ಗುರಿಗೆ ತಕ್ಕಂತೆ ಪ್ರಗತಿ ಸಾಧಿಸಿ ಅಧಿಕಾರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ

ವಿಜಯಪುರ: ಲಸಿಕೆ ನೀಡುವ ಕೇಂದ್ರಗಳಲ್ಲಿ ಸಿಬ್ಬಂದಿಯ ಕೊರತೆಯಾಗದಂತೆ ಮತ್ತು ಲಸಿಕಾಕರಣದಲ್ಲಿ ಗುರಿಗೆ ತಕ್ಕಂತೆ ಪ್ರಗತಿ ಸಾಧಿಸಿ ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಪ್ರತಿ ಬುಧವಾರ ಲಸಿಕಾ ಮೇಳವನ್ನು ಆಯೋಜಿಸಲಾಗಿದ್ದು, ಜಿಲ್ಲಾಧಿಕಾರಿಗಳು ಶಾಂತಿ ನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ನಗರದ ಆರು ಕೇಂದ್ರಗಳಲ್ಲಿ ಲಸಿಕೆ ನೀಡುತ್ತಿದ್ದು, ನಾನಾ ಕೇಂದ್ರಗಳಲ್ಲಿ ಲಸಿಕಾಕರಣ ಸರಿಯಾದ ಸಮಯದಲ್ಲಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಳ್ಳುವಂತೆ ಹಾಗೂ ಪ್ರತಿ […]

ವಿಜಯಪುರ ನಗರದಲ್ಲಿ ಶೀಘ್ರದಲ್ಲಿ ಈಜುಕೋಳ ಪ್ರಾರಂಭ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ನಗರದಲ್ಲಿ ಈಜುಕೊಳವನ್ನು ಪ್ರಾರಂಭಿಸಿ ಸಾರ್ವಜನಿಕರಿಗೆ ಮತ್ತು ಕ್ರೀಡಾಪಟುಗಳಿಗೆ ಅನುಕೂಲ ಮಾಡಿಕೊಡಿ ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿಂಥೆಟಿಕ್ ಅಥ್ಲೆಟಿಕ್ ಟ್ರ್ಯಾಕ್, ಈಜುಕೊಳ, ವಾಕಿಂಗ್ ಟ್ರ್ಯಾಕ್, ಹೊರಾಂಗಣ ಜಿಮ್ ಅಳವಡಿಕೆ, ಒಳಾಂಗಣ ಕ್ರೀಡಾಂಗಣ ನಿರ್ಮಾಣದ ಹಾಗೂ ಸೈಕ್ಲಿಂಗ್ ವೆಲೊಡ್ರೋಮ್ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ಕನಕದಾಸ ಬಡಾವಣೆಯ ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನದಲ್ಲಿ ಒಳಾಂಗಣ ಈಜುಕೊಳವು ಪೂರ್ಣಗೊಂಡಿದೆ. ಅವಶ್ಯವಿರುವ […]

ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಶಾಲಾವರಣ ಸ್ವಚ್ಛಗೊಳಿಸಿದ ಉಕ್ಕಲಿ ಯುವಕರು

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಯುವಕರು ಶಾಲೆ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ವಿನೂತನವಾಗಿ ಪ್ರಧಾನಿಯ ಜನ್ಮದಿನ ಆಚರಿಸಿದ್ದಾರೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಗ್ರಾಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸರಕಾರಿ ಕನ್ನಡ ಗಂಡು ಹಾಗೂ ಹೆಣ್ಣು ಮಕ್ಕಳ ಶಾಲೆ ಮತ್ತು ಉರ್ದು ಶಾಲೆಗಳ ಆವರಣವನ್ನು ಯುವಕರು ಕಸಗೂಡಿಸಿ ಸ್ವಚ್ಚಗೊಳಿಸಿದರು. ಈ ಸ್ವಚ್ಛತಾ ಅಭಿಯಾನದಲ್ಲಿ ಉಕ್ಕಲಿ ಗ್ರಾಮದ ಯುವಕರಾದ ಸಿದ್ದರಾಮ ಕಾಖಂಡಕಿ, ಪ್ರಶಾಂತ ಬಡಿಗೇರ, […]

ನಿಯಂತ್ರಣ ತಪ್ಪಿ ಹಳ್ಳದ ಪಕ್ಕದ ಕಂಬಕ್ಕೆ ಢಿಕ್ಕಿ ಹೊಡೆದ ಬಸ್- ಪ್ರಯಾಣಿಕರು ಅಪಾಯದಿಂದ ಪಾರು

ವಿಜಯಪುರ: ರಾಜ್ಯ ಸಾರಿಗೆ ಬಸ್ಸೋಂದು ಹಳ್ಳದ ಮೇಲೆ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಹಳ್ಳದ ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಭೀಮಾ ತೀರದ ಉಮರಾಣಿ ಬಳಿ ನಡೆದಿದೆ. ಇಂಡಿಯಿಂದ ಉಮರಾಣಿ ಕಡೆಗೆ ಹೊರಟಿದ್ದ ಬಸ್ಸು ಕಲ್ಲಮಡ ಹಳ್ಳದ ಮೇಲೆ ಸಂಚರಿಸುವಾಗ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಸುಮಾರು 15 ಜನ ಪ್ರಯಾಣಿಕರು ಬಸ್ಸಿನಲ್ಲಿ ಸಂಚರಿಸುತ್ತಿದ್ದರು ಎನ್ನಲಾಗಿದೆ. ಆದರೆ, ಅದೃಷ್ಠವಶಾತ ಬಸ್ಸು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ನಿಂತಿದ್ದರಿಂದ […]

ಸೆ. 21ರಂದು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಜಿಲ್ಲಾ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಅಭಿಯಾನ- ಶಂಕರಗೌಡ ಬಿರಾದಾರ

ವಿಜಯಪುರ: ಸೆ. 21ರಂದು ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ವಿಜಯಪುರ ಜಿಲ್ಲೆಯ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಅಭಿಯಾನ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಯುವ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಎಸ್. ಬಿರಾದಾರ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮಾರಂಭದಲ್ಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ, ಪಾದಯಾತ್ರೆ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ, ಕಾರ್ಯಾಧ್ಯಕ್ಷ ಎಚ್. ಎಸ್. […]

ಬಸವ ನಾಡಿನಲ್ಲಿ ಸುಸೂತ್ರವಾಗಿ ನಡೆದ ದ್ವಿತೀಯ ದರ್ಜೆ ಸಹಾಯಕರ ನೇಮಕಾತಿ ಪರೀಕ್ಷೆ

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲಿ ದ್ವಿತೀಯ ದರ್ಜೆ ಸಹಾಯಕರ ನಾನಾ ಹುದ್ದೆಗಳಿಗಾಗಿ ನಡೆದ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ವಿಜಯಪುರ ಜಿಲ್ಲಾದ್ಯಂತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಒಟ್ಟು 59 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು. ಈ ಪರೀಕ್ಷೆಗಾಗಿ 21388 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಆದರೆ, 14484 ಅಭ್ಯರ್ಥಿಗಳು ಹಾಜರಾಗಿದ್ದು, 6904 ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ವಿಜಯಪುರ ಜಿಲ್ಲಾಡಳಿತ ಮಾಹಿತಿ ನೀಡಿದೆ. ಈ ಮಧ್ಯೆ, ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ನಾನಾ ಪರೀಕ್ಷೆ ಕೇಂದ್ರಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಆಕಾಶವಾಣಿ ಕೇಂದ್ರದಲ್ಲಿ ಸಂಸ್ಥಾಪನೆ ದಿನ ಆಚರಣೆ

ವಿಜಯಪುರ: ವಿಜಯಪುರ ಆಕಾಶವಾಣಿ ಕೇಂದ್ರದಲ್ಲಿ 24ನೇ ಸಂಸ್ಥಾಪನೆ ದಿನವನ್ನು ಆಚರಿಸಲಾಯಿತು. ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಆಕಾಶವಾಣಿ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಟಾಟಿಸಿದರು. ನಂತರ ಮಾತನಾಡಿದ ಅವರು, ವಿಜಯಪುರ ಆಕಾಶವಾಣಿ ಕೇಂದ್ರವು1997ರ ಸೆ. 18 ರಂದು ಅಂದರೆ ಇದೇ ದಿನ ಅಸ್ತಿತ್ವಕ್ಕೆ ಬಂದಿದೆ. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳು ಸೇರಿದಂತೆ ನೆರೆಯ ಜಿಲ್ಲೆಯ ಜನರಿಗೂ ಸಹ ಆಕಾಶವಾಣಿ ನಿಲಯವು ಸೇವೆಯನ್ನು ಒದಗಿಸುತ್ತಿದೆ. ಸಮಾಜದ ಅಭಿವೃದ್ಧಿಗಾಗಿಯೂ ಶ್ರಮಿಸುತ್ತಿದೆ. ಸ್ಥಳೀಯ ಆಕಾಶವಾಣಿ ಕೇಂದ್ರವಾಗಿ ಕಾಲಕಾಲಕ್ಕೆ ಆಗುತ್ತಿರುವ […]

ಸೆ. 17ರಂದು ವಿಜಯಪುರ ಜಿಲ್ಲೆಯಲ್ಲಿ ಒಂದು ಲಕ್ಷ ಲಸಿಕೆ ಹಾಕಲು ಅಭಿಯಾನ- ಯೋಜನೆ ಕುರಿತು ಜಿಲ್ಲಾಧಿಕಾರಿಗಳಿಂದ ಪ್ರಗತಿ ಪರಿಶೀಲನೆ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಸೆ. 17ರಂದು ಒಂದು ಲಕ್ಷ ಜನರಿಗೆ ಲಸಿಕೆ ಹಾಕುವ ಅಭಿಯಾನವನ್ನು ಯಶಸ್ವಿಗೊಳಿಸುವ ಕುರಿತು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ತಾಳಿಕೋಟೆ, ಬಸವನ ಬಾಗೇವಾಡಿ, ದೇವರ ಹಿಪ್ಪರಗಿ ತಾಲೂಕುಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಸೆ. 17 ರಂದು ಆಯೋಜಿಸಲಾಗಿರುವ ಒಂದು ಲಕ್ಷ ಉಚಿತ ಲಸಿಕೆ ಹಾಕುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಸೂಚನೆ ನೀಡಿದರು. ಈ ಉಚಿತ ಲಸಿಕಾಕರಣ ಮೇಳದಲ್ಲಿ ಹೆಚ್ಚಿನ […]

ಬಸವ ಜನ್ಮಸ್ಥಳದಲ್ಲಿ ಪಂಚಮಸಾಲಿ ಸಮಾಜದ ವತಿಯಿಂದ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

ವಿಜಯಪುರ: ಪಂಚಮಸಾಲಿ ಸಮಾಜವನ್ನು 2A ಮೀಸಲಾತಿ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಅಖಲ ಭಾರತ ಲಿಂಗಾಯಿತ ಪಂಚಮಸಾಲಿ ಮಹಾಸಭೆ ರಾಷ್ಟ್ರೀಯ ಯುವ ಘಟಕದ ವತಿಯಿಂದ ಬಸವಣ್ಣನವರ ಜನ್ಮಸ್ಥಳ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬಸವೇಶ್ವರ ಚೌಕಿನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪಟ್ಟಣದ ಮಿನಿ ವಿಧಾನಸೌಧದ ವರೆಗೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಖಿಲ ಭಾರತ ಲಿಂಗಾಯಿತ ಪಂಚಮಸಾಲಿ ಮಹಾಸಭೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಬಿರಾದಾರ, ಅ. 1 ರೊಳಗೆ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು […]

ಗಣೇಶ ಮೂರ್ತಿ ವಿಸರ್ಜನೆ ಕಾಲಕ್ಕೆ ಕಾನೂನು ಸುವ್ಯವಸ್ಥೆ ಕಾಪಾಡಲು ಅಧಿಕಾರಿಗಳನ್ನು ನೇಮಕ ಮಾಡಿದ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಸಪ್ಟೆಂಬರ್ 14, 16, 18 ಮತ್ತು 20 ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಆದೇಶ ಹೊರಡಿಸಿದ್ದಾರೆ. ಗಣೇಶ ಮೂರ್ತಿಗಳ ವಿಸರ್ಜನೆ ದಿನಗಳಂದು ಈ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ಸೂಚನೆ ನೀಡಿದ್ದಾರೆ. ನಗರ, ಪಟ್ಟಣಗಳ ಹೆಸರು ಮತ್ತು ನೇಮಿಸಲಾದ ಅಧಿಕಾರಿಗಳ ಮಾಹಿತಿ ವಿಜಯಪುರ ನಗರ- ವಿಜಯಪುರ […]