ತಿಕೋಟಾ ತಾಲೂಕಿನ ನಾನಾ ಕಡೆ ಜಿ. ಪಂ. ಸಿಇಓ ರಿಷಿ ಆನಂದ ಭೇಟಿ- ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿ ರಿಷಿ ಆನಂದ ಅವರು ತಿಕೋಟಾ ತಾಲೂಕಿನ ಸಿದ್ದಾಪುರ ಗ್ರಾ. ಪಂ., ಸರಕಾರಿ ಗ್ರಂಥಾಲಯ, ಪ್ರೌಢಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿದ್ಧಾಪುರ(ಕೆ) ಗ್ರಾ. ಪಂ. ಗೆ ಭೇಟಿ ನೀಡಿದ ಅವರು ಮಹಾತ್ಮ ಗಾಂಧಿ ನರೇಗಾ ಯೋಜನೆ, ಸ್ವಚ್ಛ ಭಾರತ ಮಿಷನ್(ಗ್ರಾ), 15ನೇ ಹಣಕಾಸು, ತೆರಿಗೆ ವಸೂಲಾತಿ ಸೇರಿ ವಿವಿಧ ಅನುದಾನಗಳು, ಹಾಗೂ ಕುಡಿಯುವ ನೀರಿನ ಕುರಿತು, ಬೀದಿ ದೀಪಗಳ ನಿರ್ವಹಣೆ ಸೇರಿ ವಿವಿಧ ಯೋಜನೆಗಳ ಹಾಗೂ ಕಾರ್ಯಕ್ರಮಗಳ ಕುರಿತು […]

ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಾಗೃತಿ ಮೂಡಿಸಿ- ಜಿಲ್ಲಾಧಿಕಾರಿ ಟಿ. ಭೂಬಾಲನ್

ವಿಜಯಪುರ: ಜಿಲ್ಲೆಯಲ್ಲಿ ಅಪಘಾತ ಪ್ರಕರಣಗಳು ಸಂಭವಿಸದಂತೆ ರಸ್ತೆ ಸುರಕ್ಷತಾ ನಿಮಮಗಳು ಪಾಲನೆಯಾಗುವಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಮುಂಜಾಗೃತ ಕ್ರಮ ವಹಿಸಿಕೊಂಡು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ  ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಂಣದಲ್ಲಿ ನಡೆದ  ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ವಾಹನ ಸವಾರರು ಕಡ್ಡಾಯವಾಗಿ  ರಸ್ತೆ ನಿಯಮಗಳನ್ನು ಪಾಲಿಸುವಂತೆ ಜಾಗೃತಿ ಮೂಡಿಸಬೇಕು. ವೈಜ್ಞಾನಿಕವಾಗಿ ರಸ್ತೆಗಳನ್ನು ನಿರ್ಮಿಸಬೇಕು. ಅಪಘಾತ ತಡೆಗೆ ಸಂಬಂಧಿಸಿದ […]

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸನ್ನದ್ಧರಾಗಿ- ಟಿ. ಭೂಬಾಲನ್

ವಿಜಯಪುರ: ಬೇಸಿಗೆಯ ಸಂದರ್ಭದಲ್ಲಿ ಜಿಲ್ಲಾದ್ಯಂತ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಈಗಿನಿಂದಲೇ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ  ಕುಡಿಯುವ ನೀರಿನ ನಿರ್ವಹಣೆ ಹಾಗೂ ನೀರಿನ ಸ್ಥಿತಿಗತಿ ಕುರಿತು ಸಭೆ ನಡೆಸಿದ ಅವರು, ಈಗಿನಿಂದಲೇ ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದಾದ ಗ್ರಾಮಗಳನ್ನು ಗುರುತಿಸಿಟ್ಟುಕೊಳ್ಳಬೇಕು.  ಸಮಸ್ಯಾತ್ಮಕ ಪ್ರದೇಶಗಳಲ್ಲಿ ಪಂಚಾಯತಿ ವತಿಯಿಂದ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು.  […]

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅವೈಜ್ಞಾನಿಕ ಶಿಕ್ಷಣ ನೀತಿ ಆರೋಪ- ಎಬಿವಿಪಿ ಬೃಹತ್ ಪ್ರತಿಭಟನೆ

ವಿಜಯಪುರ: ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಶ್ರೀ ಸಿದ್ದೇಶ್ವರ ದೇವಾಲಯ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಕಾರ್ಯಕರ್ತರು, ಗಾಂಧಿಚೌಕ್ – ಬಸವೇಶ್ವರ ಚೌಕ್ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.  ಅಲ್ಲದೇ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ವಿರುದ್ಧ ಧಿಕ್ಕಾರ ಘೋಷಣೆ ಹಾಕಿದರು.  ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕ್ಕಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ, ಅನೇಕ […]

ಫೆ. 14 ರಂದು ಚಡಚಣದಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸ್ವೀಕಾರ

ವಿಜಯಪುರ: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಫೆ. 14 ರಂದು ಚಡಚಣ ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ (ಮೊ:9364062528), ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ (ಮೊ:9364062557), ಪೊಲೀಸ್ ಇನ್ ಸ್ಪೆಕ್ಟರ್-1 (ಮೊ:9364062640), ಪೊಲೀಸ್ ಇನ್ಸ್‍ಪೆಕ್ಟರ್-2 (ಮೊ: 9364062639) ಇವರು ಅಂದು ಬೆಳಿಗ್ಗೆ 11 ಗಂಟೆಯಿಂದ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಈ ಅಹವಾಲು ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು.  ಸರಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು […]

ವಿಜಯಪುರ ಬಸವೇಶ್ವರ ಚೌಕಿನಲ್ಲಿ ಟ್ಯಾಂಕರ್ ಪಲ್ಟಿ- ಚಾಲಕನಿಗೆ ಗಾಯ

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ವಾಹನ ಪಲ್ಟಿಯಾದ ಘಟನೆ ವಿಜಯಪುರ ನಗರದ ಬಸವೇಶ್ವರ ಚೌಕ್ ನಲ್ಲಿ ನಡೆದಿದೆ. ನಸುಕಿನ ಜಾವ ಟ್ಯಾಂಕರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಜೆಡಿಎಸ್ ಕಚೇರಿ ಮತ್ತು ಜಯಶ್ರೀ ಟಾಕೀಸ್ ಪಕ್ಕದಲ್ಲಿ ಪಲ್ಟಿಯಾಗಿದೆ.  ಈ ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ಅ ಅಪಘಾತದಿಂದಾಗಿ ರಸ್ತೆಯಲ್ಲಿ ಕೆಲಕಾಲ ವಾಹನಗಳ ಸಂಚಾರ ಬಂದ್ ಆಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಂಚಾರಿ ಪೊಲೀಸರು ಪಲ್ಟಿಯಾದ ಟ್ಯಾಂಕರ್ ವಾಹನವನ್ನು ಕ್ರೇನ್ ಸಹಾಯದಿಂದ ತೆರವು ಮಾಡಿ ವಾಹನಗಳ […]

ವಿಜಯಪುರ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು ಭೇಟಿ, ಪರಿಶೀಲನೆ

ವಿಜಯಪುರ: ನಗರದ ಕೇಂದ್ರ ಕಾರಾಗೃಹಕ್ಕೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಭೆ ಅವರು ಭೇಟಿ ನೀಡಿ, ಕಾರಾಗೃಹ ಬಂದಿಗಳ ಆರೋಗ್ಯ, ಆಹಾರ, ಮೂಲ ಸೌಕರ್ಯದ ಜೊತೆಗೆ ಅವರ ಮಕ್ಕಳ ಕುರಿತು ಮಾಹಿತಿ ಪಡೆದರು. ಕಾರಾಗೃಹ ಬಂದಿಗಳ ಅವರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಸ್ಥಿತಿಗತಿಗಳ ಕುರಿತು ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಕಾರಾಗೃಹದ ಅಧಿಕಾರಿಗಳು ಮತ್ತು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅವರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕಾರಾಗೃಹದ ಪ್ರಭಾರ ಅಧೀಕ್ಷಕರಾದ ಮಂಜುನಾಥ […]

ರೂ. 32.15 ಲಕ್ಷ ಮೌಲ್ಯದ 202.38 ಗ್ರಾಂ ಮಾದಕ ವಸ್ತು ನಾಶಪಡಿಸಿದ ಪೊಲೀಸರು

ವಿಜಯಪುರ: ಜಿಲ್ಲೆಯಲ್ಲಿ ದಾಖಲಾದ ಎನ್‌ ಡಿ ಪಿ ಎಸ್ ನಡಿ ದಾಖಲಾದ 32 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳನ್ನು ಪೊಲೀಸರು ನಾಶಪಡಿಸಿದ್ದಾರೆ. ಜಿಲ್ಲೆಯಲ್ಲಿ ಎನ್ ಡಿ ಪಿ ಎಸ್ ಕಾಯಿದೆಯಡಿ ಒಟ್ಟು 32 ಪ್ರಕರಣಗಳಲ್ಲಿ ರೂ. 32 ಲಕ್ಷ 15 ಸಾವಿರದ 450 ಮೌಲ್ಯದ 202.380 ಗ್ರಾಂ ಮಾದಕ ವಸ್ತುಗಳನ್ನು ಮತ್ತು ಮಾದ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿತ್ತು.   ಪೊಲೀಸ್ ಪ್ರಧಾನ ಕಚೇರಿ ಆದೇಶದ ಹಿನ್ನೆಲೆಯಲ್ಲಿ ಜಿಲ್ಲಾ ಮಾದಕ ವಸ್ತುಗಳ ವಿಲೇವಾರಿ ಸಮೀತಿಯ ನೇತೃತ್ವದಲ್ಲಿ ವಿಜಯಪುರ ನಗರದ ಇಂಡಿ […]

ಕೇಂದ್ರ ಜಲ ಶಕ್ತಿ ತಂಡದಿಂದ ಇಂಡಿ ತಾಲೂಕಿನ ನಿಂಬಾಳ ಕೆ. ಡಿ., ಕೊಳುರಗಿ, ಬಬಲಾದ, ಹೊರ್ತಿ, ಚವಡಿಹಾಳ ಕ್ಷೇತ್ರ ಭೇಟಿ

ವಿಜಯಪುರ:   ಗಣಿ ಸಚಿವಾಲಯದ ನಿರ್ದೇಶಕರು ಹಾಗೂ ಕೇಂದ್ರ ಜಲ ಶಕ್ತಿ ತಂಡದ ಕೇಂದ್ರ ನೋಡಲ್ ಅಧಿಕಾರಿಗಳಾದ ವಿವೇಕ ಕುಮಾರ ಶರ್ಮಾ ಮತ್ತು ವಿಜ್ಞಾನಿಗಳು(ಬಿ), ಜಲವಿಜ್ಞಾನ, ಕೇಂದ್ರ ಅಂತರ್ಜಲ ಮಂಡಳಿ ಆಯುಶ್ ಕೇಶರ್ವಾಣಿ ಅವರು ಇಂಡಿ ತಾಲೂಕಿನ ನಿಂಬಾಳ ಕೆ. ಡಿ, ಕೊಳುರಗಿ, ಬಬಲಾದ, ಹೊರ್ತಿ ಹಾಗೂ ಚವಡಿಹಾಳ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದರು. ನಿಂಬಾಳ ಕೆ.ಡಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಬೋರ್‌ವೆಲ್ ಮರುಪೂರಣ ಘಟP,À ಕೊಳುರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾವಳಸಂಗ ಗ್ರಾಮದ ಸಾಮಾಜಿಕ ಅರಣ್ಯ […]

ಕೇಂದ್ರ ಜಲ ಶಕ್ತಿ ತಂಡದಿಂದ ಜಿಲ್ಲೆಯ ನಾನಾ ಗ್ರಾಮ ಪಂಚಾಯಿತ್ಗಿಳಿಗೆ ಭೇಟಿ, ಪರಿಶೀಲನೆ

ವಿಜಯಪುರ: ಗಣಿ ಸಚಿವಾಲಯದ ನಿರ್ದೇಶಕರು ಹಾಗೂ ಕೇಂದ್ರ ಜಲ ಶಕ್ತಿ ತಂಡದ ಕೇಂದ್ರ ನೋಡಲ್ ಅಧಿಕಾರಿಗಳಾದ ವಿವೇಕ ಕುಮಾರ ಶರ್ಮಾ ಮತ್ತು ವಿಜ್ಞಾನಿಗಳು, ಜಲವಿಜ್ಞಾನ, ಕೇಂದ್ರ ಅಂತರ್ಜಲ ಮಂಡಳಿ ಆಯುಷ್ ಕೇಶರ್ವಾಣಿ ಅವರನ್ನೊಳಗೊಂಡ ತಂಡ ವಿಜಯಪುರ ತಾಲೂಕಿನ ಹೆಗಡಿಹಾಳ, ಐನಾಪುರ ಹಾಗೂ ಹಡಗಲಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ಪರಿಶೀಲನೆ ನಡೆಸಿತು. ಹೆಗಡಿಹಾಳ ಗ್ರಾಮ ಅಮೃತ ಸರೋವರ, ಬೋರ್ ವೆಲ್ ಮರು ಪೂರಣ ಘಟಕ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು. ನಂತರ ಅಮೃತ […]