ಪುರಾತನ ನೀರು ಸರಬರಾಜು ಸುರಂಗ ಸಂಪರ್ಕಿಸುವ ಕಿಂಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿದ ವಿಜಯಪುರ ಡಿಸಿ

ವಿಜಯಪುರ: ವಿಜಯಪುರ ನಗರದಲ್ಲಿರುವ ಪುರಾತನ ನೀರು ಸರಬರಾಜು ಯೋಜನೆ ಸುರಂಗಗಳಿಗೆ ಸಂಬಂಧಿಸಿದಂತೆ ಕಿಂಡಿಗಳನ್ನು ಸಂರಕ್ಷಣೆ ಮಾಡುವ ಸಲುವಾಗಿ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅವರು ಐಬಿ(ನೂತನ ಪ್ರವಾಸಿ ಮಂದಿರ) ಬಳಿ ತೆರಳಿ ಪರಿಶೀಲನೆ ನಡೆಸಿದರು.  ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಸಮಾಜ ಸೇವಕ ಪೀಟರ್ ಅಲೆಕ್ಸಾಂಡರ್, ಅಮೀನ್ ಹುಲ್ಲೂರ, ಮೆಹರಿಜ್ ಖತೀಬ್ ಹಾಗೂ ಅನಿಲಕುಮಾರ ಬಣಜಿಗೇರ, ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರು ಉಪಸ್ಥಿತರಿದ್ದರು.

15 ರಿಂದ 17 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಪಡೆದುಕೊಳ್ಳಲು ಪ್ರೇರೇಪಿಸಿ ಕೋವಿಡ್ ರೋಗದಿಂದ ಮಕ್ಕಳನ್ನು ರಕ್ಷಿಸಿ- ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಜ. 16 ರಿಂದ 15 ರಿಂದ 17 ವರ್ಷದ ಮಕ್ಕಳಿಗೆ ಕೊರೊನಾ ಲಸಿಕಾಕರಣ ಆರಂಭವಾಗಿದ್ದು, ಈಗಾಗಲೇ ಮೊದಲನೇಯ ಹಾಗೂ ಎರಡನೇಯ ಡೋಸ್‍ನ ಶೇ. 100 ರಷ್ಟು ಸಾಧನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ರಾಜ್ಯದಲ್ಲಿ ಪ್ರಥಮ ಮತ್ತು ದ್ವಿತೀಯ ಡೋಸ್ ಶೇ. 100 ರಷ್ಚು ಸಾಧನೆ ಮಾಡಿದ ಎರಡನೇ ಜಿಲ್ಲೆ ಎಂಬ ಕೀರ್ತಿ ವಿಜಯಪುರಕ್ಕೆ ಲಭಿಸಿದೆ.  ಅದೇ ರೀತಿ 15 ರಿಂದ 17 ವರ್ಷದ 123437 ಮಕ್ಕಳಿಗೆ ಲಸಿಕೆ […]

ವಿಜಯಪುರ ಜಿ. ಪಂ. ನೂತನ ಸಿಇಒ ಆಗಿ ರಾಹುಲ್ ಶಿಂಧೆ ಅಧಿಕಾರ ಸ್ವೀಕಾರ

ವಿಜಯಪುರ : ವಿಜಯಪುರ ಜಿಲ್ಲಾ ಪಂಚಾಯಿತಿಯ ನೂತನ ಸಿಇಒ ಆಗಿ ರಾಹುಲ್ ಶಿಂಧೆ ಅಧಿಕಾರಿ ಸ್ವೀಕರಿಸಿದ್ದಾರೆ. ಬೀದರ ಮೂಲದ ರಾಹುಲ ಶಿಂಧೆ ಐಐಟಿ ಬಾಂಬೆಯಿಂದ ಬಿ. ಟೆಕ್. ಪದವಿ ಪಡೆದಿದ್ದಾರೆ. 2018ರ ಐಎಎಸ್ ಬ್ಯಾಚ್‍ನ ರಾಹುಲ್ ಶಿಂಧೆ ಅವರು ಮಂಗಳೂರಿನಲ್ಲಿ ಪ್ರೊಬೇಷನರಿ ಅವಧಿ ಪೂರೈಸಿದ್ದಾರೆ. ಬಳಿಕ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಹಶೀಲ್ದಾರ್ ಆಗಿ ಕೆಲಸ ಮಾಡಿದ್ದಾರೆ. ವಿಜಯಪುರ ಜಿ. ಪಂ. ಸಿ. ಇಓ ಆಗುವುದಕ್ಕಿಂತಲೂ ಮುಂಚೆ ನಂತರ ವಿಜಯಪುರ ಜಿಲ್ಲೆಯ ಇಂಡಿ ಉಪವಿಭಾಗಾಧಿಕಾರಿಯಾಗಿ ಸೇವೆ […]

ಲಸಿಕಾರಣ ಕಾರ್ಯದಲ್ಲಿ ನಿರೀಕ್ಷಿತ ಗುರಿ ಸಾಧಿಸಲು ಅಧಿಕಾರಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು- ಡಿಸಿ ಪಿ. ಸುನೀಲ ಕುಮಾರ

ವಿಜಯಪುರ: ರಾಜ್ಯ ಹಾಗೂ ದೇಶದಲ್ಲೇ ಅತ್ಯಂತ ಪರಿಣಾಮಕಾರಿಯಾಗಿ ಲಸಿಕಾಕರಣ ಕೈಗೊಂಡಿರುವ ಜಿಲ್ಲೆಗಳಲ್ಲಿ ವಿಜಯಪುರ ಜಿಲ್ಲೆ ಮುಂಚೂಣಿಯಲ್ಲಿದ್ದು, ಇದೇ ಬದ್ಧತೆಯನ್ನು ಬೂಸ್ಟರ್ ಡೋಸ್ ನೀಡುವಲ್ಲಿಯೂ ತೋರಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಹೇಳಿದ್ದಾರೆ.  ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿಂದು ಕೋವಿಡ್ ನಿಯಂತ್ರಣ ಕುರಿತು ನಾನಾ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಿದ ಅವರು ಎರಡನೇ ಡೋಸ್ ಪಡೆದು ಒಂಭತ್ತು ತಿಂಗಳು ಪೂರೈಸಿದ ಎಲ್ಲರಿಗೂ ಇದು ಅನ್ವಯವಾಗುವಂತೆ ಕ್ರಮ ಕೈಗೊಂಡು, ಈ ಕಾರ್ಯದಲ್ಲಿಯೂ ಯಶಸ್ಸು ಸಾಧಿಸಬೇಕು […]

ರಾಯಚೂರು ಘಟನೆ ಖಂಡಿಸಿ ವಿಜಯಪುರದಲ್ಲಿ ನಾನಾ ಪ್ರಗತಿಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ವಿಜಯಪುರ: ರಾಯಚೂರಿನಲ್ಲಿ ಅಂಬೇಡ್ಕರ ಭಾವಚಿತ್ರಕ್ಕೆ ಅವಮಾನ ಮಾಡಲಾಗಿದೆ ಎಂದು ಆರೊಪಿಸಿ ನಾನಾ ಪ್ರಗತಿಪರ ಸಂಘಟನೆಗಳ ಕಾರ್ಯಕರ್ಯರು ವಿಜಯಪುರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ವಿಜಯಪುರ ನಗರದ ಆರಾಧ್ಯ ದೈವ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ಯರು, ರಾಯಚೂರು ಜಿಲ್ಲಾ ನ್ಯಾಯದೀಶರ ವಿರುದ್ಧ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಗಾಂಧಿಚೌಕ್, ಬಸವೇಶ್ವರ ಚೌಕ್ ಮೂಲಕ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಅಂಬೇಡ್ಕರ ಚೌಕಿನಲ್ಲಿ ಪ್ರತಿಭಟನೆ ನಡೆಸಿದರು. ಅಲ್ಲದೇ, ಈ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ […]

ಲಿಂಗತ್ವ ಅಲ್ಪಸಂಖ್ಯಾತರು ಸರಕಾರದ ಯೋಜನೆಗಳಡಿ ಸ್ವಂತ ಉದ್ಯೋಗ ಕೈಗೊಳ್ಳಿ- ಪಿ. ಸುನೀಲ ಕುಮಾರ

ವಿಜಯಪುರ: ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳಿವೆ. ಲಿಂಗತ್ವ ಅಲ್ಪಸಂಖ್ಯಾತರು ಸ್ವಯಂ ಉದ್ಯೋಗ ಕೈಗೊಳ್ಳಲು ಸರಕಾರ ಹಣಕಾಸಿನ ಸಹಾಯ ಒದಗಿಸುತ್ತಿದೆ. ಅದನ್ನು ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಹೇಳಿದ್ದಾರೆ. h ವಿಜಯಪುರ ನಗರದ ರುಡ್‍ಸೆಟ್ ಸಂಸ್ಥೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಸಹಯೋಗದೊಂದಿಗೆ 2021-22 ನೇ ವರ್ಷದ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಅಡಿಯಲ್ಲಿ ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರರಿಗೆ ಆಯೋಜಿಸಲಾಗಿದ್ದ ಮೂರು […]

ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಜನಸ್ಪಂದನ ಪೋರ್ಟಲ್ ಮೇಲ್ಬರ್ಜೆಗೆ- ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಿ- ಪಿ. ಸುನೀಲ ಕುಮಾರ

ವಿಜಯಪುರ: ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸುವ ಜನಸ್ಪಂದನ ಪೋರ್ಟಲ್‌ನ್ನು ಮೇಲ್ಬರ್ಜೆಗೇರಿಸಿದ್ದು, ಇನ್ನು ಮುಂದೆಯೂ ಜನಸ್ಪಂದನ ಅಥವಾ ಪೋರ್ಟಲ್‌ನಲ್ಲಿಯೇ ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆಯ ಮೂಲಕ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗುತ್ತದೆ.  ಮುಖ್ಯಮಂತ್ರಿಗಳು ನಿಗಾ ಇಡುವುದರಿಂದ ಅಧಿಕಾರಿಗಳು ಬಹಳ ಗಂಭೀರ ಹಾಗೂ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ ನೀಡಿದ್ದಾರೆ.  ವಿಜಯಪುರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏಕೀಕೃತ ಸಾರ್ವಜನಿಕ ದೂರು ನಿವಾರಣಾ ವ್ಯವಸ್ಥೆ ಅನುಷ್ಠಾನದ ಕುರಿತು ಜಿಲ್ಲೆಯ ನಾನಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ […]

ದ್ರಾಕ್ಷಿ ನಾಡಿನಲ್ಲಿ ಗಮನ ಸೆಳೆದ ಮಂಜು ಮುಸುಕಿದ ವಾತಾವರಣ

ವಿಜಯಪುರ: ದ್ರಾಕ್ಷಿ ನಾಡು ಎಂದೇ ಹೆಸರಾಗಿರುವ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ಬೆಳ್ಳಂಬೆಳಿಗ್ಗೆ ಬದಲಾಗಿದ್ದ ವಾತಾವರಣ ಗಮನ ಸೆಳೆದಿದೆ. ತಿಕೋಟಾ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಬೆಳ್ಳಂಬೆಳಿಗ್ಗೆ ಮಂಜು ಮುಸುಕಿದ ವಾತಾವರಣ ಉಂಟಾಗಿತ್ತು. ಪ್ರತಿ ದಿನ ಬೆಳಿಗ್ಗೆ 6ಕ್ಕೆ ಸೂರ್ಯೊದಯ ಆಗುತ್ತಿತ್ತು. ಆದರೆ, ಬೆ. 8 ಗಂಟೆಯಾದರೂ ಸೂರ್ಯ ದೇವನ ದರ್ಶನ ಆಗಿರಲಿಲ್ಲ. ತಿಕೋಟಾ ತಾಲೂಕಿನ ಬಾಬಾನಗರ, ಕಳ್ಳಕವಟಗಿ, ಘೋಣಸಗಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಹುಬನೂರ, ಟಕ್ಕಳಕಿ, ಬಿಜ್ಜರಗಿ ಸೇರಿದಂತೆ ನಾನಾ ಗ್ರಾಮಗಳಲ್ಲಿ ಸಂಪೂರ್ಣ ಮಂಜು ಮುಸುಕಿದ ವಾತಾವರಣ ಸೃಷ್ಠಿಯಾಗಿತ್ತು. […]

ಅಕ್ಕಮಹಾದೇವಿ ಮಹಿಳಾ ವಿವಿ ನೂತನ ಕುಲಸಚಿವರಾಗಿ ಎಂ. ಎನ್. ಚೋರಗಸ್ತಿ ಅಧಿಕಾರ ಸ್ವೀಕಾರ

ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯ ಇಂಡಿ ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಕೆಎಎಸ್ ಅಧಿಕಾರಿ ಎಂ. ಎನ್ .ಚೋರಗಸ್ತಿ ಅವರು ವಿಜಯಪುರ ಜಿಲ್ಲೆಯ ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಪ್ರಭಾರ ಕುಲಸಚಿವರಾಗಿದ್ದ ಪ್ರೊ. ಕೆ. ರಮೇಶ ಅವರು ಎಂ. ಎನ್. ಚೋರಗಸ್ತಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.  ಈ ಸಂದರ್ಭದಲ್ಲಿ ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲ, ಉಪಕುಲಸಚಿವ ಡಾ. ಗವಿಸಿದ್ದಪ್ಪ ಆನಂದಹಳ್ಳಿ ಮುಂತಾದವರು ಉಪಸ್ಥಿತರಿದ್ದರು.

ಮುಳವಾಡ ಏತ ನೀರಾವರಿ ಸುಪರಿಂಟೆಂಡ್ ಕಚೇರಿ ನಿರ್ಮಾಣ ಕಾಮಗಾರಿ ಪರಿಶಿಲಿಸಿದ ಮಾಜಿ ಸಚಿವ ಶಿವಾನಂದ ಪಾಟೀಲ

ವಿಜಯಪುರ: ವಿಜಯಪುರ ಜಿಲ್ಲೆಯ ಮುಳವಾಡ ಏತ್ ನೀರಾವರಿ ಯೋಜನೆಯ ಸುಪರಿಂಟೆಂಡೆಂಟ್ ಎಂಜಿನಿಯರ್ ಕಚೇರಿ ಕಾಮಗಾರಿ ಭರದಿಂದ ಸಾಗಿದೆ. ಬಸವನ ಬಾಗೇವಾಡಿ ತಾಲೂಕಿನ ಟಕ್ಕಳಕಿ ಬಳಿ ನಡೆದಿರುವ ಈ ಕಾಮಗಾರಿ ಸ್ಥಳಕ್ಕೆ ಮಾಜಿ ಸಚಿವ ಮತ್ತು ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಈ ಸಂದರ್ಭದಲ್ಲಿ ಕೆಬಿಜೆಎನ್ಎಲ್ ನ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು ಕಾಮಗಾರಿಯ ಬಗ್ಗೆ ಶಾಸಕರಿಗೆ ಮಾಹಿತಿ ನೀಡಿದರು.