ಸೆ. 08 ರಂದು ಬುಧವಾರ ಕೋವಿಡ್-19 ಲಸಿಕಾ ಮೇಳ ಆಯೋಜನೆ- ಎಲ್ಲೆಲ್ಲಿ ಗೊತ್ತಾ?

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಸೆ. 8 ರಂದು ಬುಧವಾರ ಕೋವಿಡ್-19 ಲಸಿಕಾ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಅಧ್ಯಕ್ಷ ಮತ್ತು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ಪ್ರತಿ ಬುಧವಾರ ಕೋವಿಡ್-19 ಲಸಿಕಾಕರಣದ ಮೇಳ ನಡೆಸಲು ಸರಕಾರ ನಿರ್ದೇಶನ ನೀಡಿದೆ. ಅದರಂತೆ ವಿಜಯಪುರ ಜಿಲ್ಲೆಯಲ್ಲಿ ಕೋವಿಡ್-19 ಲಸಿಕಾಕರಣದ ಮೇಳವನ್ನು ನಡೆಸಲಾಗುತ್ತಿದೆ. ಬುಧವಾರ ವಿಜಯಪುರ ಜಿಲ್ಲಾಸ್ಪತ್ರೆ, ತಾಲೂಕಾಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಉಪ ಆರೋಗ್ಯ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ ಎಂದು […]

ಕಂದು ರೋಗ ಲಸಿಕಾ ಕಾರ್ಯಕ್ರಮದಿಂದ ಜಾನುವಾರುಗಳು, ರೈತರಿಗೆ ಹೆಚ್ಚು ಅನುಕೂಲ- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಕರುಗಳ ಕಂದು ರೋಗ ಲಸಿಕಾ ಕಾರ್ಯಕ್ರಮ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು ಇದರಿಂದ ರೈತರಿಗೆ ಅದರಲ್ಲೂ ಬಡ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಹೇಳಿದರು. ವಿಜಯಪುರ ನಗರದ ಭೂತನಾಳ ಕೆರೆಯ ಹತ್ತಿರದ ಗೋಶಾಲೆಯಲ್ಲಿ ಪಶು ಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಆಯೋಜಿಸಲಾಗಿದ್ದ ಆಕಳು ಮತ್ತು ಎಮ್ಮೆಗಳ ಹೆಣ್ಣು ಕರುಗಳ ರಾಷ್ಟ್ರೀಯ ಕಂದು ರೋಗ ನಿಯಂತ್ರಣ ಕಾರ್ಯಕ್ರಮವನ್ನು ಕರುವಿಗೆ ಪೂಜೆ ಸಲ್ಲಿಸಿ, ಲಸಿಕೆ ಹಾಕುವ ಮೂಲಕ ಸಾಂಕೇತಿಕವಾಗಿ ಉದ್ಘಾಟಿಸಿ ಅವರು […]

ಬಸವ ನಾಡಿನಲ್ಲಿ 6 ರಿಂದ 8ನೇ ತರಗತಿ ಶಾಲೆಗಳು ಆರಂಭ- ಮಕ್ಕಳಿಂದ ಉತ್ತಮ ಪ್ರತಿಕ್ರಿಯೆ

ವಿಜಯಪುರ: ರಾಜ್ಯಾದ್ಯಂತ ಇಂದಿನಿಂದ 6 ರಿಂದ 8 ನೇ ತರಗತಿ ಶಾಲೆಗಳು ಆರಂಭವಾಗಿದ್ದು, ಗುಮ್ಮಟ ನಗರಿ ವಿಜಯಪುರದಲ್ಲಿಯೂ ತರಗತಿಗಳು ಪ್ರಾರಂಭವಾಗಿವೆ. ವಿದ್ಯಾರ್ಥಿಗಳು ಕೂಡ ಶಾಲೆಗೆ ಆಗಮಿಸುತ್ತಿದ್ದಾರೆ. ಕೊರೊನಾ ಭೀತಿಯ ಆತಂಕದಲ್ಲಿಯೃ ಮಕ್ಕಳು ಉತ್ಸಾಹದಿಂದ ಶಾಲೆಗೆ ಆಗಮಿಸಿದ್ದಾರೆ. ಎಲ್ಲ‌ ಶಾಲೆಗಳಲ್ಲಿ ಮಕ್ಕಳಿಗೆ ಸೈನಿಟೇಶನ್ ಹಾಕುವ ಜೊತೆಗೆ ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ತರಗತಿ ಪ್ರಾರಂಭ ಮಾಡಲಾಗಿದೆ. ಒಂದು ಬೇಂಚಿನಲ್ಲಿ ಒಬ್ಬರು ಇಲ್ಲವೇ ಇಬ್ಬರು ವಿದ್ಯಾರ್ಥಿಗಳನ್ನು ಕೂಡಿಸಿ ಪಾಠ ಮಾಡಲಾಗುತ್ತಿದೆ. ಒಂದು ತರಗತಿಯಲ್ಲಿ ಶೇ. 50 ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ […]

ಮಕ್ಕಳ ಜೀವನ ರೂಪಿಸುವಲ್ಲಿ ಶಿಕ್ಷಕರದು ಬಹಳ ಪ್ರಮುಖ ಪಾತ್ರ: ವಿಜಯಪುರ ಉಪ ವಿಭಾಗಾಧಿಕಾರಿ ಬಲರಾಮ ಲಮಾಣಿ

ವಿಜಯಪುರ: ತಂದೆ-ತಾಯಿಯ ನಂತರ ಮಕ್ಕಳ ಜೀವನ ರೂಪಿಸುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ ಹೇಳಿದ್ದಾರೆ. ವಿಜಯಪುರ ನಗರದ ಶ್ರೀ. ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಮಂಗಲ ಕಾರ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಂಯುಕ್ತಾಶ್ರಯದಲ್ಲಿ ಡಾ. ಎಸ್. ರಾಧಾಕೃಷ್ಣನ್ ಅವರ ಜನ್ಮದಿನೋತ್ಸವದ ಅಂಗವಾಗಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮನಸ್ಸಿಟ್ಟು ಪಾಠ ಮಾಡುವ ಶಿಕ್ಷಕರು ವಿದ್ಯಾರ್ಥಿಯ ಮನಸ್ಸಿನಲ್ಲಿ ಸದಾ ಇರುತ್ತಾರೆ. […]

ನಡು ರಸ್ತೆಯಲ್ಲಿ ಒಲೆಯ ಮೇಲೆ ಅಡುಗೆ ಮಾಡಿ ಪ್ರತಿಭಟನೆ ನಡೆಸಿದ ಗುಮ್ಮಟ ನಗರಿಯ ಕಾಂಗ್ರೆಸ್ ಕಾರ್ಯಕರ್ತರು

ವಿಜಯಪುರ: ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಡು ರಸ್ತೆಯಲ್ಲಿ ಒಲೆಯ ಮೇಲೆ ಅಡುಗೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರಕಾರ ತೈಲ ಬೆಲೆಯನ್ನು ಹೆಚ್ಚಿಸುತ್ತಿರುವುದರ ಜೊತೆಗೆ ಈಗ ಅಡುಗೆ ಅನಿಲದ ಬೆಲೆಯನ್ನು ಗಣನೀಯವಾಗಿ ಹೆಚ್ಚಳ ಮಾಡಿದೆ. ಇದರಿಂದ ಜನಸಾಮಾನ್ಯರಿಗೆ ಗಂಭೀರ ಹೊಡೆತ ಬಿದ್ದಿದ್ದು, ಕೊರೊನಾ ಸಂಕಷ್ಟದಲ್ಲಿ ಈಗಾಗಲೇ ತೊಂದರೆ ಇರುವ ಜನತೆಗೆ ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು. ವಿಜಯಪುರ ನಗರದ ಅಂಬೇಡ್ಕರ […]

ಕಾನೂನು ಗೌರವಿಸುವುದು ನಮ್ಮ ಆಧ್ಯ ಕರ್ತವ್ಯ: ವಿಜಯಪುರ ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಣ್ಣ ಬಿ. ಹೊಸಮನಿ

ವಿಜಯಪುರಛ ನಮ್ಮ ದೇಶದ ಕಾನೂನು ನಮ್ಮ ರಕ್ಷಣೆಗಾಗಿ ಇವೆ. ಅವುಗಳನ್ನು ಗೌರವಿಸುವುದು ನಮ್ಮ ಆಧ್ಯ ಕರ್ತವ್ಯವಾಗಿದೆ ಎಂದು ವಿಜಯಪುರ ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಣ್ಣ ಬಿ. ಹೊಸಮನಿ ಹೇಳಿದ್ದಾರೆ. ವಿಜಯಪುರ ನಗರದ ಜಲನಗರದ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪೌಷ್ಠಿಕ ಆಹಾರ ದಿನ ಮತ್ತು ರಾಷ್ಟ್ರೀಯ ಪೌಷ್ಠಿಕ ಸಪ್ತಾಹ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, 18 ವರ್ಷದ ಒಳಗಿನ ಮಕ್ಕಳ ಕೈಯಲ್ಲಿ ಪಾಲಕರು ವಾಹನವನ್ನು ನೀಡಿದ್ದಲ್ಲಿ ಪಾಲಕರೇ ಹೊಣೆಗಾರರು ಮತ್ತು ವಾಹನ ಚಾಲನೆ ಪರವಾನಿಗೆ […]

ಆಸ್ತಿ ತೆರಿಗೆ ಬಾಕಿಯನ್ನು ಫೆಬ್ರವರಿ ಅಂತ್ಯದೊಳಗೆ ಸಂಪೂರ್ಣ ವಸೂಲಿ ಮಾಡಲು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಸಿಬ್ಬಂದಿಗಳು ಬಾಕಿ ಇರುವ ಆಸ್ತಿ ತೆರಿಗೆಯನ್ನು ಫೆಬ್ರವರಿ ಅಂತ್ಯದೊಳಗೆ ಸಂಪೂರ್ಣ ವಸೂಲಿ ಮಾಡುವಂತೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅಧಿಕಾರಿಗಳಿಗೆ ಸೂಚಿನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ವಿಜಯಪುರ ಮಹಾನಗರಪಾಲಿಕೆ ನಾನಾ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಸಂಬಂಧಿಸಿದಂತೆ ತೆರಿಗೆ ಪಾವತಿಸಿ, ಅಭಿವೃದ್ಧಿಗೆ ಸಹಕರಿಸಬೇಕು. ರಸ್ತೆಗಳಲ್ಲಿ ಹಾಗೂ ಪ್ರಮುಖ ವೃತ್ತಗಳಲ್ಲಿನ ಪ್ರಚಾರ ತೆರಿಗೆ ಬಗ್ಗೆ ಪರಿಶೀಲಿಸಿ ಪ್ರಚಾರ […]

ಪದ್ಮಶ್ರೀ ಕಾಕಾ ಕಾರ್ಖಾನಿಸ ಪ್ರೌಢಶಾಲೆ ನಿರ್ಮಾಣ ಕಾಮಗಾರಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಶಂಕುಸ್ಥಾಪನೆ

ವಿಜಯಪುರ: ಪದ್ಮಶ್ರೀ ಕಾಕಾ ಕಾರ್ಖಾನಿಸ್ ಪ್ರೌಢಶಾಲೆ ನಿರ್ಮಿಸುವ ಕಾರ್ಯವನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಎಲ್ಲ ಚಟುವಟಿಕೆಗಳು ಪ್ರಾರಂಭವಾಗುವಂತೆ ನೋಡಿಕೊಳ್ಳಬೇಕು ಎಂದು ಜಲಸಂಪನ್ಮೂುಲ ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ನೀಡಿದ್ದಾರೆ. ವಿಜಯಪುರ ನಗರದಲ್ಲಿರುವ ಪದ್ಮಶ್ರೀ ಕಾಕಾ ಕಾರ್ ಖಾನಿಸ್ ಪ್ರೌಢಶಾಲೆ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, 2020-21ನೇ ವರ್ಷದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯ ಅಡಿಯಲ್ಲಿ ರೂ. 10 ಕೋ. ಮಂಜೂರಾಗಿದ್ದು, ಈ ಅನುದಾನದಲ್ಲಿ ಪ್ರೌಢಶಾಲೆಯ ವಿಜ್ಞಾನ ಪ್ರಯೋಗಾಲಯ, ವಾಚನಾಲಯ, ದೈಹಿಕ ಶಿಕ್ಷಣ […]

ಬಿ ಎಲ್ ಡಿ ಇ ಸಂಸ್ಥೆಯ ಫಾರ್ಮಸ್ಸಿ ಕಾಲೇಜಿನಲ್ಲಿ ಆಜಾದಿ‌ ಕಾ ಅಮೃತ ಮಹೋತ್ಸವ ಕಾರ್ಯಕ್ರಮ

ವಿಜಯಪುರ: ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯವಾಗಿದೆ ಎಂದು ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರದ ಕಾರ್ಯದರ್ಶಿ ಡಾ. ಎಂ. ಎಸ್. ಮಧಬಾವಿ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ಶ್ರೀ. ಸಂಗನ ಬಸವ ಕಾಲೇಜ್ ಆಫ್ ಫಾರ್ಮಸಿ ಮತ್ತು ಸಂಶೋಧನೆ ಕೇಂದ್ರದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮಾತನಾಡಿದರು. ಸ್ವಾತಂತ್ರ್ಯ ಚಳವಳಿಯ ಇತಿಹಾಸವನ್ನು ಘಟನೆಗಳನ್ನು ಶಿಕ್ಷಕರು ಮಕ್ಕಳಿಗೆ […]

ಬಸವ ನಾಡಿನಲ್ಲಿ ಮನೆ ದೇವರಿಗೆ ಬೆಳ್ಳಿ ಪಲ್ಲಕ್ಕಿ ಅರ್ಪಿಸಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ- ಎಲ್ಲಿ ಗೊತ್ತಾ?

ವಿಜಯಪುರ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಸವ ನಾಡು ವಿಜಯಪುರ ಜಿಲ್ಲೆಗೆ ಭೇಟಿ ನೀಡಿದ್ದು ತಮ್ಮ ಮನೆ ದೇವರಿಗೆ ಪಲ್ಲಕ್ಕಿಯನ್ನು ಅರ್ಪಿಸಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ದೇವರ ಉಪ್ಪಲದಿನ್ನಿ ಗ್ರಾಮಕ್ಕೆ ಆಗಮಿಸಿದ್ದ ಲಕ್ಷ್ಮಣ ಸವದಿ, ನೂತನ ಬೆಳ್ಳಿ ಪಲ್ಲಕ್ಕಿ ಹಾಗೂ ಬಸವಣ್ಣ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪಾಲ್ಗೋಂಡರು. ಈ ಸಂದರ್ಭದಲ್ಲಿ ಲಕ್ಷ್ಮಣ ಸವದಿ ಕುಟುಂಬ ಸದಸ್ಯರು ಸುಕ್ಷೇತ್ರ ಉಪ್ಪಲದಿನ್ನಿ ಗ್ರಾಮದ ಮುಗ್ದ ಸಂಗಮೇನಾಥ ದೇವಸ್ಥಾನಕ್ಕೆ ಬೆಳ್ಳಿ ಪಲ್ಲಕ್ಕಿಯನ್ನು ಸಕಾಣಿಕೆ ನೀಡಿದರು. ಬಳಿಕ ಧರ್ಮಸಭೆಯಲ್ಲಿ ಭಾಗವಹಿಸಿ ಮಾತನಾಡಿದ […]