Khadi Utsav: ಖಾದಿಯು ಭಾರತದ ಸಂಸ್ಕೃತಿಯ ಅಸ್ಮಿತೆಯ ಸಂಕೇತ- ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ಪ್ರತಿಯೊಬ್ಬರ ಅಚ್ಚುಮೆಚ್ಚಿನ ಬಟ್ಟೆಯಾದ ಖಾದಿಯು ನಮ್ಮ ಭಾರತದ ಸಂಸ್ಕೃತಿಯ ಅಸ್ಮಿತೆಯ ಸಂಕೇತವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ಹೇಳಿದರು. ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ಜಿಲ್ಲಾ ರಂಗಮಂದಿರದಲ್ಲಿ ನಡೆದ ಖಾದಿ ಉತ್ಸವ-2022 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗಾಂಧೀಜಿಯವರು ಕಂಡ ಗ್ರಾಮ ಸ್ವರಾಜ್ಯದ ಕನಸಿನ ಹಿಂದೆ ಖಾದಿ ಅಸ್ತಿತ್ವದ ಆಸೆಯು […]

Youth Blood Donation: ಯುವಕರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ ಜೀವ ಉಳಿಸಲು ನೆರವಾಗಬೇಕು- ರವಿಕುಮಾರ ಚವ್ಹಾಣ

ವಿಜಯಪುರ: ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಸಂಕಷ್ಟದಲ್ಲಿರುವ ರೋಗಿಗಳ ಜೀವ ಉಳಿಸಲು ನೆರವಾಗಬೇಕು ಎಂದು ಜಗದಂಬಾ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ರವಿಕುಮಾರ ಚವ್ಹಾಣ ಹೇಳಿದರು. ಅವರು, ಸಿಂದಗಿ ತಾಲೂಕಿನ ತಾಂಬಾ ಗ್ರಾಮದಲ್ಲಿ ನಾಡದೇವಿಯ 51ನೇ ವರ್ಷದ ನವರಾತ್ರಿ ಉತ್ಸವದ ಅಂಗವಾಗಿ ವಿಜಯಪುರದ ಶಿವಗಿರಿ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತಧಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ರಕ್ತದಾನದಿಂದ ಆರೋಗ್ಯದ ಮೇಲೆ ದುಷ್ವರಿಣಾಮ ಉಂಟಾಗುತ್ತದೆ ಎಂಬ ತಪ್ಪು ಕಲ್ಪನೆಯಿದೆ.  ಇದನ್ನು ತೊಲಗಿಸಲು ಆರೋಗ್ಯವಂತ […]

Blood Camp: ರಕ್ತದಾನದಿಂದ ಶೇ. 88ರಷ್ಟು ಹೃದಯಾಘಾತದ ಸಾಧ್ಯತೆಯನ್ನು ತಡೆಯಬಹುದು- ಡಾ. ಎಚ್. ಶಿವಕುಮಾರ

ವಿಜಯಪುರ: ರಕ್ತದಾನ ಮಾಡುವ ಮೂಲಕ ಶೇ. 88 ರಷ್ಟು ಹೃದಯಾಘಾತ ಸಂಭವಿಸುವುದನ್ನು ತಡೆಯಬಹುದು ಎಂದು ಬಿ ಎಲ್ ಡಿ ಈ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಔಷಧ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಫ್ರಾರ್ಮಾಕಾಲಜಿ ವಿಭಾಗದ ಮುಖ್ಯಸ್ಥ ಡಾ. ಎಚ್. ಶಿವಕುಮಾರ ಹೇಳಿದ್ದಾರೆ. ಇಂದು ಕಾಲೇಜಿನಲ್ಲಿ ನಡೆದ ಮಹಾರಕ್ತದಾನ ಶಿಬಿರದಲ್ಲಿ ಮಾತನಾಡಿದ ಅವರು, ರಕ್ತದಾನದಿಂದ ದೊರೆಯುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು. ರಕ್ತದಾನ ಮಹಾದಾನ. ಇದರಿಂದ ರಕ್ತದಾನಿಗಳಿಗೆ ಮತ್ತು ರಕ್ತದ ಅಗತ್ಯವಿರುವ ರೋಗಿಗಳಿಗೆ ಇಬ್ಬರಿಗೂ ಪ್ರಯೋಜನವಾಗುತ್ತದೆ ಎಂದು […]

VDCC Bank 44th Branch: ರಾಜ್ಯದ ಪ್ರತಿಷ್ಠಿತ ಬ್ಯಾಂಕಿನ‌ 44ನೇ ಶಾಖೆ ನಾಗಠಾಣದಲ್ಲಿ ಕಾರ್ಯಾರಂಭ

ವಿಜಯಪುರ: ರಾಜ್ಯದ ಪ್ರತಿಷ್ಠಿತ ವಿಜಯಪುರ ಡಿಸಿಸಿ ಬ್ಯಾಂಕಿನ 44 ನೇ ಶಾಖೆ ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಕಾರ್ಯಾರಂಭ ಮಾಡಿದೆ. ನಾಗಠಾಣ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ರಾಜಶೇಖರ ಬಿ. ಗುಡದಿನ್ನಿ ಉದ್ಘಾಟಿಸಿದರು ಠೇವಣಿದಾರರಿಗೆ ಠೇವಣಿ ಪತ್ರ ನೀಡುವುದರೊಂದಿಗೆ ಹೊಸ ಶಾಖೆಯ ವ್ಯವಹಾರಕ್ಕೆ ಚಾಲನೆ ನೀಡಿದ ಅವದು, ರೈತರು ಮತ್ತು ಗ್ರಾಮಸ್ಥರಿಗೆ ಬ್ಯಾಂಕಿಂಗ್ ಸೇವೆ ನೀಡುವುದರೊಂದಿಗೆ ಕೃಷಿ ಚಟುವಟಿಕೆಗಳಿಗೆ ಸ್ಥಳೀಯವಾಗಿ ಆರ್ಥಿಕ ನೆರವು ನೀಡುವಲ್ಲಿ ನಾಗಠಾಣ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರ ಬಹುದಿನದ ಬೇಡಿಕೆಯನ್ನು ಬ್ಯಾಂಕಿನ ಅಧ್ಯಕ್ಷ […]

Cleanliness CEO: ಸ್ವಚ್ಛತಾ ಹಿ ಸೇವಾ ಆಂದೋಲನಕ್ಕೆ ಸ್ವತ ಕಸಗೂಡಿಸಿ ಚಾಲನೆ ನೀಡಿದ ಜಿ. ಪಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ಕೊಲ್ಹಾರ ತಾಲೂಕಿನ ಮಸೂತಿ ಗ್ರಾಮದಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನಕ್ಕೆ ಜಿ. ಪಂ. ಸಿಇಓ ರಾಹುಲ ಶಿಂಧೆ ಸ್ವತಃ ಕಸಬರಿಗೆ ಹಿಡಿದು ಚಾಲನೆ ನೀಡಿದರು.  ಇದರಿಂದ ಪ್ರೇರೇಪಣೆಗೊಂಡ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸರ್ವ ಸದಸ್ಯರು ಹಾಗೂ ಸ್ವಚ್ಛತಾಗಾರರು ಸ್ವಚ್ಛತೆ ಕಾರ್ಯದಲ್ಲಿ ತೊಡಗಿಸಿಕೊಂಡು ಗಮನ ಸೆಳೆದರು.  ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಪ್ರತಿ ಗ್ರಾಮಗಳಲ್ಲಿ ಸಂಪೂರ್ಣ ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಪ್ರತಿ ವರ್ಷ ಸ್ವಚ್ಛತಾ ಹಿ ಸೇವಾ ಆಂದೋಲನ ಕಾರ್ಯಕ್ರಮ […]

PU Collage: ಐದು ವರ್ಷಗಳ ಹೋರಾಟ- 2019ರಲ್ಲಿ ರಕ್ತದಲ್ಲಿ ಪತ್ರ ಬರೆದ ಯುವಕ- ಕೊನೆಗೂ ನಾಲತವಾಡಕ್ಕೆ ಪಿಯು ಕಾಲೇಜು ಮಂಜೂರು

ವಿಜಯಪುರ: ಈ ಯುವಕ 2017ರಲ್ಲಿ ಅಂದರೆ ಕಳೆದ ಐದು ವರ್ಷಗಳಿಂದ ತನ್ನೂರಿಗೆ ಪಿಯು ಕಾಲೇಜು ಮಂಜೂರು ಮಾಡುವಂತೆ ಆಗ್ರಹಿಸಿ ಹೋರಾಟ ನಡೆಸಿದ್ದ.  ಶಿಕ್ಷಣ ಪ್ರೇಮಿಯಾಗಿರುವ ಯುವಕ ತನ್ನ ಊರಿನ ವಿದ್ಯಾರ್ಥಿಗಳು ಕಾಲೇಜು ಶಿಕ್ಷಣಕ್ಕಾಗಿ ಬೇರೆ ಊರಿಗೆ ಅಲೆದಾಡುವುದನ್ನು ಕಂಡು ಏನಾದರೂ ಮಾಡಿ ಕಾಲೇಜು ಇಲ್ಲ ಎಂಬ ತಾಪತ್ರಯವನ್ನು ಬಗೆಹರಿಸಲು ಕಂಕಣಬದ್ಧವಾಗಿ ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದ.  ಈಗ ಈ ಯುವಕನ ಹೋರಾಟಕ್ಕೆ ಫಲ ಸಿಕ್ಕಿದೆ. ಈ ಯುವಕನ ಹೆಸರು ವಿಜಯರಂಜನ ಜೋಶಿ.  ಬಸವ ನಾಡು ವಿಜಯಪುರ ಜಿಲ್ಲೆಯ […]

Outdated Buses: ವಿಜಯಪುರ ಜಿಲ್ಲೆಯಲ್ಲಿ ಅವಧಿ ಮೀರಿದ 281 ಸರಕಾರಿ ಬಸ್ಸುಗಳ‌ ಸಂಚಾರ ಸಂಚಾರ- ಯಶವಂತರಾಯಗೌಡ ಪಾಟೀಲ ಪ್ರಶ್ನೆಗೆ ಸರಕಾರ ಮಾಹಿತಿ

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ 281 ಸರಕಾರಿ ಬಸ್ಸುಗಳು ನಿಗದಿತ ಅವಧಿ ಮೀರಿದ್ದರೂ ಸಂಚಾರ ನಡೆಸುತ್ತಿವೆ ಎಂದು ಸರಕಾರ ಮಾಹಿತಿ ನೀಡಿದೆ.   ಇಂಡಿ ಕಾಂಗ್ರೆಸ್ ಶಾಸಕ‌ ಯಶವಂತರಾಯಗೌಡ ಪಾಟೀಲ‌ ಅವರು ವಿಧಾನ ಸಭೆಯಲ್ಲಿ ಕೇಳಿರುವ ಪ್ರಶ್ನೆಗೆ ಸಾರಿಗೆ ಮತ್ತು ಪರಿಶಿಷ್ಠ ಪಂಗಡಗಳ‌ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಲಿಖಿತ ಉತ್ತರದಲ್ಲಿ ಈ ಮಾಹಿತಿ‌ ನೀಡಿದ್ದಾರೆ. ಶಾಸಕ ಯಶವಂತರಾಯಗೌಡ ಪಾಟೀಲ‌ ಅವರು, ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯಿಂದ ಕಳೆದ ಮೂರು ವರ್ಷಗಳಲ್ಲಿ ಹೊಸದಾಗಿ ಎಷ್ಟು ಬಸ್ಸುಗಳನ್ನು […]

CEO Visits: ಬಸವನ ಬಾಗೇವಾಡಿ ತಾಲೂಕಿನ ನಾನಾ ಗ್ರಾಮಗಳಿಗೆ ರಾಹುಲ್ ಶಿಂಧೆ ಭೇಟಿ- ಕಾಮಗಾರಿ ಪರಿಶೀಲನೆ

ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ ಶಿಂಧೆ ಬಸವನ ಬಾಗೇವಾಡಿ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.  ಬಸವನ ಬಾಗೇವಾಡಿ ತಾಲೂಕಿನ ಯರನಾಳ, ಹುಣಶ್ಯಾಳ ಪಿ.ಬಿ ಹಾಗೂ ಹೂವಿನ ಹಿಪ್ಪರಗಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು. ಯರನಾಳ ಗ್ರಾ. ಪಂ. ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನಿರ್ಮಾಣವಾಗಿರುವ ತೆರೆದ ಬಾವಿ ಕಾಮಗಾರಿಯನ್ನು ವೀಕ್ಷಿಸಿದರು.  ಇದೇ ವೇಳೆ ಯರನಾಳ ಹಾಗೂ ಹುಣಶ್ಯಾಳ ಪಿ.ಬಿ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಜಲಜೀವನ […]

Award Falicitatiohn: ಚಟುವಟಿಕೆಯಿಂದ ಸೇವೆ ಮಾಡಿದಾಗ ಮಾತ್ರ ವೃತ್ತಿಯಲ್ಲಿ ಶ್ರೇಷ್ಠತೆ ಸಾಧ್ಯ- ಪಿಯುಸಿ ಡಿಡಿ ಎಸ್. ಎಸ್. ಬಗಲಿ

ವಿಜಯಪುರ: ಮನುಷ್ಯ ಸೋಮಾರಿಯಾಗದೆ ಚಟುವಟಿಕೆಗಳನ್ನು ಮಾಡುತ್ತಿದ್ದರೆ ಹೊಸ ಆವಿಷ್ಕಾರಗಳನ್ನು ಮಾಡಬಲ್ಲ ಹಾಗೂ ತನ್ನ ವೃತ್ತಿಯಲ್ಲಿ ಶ್ರೇಷ್ಠತೆಯನ್ನು ಸಾಧಿಸಬಹುದು ಎಂದು ವಿಜಯಪುರ ಪಿಯು ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್. ಎನ್. ಬಗಲಿ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಬಾಲಿಕೆಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಶಾರದಾ ಸಭಾಭವನದಲ್ಲಿ ನಡೆದ 2022-23 ನೇ ಶೈಕ್ಷಣಿಕ ವರ್ಷದ ಅತ್ಯುತ್ತಮ ಉಪನ್ಯಾಸಕ ರಾಜ್ಯ ಪ್ರಶಸ್ತಿ ಪಡೆದ ಪ್ರೊ. ಎಂ. ಬಿ. ರಜಪೂತ ಅವರ ಸನ್ಮಾನ ಸಮಾರಂಭದಲ್ಲಿಅವರು ಮಾತನಾಡಿದರು. ಪ್ರಶಸ್ತಿಗಾಗಿ ಕಾರ್ಯ ನಿರ್ವಹಿಸದೆ ತನ್ನ […]

Foundation Day: ಶಾಂತಿನಿಕೇತನ ಶಿಕ್ಷಣ ಸಂಸ್ಥೆಯ 21ನೇ ಸಂಸ್ಥಾಪನೆ ದಿನ ಆಚರಣೆ

ವಿಜಯಪುರ: ನಗರದ ಪ್ರತಿಷ್ಠಿತ ಶಾಂತಿನಿಕೇತನ ಶಿಕ್ಷಣ ಸಂಸ್ಥೆಯ 21ನೇ ಸಂಸ್ಥಾಪನೆ ದಿನವನ್ನು ಆಶ್ರಮ ರಸ್ತೆಯಲ್ಲಿರುವ ಶಾಲೆಯ ಆವರಣದಲ್ಲಿ ಆಚರಿಸಲಾಯಿತು.  ಕಾರ್ಯಕ್ರಮಕ್ಕೆ ಸಂಸ್ಥೆಯ ಅಧ್ಯಕ್ಷೆ ಶೀಲಾ ಬಿರಾದಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕಳೆದ 21 ವರ್ಷಗಳಲ್ಲಿ ಶಾಂತಿನಿಕೇತನ ಶಿಕ್ಷಣ ಸಂಸ್ಥೆ ಜಿಲ್ಲೆಯಲ್ಲಿಯೇ ಅತ್ಯುತ್ತಮ ಶಿಕ್ಷಣ ಸಂಸ್ಥೆಯಾಗಿ ಬೆಳೆದಿದೆ.  ಈ ಶಾಲೆಯಲ್ಲಿ ಓದಿರುವ ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲಿ ಉನ್ನತವಾದ ಸ್ಥಾನಮಾನ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.  ಇದಕ್ಕೆ ಈ ಶಾಲೆಯಲ್ಲಿ ಕಲಿಸಿದ ಗುರುಗಳು, ಓದಿದ ವಿದ್ಯಾರ್ಥಿಗಳು ಮತ್ತು […]