ಗಾಂಧೀಜಿಯವರ ಗ್ರಾಮ ಸ್ವರಾಜ್ಯ ನನಸು ಮಾಡಲು ಎನ್.ಎಸ್.ಎಸ್ ಶಿಬಿರಗಳು ಸಹಕಾರಿಯಾಗಿವೆ- ಶ್ರೀ ನರೇಶಾನಂದ ಸ್ವಾಮೀಜಿ

ವಿಜಯಪುರ: ಮಹಾತ್ಮ ಗಾಂಧೀಜಿಯವರ ಕನಸಿನಂತೆ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ನನಸು ಮಾಡಲು ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ(ಎನ್.ಎಸ್.ಎಸ್.)ಗಳು ಸಹಕಾರಿಯಾಗಿವೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ನರೇಶಾನಂದ ಸ್ವಾಮೀಜಿ ಹೇಳಿದ್ದಾರೆ. ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ರಾಷ್ಟ್ರೀಯ ಸೇವಾ ಯೋಜನೆಯ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯಡಿ ನಗರದ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಸೋಮವಾರ ನಡೆದ ಎನ್.ಎಸ್.ಎಸ್ ವಿಶೇಷ ಶಿಬಿರವನ್ನು […]

ಬಸವ ನಾಡಿನಲ್ಲಿ ಕಂದಾಯ ದಿನಾಚರಣೆ ಪ್ರಯುಕ್ತ ಶ್ರಮದಾನ ಕಾರ್ಯಕ್ರಮ

ವಿಜಯಪುರ: ಜಿಲ್ಲಾಡಳಿತ ಮತ್ತು ಕಂದಾಯ ಇಲಾಖಾ ನೌಕರರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಕಂದಾಯ ದಿನ ಆಚರಣೆಯ ಅಂಗವಾಗಿ ಶ್ರಮದಾನದ ಮೂಲಕ ಸ್ವಚ್ಚತೆ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಯಿತು. ಕಂದಾಯ ದಿನಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅಧಿಕಾರಿ,ಸಿಬ್ಬಂದಿ ಜೊತೆಗೂಡಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸ್ವಚ್ಚತಾ ಶ್ರಮದಾನ ಕೈಗೊಂಡು, ನಂತರ ಜಿಲ್ಲಾ ಪಂಚಾಯಿತಿಯ ರಸ್ತೆಯಲ್ಲಿರುವ ಚುನಾವಣಾ ವ್ಹೇರ್ ಹೌಸ್ ಆವರಣದಲ್ಲಿ ಗಿಡ ನೆಟ್ಟು ಸಸಿಗೆ ನೀರೆರೆದು ಮಾತನಾಡಿದ ಅವರು, ಸ್ವಚ್ಚತಾ ಕಾರ್ಯಕ್ರಮವು ಒಂದು ದಿನಕ್ಕೆ ಸೀಮಿತವಾಗದೆ ಪ್ರತಿದಿನವು […]

ಕೃಷಿ, ಶಿಕ್ಷಣ, ವ್ಯವಹಾರ ಸಾಲಗಳಿಗೆ ಒತ್ತು ನೀಡಿ ಪ್ರಗತಿ ಸಾಧಿಸಲು ಸಿಇಓ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆ

ವಿಜಯಪುರ: ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ನಾನಾ ಬ್ಯಾಂಕುಗಳಿಂದ ಒಟ್ಟು ರೂ. 17093 ಕೋ. ಸಾಲ ಒದಗಿಸಿದ್ದು, ಕಳೆದ ವರ್ಷಕ್ಕಿಂತ ಶೇ. 3.88 ರಷ್ಟು ಪ್ರಗತಿ ಸಾಧಿಸಲಾಗಿದೆ.  ಕೃಷಿ, ಶಿಕ್ಷಣ, ವ್ಯವಹಾರ ಮನೆ ಸಾಲಗಳ ಮೇಲೆ ಒತ್ತು ನೀಡಿ ಇನ್ನಷ್ಟು ಹೆಚ್ಚಿನ ಪ್ರಗತಿ ಸಾಧಿಸುವಂತೆ ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕರಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಸೂಚನೆ ನೀಡಿದ್ದಾರೆ. ನಗರದ ಜಿ. ಪಂ. ಸಭಾಂಗಣದಲ್ಲಿ ನಡೆದ ಜಿಲ್ಲಾ ಅಗ್ರಣೀಯ ಬ್ಯಾಂಕ್ ತ್ರೈಮಾಸಿಕ ಜಿಲ್ಲಾ ಸಲಹಾ […]

ಭೂವಂಚನೆ ಪ್ರಕರಣ ಬೇಧಿಸಿದ ಸಿಇಎನ್, ಆದರ್ಶ ನಗರ ಪೊಲೀಸರು- ಖೊಟ್ಟಿ ದಾಖಲೆ ಸೃಷ್ಠಿಸಿ ವಂಚಿದ್ದ ಆರೋಪಿಗಳ ಬಂಧನ

ವಿಜಯಪುರ: ಖೊಟ್ಟಿ ದಾಖಲೆ ಸೃಷ್ಠಿ ಭೂಮಿ ಮಾರಾಟ ಮಾಡಿ ವಂಚಿಸುತ್ತಿದ್ದ ನಾನಾ ಪ್ರಕರಣಗಳನ್ನು ವಿಜಯಪುರ ಸಿಇಎನ್ ಮತ್ತು ಆದರ್ಶ ನಗರ ಪೊಲೀಸರು ಭೇದಿಸಿದ್ದು, ಈ ಸಂಬಂಧ ಹಲವರನ್ನು ಬಂಧಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಎಸ್ಪಿ ಋಷಿಕೇಶ ಸೋನಾವಣೆ, ಸಿಇಎನ್ ಮತ್ತು ವಿಜಯಪುರ ನಗರದ ಆದರ್ಶ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾದ ಪ್ರಕರಣಗಳ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ವಿಜಯಪುರ ನಗರದ ಕೆ.ಎಚ್.ಬಿ ಕಾಲನಿಯ ಮಾರುತಿ ರಾಜಾರಾಮ ನಾರಾಯಣಕರ ಅವರಿಗೆ […]

TET Exam: ಜೂ. 30ರಂದು ಶಿಕ್ಷಕರ ಅರ್ಹತೆ ಪರೀಕ್ಷೆ- ವ್ಯವಸ್ಥಿತವಾಗಿ ನಿರ್ವಹಿಸಲು ಡಿಸಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಜೂ. 30 ರಂದು ರವಿವಾರ ನಡೆಯಲಿದ್ದು ಪರೀಕ್ಷೆ ಕೇಂದ್ರಗಳಿಗೆ ನಿಯೋಜಿಸಿರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಟ್ಟುನಿಟ್ಟಿನ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಬೂಬಾಲನ್ ಸೂಚನೆ ನೀಡಿದ್ದಾರೆ.  ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧಕ್ಷತೆ ವಹಿಸಿ ಅವರು ಮಾತನಾಡಿದರು. ನಗರದಲ್ಲಿ ಒಟ್ಟು 43 ಕೇಂದ್ರಗಳಲ್ಲಿ ಎರಡು ಅವಧಿಗಳಲ್ಲಿ ಪರೀಕ್ಷೆಗಳು ನಡೆಯಲಿವೆ. 111787 ಅಭ್ಯರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ. ಬೆ. 9.30ಕ್ಕೆ ಮೊದಲನೆ ಅವಧಿಯ ಪರೀಕ್ಷೆಗಳು […]

ಚಡಚಣದಲ್ಲಿ ಜನಸ್ಪಂದನ ಕಾರ್ಯಕ್ರಮ: ಜನರ ಮನೆ ಬಾಗಿಲಿಗೆ ಸರಕಾರ: ಶಾಸಕ ವಿಠ್ಠಲ ಧೋ. ಕಟಕದೊಂಡ

ವಿಜಯಪುರ: ಜನರ ಸಮಸ್ಯೆಗಳನ್ನು ನಿವಾರಣೆ ಮಾಡಲು ಸರ್ಕಾರ ಬದ್ಧವಾಗಿದ್ದು, ಅದಕ್ಕಾಗಿ ಮನೆ ಬಾಗಿಲಿಗೆ ಸರಕಾರ ಎಂಬಂತೆ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಸಾರ್ವಜನಿಕರು ಇದg ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನಾಗಠಾಣ ಶಾಸಕ ವಿಠ್ಠಲ ಧೋಂಡಿಬಾ ಕಟಕದೊಂಡ ಹೇಳಿದ್ದಾರೆ.  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಚಡಚಣ ನಗರದ ಗುರುಕೃಪ ಮಾಂಗಲ್ಯ ಕಾರ್ಯಾಲಯದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾರ್ವಜನಿಕರು ತಮ್ಮ ಸಮಸ್ಯೆ, ದೂರು, ಅಹ್ವಾಲುಗಳನ್ನು ದೂರದ ಜಿಲ್ಲಾ ಕಚೇರಿಗೆ ಹೋಗಿ ದಾಖಲಿಸುವುದು ಆರ್ಥಿಕ ಹಾಗೂ […]

ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳಕ್ಕೆ ವಿರೋಧ- ಬೈಕ್ಗೆ ಹಗ್ಗಕಟ್ಟಿ ಎಳೆದು ಬಿಜೆಪಿ ಕಾರ್ಯಕರ್ತರ ಬೃಹತ್ ಪ್ರತಿಭಟನೆ

ವಿಜಯಪುರ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ವಿರೋಧಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ನಗರದಲ್ಲಿ ಬೈಕಿಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ಪ್ರತಿಭಟನೆ ನಡೆಸಿದರು.  ನಗರದ ಗಾಂಧಿಚೌಕಿನಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಡಾ. ಬಿ. ಆರ್. ಅಂಬೇಡ್ಕರ್ ವೃತ್ತದವರೆಗೂ ಬೈಕ್‌ಗೆ ಹಗ್ಗಕಟ್ಟಿ ಎಳೆದುಕೊಂಡು ಬಂದರು. ಈ ಸಂದರ್ಭದಲ್ಲಿ ಮಾತನಾಡಿದ ದೇವರ ಹಿಪ್ಪರಗಿ ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ರಾಜ್ಯದ ಜನತೆಗೆ ನೆಮ್ಮದಿಯ ಬದುಕು ನೀಡಲು ಸಾಧ್ಯವಿಲ್ಲದಿದ್ದರೆ, ಈ ಸರಕಾರ ಅಧಿಕಾರ ಬಿಟ್ಟು […]

ಪೆಟ್ರೋಲ್ ಡೀಸೆಲ್ ದರ ಏರಿಕೆಗೂ ಚುನಾವಣೆ ಫಲಿತಾಂಶಕ್ಕೂ ಸಂಬಂಧವಿಲ್ಲ- ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ

ವಿಜಯಪುರ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೂ ಚುನಾವಣೆ ಫಲಿತಾಂಶಕ್ಕೂ ಯಾವುದೇ ಸಂಬಂಧವಿಲ್ಲ.   ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಹೇಳಿದ್ದಾರೆ.  ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಗ್ರಾಮದಲ್ಲಿ ಹೆಲಿಪ್ಯಾಡ್ ನಲ್ಲಿ ಮಾಧ್ಮಯ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರತಿಪಕ್ಷದ ನಾಯಕ ಆರ್. ಅಶೋಕ ಅವರು ಸೇಡಿಗಾಗಿ ತೈಲಬೆಲೆ ಏರಿಕೆ ಮಾಡಲಾಗಿದೆ ಎಂಬ  ಹೇಳಿಕೆಗೆ ಸಿಎಂ ಪ್ರತಿಕ್ರಿಯ ನೀಡಿದರು. ವಿಜಯಪುರದಲ್ಲಿ ನಾವು ಸೋತಿದ್ದೇವೆ.  ಕರ್ನಾಟಕದಲ್ಲಿ […]

ಮುಂಗಾರು ಹಂಗಾಮಿನಲ್ಲಿ ಬೀಜ-ರಸಗೊಬ್ಬರ ಕೊರತೆಯಾಗದಂತೆ ಸಮರ್ಪಕ ವಿತರಣೆ ಕ್ರಮ ಕೈಗೊಳ್ಳಿ- ಸಚಿವ ಎಂ. ಬಿ .ಪಾಟೀಲ

ವಿಜಯಪುರ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 711370 ಹೆಕ್ಟೇರ್ ಗುರಿಗೆ 19567 ಹೆಕ್ಟೇರ್ ಬಿತ್ತನೆಯಾಗಿದೆ. ಮಳೆ ಬಿಡುವಿನ ನಂತರ ಬಿತ್ತನೆ ಪ್ರಗತಿಯಾಗಲಿದ್ದು, ಮುಂಗಾರು ಹಂಗಾಮಿನಲ್ಲಿ ಯಾವುದೇ ಬೀಜ, ರಸಗೊಬ್ಬರದ ಕೊರತೆಯಾದಂತೆ ಸಮರ್ಪಕವಾಗಿ ಪೂರೈಸುವಂತೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸೂಚನೆ ನೀಡಿದ್ದಾರೆ.    ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ನಾನಾ ಇಲಾಖೆಗಳ ಜಿಲ್ಲಾ ಮಟ್ಟದ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ […]

ನೀಟ್ ಪ್ರವೇಶ ಪರಿಕ್ಷೇಯಲ್ಲಿ ಅವ್ಯವಹಾರ ಆರೋಪ- ನ್ಯಾಯಾಂಗ ತನಿಕೆಗೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ನಿಂದ ಮನವಿ ಪತ್ರ ಸಲ್ಲಿಕೆ

ವಿಜಯಪುರ: ನೀಟ್ ಪ್ರವೇಶ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರವನ್ನು ನ್ಯಾಯಾಂಗ ತನಿಖೆಗೆ ವಹಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಗಾಂಧಿಚೌಕಿನಿಂದ ಅಂಬೇಡ್ಕರ್ ಚೌಕ್ ವರೆಗೆ ಜಾಥಾ ನಡೆಸಿದ ಕಾರ್ಯಕರ್ತರು, ಅಪರ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯಕುಮಾರ, ದೇಶದಲ್ಲಿರುವ ಶೋಷಿತ ಸಮಾಜದ ಜನರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಜೀವನವನ್ನೇ ತೆಯ್ದು ಶಿಕ್ಷಣದ ವ್ಯಾಪಾರೀಕರಣದ ವ್ಯವಸ್ಥೆಯ […]