ವಿಜಯಪುರದಲ್ಲಿ ನಾನಾ ಖಾಸಗಿ ಬಡಾವಣೆಗಳ ಅಭಿವೃದ್ಧಿ ಕಾಮಗಾರಿಗಳ ಪರಿಶೀಲಿಸಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ನಗರವು ಸಮಗ್ರ ಮೂಲಭೂತ ಸೌಲಭ್ಯಗಳನ್ನು ಒಳಗೊಂಡ ನಗರವಾಗಿ ಅಭಿವೃದ್ಧಿಯಾಗಬೇಕಿದೆ.  ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅವರು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಮತ್ತು ಅಧಿಕಾರಿಗಳು ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ವಿಜಯಪುರ ನಗರದ ನಾನಾ ಖಾಸಗಿ ಬಡಾವಣೆಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.  ವಿಜಯಪುರ ನಗರದ ಉತ್ತರ ಹಾಗೂ ದಕ್ಷಿಣ ಭಾಗಗಳಲ್ಲಿ ಬರುವ ನಾನಾ ಬಡಾವಣೆಗಳನ್ನು ಪರಿಶೀಲಿಸಿ, ನಗರಾಭಿವೃದ್ಧಿ ಪ್ರಾಧಿಕಾರದಿಂದ ಬಡಾವಣೆಗಳಿಗೆ ನೀಡಲಾಗಿರುವ ಅನುಮೋದನೆ ಮತ್ತು ಅಲ್ಲಿ ನಡೆದಿರುವ […]

ಬೇಡಿಕೆ ಈಡೇರಿಕೆಗೆ ಕಾರಣರಾದವರನ್ನು ಆಹ್ವಾನಿಸಿ ಸಂಭ್ರಮಿಸಿದ ಸವನಹಳ್ಳಿ, ಹೊನಗನಹಳ್ಳಿ ಜನ

ವಿಜಯಪುರ: ಸವನಹಳ್ಳಿ ಮತ್ತು ಹೊನಗನಹಳ್ಳಿ ಗ್ರಾಮಗಳನ್ನು ಮರಳಿ ವಿಜಯಪುರ ತಾಲೂಕಿಗೆ ಸೇರ್ಪಡೆ ಮಾಡಿದ ಹಿನ್ನೆಲೆಯಲ್ಲಿ ಎರಡೂ ಗ್ರಾಮಗಳ ಗ್ರಾಮಸ್ಥರು ಇದಕ್ಕೆ ಕಾರಣರಾದ ಮಾಜಿ ಸಚಿವ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಬಬಲೇಶ್ವರ ಶಾಸಕ ಎಂ. ಬಿ. ಪಾಟೀಲ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಮಂಗಳವಾರ ಬಬಲೇಶ್ವರ ತಾಲೂಕಿನ ವ್ಯಾಪ್ತಿಯಲ್ಲಿದ್ದ ಸವನಹಳ್ಳಿ ಮತ್ತು ಬಬಲೇಶ್ವರ ಗ್ರಾಮಗಳನ್ನು ರಾಜ್ಯ ಸರಕಾರ ವಿಜಯಪುರ ಜಿಲ್ಲೆಗೆ ಮರುಸೇರ್ಪಡೆ ಮಾಡಿತ್ತು.  ಈ ಹಿನ್ನೆಲೆಯಲ್ಲಿ ಗ್ರಾಮಸ್ಥರ ಆಹ್ವಾನದ ಹಿನ್ನೆಲೆಯಲ್ಲಿ ಎಂ. ಬಿ. ಪಾಟೀಲ ಅವರ […]

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಉತ್ತಮ ಬಜೆಟ್ ಮಂಡಿಸಿದ್ದಾರೆ- ಉಮೇಶ ಕಾರಜೋಳ

ವಿಜಯಪುರ: ಉತ್ತರ ಪ್ರದೇಶ ಮತ್ತು ಪಂಜಾಬ ಚುನಾವಣೆಯನ್ನು ದೃಷ್ಟಿಕೋನದಲ್ಲಿಟ್ಟುಕೊಂಡು ಜನಪ್ರಿಯ ಯೋಜನೆಗಳನ್ನು ಘೋಷಿಸದೇ ಜನರ ಪರವಾಗಿ ಬಜೆಟ್ ಮಂಡನೆ ಮಾಡುವ ಮೂಲಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅತ್ಯುತ್ತಮವಾದ ಕೊಡುಗೆ ನೀಡಿದ್ದಾರೆ ಎಂದು ಬಿಜೆಪಿ ವಿಜಯಪುರ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಹೇಳಿದ್ದಾರೆ. ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಕೇವಲ ಚುನಾವಣೆ ದೃಷ್ಟಿಕೋನದಿಂದ ಬಜೆಟ್ ಮಂಡನೆ ಮಾಡುತ್ತಾರೆ ಎಂಬ ವಿಪಕ್ಷಗಳಿಗೆ ಸೊಪ್ಪು ಹಾಕದೇ ಜನಪರ ಹಾಗೂ ದೇಶದ ಅಭಿವೃದ್ಧಿ ದೃಷ್ಟಿಕೋನವಿರಿಸಿ ಕೇಂದ್ರ ಹಣಕಾಸು […]

ಕೇಂದ್ರ ಬಜೆಟ್ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ವಿಜಯಪುರ ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ವಿಜುಗೌಡ ಪಾಟೀಲ, ಜಿಲ್ಲಾ ನಾಯಕರು

ವಿಜಯಪುರ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ ಮಂಡಿಸಿದ ಬಜೆಟ್ ನ್ನು ವಿಜಯಪುರ ಜಿಲ್ಲಾ ಬಿಜೆಪಿ ನಾಯಕರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಮುಖಂಡರು ಈ ಬಜೆಟ್ ಸರ್ವರ ಪರವಾಗಿದೆ ಎಂದು ಹೇಳಿದ್ದಾರೆ. ರಮೇಶ ಜಿಗಜಿಮಗಿ, ವಿಜಯಪುರ ಸಂಸದ ಈ ಬಜೆಟ್ ನಲ್ಲಿ ಕಲಿಕೆಗೆ ಒತ್ತು ನೀಡಲಾಗಿದೆ.  ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಮಕ್ಕಳ ಕಲಿಕೆಗೆ ತೊಂದೆಯಾಗಬಾರದು ಎಂಬ ಹಿನ್ನೆಲೆಯಲ್ಲಿ ಒಂದು ತರಗತಿ ಒಂದು ಟಿವಿ ಚಾನೆಲ್ ಘೋಷಣೆಯಡಿ 200 ಟಿವಿ ವಾಹಿನಿಗಳಿಗೆ ಅವಕಾಶ […]

ಕೇಂದ್ರ ಬಜೆಟ್ ಚುನಾಣೆಗಳನ್ನು ಗಮನದಲ್ಲಿಟ್ಟುಕೊಂಡು ತಯಾರಿಸಿದ ಭಿತ್ತಿಪತ್ರದಂತೆ ಭಾಸವಾಗುವಂತಿದೆ- ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ

ವಿಜಯಪುರ: ಕೇಂದ್ರ ಬಜೆಟ್ ಪಂಚರಾಜ್ಯ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ತಯಾರಿಸಿದ ಭಿತ್ತಿ ಪತ್ರದಂತೆ ಭಾಸವಾಗುತ್ತಿದೆ ಎಂದು ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ ಟೀಕಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಹಣಕಾಸು ನಿರ್ಮಲಾ ಸೀತಾರಾಮನ ಮಂಡಿಸಿರುವ ಬಜೆಟ್ ನಿರಾಶಾದಾಯಕವಾಗಿದೆ.  ಆಡಳಿತ ಪಕ್ಷದ ಸದಸ್ಯರು ಮೇಜುಕುಟ್ಟಿ ಸ್ವಾಗತಿಸುವುದನ್ನು ನೋಡಿದರೆ ತಮ್ಮ ಬೆನ್ನನ್ನು ತಾವೇ ಚಪ್ಪರಿಸಿಕೊಂಡಂತಿದೆ.  ಇದರಿಂದ ಮಧ್ಯಮ ಹಾಗೂ ಬಡ ಮಧ್ಯಮ ವರ್ಗದ ಭಾರತೀಯರ ಕನಸುಗಳನ್ನು ಈಡೇರಿಸಲು ಸಾಧ್ಯವಾಗುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಬಜೆಟನ ಘೋಷಣೆಗಳು ಘೋಷಣೆಗಳಾಗಿಯೇ ಉಳಿದರೆ […]

ಸವನಹಳ್ಳಿ, ಹೊನಗನಹಳ್ಳಿ ವಿಜಯಪುರ ತಾಲೂಕಿಗೆ ಮರುಸೇರ್ಪಡೆ- ಎಂ. ಬಿ. ಪಾಟೀಲ

ಬೆಂಗಳೂರು. ಬಬಲೇಶ್ವರ ತಾಲೂಕಿನ ಸವನಹಳ್ಳಿ ಮತ್ತು ಹೊನಗನಹಳ್ಳಿ ಗ್ರಾಮಗಳನ್ನು ವಿಜಯಪುರಕ್ಕೆ ಮರು ಸೇರ್ಪಡೆ ಮಾಡಿ ಸರಕಾರ ಆದೇಶ ಹೊರಡಿಸಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಮತ್ತು ಬಬಲೇಶ್ವರ ಶಾಸಕ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಈ ಕುರಿತು ಗೋವಾದಿಂದ ಮಾಹಿತಿ ನೀಡಿದ ಅವರು, ಹೊಸ ತಾಲೂಕುಗಳ ರಚನೆ ಸಂದರ್ಭದಲ್ಲಿ ಸವನಹಳ್ಳಿ ಮತ್ತು ಹೊನಗನಹಳ್ಳಿ ಗ್ರಾಮಗಳನ್ನು ನೂತನ ಬಬಲೇಶ್ವರ ತಾಲೂಕಿಗೆ ಸೇರ್ಪಡೆ ಮಾಡಲಾಗಿತ್ತು. ಆದರೆ, ಸರಕಾರದ ಈ ನಿರ್ಧಾರದಿಂದಾಗಿ ಎರಡೂ ಗ್ರಾಮಗಳ ಜನರಿಗೆ ತೊಂದರೆಯಾಗಿತ್ತು. […]

ತಿಕೋಟಾ ಕೆರೆಗೆ ನೀರು ಬಿಡಿಸುವ ಮೂಲಕ ರೈತರ ಕಷ್ಟಕ್ಕೆ ಸ್ಪಂದಿಸಿದ ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ತಿಕೋಟಾ ಕೆರೆಗೆ ನೀರು ಬಿಡಿಸುವ ಮೂಲಕ ರೈತರ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಿದ್ದಾರೆ. ತಿಕೋಟಾ ಜಾಕವೆಲ್‍ಗೆ ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಸುನೀಲಗೌಡ ಪಾಟೀಲ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.  ತಿಕೋಟಾ ಕೆರೆಗೆ ನೀರು ಹರಿಸುವುದರಿಂದ ಕೆರೆಯ ಸಾಂಡ್‍ ಕೆಳಭಾಗದ ಸುಮಾರು 1100 ಮನೆಗಳಿಗೆ ನೀರು ನುಗ್ಗುತ್ತಿರುವುದರ ಕುರಿತು ಅಧಿಕಾರಿಗಳು ಈ ಸಂದರ್ದಭದಲ್ಲಿ ಸುನೀಲಗೌಡ ಪಾಟೀಲ ಅವರಿಗೆ ಮಾಹಿತಿ ನೀಡಿದರು. ನಂತರ ಈ ಸಮಸ್ಯೆಗೆ ಸುನೀಲಗೌಡ ಪಾಟೀಲ […]

ದೇಶದ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದವರನ್ನು ಸ್ಮರಿಸುವುದು ನಮ್ಮೆಲ್ಲರ ಜವಾಬ್ದಾರಿ- ಜಿಲ್ಲಾ ಪ್ರಧಾನ, ಸತ್ರ ನ್ಯಾಯಾಧೀಶ ಜಿ. ಜಿ. ಕುರವತ್ತಿ

ವಿಜಯಪುರ: ದೇಶದ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದರನ್ನು ಸ್ಮರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ವಿಜಯಪುರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಜಿ. ಜಿ. ಕುರವತ್ತಿ ಹೇಳಿದ್ದಾರೆ. ವಿಜಯಪುರ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಹುತಾತ್ಮರ ದಿನದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಜನರು ತಮ್ಮ ಪ್ರಾಣವನ್ನೇ ನೀಡಿದ್ದಾರೆ.  ನಮ್ಮ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಪ್ರತಿ ವರ್ಷವೂ ಜನೇವರಿ 30 ರಂದು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹಾತ್ಮಾ […]

ವಿಜಯಪುರ ಜಿಲ್ಲೆಯಲ್ಲಿ ಹೊಸದಾಗಿ ಕೊರೊನಾ ದೃಢಪಟ್ಟವರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚು- ಸಂಪೂರ್ಣ ಮಾಹಿತಿ ಇಲ್ಲಿದೆ

ವಿಜಯಜಯಪುರ: ಗುಮ್ಮಟ ನಗರಿ ಖ್ಯಾತಿಯ ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಶತಕ ದಾಟಿದ್ದರೂ, ಬಿಡುಗಡೆಯಾದವರ ಸಂಖ್ಯೆ ಹೊಸದಾಗಿ ಸೋಂಕಿತರ ಸಂಖ್ಯೆಗಿಂತ ಹೆಚ್ಚಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಹೊಸದಾಗಿ 159 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 245 ಜನ ಸೋಂಕಿತರು ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ವಿಜಯಪುರ ನಗರವೊಂದರಲ್ಲಿಯೇ 65 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.  ವಿಜಯಪುರ ಗ್ರಾಮೀಣ ಭಾಗದಲ್ಲಿ 11, ಬಬಲೇಶ್ವರ ತಾಲೂಕಿನಲ್ಲಿ 5, ತಿಕೋಟಾ ತಾಲೂಕಿನಲ್ಲಿ 10, ಬಸವನ ಬಾಗೇವಾಡಿ ತಾಲೂಕಿನಲ್ಲಿ 2, ಕೊಲ್ಹಾರ ತಾಲೂಕಿನಲ್ಲಿ […]

ವಿಜಯಪುರ ಜಿಲ್ಲಾ ಅಬಕಾರಿ ವಿಚಕ್ಷಣೆ ದಳ ಪೊಲೀಸರಿಂದ ಗಾಂಜಾ ಜಪ್ತಿ, ಆರೋಪಿ ಬಂಧನ

ವಿಜಯಪುರ: ವಿಜಯಪುರ ಜಿಲ್ಲಾ ಅಬಕಾರಿ ವಿಚಕ್ಷಣೆ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ‌. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಹೊರ ವಲಯದಲ್ಲಿ ಈ ಕಾರ್ಯಾಚರಣೆ ನಡೆದಿದೆ. ವಿಜಯಪುರದ ಆರೋಪಿ ಯಶವಂತ ಸಿದ್ದಪ್ಪ ಎಂಬ ಆರೋಪಿ ದ್ವಿಚಕ್ರ ವಾಹನದಲ್ಲಿ ಮಾರಾಟ ಮಾಡಲು ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮಾಹಿತಿ ಪಡೆದು ಧಾಳಿ ನಡೆಸಲಾಗಿದೆ. ಈ ಸಂದರ್ಭದಲ್ಲಿ ಆರೋಪಿ ಬಳಿಯಿದ್ದ 3 ಕೆಜಿ ಅಕ್ರಮವಾಗಿ ಸಾಗಿಸುತ್ತಿದ್ದ ಒಣಗಿದ ಗಾಂಜಾ, ದ್ವಿಚಕ್ರ ವಾಹನ ವಶಪಡಿಸಿಕೊಂಡು […]