Children Balekundri: ಮಕ್ಕಳನ್ನು ಹಣ, ಅಂಕ ಗಳಿಸುವ ಯಂತ್ರವನ್ನಾಗಿ ಮಾಡಬೇಡಿ- ಹೃದ್ರೋಗ ಖ್ಯಾತ ವೈದ್ಯೆ ಡಾ. ವಿಜಯಲಕ್ಷ್ಮಿ ಬಾಳೆಕುಂದ್ರಿ

ವಿಜಯಪುರ: ಪೋಷಕರು ತಮ್ಮ ಮಕ್ಕಳನ್ನು ಕೇವಲ ಹಣ ಮತ್ತು ಅಂಕ ಗಳಿಕೆಯ ಯಂತ್ರಗಳನ್ನಾಗಿ ಮಾಡಬೇಡಿ ಎಂದು ಬೆಂಗಳೂರಿನ ಜಯದೇವ ಹೃದ್ರೋಗ ಸಂಶೋಧನೆ ಸಂಸ್ಥೆಯ ಪ್ರೊಫೆಸರ್ ಎಮೆರಿಟಸ್ ವಿಜಯಲಕ್ಷ್ಮಿ ಬಾಳೆಕುಂದ್ರಿ ಕರೆ ನೀಡಿದ್ದಾರೆ. ವಿಜಯಪುರ ನಗರದಲ್ಲಿ ಬಿ ಎಲ್ ಡಿ ಇ ಸಂಸ್ಥೆಯ ಎಸ್. ಬಿ. ಕಲಾ ಮತ್ತು ಕೆ. ಸಿ. ಪಿ. ವಿಜ್ಞಾನ ಮಹಾವಿದ್ಯಾಲಯದ ಅಮೃದ ಮಹೋತ್ಸವ ವರ್ಷಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಾಲಕರು ತಮ್ಮ ಮಕ್ಕಳನ್ನು ಮಾರ್ಕ್ಸ್, ಮೊನಿ ಪ್ರೊಡ್ಯೂಸಿಂಗ್ ಮಶೀನ್ ಗಳನ್ನಾಗಿ ಮಾಡಬೇಡಿ.  ಸ್ಪರ್ಧಾತ್ಮಕತೆ […]

Umesh Katti Visit: ಡೊಣಿ ಪ್ರವಾಹ- ಎರಡನೇ ದಿನವೂ ನಾನಾ ಪ್ರದೇಶಗಳಿಗೆ ಸಚಿವ ಉಮೇಶ ಕತ್ತಿ ಭೇಟಿ, ಪರಿಶೀಲನೆ

ವಿಜಯಪುರ: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಬಾರಿ ಮಳೆಯಿಂದಾಗಿ ಡೋಣಿ ನದಿಯು ತುಂಬಿ ಹರಿದು ಅವಾಂತರ ಸೃಷ್ಟಿಸಿದೆ. ಈ ನದಿಪಾತ್ರವುದ್ದಕ್ಕೂ ಉಂಟಾದ ಅಪಾರ ಹಾನಿ ಪರಿಶೀಲನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಅವರು ಎರಡನೆ ದಿನವೂ ಮುಂದುವರೆಸಿದರು. ಬೆಳಿಗ್ಗೆ ವಿಜಯಪುರದಿಂದ ಪ್ರವಾಸ ಆರಂಭಿಸಿದ ಸಚಿವರು ದೇವರ ಹಿಪ್ಪರಗಿ, ತಾಳಿಕೋಟಿ ಮತ್ತು ಮುದ್ದೇಬಿಹಾಳ ತಾಲೂಕುಗಳಲ್ಲಿ ಸಂಚರಿಸಿ ಬೆಳೆ ಹಾನಿ, ಮನೆ ಹಾನಿಯನ್ನು ಖುದ್ದು ವೀಕ್ಷಣೆ ಮಾಡಿದರು. ಶಾಸಕರಾದ ಸೋಮನಗೌಡ ಬಿ. ಪಾಟೀಲ ಸಾಸನೂರ ಅವರೊಂದಿಗೆ ಮೊದಲಿಗೆ ಸಚಿವರು, ದೇವರ […]

Flood Katti: ದೋಣಿ ನದಿ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ಹಾನಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ

ವಿಜಯಪುರ: ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಉಮೇಶ ಕತ್ತಿ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಅತಿವೃಷ್ಟಿಯಿಂದಾದ ಹಾನಿಯನ್ನು ಖುದ್ದು ಪರಿಶೀಲಿಸಿದರು. ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಸುನೀಲಗೌಡ ಬಿ.ಪಾಟೀಲ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷರಾದ ವಿಜುಗೌಡ ಎಸ್. ಪಾಟೀಲ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ, ಎಸ್ಪಿ ಎಚ್. ಡಿ. ಆನಂದಕುಮಾರ, ಆಹಾರ ಇಲಾಖೆ, ತೋಟಗಾರಿಕಾ ಇಲಾಖೆ […]

Gold Cash Car Theft: ಕಳ್ಳರ ಚಲನವಲನ ಸಿಸಿಟಿವಿಯಲ್ಲಿ ಸೆರೆ

ವಿಜಯಪುರ ಗುಮ್ಮಟನಗರಿ ವಿಜಯಪುರದಲ್ಲಿ ಕಳ್ಳರು ಖತರ್ನಾಕ್ ಕಳ್ಳತನ ನಡೆಸಿದ್ದಾರೆ. ಕೇವಲ ನಗನಾಣ್ಯ ದೋಚಿದ್ದಷ್ಟೇ ಅಲ್ಲದೆ ಕಾರನ್ನೂ ಕೂಡ ಕದ್ದು ಪರಾರಿಯಾಗಿದ್ದಾರೆ. ವಿಜಯಪುರ ನಗರದ ಮಲ್ಲಿಕಾರ್ಜುನ ನಗರದಲ್ಲಿ ಹಾಗೂ ಶ್ರೀನಗರದಲ್ಲಿ ಎರಡು ಮನೆಗಳಲ್ಲಿ ಕಳ್ಳತನ ನಡೆದಿದೆ. ನಸುಕಿನ ಜಾವ ಮನೆಗೆ ನುಗ್ಗಿರುವ ಕಳ್ಳರು ತಮ್ಮ ಕೈಚಳಕ ತೋರಿಸಿ ಪರಾರಿಯಾಗಿದ್ದಾರೆ. ಮೊದಲ ಘಟನೆಯಲ್ಲಿ ವಿಜಯಪುರ ನಗರದ ಮಲ್ಲಿಕಾರ್ಜುನ ನಗರದಲ್ಲಿರುವ ಎಂಜಿನಿಯರ್ ಮಲ್ಲನಗೌಡ ಬಿರಾದಾರ ಎಂಬುವರ ಮನೆಯಲ್ಲಿ ಬಾರಿ ಕಳ್ಳತನ ನಡೆಸಿದ್ದಾರೆ. ಇವರ ಮನೆಯಲ್ಲಿ ಅವರ ಪತ್ನಿ ಗೀತಾ ಬಿರಾದಾರ ಮಾತ್ರ […]

Kosi River Model: ಬಿಹಾರದಲ್ಲಿ ಕೋಶಿ ನದಿ ಪ್ರವಾಹ ತಡೆಗೆ ಕೇಂದ್ರ ಸರಕಾರ ಅನುಸರಿಸಿದ ಮಾದರಿ ಡೋಣಿ ನದಿ ವ್ಯಾಪ್ತಿಯಲ್ಲಿ ಅಗತ್ಯವಿದೆ- ಎಂ. ಬಿ. ಪಾಟೀಲ

ವಿಜಯಪುರ: ಬಿಹಾರದಲ್ಲಿ ಕೋಶಿ ನದಿ ಪ್ರವಾಹ ತಡೆಗೆ ಕೇಂದ್ರ ಸರಕಾರ ಅನುಸರಿಸಿದ ಮಾದರಿಯನ್ನು ಡೋಣಿ ನದಿ ವ್ಯಾಪ್ತಿಯಲ್ಲಿ ಜಾರಿಗೆ ತರುವ ಅಗತ್ಯ ಇದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಬಬಲೇಶ್ವರ ಶಾಸಕ ಎಂ. ಬಿ. ಪಾಟೀಲ ಹೇಳಿದರು. ವಿಜಯಪುರ ಜಿಲ್ಲೆಯ ಡೋಣಿ ನದಿ ಪ್ರವಾಹ ಪೀಡಿತ ಬಬಲೇಶ್ವರ ಮತಕ್ಷೇತ್ರ ವ್ಯಾಪ್ತಿಯ ಹರನಾಳ, ದಾಶ್ಯಾಳ, ಧನ್ಯಾಳ, ಕಣಮುಚನಾಳ, ಸಾರವಾಡ, ಕಾಖಂಡಕಿ, ತೋನಶ್ಯಾಳ, ಹೊನಗನಹಳ್ಳಿ ಗ್ರಾಮಗಳಿಗೆ ಅವರು ಭೇಟಿ ನೀಡಿ ಹಾನಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಕೋಟ್ಯಾಳ ಗ್ರಾಮದಲ್ಲಿ […]

Flood Visit: ಡೋಣಿ ನದಿ ಪ್ರವಾಹ: ಎಂ. ಬಿ. ಪಾಟೀಲ ಸೂಚನೆ- ನಾನಾ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ

ವಿಜಯಪುರ: ಬಬಲೇಶ್ವರ ಕ್ಷೇತ್ರದ ನಾನಾ ಗ್ರಾಮಗಳಲ್ಲಿ ಡೋಣಿ ನದಿ ಪ್ರವಾಹ ಪೀಡಿತ ಪ್ರದೇಶಗಳ ಸಮೀಕ್ಷೆ ಮಾಡಿ, ಕೂಡಲೇ ಹಾನಿಗೊಳಗಾದವರಿಗೆ ಅನ್ಯಾಯವಾಗದಂತೆ ಸೂಕ್ತ ಪರಿಹಾರ ದೊರಕುವಂತೆ ನೋಡಿಕೊಳ್ಳಿ ಎಂದು ಬಬಲೇಶ್ವರ ಶಾಸಕ ಎಂ. ಬಿ. ಪಾಟೀಲ‌ ಅವರು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರಿಗೆ ಸೂಚಿಸೆ ನೀಡಿದ್ದಾರೆ. ಎಂ. ಬಿ. ಪಾಟೀಲ‌ ಅವರ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು‌ ಡೋಣಿ ನದಿ ಪ್ರವಾಹದಿಂದ ಹಾನಿಗೊಳಗಾದ ಕೋಟ್ಯಾಳ, ಧನ್ಯಾಳ, ದಾಶ್ಯಾಳ ಹಾಗೂ ಸಾರವಾಡ ಗ್ರಾಮಗಳಿಗೆ ತೆರಳಿ, ವಸ್ತುಸ್ಥಿತಿ ಅವಲೋಕಿಸಿದರು. ಅಲ್ಲದೇ, […]

Heavy Rain: ಕಳ್ಳಕವಟಗಿ ಸಂಗಮನಾಥ ದೇವಸ್ಥಾನ ಜಲಾವೃತ- ಉಕ್ಕಿ ಹರಿಯುತ್ತಿರುವ ಡೋಣಿ ನದಿ

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲಾಧ್ಯಂತ ಕಳೆದ ನಾಲ್ಕೈದು ದಿನಗಳಿಂದ ಆಗಾಗ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮಲೆನಾಡಿನ ವಾತಾವರಣ ಸೃಷ್ಟಿಯಾಗಿದೆ. ಹಳ್ಳಕೊಳ್ಳಗಳು ಮೈತುಂಬಿ ಹರಿಯುತ್ತಿವೆ. ಕೆಲವು ಕಡೆಗಳಲ್ಲಿ ಮನೆಗಳಿಗೆ, ನಾನಾ ಕಟ್ಟಡಗಳಿಗೆ ನೀರು ನುಗ್ಗಿದೆ. ವಿಜಯಪುರ ಜಿಲ್ಲೆಯ ಹಲವಾರು ಕಡೆ ಜಮೀನುಗಳಲ್ಲಿ ಅಪಾರ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದ್ದು, ಹಲವು ಕಡೆಗಳಲ್ಲಿ ಬೆಳೆಯೂ ಹಾನಿಯಾಗಿದೆ. ಮುಂಗಾರು ಸರಿಯಾಗಿ ಸುರಿಯದ ಕಾರಣ ಕಂಗಾಲಾಗಿದ್ದ ರೈತರ ಮುಖದಲ್ಲಿ ಈಗ ಸುರಿಯುತ್ತಿರುವ ಧಾರಾಕಾರ ಮಳೆ ಸಂತಸದ ಉಂಟು ಮಾಡಿದೆ.     ತಿಕೋಟಾ ತಾಲೂಕಿನಲ್ಲಿ […]

Reservation Dharani: ಬೆಂಗಳೂರಿನಲ್ಲಿ ಸತ್ಯಪ್ರತಿಪಾದನ ಹೋರಾಟ- ಸರದಿ ಸತ್ಯಾಗ್ರಹದಲ್ಲಿ ಬಸವ ನಾಡಿನ ಜಂಗಮ ಸಮಾಜದ ಬಂಧುಗಳು ಭಾಗಿ

ವಿಜಯಪುರ: ಬೇಡ ಜಂಗಮ ಮೀಸಲಾತಿ ಸರ್ಟಿಫಿಕೆಟ್ ನೀಡುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ನ್ಯಾಯವಾದಿ ಬಿ. ಡಿ. ಹಿರೇಮಠ ನೇತೃತ್ವದಲ್ಲಿ ನಡೆಯುತ್ತಿರುವ ಸರದಿ ಸತ್ಯಾಗ್ರಹದಲ್ಲಿ ವಿಜಯಪುರ ಜಿಲ್ಲೆಯ ಜಂಗಮ ಬಂಧುಗಳು ಪಾಲ್ಗೋಂಡು ಬೆಂಬಲ ಸೂಚಿಸಿದ್ದಾರೆ.  ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರುವ ಸತ್ಯಪ್ರತಿಪಾದನೆ ಸತ್ಯಾಗ್ರಹದಲ್ಲಿ ಪಾಲ್ಗೋಂಡ ವಿಜಯಪುರ ಜಿಲ್ಲೆಯ ಸಾವಿರಕ್ಕೂ ಹೆಚ್ಚು ಜನರು ಬೆಂಬಲ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನ್ಯಾಯವಾದಿ ಬಿ. ಡಿ. ಹಿರೇಮಠ ಪರಿಶಿಷ್ಟ ಜಾತಿಯ 101 ಜಾತಿಗಳಲ್ಲಿ 92 ಜಾತಿಗಳು ವಂಚಿತವಾಗಿದ್ದು, ಈ ಪಟ್ಟಿಯಲ್ಲಿ 19ನೇ ಸ್ಥಾನದಲ್ಲಿರುವ […]

Har Ghar Tiranga: ವಿಜಯಪುರ ನಗರದಲ್ಲಿ ಧ್ವಜಗಳ ಮಾರಾಟ ಕೇಂದ್ರಕ್ಕೆ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಚಾಲನೆ

ವಿಜಯಪುರ: ಹರ್ ಘರ್ ತಿರಂಗಾ ಅಭಿಯಾನ ಹಿನ್ನೆಲೆಯಲ್ಲಿ ವಿಜಯಪುರ ನಗರದ ಮನೆಮನೆಗಳಿಗೆ ರಾಷ್ಟ್ರಧ್ವಜಗಳನ್ನು ತಲುಪಿಸುವ ಉದ್ದೇಶದಿಂದ ವಿಜಯಪುರ ಮಹಾನಗರ ಪಾಲಿಕೆಯಿಂದ ಧ್ವಜ ಮಾರಾಟ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಚಾಲನೆ ನೀಡಿದರು.  ನಗರದ ಗಾಂಧಿಚೌಕ್ ಬಳಿ ಇರುವ ಮಹಾನಗರ ಪಾಲಿಕೆಯ ವಾಣಿಜ್ಯ ಸಂಕೀರ್ಣ ಮಳಿಗೆಗಳ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆಟೋ ಚಾಲಕರಿಗೆ, ವ್ಯಾಪಾರಸ್ಥರಿಗೆ, ವಿತರಕರಿಗೆ, ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ರಾಷ್ಟ್ರಧ್ವಜಗಳನ್ನು ನೀಡಿದರು.  ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕೇಂದ್ರ […]

Talents Award: ಬಹುಜನ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಾ ಪುರಸ್ಕಾರ, ಕೃತಿ ಬಿಡುಗಡೆ ಸಮಾರಂಭ

ವಿಜಯಪುರ: ಬಹುಜನ ದಲಿತ ಸಂಘರ್ಷ ಸಮಿತಿ ವತಿಯಿಂದ ಬುದ್ದ, ಬಸವ, ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಡಾ. ಸಂಜೀವಕುಮಾರ ಪೋತೆ ಅವರು ರಚಿಸಿದ ಬುದ್ದನ ತಾತ್ವಿಕ ನಿಲುವುಗಳು ಕೃತಿ ಬಿಡುಗಡೆ ಸಮಾರಂಭ ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ನಡೆಯಿತು.  ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿದರು.  ಬಳಿಕ ಮತಾನಾಡಿದ ಅವರು, ಬಹುಜನ ದಲಿತ ಸಂಘರ್ಷ ವತಿಯಿಂದ […]