ಎಸ್ ಎಸ್ ಎಲ್ ಸಿ ನಕಲು ಮುಕ್ತ ಪರೀಕ್ಷೆ ನಡೆಸಿ- ಕೊರೊನಾ ಮಾರ್ಗಸೂಚಿಯಂತೆ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಿ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಎಸ್. ಎಸ್. ಎಲ್. ಸಿ. ಮುಖ್ಯ ಪರೀಕ್ಷೆಗಳ ಸಂದರ್ಭದಲ್ಲಿ ನಕಲು ಮುಕ್ತ ಪರೀಕ್ಷೆ ನಡೆಸಿ ಹಾಗೂ ಕೊರೊನಾ ಮಾರ್ಗಸೂಚಿಗಳ ಅನ್ವಯ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳ ಕಛೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ಮಾತನಾಡಿದ ಅವರು, ಜು. 19 ರಿಂದ 22 ರವರೆಗೆ ಜಿಲ್ಲೆಯ ಒಟ್ಟು 188 ಪರೀಕ್ಷೆ ಕೇಂದ್ರಗಳಲ್ಲಿ ಎಸ್. ಎಸ್. ಎಲ್. ಸಿ. ಪರೀಕ್ಷೆ ನಡೆಯಲಿದೆ‌. […]

ನಿರಾಣಿ ಫೌಂಡೇಶನ್ ವತಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೃಸರ್ ವಿತರಣೆ

ವಿಜಯಪುರ: ಶೈಕ್ಷಣಿಕ ಬದುಕಿನ ಮೊದಲ ಪ್ರಮುಖ‌ ಯುದ್ಧ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಗೆಲ್ಲಲು ತಾವೆಲ್ಲರೂ ಈಗಾಗಲೇ ಸನ್ನದ್ಧರಾಗಿದ್ದಿರಿ. ಜು. 19 ರಿಂದ 22 ರವರೆಗೆ ತಮ್ಮ ಪರೀಕ್ಷೆ ಅತ್ಯಂತ ಶಿಸ್ತುಬದ್ಧತೆ ಮತ್ತು ಕೊರೊನಾ ನಿಯಮಗಳನ್ನು ಅನುಸರಿಸಿ ಕಾಳಜಿ ಪೂರ್ವಕವಾಗಿ ಬರೆಯಬೇಕು ಎಂದು ವಿಧಾನ ಪರಿಷತ ಬಿಜೆಇ ಸದಸ್ಯ ಹನುಮಂತ ನಿರಾಣಿ ಅವರು ಹೇಳಿದ್ದಾರೆ‌ ವಿಜಯಪುರ ನಗರದ ಅಲ್ ಅಮಿನ್ ಆಸ್ಪತ್ರೆ ಬಳಿಬಿರುವ ಇರುವ, ಶಿಕ್ಷಕರ ತರಬೇತಿ ಸಂಸ್ಥೆ (ಡಯಟ್)ಯಲ್ಲಿ ಎಸ್ ಎಸ್ ಎಲ್ ವಿದ್ಯಾರ್ಥಿಗಳಿಗೆ […]

ಗ್ರಾ‌ ಪಂ. ಸದಸ್ಯರು ಕೇವಲ ಶಾಸಕರ ಅವಲಂಬಿಸದೆ ಪ್ರಾಮಾಣಿಕವಾಗಿ ಅಭಿವೃದ್ಧಿಗೆ ಕೈಜೋಡಿಸಬೇಕು- ಸುನೀಲಗೌಡ ಪಾಟೀಲ

ವಿಜಯಪುರ: ಗ್ರಾಮಗಳ ಅಭಿವೃದ್ಧಿಗೆ ಗ್ರಾ. ಪಂ. ಸದಸ್ಯರು ಕೇವಲ ಶಾಸಕರನ್ನು ಅವಲಂಬಿಸದೇ ತಾವೂ ಕೂಡ ಪ್ರಾಮಾಣಿಕವಾಗಿ ಕೈಜೋಡಿಸಿದರೆ ಅಭಿವೃದ್ಧಿ ಕಾರ್ಯಗಳು ವೇಗವಾಗಿ ಆಗುತ್ತವೆ ಎಂದು ವಿಜಯಪುರ-ಬಾಗಲಕೋಟ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತೊರವಿ ಗ್ರಾಮದ ಲಕ್ಷ್ಮೀ ದೇವಸ್ಥಾನದಲ್ಲಿ ತಿಕೋಟಾ ತಾಲೂಕಿನ ಗ್ರಾ. ಪಂ. ನೂತನ ಸದಸ್ಯರನ್ನು ಸನ್ಮಾನಿಸಿ ಮಾತನಾಡಿದ ಅವರು, ಕೊರೊನಾ ಕಾಯಿಲೆ ಅಥವಾ ಇನ್ನಿತರ ಕಾಯಿಲೆಗಳನ್ನು ಹೋಗಲಾಡಿಸಲು ಗ್ರಾಮಗಳ ಸ್ವಚ್ಚತೆ ಬಗ್ಗೆ ಜನರಲ್ಲಿ ಜಾಗೃತಿ […]

ವಿಜಯಪುರ ನೂತನ ಎಸ್ಪಿಯಾಗಿ ಎಚ್. ಡಿ. ಆನಂದ ಕುಮಾರ- ವಿಜಯಪುರ ಜಿಲ್ಲೆಗೂ ನೂತನ ಎಸ್ಪಿಗೂ ಯಾವ ನಂಟಿದೆ ಗೊತ್ತಾ?

ವಿಜಯಪುರ: ವಿಜಯಪುರ ನೂತನ ಎಸ್ಪಿಯಾಗಿ ಆಂತರಿಕ ಭದ್ರತೆ ವಿಭಾಗದ ಎಸ್ಪಿಯಾಗಿರುವ ಎಚ್. ಡಿ. ಆನಂದ ಕುಮಾರ ಅವರನ್ನು ಸರಕಾರ ವರ್ಗಾವಣೆ ಮಾಡಿದೆ. ಎಚ್. ಡಿ. ಆನಂದ ಕುಮಾರ 2012ನೇ ವರ್ಷದ ಐಪಿಎಸ್ ಅಧಿಕಾರಿಯಾಗಿದ್ದು, ಈಗಾಗಲೇ ಚಾಮರಾಜನಗರ ಸೇರಿದಂತೆ ನಾನಾ ಕಡೆ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದಾರೆ. ಎಚ್. ಡಿ. ಆನಂಗ ಕುಮಾರ ಅವರಿಗೂ ವಿಜಯಪುರಕ್ಕೂ ಹಳೆಯ ನಂಟಿದೆ. ಈ ಹಿಂದೆ ವಿಜಯಪುರ ನಗರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಆರೋಪ ಪ್ರಕರಣವನ್ನು ಸರಕಾರ ಸಿಐಡಿಗೆ […]

ವಿಜಯಪುರ ಎಸ್ಪಿ ಅನುಪಮ ಅಗ್ರವಾಲ ವರ್ಗಾವಣೆ, ಎಚ್. ಡಿ. ಆನಂದ ಕುಮಾರ ನೂತನ ಎಸ್ಪಿ

ವಿಜಯಪುರ: ವಿಜಯಪುರ ಎಸ್ಪಿ ಅನುಪಮ ಅಗ್ರವಾಲ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕಳೆದ ಒಂದೂವರೆ ವರ್ಷದಿಂದ ಎಸ್ಪಿಯಾಗಿದ್ದ ಅನುಪಮ ಅಗ್ರವಾಲ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದರು. ಅನುಪಮ ಅಗ್ರವಾಲ ಅವರ ಜಾಗಕ್ಕೆ ಆಂತರಿಕ ಭದ್ರತೆ ವಿಭಾಗದ ಎಸ್ಪಿಯಾಗಿರುವ ಎಚ್. ಡಿ. ಆನಂದ ಕುಮಾರ ಅವರನ್ನು ವಿಜಯಪುರದ ನೂತನ ಎಸ್ಪಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ವಿಜಯಪುರದಿಂದ ವರ್ಗಾವಣೆ ಮಾಡಿರುವ ಅನುಪಮ ಅಗರವಾಲ ಅವರಿಗೆ ಯಾವುದೇ ಜಾಗವನ್ನು ತೋರಿಸಲಾಗಿಲ್ಲ. ಈ ಇಬ್ಬರೂ ಐಪಿಎಸ್ ಆಧಿಕಾರಿಗಳನ್ನು ವರ್ಗಾವಣೆ ಮಾಡಿ ಸರಕಾರದ […]

16 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ನನ್ನ ಕನಸಿನ ಕೂಸು- ಇದರ ಬಗ್ಗೆ ಮಾತನಾಡಲು ಯಾರ ಅನುಮತಿ ಬೇಕಿಲ್ಲ- ಎಂ. ಬಿ. ಪಾಟೀಲ

ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ 16 ಕೆರೆಗಳನ್ನು ತುಂಬಿಸುವ ಯೋಜನೆ ನನ್ನ ಕನಸಿನ ಕೂಸು. ಈ ಯೋಜನೆಯ ಬಗ್ಗೆ ಮಾತನಾಡಲು ಯಾರ ಅನುಮತಿಯೂ ಬೇಕಿಲ್ಲ ಎಂದು ಮಾಜಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾನು ಶಾಸಕನಾಗಿದ್ದಾಗ ನೀರಾವರಿ ಯೋಜನೆಗಳ ಬಗ್ಗೆ ಮಾತನಾಡಿದ್ದೇನೆ. ಜಲಸಂಪನ್ಮೂಲ ಸಚಿವನಾಗಿದ್ದಾಗಲೂ ಮಾತನಾಡಿದ್ದೇನೆ. ಮುಂದೆಯೂ ಮಾತನಾಡುತ್ತೇನೆ ಎಂದು ಸ್ಪಷ್ಟಪಡಿಸಿದರು. ತಿಡಗುಂದಿ ಅಕ್ವಾಡಕ್ಟ್ ಮೂಲಕ 16 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮೂಲ‌ ಮತ್ತು ಪರಿಷ್ಕೃತ ಯೋಜನೆಯಲ್ಲಿ […]

ವಿಜಯಪುರ ಆಯುಷ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಹಾರ್ಟ್ ಕೇರ್ ಸೆಂಟರ್ ಆರಂಭ

ವಿಜಯಪುರ: ವಿಜಯಪುರದ ಪ್ರತಿಷ್ಠಿತ ಆಯುಷ್ ಆಸ್ಪತ್ರೆಯಲ್ಲಿ ಈಗ ಪ್ರತ್ಯೇಕವಾಗಿ ಹಾರ್ಟ್ ಕೇರ್ ಸೆಂಟರ್ ಆರಂಭವಾಗಿದೆ. ಈ ವಿಭಾಗವನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಯರನಾಳ ಶ್ರೀ ಸಂಗನಬಸವ ಸ್ವಾಮೀಜಿ ಮತ್ತು ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಗನ ಬಸವ ಶ್ರೀಗಳು ಮತ್ತು ಶಾಸಕ ಶಿವಾನಂದ ಪಾಟೀಲ ಆಯುಷ್ ಆಸ್ಪತ್ರೆಯ ಸೇವೆಯನ್ನು ಶ್ಲಾಘಿಸಿದರು. ಅಲ್ಲದೇ, ಇಲ್ಲಿನ ಸಿಬ್ಬಂದಿಯ ಕಾರ್ಯ ವೈಖರಿಯನ್ನು ಪ್ರಶಂಶಿಸಿದರು. ಈ ಆಸ್ಪತ್ರೆಯಿಂದ ರೋಗಿಗಳಿಗೆ ಮತ್ತಷ್ಟು ಗುಣಮಟ್ಟದ […]

ಕಾಲಘಟಕ್ಕೆ ತಕ್ಕಂತೆ ಆರೋಗ್ಯಪೂರ್ಣ ಸ್ಪರ್ಧೆಯ ಮೂಲಕ ಶೈಕ್ಷಣಿಕ ಸಂಸ್ಥೆಗಳನ್ನು ಬೆಳೆಸಬೇಕು- ಎಂ. ಬಿ. ಪಾಟೀಲ

ವಿಜಯಪುರ: ಬದಲಾದ ಕಾಲಘಟ್ಟಕ್ಕೆ ತಕ್ಕಂತೆ ಆರೋಗ್ಯ ಪೂರ್ಣ ಸ್ಪರ್ಧೆಯ ಮೂಲಕ ಶೈಕ್ಷಣಿಕ ಸಂಸ್ಥೆಗಳನ್ನು ಎತ್ತರಕ್ಕೆ ತೆಗೆದುಕೊಂಡು ಹೋಗಬೇಕಿದೆ ಎಂದು ಬಿ ಎಲ್‌ ಡಿ ಇ ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಮತ್ತು ಮಾಜಿ ಸಚಿವ ಎಂ. ಬಿ. ಪಾಟೀಲ ಕರೆ ನೀಡಿದ್ದಾರೆ. ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ವಿಶ್ವವಿದ್ಯಾಲಯದ ನೂತನ ಉಪಕುಲಪತಿಗಳಾಗಿ ಡಾ. ಆರ್. ಎಸ್. ಮುಧೋಳ ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಮಾತನಾಡಿದ ಅವರು, ಕೊರೊನಾ ಕಾಯಿಲೆ ಎರಡನೇ ಅಲೆ ಸಂದರ್ಭದಲ್ಲಿ ಬಿ ಎಲ್ ಡಿ […]

ಇಂಡಿಯಲ್ಲಿ ಪುರಸಭೆ ಕಾರ್ಯಾಲಯ, ಮೆಗಾ ಮಾರ್ಕೆಟ್ ನಿರ್ಮಾಣಕ್ಕೆ ಶಂಕುಸ್ಥಾಪನೆ

ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಪುರಸಭೆ ಕಾರ್ಯಾಲಯ ಮತ್ತು ಮೆಗಾ ಮಾರ್ಟ್ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಈ ಕಾಮಗಾರಿಗೆ ವಿಧಾನ ಪರಿಷತ ಪ್ರತಿಪಕ್ಷದ ನಾಯಕ ಎಸ್. ಆರ್. ಪಾಟೀಲ ಮತ್ತು ಚಮಕೇರಿ ಸದಾಶಿವ ಮಠಾಧೀಶ ಶಿವಯ್ಯ ಮಹಾಸ್ವಾಮಿಗಳು ಹಾಗೂ ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ರಾಹುಲ ಶಿಂಧೆ ಸೇರಿದಂತೆ ನಾನಾ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ರವಿವಾರ ರಜಾ ದಿನವೂ ನಗರದ ನಾನಾ ಅಭಿವೃದ್ದಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ರವಿವಾರ ರಜೆ ದಿನವಾಗಿರುವುದರಿಂದ ಬಹುತೇಕ ಅಧಿಕಾರಿಗಳು ರಜೆಯಲ್ಲಿರುವುದು ಮಾಮೂಲು. ಆದರೆ, ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮಾತ್ರ ರಜೆ ದಿನವಾಗಿದ್ದರೂ ವಿಜಯಪುರ ನಗರದ ನಾನಾ ಸ್ಥಳಗಳಲ್ಲಿ ಮಹಾನಗರಪಾಲಿಕೆ ವತಿಯಿಂದ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಮತ್ತು ನಾನಾ ಯೋಜನೆಗಳಲ್ಲಿ ಮಂಜೂರಾದ ಕಾಮಗಾರಿಗಳನ್ನು ಪರಶೀಲನೆ ನಡೆಸಿದರು. ಮೊದಲಿಗೆ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ವರೆಗೆ ನಡೆಯುತ್ತಿರುವ ಸಿಸಿ ರಸ್ತೆ ಮತ್ತು ಫುಟ್ ಪಾತ್ ಕಾಮಗಾರಿಯನ್ನು ವೀಕ್ಷಿಸಿದ ಅವರು, ಈ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಗುತ್ತಿಗೆದಾರರಿಗೆ […]