಚನಪಿತಾಮಹ ಡಾ. ಫ.ಗು.ಹಳಕಟ್ಟಿಯವರು ವಿಜಯಪುರ ಜಿಲ್ಲೆ ಶೈಕ್ಷಣಿಕ, ಆರ್ಥಿಕ ಮತ್ತು ಸಾಂಸ್ಕøತಿಕವಾಗಿ ಅಭಿವೃದ್ಧಿಯಾಗಲು ಅಪಾರ ಕೊಡುಗೆ ನೀಡಿದ್ದಾರೆ. ಬಿ.ಎಲ್.ಡಿ.ಇ ಸಂಸ್ಥೆ ಆರಂಭಿಸಿ ಶಿಕ್ಷಣಕ್ಕೆ ಭದ್ರ ಬುನಾದಿ ಹಾಕಿದ್ದಾರೆ. ಇದನ್ನು […]

Poshana Abhiyana: ವಿಜಯಪುರ ಕಿರಿಯ ಬಾಲಕರ ಬಾಲಮಂದಿರಲ್ಲಿ ಪೋಷಣಾ ಅಭಿಯಾನ

ವಿಜಯಪುರ: ನಗರದ ಅಫಝಲಪುರ ಟಕ್ಕೆ ಬಳಿ ಇರುವ ಸರಕಾರಿ ಕಿರಿಯ ಬಾಲಕರ ಬಾಲಮಂದಿರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ ನಡೆಯಿತು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಶ್ರೀಧರ ಕುಲಕರ್ಣಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಾಲಮಂದಿರದ ಮಕ್ಕಳು ದೈಹಿಕವಾಗಿ ಸದೃಢವಾಗಿರಲು ಗುಣಮಟ್ಟದ ಆಹಾರ ಪದ್ಧತಿಯನ್ನು ರೂಡಿಸಿಕೊಳ್ಳಬೇಕು. ಪೌಷ್ಟಿಕಾಂಶ ಆಹಾರದಿಂದ ಮಕ್ಕಳು ಉತ್ತಮ ಆರೋಗ್ಯ ಹೊಂದಿ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಲು ಸಹಕಾರಿಯಾಗುವುದು ಎಂದು ಶ್ರೀಧರ ಕುಲಕರ್ಣಿ ಹೇಳಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ ಅವರು ಅಧ್ಯಕ್ಷತೆ […]

Sainik School: ರಾಜ್ಯದ ಮೊದಲ ಸೈನಿಕ ಶಾಲೆಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ

ವಿಜಯಪುರ: ರಾಜ್ಯದ ಮೊದಲ ಸೈನಿಕ ಶಾಲೆ ಖ್ಯಾತಿಯ ವಿಜಯಪುರದ ಸೈನಿಕ ಶಾಲೆಯಲ್ಲಿ ಮಹಾತ್ಮಾ ಗಾಂಧಿ ಮತ್ತು ಲಾಲ ಬಹಾದ್ದೂರ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು.  ಸೈನಿಕ ಶಾಲೆಯ ಮುಖ್ಯ ಕಟ್ಟಡದ ಮುಂಭಾಗದಲ್ಲಿರುವ ಗಾಂಧಿಜಿಯವರ ಪ್ರತಿಮೆಗೆ ಪ್ರಾಂಶುಪಾಲ ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಬಿಷ್ಟ್ ಪುಷ್ಪ ನಮನ ಸಲ್ಲಿಸಿದರು.  ಬಳಿಕ ದೇಶದ ಮಾಜಿ ಪ್ರಧಾನಿ ದಿ. ಲಾಲ ಬಹದ್ದೂರ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಗಾಂಧೀಜಿಯವರ ತತ್ವಗಳನ್ನು ಹಾಗೂ ಶಾಸ್ತ್ರಿಜಿಯವರ ಸರಳ ಜೀವನವನ್ನು ಜೀವನದಲ್ಲಿ ಅಳವಡಿಸಿಕೊಂಡು […]

Shantiniketan School: ಶಾಂತಿನಿಕೇತನ ಶಾಲೆಯಲ್ಲಿ ಗಾಂಧಿ, ಶಾಸ್ತ್ರಿ ಜಂಯತಿ ಸಂಭ್ರಮ

ವಿಜಯಪುರ: ನಗರದ ಪ್ರತಿಷ್ಠಿತ ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ ಮಹಾತ್ಮಾ ಗಾಂಧಿ ಹಾಗೂ ಲಾಲ ಬಹಾದ್ದೂರ ಶಾಸ್ತ್ರಿ ಜಯಂತಿಯನ್ನು ಾಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷೆ ಶೀಲಾ ಸುರೇಶ ಬಿರಾದಾರ ಅವರು ಗಾಂಧಿ ಮತ್ತು ಮತ್ತು ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಗಾಂಧೀಜಿ ಮತ್ತು ಶಾಸ್ತ್ರೀಜಿ ಈ ದೇಶಕ್ಕಾಗಿ ತಮ್ಮ ಜೀವನವನ್ನು ತ್ಯಾಗ ಮಾಡಿದ್ದಾರೆ.  ಅಂಥವರ ಜೀವನದ ಕುರಿತು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು.  ಅವರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ತಮ್ಮ ಭವಿಷ್ಯವನ್ನು ಉತ್ತಮ ಪಡಿಸಿಕೊಳ್ಳಬೇಕು ಎಂದು […]