Students Exhibition: ಜು. 16ರ ರಂದು ಬಿ ಎಲ್ ಡಿ ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಒಪನ್ ಡೆ ಪ್ರಾಜೆಕ್ಟ್ ಎಕ್ಸಿಬಿಷನ್- ಡಾ. ವಿ. ಜಿ. ಸಂಗಮ

ವಿಜಯಪುರ: ನಗರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ. ಪ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜು. 16 ರಂದು ಒಪನ್ ಡೆ ಪ್ರಾಜೆಕ್ಟ್ ಎಕ್ಸಿಬಿಷನ್ ನಡೆಯಲಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ವಿ. ಜಿ. ಸಂಗಮ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಕಾಲೇಜಿನ ನಾನಾ ವಿಷಯಗಳಲ್ಲಿ ಅಂತಿಮ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಸೃಜನಶಿಲತೆ ಮತ್ತು ನಾವಿನ್ಯತೆಯ ಅವಿಷ್ಕಾರದೊಂದಿಗೆ ಸಿದ್ಧಪಡಿಸಲಾದ ಪ್ರಾಜೆಕ್ಟ್ ಗಳ ಪ್ರಾತ್ಯಕ್ಷಿಕೆ ನಡೆಯಲಿದ್ದು, ಈ […]

Tiranga Programme: ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ: ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸಲಹೆ

ವಿಜಯಪುರ: ಹರ್ ಘರ್ ತಿರಂಗಾ ಅಭಿಯಾನದ ಪೂರ್ವಭಾವಿ ಸಿದ್ಧತಾ ಸಭೆಯು ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಸ್ವಾತಂತ್ರದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ  ಈ ಅಭಿಯಾನದಲ್ಲಿ ರಾಜ್ಯ ಸರ್ಕಾರದ ಸರ್ಕಾರಿ, ಅರೆ ಸರ್ಕಾರಿ, ನಿಗಮ ಮಂಡಳಿಗಳು, ಸಾರ್ವಜನಿಕ ಉದ್ಯಮಗಳು, ಸ್ವಸಹಾಯ ಗುಂಪುಗಳು, ನಾಗರಿಕ ಸಂಸ್ಥೆಗಳು, ಸಾರ್ವಜನಿಕರು, ಶಾಲಾ-ಕಾಲೇಜು ಮಕ್ಕಳು, ಇತರೆ ಎಲ್ಲಾ ಸಿಬ್ಬಂದಿ ಹಾಗೂ ಅವರ ಕುಟುಂಬ ವರ್ಗದವರು ಕ್ರಿಯಾಶೀಲವಾಗಿ  ಭಾಗವಹಿಸುವಂತೆ ವಹಿಸಬೇಕಾದ ಕ್ರಮಗಳ ಬಗ್ಗೆ […]

DC Tahasildar Office: ಪ್ರತಿ ಮಂಗಳವಾರ ಜಿಲ್ಲೆಯ ಒಂದು ತಾಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಭೇಟಿ ಕಾರ್ಯಕ್ರಮ- ವಿಜಯಪುರ ತಹಸೀಲ್ದಾರ ಕಚೇರಿಗೆ ಭೇಟಿ

ವಿಜಯಪುರ: ಪ್ರತಿ ಮಂಗಳವಾರ ಜಿಲ್ಲೆಯ ಒಂದು ತಾಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಭೇಟಿ ಕಂದಾಯ ಇಲಾಖೆಯ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ವಿಜಯಪುರ ತಹಸೀಲ್ದಾರ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಅವರು, ಬಳಿಕ ತಹಸೀಲ್ದಾರ ಕಚೇರಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವೈಖರಿಯ ಬಗ್ಗೆ ಮಾಹಿತಿ ಪಡೆದು ಮಾರ್ಗದರ್ಶನ ಮಾಡಿದರು.  ಸರಕಾರಿ ಸೌಲಭ್ಯಗಳನ್ನು ಸುಲಭವಾಗಿ ಜನರು ಪಡೆಯುವಂತಾಗಬೇಕು ಎನ್ನುವ ನಿಟ್ಟಿನಲ್ಲಿ ಪ್ರಾರಂಭಿಸಿದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ […]

Rain DC Visit: ಕೃಷ್ಣಾ ನದಿ ನೀರಿನಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ವಿಜಯಪುರ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಭೇಟಿ, ಪರಿಶೀಲನೆ

ವಿಜಯಪುರ: ಜಿಲ್ಲೆಯಲ್ಲಿ ಮಳೆಯಿಲ್ಲದಿದ್ದರೂ ಮಹಾರಾಷ್ಟ್ರದಲ್ಲಿ ಸುರಿದ ಮಳೆಯಿಂದಾಗಿ ಪ್ರವಾಹ ಎದುರಿಸುತ್ತಿರುವ ಬಸವ ನಾಡು ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ನಾನಾ ಗ್ರಾಮಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮವರ ಮತ್ತು ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ವಿಜಯಪುರ ಜಿಲ್ಲೆಯಲ್ಲಿ ಮಳೆ ಸಮರ್ಪಕವಾಗಿಲ್ಲ.  ಆದರೆ, ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಆಲಮಟ್ಟಿಗೆ ನೀರನ ಒಳಹರಿವು ಹೆಚ್ಚಾಗಿದೆ.  ಹೀಗಾಗಿ ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಸಾಗರದಿಂದ ನೀರನ್ನು ಕೃಷ್ಣಾ ನದಿಗೆ ಹೊರ ಬಿಡಲಾಗುತ್ತಿದೆ.  ಈ […]

DC Rain: ತಹಸೀಲ್ದಾರರೊಂದಿಗೆ ವಿಜಯಪುರ ಡಿಸಿ ವಿಡಿಯೋ ಸಂವಾದ- ತೀವ್ರ ಮಳೆ, ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿರ್ದೇಶನ

ವಿಜಯಪುರ: ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣ ಕುರಿತಂತೆ ಚರ್ಚಿಸಲು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಜಿಲ್ಲೆಯ ನಾನಾ ತಹಸೀಲ್ದಾರಗಳ ಜೊತೆ ವಿಡಿಯೋ ಸಂವಾದ ನಡೆಸಿದರು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಸಭಾಂಗಣದಲ್ಲಿ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಮಳೆಯ ವಿವರ, ಭೀಮಾ ನದಿ ಪಾತ್ರದ ಸೊನ್ನ ಮತ್ತು ಉಜನಿ ಜಲಾಶಯಗಳ ಮತ್ತು ಕೃಷ್ಣಾ ನದಿ ಪಾತ್ರದ ಹಿಪ್ಪರಗಿ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳ ನೀರಿನ ಒಳ ಮತ್ತು ಹೊರ ಹರಿವಿನ ಕುರಿತು ಅವರು ಮಾಹಿತಿ […]

CEO Goshale: ಬುರಣಾಪುರಕ್ಕೆ ಜಿ. ಪಂ. ಸಿಇಓ ರಾಹುಲ್ ಶಿಂಧೆ ಭೇಟಿ, ಸರಕಾರಿ ಗೋಶಾಲೆ ಉದ್ಘಾಟನೆಯ ಸಿದ್ಧತೆ ಪರಿಶೀಲನೆ

ವಿಜಯಪುರ: ಪಶು ಸಂಗೋಪನೆ ಸಚಿವ ಪ್ರಭು ಬಿ. ಚವ್ಹಾಣ ಅವರು ಜು. 14 ರಂದು ಗುರುವಾರ ನಡೆಯುವ ಪಾಲಿಕ್ಲಿನಿಕ್ ನೂತನ ಕಟ್ಟಡದ ಉದ್ಘಾಟನೆ ಹಾಗೂ ಜಿಲ್ಲೆಗೊಂದು ಸರಕಾರಿ ಗೋಶಾಲೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೋಳ್ಳಲಿದ್ದಾರೆ.  ಈ ಹಿನ್ನೆಲೆಯಲ್ಲಿ ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಕಾರ್ಯಕ್ರಮದ ಸಿದ್ಧತೆಯನ್ನು ಪರಿಶೀಲಿಸಿದರು.  ವಿಜಯಪುರ ತಾಲೂಕಿನ ಐನಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬುರಣಾಪೂರ ಗ್ರಾಮದ ಸರಕಾರಿ ಗೋಶಾಲೆಗೆ ಭೇಟಿ ನೀಡಿದ ಅವರು, ಕಾರ್ಯಕ್ರಮದ ಬಗ್ಗೆ ಸಮಗ್ರ ಮಾಹಿತಿ ಪಡೆದರು.  […]

Bus MB Patil: ಬಬಲೇಶ್ವರ ಮತಕ್ಷೇತ್ರದ ನಾನಾ ಗ್ರಾಮಗಳಿಗೆ ಹೆಚ್ಚುವರಿ ಬಸ್ ಸೇವೆ ಆರಂಭ- ಎಂ. ಬಿ. ಪಾಟೀಲ

ವಿಜಯಪುರ: ಬಬಲೇಶ್ವರ ಮತಕ್ಷೇತ್ರದ ಶಿರಬೂರ, ಬಬಲಾದಿ, ಕೊಟಬಾಗಿ, ಹಂಚಿನಾಳ, ಮಂಗಳೂರು, ಮಮದಾಪುರ ಗ್ರಾಮಗಳಿಗೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ ಬಸ್ ಸೌಲಭ್ಯ ಒದಗಿಸಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು‌ ಶಾಸಕ‌ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ತಮ್ಮ‌ ಗ್ರಾಮಗಳಿಗೆ ಸೂಕ್ತ ಸಮಯಕ್ಕೆ ಬಸ್ ಸೌಲಭ್ಯ ಒದಗಿಸುವಂತೆ ಮತ್ತು ಕೆಲವು ಬಸ್ಸುಗಳ ಮಾರ್ಗ ಬದಲಾವಣೆ ಮಾಡುವಂತೆ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ತಮಗೆ ಮನವಿ ಮಾಡಿದ್ದರು.  ಅದರಂತೆ […]

Earthquake DC: ವಿಜಯಪುರ ಜಿಲ್ಲೆಯಲ್ಲಿ ಹಲವೆಡೆ ಭೂಕಂಪನ: ಭಯಭೀತರಾಗದಂತೆ ಸಾರ್ವಜನಿಕರಲ್ಲಿ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮನವಿ

ವಿಜಯಪುರ: ಜಿಲ್ಲೆಯ ಕನ್ನೂರ ಸೇರಿದಂತೆ ನಾನಾ ಕಡೆ ಬೆಳಿಗ್ಗೆ ಸಂಭವಿಸಿದ 4.4 ತೀವ್ರತೆಯ ಲಘು ಭೂಕಂಪನ ಕುರಿತು ಖಚಿತ ಮಾಹಿತಿ ಲಭ್ಯವಾಗಿದ್ದು, ಸಾರ್ವಜನಿಕರು ಭಯಪಡಬಾರದು ಎಂದು ಜಿಲ್ಲಾಧಿಕಾರಿ  ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ. ಭೂಕಂಪನದ ವಿಷಯ ತಿಳಿಯುತ್ತಿದ್ದಂತೆ ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರ ಬೆಂಗಳೂರಿನ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಭೂಕಂಪನ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದೆ. ವಿಜಯಪುರ ಮತ್ತು ಮಹಾರಾಷ್ಟ್ರ ಪ್ರದೇಶದ ಗಡಿ ಪ್ರದೇಶದ ವಿವಿಧೆಡೆ ಈ ಲಘು ಭೂಕಂಪನ ಸಂಭವಿಸಿದೆ. ಜುಲೈ 9ರಂದು ಬೆಳಗಿನ 6.22ರ ಸುಮಾರಿನ […]

Liquor MBP Warn: ಮಹಿಳೆಯರ ಅಳಲಿಗೆ ಸ್ಪಂದಿಸಿ ಅಬಕಾರಿ, ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಎಂ. ಬಿ. ಪಾಟೀಲ- ಯಾಕೆ ಗೊತ್ತಾ?

ವಿಜಯಪುರ: ಅಬಕಾರಿ ಮತ್ತು ಪೊಲೀಸ ಇಲಾಖೆ ಅಧಿಕಾರಿಗಳನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ತರಾಟೆಗೆ ತೆಗೆದುಕೊಂಡ ಘಟನೆ ವಿಜಯಪುರದಲ್ಲಿ ನಡೆದಿದೆ. ಬಬಲೇಶ್ವರ ತಾಲೂಕಿನ ಮದಗುಣಕಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟದಿಂದ ಸಮಸ್ಯೆಯಾಗುತ್ತಿದೆ. ಅಪ್ರಾಪ್ತ ಯುವಕರು ಕೂಡ ಮದ್ಯದ ದಾಸರಾಗುತ್ತಿದ್ದಾರೆ. ಈಗಾಗಲೇ ಕೆಲವು ಪುರುಷರು ಸಾವಿಗೀಡಾಗಿದ್ದಾರೆ. ಇದರಿಂದ ಕುಟುಂಬ ನಿರ್ವಹಣೆ ಜವಾಬ್ದಾರಿ ಮಹಿಳೆಯರಿಗೆ ಭಾರವಾಗುತ್ತಿದೆ. ಆದ್ದರಿಂದ ಈ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮದ ಮಹಿಳೆಯರು ವಿಜಯಪುರದಲ್ಲಿ ತಮ್ಮ ಶಾಸಕರಾದ ಎಂ. ಬಿ. ಪಾಟೀಲ ಅವರ ನಿವಾಸಕ್ಕೆ […]

MBP Siddheshwar Swamiji: ಎಂ. ಬಿ. ಪಾಟೀಲ ಕೇವಲ ನಾಯಕರಲ್ಲ, ಜಲದನಾಯಕರು- ಸಿದ್ಧೇಶ್ವರ ಸ್ವಾಮೀಜಿ

ವಿಜಯಪುರ: ಬದುಕು ಅಮೂಲ್ಯ.  ದೇಹ ಮನಸ್ಸು ಇದನ್ನು ಸ್ವಚ್ಚವಾಗಿಟ್ಟುಕೊಂಡು ದೇವರಿಗೆ ಸಮರ್ಪಣೆ ಮಾಡುವದರಿಂದ ಜೀವನ ಸಾರ್ಥಕವಾಗಲಿದೆ.  ದಣಿವಿಲ್ಲದೇ ಮಾಡುವ ಕಾರ್ಯವೇ ದಾಸೋಹ ಮತ್ತು ಕಾಯಕಗಳಿಗೆ ಬಸವಣ್ಣನವರು ಮಹತ್ವ ನೀಡಿದ್ದರು ಎಂದು ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ಹೇಳಿದರು. ತಿಕೋಟಾ ಪಟ್ಟಣದಲ್ಲಿ ಗ್ರಾಹಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ತಿಕೋಟಾ ಗ್ರಾಮದಲ್ಲಿ ಮೊದಲು ಜನರು ಹೆಚ್ಚು ಕಂಡು ಬರುತ್ತಿರಲಿಲ್ಲ.  ಇಲ್ಲಿ ಹೆಚ್ಚಿನ ಸಂಖ್ಯೆ ಇಲ್ಲ ಎಂದು ಅಂದುಕೊಂಡಿದ್ದೆ.  ಆದರೆ, ಇಂದು ನೋಡಿದರೆ ಎಣಿಕೆಗೆ […]