ಪ್ರತಿಯೊಂದು ಆಂದೋಲನ ಸಂಘರ್ಷದಿಂದ ಉಂಟಾಗಿರುತ್ತವೆ- ಮೇಧಾ ಪಾಟ್ಕರ್

ವಿಜಯಪುರ: 22ನೇ ಶತಮಾನ ಆರಂಭವಾದರೂ ಇನ್ನೂ ಅನೇಕ ಮಹಿಳೆಯರು ಮೂಲಭೂತ ಸೌಕರ್ಯಗಳು ಮತ್ತು ಶಿಕ್ಷಣದಿಂದ ವಂಚಿತರಾಗಿದ್ದಾರೆ,  ನಾಲ್ಕು ಗೊಡೆಗಳ ಮದ್ಯದಲ್ಲಿಯೇ ಜೀವನ ನಡೆಸುತ್ತಿರುವವರಿಗೆ ವಿಶೇಷ ಕಾಳಜಿ ವಹಿಸಿ ಉತ್ತಮ ಶಿಕ್ಷಣ ನೀಡಿದಾಗ ಅವರೂ ಕೂಡ ಮುಖ್ಯ ವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದು ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಹೇಳಿದ್ದಾರೆ. ವಿಜಯಪುರದಲ್ಲಿ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಹಿಳಾ ವೇದಿಕೆಯ ಆಶ್ರಯದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಬೇಕಾದ ಅವಶ್ಯಕತೆಯಿದೆ.  […]

ಬಸವ ನಾಡಿನಲ್ಲಿ ವೀಕೆಂಡ್ ಕರ್ಫ್ಯೂಗೆ ಜನರಿಂದ ಉತ್ತಮ ಸ್ಪಂದನೆ

ವಿಜಯಪುರ: ಕೊರೊನಾ ಒಮಿಕ್ರಾನ್ ಸೋಂಕು ದಿನೇ ದಿನೇ ತನ್ನ ಪ್ರಭಾವವನ್ನು ಹೆಚ್ಚಿಸುತ್ತಿದ್ದು, ಸೋಂಕಿತರ ಸಂಖ್ಯೆಯೂ ಭಾರಿ ಸಂಖ್ಯೆಯಲ್ಲಿ ಏರುತ್ತಲೇ ಸಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸೋಂಕು ತಡೆಗಟ್ಟಲು ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂಗೆ ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಬಹುತೇಕ ಏಳೆಂಟು ತಿಂಗಳ ಬಳಿಕ ಸೋಂಕಿತರ ಸಂಖ್ಯೆ ಶತಕ ದಾಟಿದೆ.  ಶುಕ್ರವಾರ 107 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಓರ್ವ ಮಹಿಳೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.  ಅಲ್ಲದೇ, ಪಾಸಿಟಿವಿಟಿ […]

2ಎ ಮೀಸಲಾತಿ ನೀಡಲು ವಿಳಂಬ- ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಲ್ಲಿ ಪಂಚಮಸಾಲಿ ಸಮುದಾಯದಿಂದ ಪ್ರತಿಭಟನೆ

ವಿಜಯಪುರ: ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಸರಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಸವಣ್ಣನವರ ಜನ್ಮಸ್ಥಳ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಪಂಚಮಸಾಲಿ ಸಮುದಾಯದಿಂದ ಪ್ರತಿಟನೆ ನಡೆಸಲಾಯಿತು.  ಬಸವನ ಬಾಗೇವಾಡಿ ಪಟ್ಟಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಅಖಿಲ ಭಾರತ ಲಿಂಗಾಯಿತ ಪಂಚಮಸಾಲಿ ಮಹಾಸಭೆ ಯುವ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಬಿರಾದಾರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಂಕರಗೌಡ ಬಿರಾದಾರ, 2ಎ ಮೀಸಲಾತಿಗೆ ಆಗ್ರಹಿಸಿ ಕೂಡಲಸಂಗಮ […]

ವಿಜಯಪುರ ಜಿಲ್ಲೆಯಲ್ಲಿ ಒಂದೇ ದಿನ 107 ಜನರಲ್ಲಿ ಕೊರೊನಾ ಸೋಂಕು ಪತ್ತೆ- ಪಾಸಿಟಿವಿಟಿ ದರವೂ ಏರಿಕೆ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಮಹಾಸ್ಪೋಟವಾಗಿದ್ದು, ಒಂದೇ ದಿನ 107 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.  ಇದು ಈಗಷ್ಟೇ ಸಹಜ ಸ್ಥಿತಿಗೆ ಮರಳುತ್ತಿರುವ ಬಸವ ನಾಡಿನ ಜನರಲ್ಲಿ ಆತಂಕ ಮೂಡಸಿದೆ. ಇದರಲ್ಲಿ ವಿಜಯಪುರ ನಗರವೊಂದರಲ್ಲಿಯೇ 60 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ವಿಜಯಪುರ ಗ್ರಾಮೀಣ ಭಾಗದಲ್ಲಿ 4, ಬಬಲೇಶ್ವರ ತಾಲೂಕಿನಲ್ಲಿ 1, ಬಸವನ ಬಾಗೇವಾಡಿ ತಾಲೂಕಿನಲ್ಲಿ 6, ಕೊಲ್ಹಾರ ತಾಲೂಕಿನಲ್ಲಿ 5, ನಿಡಗುಂದಿ ತಾಲೂಕಿನಲ್ಲಿ 1, ಇಂಡಿ ತಾಲೂಕಿನಲ್ಲಿ 5, ಚಡಚಣ ತಾಲೂಕಿನಲ್ಲಿ 1 ಮತ್ತು ಮುದ್ದೇಬಿಹಾಳ […]

ಮಾಜಿ ಸಚಿವ ಎಂ. ಬಿ. ಪಾಟೀಲ, ಅವರ ಕುಟುಂಬಕ್ಜೆ ಹೆಚ್ಚಿನ ಭದ್ರತೆ ಒದಗಿಸಲು ಆಗ್ರಹ: ಎಎಸ್ಪಿಗೆ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ, ಅವರ ಕುಟುಂಬ ಸದಸ್ಯರು ಮತ್ತು ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸುವಂತೆ ಆಗ್ರಹಿಸಿ ನಾನಾ ಸಂಘಟನೆಗಳ ಮುಖಂಡರು ಎಎಸ್ಪಿ ಡಾ. ರಾಮ ಲಕ್ಷ್ಮಣ ಅರಸಿದ್ಧಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ವಿಜಯಪುರದಲ್ಲಿ ಎಸ್ಪಿ ಕಚೇರಿಗೆ ತೆರಳಿದ ನಾನಾ ಸಂಘಟನೆಗಳ ಮುಖಂಡರು, ಎಎಸ್ಪಿ ಡಾ. ರಾಮ ಲಕ್ಷ್ಮಣ ಅರಸಿದ್ದಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಬಳಿಕ ಮಾತನಾಡಿದ ನಾನಾ ಮುಖಂಡರು, ಎಂ.ಬಿ.ಪಾಟೀಲ ಅವರು ಜನನಾಯಕರಾಗಿದ್ದು, ನಮ್ಮ […]

ಮೇಕೆದಾಟು ವಿಚಾರ: ಮಾಜಿ ಸಚಿವ ಎಂ. ಬಿ. ಪಾಟೀಲ ನಿವಾಸದ ಬಳಿ ನಾನಾ ದಲಿತ ಸಂಘಟನೆಗಳ ಪ್ರತಿಭಟನೆ

ವಿಜಯಪುರ: ಮೇಕೆದಾಟು ಪಾದಯಾತ್ರೆ ವಿಚಾರದಲ್ಲಿ ನೀರಾವರಿ ಸಚಿವ ಗೋವಿಂದ ಜಾರಜೋಳ ಬಗ್ಗೆ ಜಲಸಂಪನ್ಮೂಲ ಖಾತೆ ಮಾಜಿ ಸಚಿವ ಎಂ. ಬಿ. ಪಾಟೀಲ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ನಾನಾ ದಲಿತ ಪರ ಸಂಘಟನೆಗಳು ವಿಜಯಪುರದಲ್ಲಿ ಎಂ. ಬಿ. ಪಾಟೀಲ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸಿವೆ. ಕೈಗೆ ಕಪ್ಪು ಬಟ್ಟಿ ಕಟ್ಟಿಕೊಂಡ ನಾನಾ ದಲಿತ ಪರ ಸಂಘಟನೆಗಳ ಕಾರ್ಯಕರ್ತರು ವಿಜಯಪುರ ನಗರದ ಬಂಜಾರ ಕ್ರಾಸ್ ಬಳಿ ವಿಜಯಪುರ- ಸೊಲ್ಲಾಪುರ ರಸ್ತೆ ಬಂದ್ ಮಾಡಿ ಆಕ್ರೋಶ ಹೊರ ಹಾಕಿದರು. […]

ಸಿಎಂ ಬಸವರಾಜ ಬೊಮ್ಮಾಯಿಗೆ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿ- ಯಾಕೆ ಗೊತ್ತಾ?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸಂ. 4.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಫೋನ್ ಕರೆ ಮಾಡಿ ಮಾತನಾಡಿದ್ದಾರೆ.    ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮಗೆ ಕರೆ ಮಾಡಿದ ಪ್ರಧಾನಿಗೆ ಕೃತಜ್ಞತೆ ತಿಳಿಸಿದ್ದಾರೆ.  ಈ ಸಂದರ್ಭದಲ್ಲಿ ಸುಮಾರು ಐದು ನಿಮಿಷಗಳ ಕಾಲ ನಡೆದ ಮಾತುಕತೆ ನಡೆಸಿದ್ದಾರೆ.  ಸಿಎಂಗೆ ಕೊರೊನಾ ಸೋಂಕು ತಗುಲಿರುವುದು ತಿಳಿದ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಣೆ ಮಾಡಿದ್ದಾರೆ.  ಅಲ್ಲದೇ, […]

ಶರಣರ, ಸಂತರ ಕಾಯಕ, ದಾಸೋಹಗಳು ಜನಸಾಮಾನ್ಯರ ಬದುಕನ್ನು ಮೇಲಕ್ಕೆತ್ತಲು ಪ್ರಬಲ ಸಾಧನಗಳಾಗಿವೆ- ಡಾ. ಬಿ. ಜಿ. ಮೂಲಿಮನಿ

ವಿಜಯಪುರ: ಶರಣರ, ಸಂತರ ಕಾಯಕ ಹಾಗೂ ದಾಸೋಹಗಳು ಜನಸಾಮಾನ್ಯರ ಬದುಕನ್ನು ಮೇಲೆಕ್ಕೆತ್ತಲು ಎರಡು ಪ್ರಬಲ ಸಾಧನಗಳಾಗಿವೆ ಎಂದು ಗುಲಬುರ್ಗಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಬಿ. ಜಿ. ಮೂಲಿಮನಿ ತಿಳಿಸಿದರು. ವಿಜಯಪುರ ನಗರದಲ್ಲಿ ಸಿಕ್ಯಾಬ್ ಸಂಸ್ಥೆಯ ಸಂಸ್ಥಾಪಕರ ದಿನಾಚಾರಣೆಯಲ್ಲಿ ಸಿಕ್ಯಾಬ್ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳ ಜ್ಞಾನದಾಸೋಹ ಕೈಂಕರ್ಯವು ಬಡ, ಆರ್ಥಿಕ ದುರ್ಬಲ ಕುಟುಂಬಗಳಿಗೆ ಆರ್ಥಿಕ ಸ್ವಾವಲಂಬನೆ, ಆತ್ಮಗೌರವಗಳನ್ನು ದೊರಕಿಸಿ ಒಟ್ಟಾರೆ ದೇಶದ ಅಭಿವೃದ್ದಿಗೆ ಕಾರಣವಾಗುತ್ತದೆ.  ಇಂದು ನಾವು ಜ್ಞಾನಾದರಿತ ಆರ್ಥಿಕ ವ್ಯವಸ್ಥೆಯಲ್ಲಿ […]

ಮಕ್ಕಳಲ್ಲಿ ಹೆಚ್ಚುತ್ತಿರುವ ಕೊರೊನಾ: ಶಾಲೆಯಲ್ಲಿ ರೆಡ್ ಡೆ ಯನ್ನು ಜಾಗೃತಿ ರೂಪದಲ್ಲಿ ಆಚರಿಸಿದ ರವೀಂದ್ರನಾಥ ಠಾಗೋರ ಶಾಲೆಯ ಮಕ್ಕಳು

ವಿಜಯಪುರ: ಮಕ್ಕಳಲ್ಲಿ ಈಗ ಕೊರೊನಾ ಸೋಂಕು ಹೆಚ್ಚಾಗುತ್ತಿದೆ.  ಕೊರೊನಾ ಮತ್ತು ಅದರಲ್ಲೂ ಒಮಿಕ್ರಾನ್ ಸೋಂಕು ಈಗ ಶರವೇಗದಲ್ಲಿ ಹೆಚ್ಚಾಗುತ್ತಿದೆ.  ಕೋವಿಡ್- 19 3ನೇ ಅಲೆ ಈಗ ವ್ಯಾಪಕವಾಗಿ ಪರಿಣಾಮ ಬೀರುತ್ತಿದ್ದು, ಮಕ್ಕಳನ್ನೂ ಕೂಡ ಬಾಧಿಸುತ್ತಿದೆ.  ಈಗಾಗಲೇ ರಾಜ್ಯದಲ್ಲಿ ನೂರಾರು ಮಕ್ಕಳು ಕೊರೊನಾ ಸೋಂಕಿನಿಂದ ಬಾಧಿತರಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಸರಕಾರಿ ಮತ್ತು ಖಾಸಗಿ ಶಾಲೆಗಳ ಪೂರ್ವ ಪ್ರಾಥಮಿಕದಿಂದ ಹಿಡಿದು ಸ್ನಾತಕೋತ್ತರ ಪದವಿ ವರೆಗೂ ತರಗತಿಗಳು ನಡೆಯುತ್ತಿದ್ದು, ಪೋಷಕರಲ್ಲಿ ಆತಂಕ ಮನೆ ಮಾಡಿದೆ.  ಮಕ್ಕಳಲ್ಲಿ ಕೊರೊನಾ ಸೋಂಕು […]

ಸಚಿವ ಗೋವಿಂದ ಕಾರಜೋಳ ದಲಿತ ಕಾರ್ಡ್ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ- ವಿಜಯಪುರ ಕಾಂಗ್ರೆಸ್ ಮುಖಂಡ ಆರೋಪ

ವಿಜಯಪುರ: ಮೇಕೆದಾಟು ಪಾದಯಾತ್ರೆ ವಿಚಾರ ಈಗ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಜಿದ್ದಾಜಿದ್ದಿಗೆ ಕಾರಣವಾಗಿದ್ದು, ಮಾಜಿ ಸಚಿವ ಎಂ. ಬಿ. ಪಾಟೀಲ ನಿವಾಸದ ಎದುರು ನಡೆದ ಪ್ರತಿಭಟನೆ ಹಾಗೂ ಆರೋಪಗಳ ಕುರಿತು ವಿಜಯಪುರ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕ ಪ್ರೊ. ರಾಜು ಆಲಗೂರ, ಮೇಕೆದಾಟು ವಿಚಾರದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ತಮ್ಮ ಇತಿಮಿತಿ ಬಿಟ್ಟು. ಟೀಕೆಗಳನ್ನು ಸ್ವೀಕರಿಸದೆ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು […]