ಮಲೇರಿಯಾಮುಕ್ತ ರಾಷ್ಟ್ರ ನಿರ್ಮಾಣಕ್ಕೆ ತಾಲೂಕು ಆರೋಗ್ಯಾಧಿಕಾರಿ ಡಾ. ಕವಿತಾ ಕರೆ

ವಿಜಯಪುರ: 2030 ರೊಳಗಾಗಿ ಭಾರತವನ್ನು ಮಲೇರಿಯಾ ಮುಕ್ತ ದೇಶವನ್ನಾಗಿಸೋಣ. ಈ ನಿಟ್ಟಿನಲ್ಲಿ ಮಾಧ್ಯಮದವರ ಪಾತ್ರ ಬಹು ಮುಖ್ಯವಾದದ್ದು ಎಂದು ವಿಜಯಪುರ ತಾಲೂಕು ಆರೋಗ್ಯಾಧಿಕಾರಿ ಕವಿತಾ ಕರೆ ನೀಡಿದ್ದಾರೆ. ವಿಜಯಪುರ ನಗರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಭವನದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಮಲೇರಿಯಾ ಹಾಗೂ ಮಾಧ್ಯಮ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾಧ್ಯಮದವರು ಹಗಲು-ರಾತ್ರಿ ಎನ್ನದೆ ಇಂಥ ಪರಿಸ್ಥಿತಿ ಮಧ್ಯೆ ಕೊರೊನಾ ನಿಯಂತ್ರಣ ಮಾಡುವಲ್ಲಿ ತುಂಬಾ ಶ್ರಮ ವಹಿಸುತ್ತಿದ್ದಾರೆ. ಮಾಧ್ಯಮಗಳ […]

ಪ್ರವಾಹ ಪರಿಸ್ಥಿತಿ ಎದುರಿಸಲು ಸಿದ್ಧರಿದ್ದೇವೆ ಎಂದು ಸಿಎಂಗೆ ಭರವಸೆ ನೀಡಿದ ವಿಜಯಪುರ ಜಿಲ್ಲಾಧಿಕಾರಿ

ವಿಜಯಪುರ: ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ಅತೀವೃಷ್ಠಿ ಮತ್ತು ಪ್ರವಾಹ ನಿಯಂತ್ರಣ ಕುರಿತು ಜಿಲ್ಲಾಧಿಕಾರಿಗಳ ಜೊತೆ ಸಿಎಂ ಬಿ. ಎಸ್. ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ಸಭೆಯಲ್ಲಿ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಕೂಡ ಭಾಗಿಯಾಗಿದರು. ಸಂಭವನೀಯ ಪ್ರವಾಹ ಸಿದ್ಧತೆಗಳ ಬಗ್ಗೆ ಸಿಎಂ‌ ಯಡಿಯೂರಪ್ಪಗೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮಾಹಿತಿ ನೀಡಿದರು. ಚಾಮರಾಜನಗರದಿಂದ ಸಿಎಂ ಸಭೆಗೆ ಹಾಜರಾದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಕಳೆದ ಬಾರಿ ಮಹಾರಾಷ್ಟ್ರ ಅಧಿಕಾರಿಗಳು ಸರಿಯಾದ ಮಾಹಿತಿ ನೀಡದ […]

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗುಂದವಾನ ಸರಕಾರಿ ಶಾಲೆಗೆ ರೂ. 2.10 ಕೋ. ಅನುದಾನ- ಸಂಸದ ರಮೇಶ ಜಿಗಜಿಣಗಿ ಸಂತಸ

ವಿಜಯಪುರ: ಇದು ನಿಜವಾಗಿಯೂ ಸಂತಸದ ಸುದ್ದಿ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸರಕಾರಿ ಇಂಡಿ ತಾಲೂಕಿನ ಗುಂದವಾನ ಸರಕಾರಿ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ರೂ. 2.10 ಕೋ. ಅನುದಾನ ಮಂಜೂರು ಮಾಡಿದೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ಈ ಸರಕಾರಿ ಶಾಲೆಯನ್ನು ಆದರ್ಶ ಹಾಗೂ ಮಾದರಿ ಶಾಲೆಯಾಗಿ ರೂಪಿಸಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 2.1 ಕೋಟಿ ರೂ. ಅನುದಾನ ಮಂಜೂರಾಗಿದೆ. ವಿಜಯಪುರ-ಸೊಲ್ಲಾಪೂರ ರಾಷ್ಟ್ರೀಯ ಹೆದ್ದಾರಿ ಬಳಿ […]

ವಿಜಯಪುರದ ನಗರದ ಪಾರೇಖ್ ನಗರದಲ್ಲಿ ಕೊರೊನಾ ಲಸಿಕೆ ಅಭಿಯಾನ

ವಿಜಯಪುರ: ವಿಜಯಪುರ ನಗರದಲ್ಲಿ ಕೊರೊನಾ ಲಸಿಕೆ ಅಭಿಯಾನ ಮುಂದುವರೆದಿದೆ. ವಿಜಯಪುರ ನಗರದ ಶ್ರೀ ಜ್ಞಾನಯೋಗಾಶ್ರಮದ ಬಳಿ ಇರುವ ಪಾರೇಖ್ ನಗರದ ಶ್ರೀ ವೀರಾಂಜನೇಯ ದೇವಾಲಯದಲ್ಲಿ ಕೊರೊನಾ ಲಸಿಕೆ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಡಾವಣೆಯ ಮುಖಂಡ ರಾಜು ಹಿರೇಮಠ, ಸರಕಾರ ನೀಡುತ್ತಿರುವ ಕೊರೊನಾ ಉಚಿತ ಲಸಿಕೆಯನ್ನು ಎಲ್ಲರೂ ಸರಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕು . ಕೊರೊನಾ ಲಸಿಕೆ ಪಡೆಯುವುದರಿಂದ ಮನಸ್ಸಿಗೆ ಧೈರ್ಯ ಬರುತ್ತದೆ. ಹಿಂದಿನ ದಿನಗಳಲ್ಲಿ ನಮ್ಮ ದೇಶದಲ್ಲಿ ಹಲವಾರು ರೋಗಗಳು ಬಂದಿದ್ದವು. ಅವುಗಳನ್ನು ನಾಶಮಾಡುವ ಶಕ್ತಿಯು […]

ಆಸ್ತಿ ತೆರಿಗೆ ಪಾವತಿಸಲು ರಿಯಾಯಿತಿ ಅವಧಿ ಜೂನ್ 30 ರವರೆಗೆ ವಿಸ್ತರಣೆ- ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ

ವಿಜಯಪುರ: ಪ್ರಸಕ್ತ ವರ್ಷದ ಆಸ್ತಿ ತೆರಿಗೆಯನ್ನು ಏಪ್ರಿಲ್ ತಿಂಗಳಿನಲ್ಲಿ ಪಾವತಿಸಿದರೆ ಮೂಲ ಆಸ್ತಿ ತೆರಿಗೆಯ ಮೇಲೆ ಶೇ. 5 ರಿಯಾಯಿತಿಯನ್ನು ನೀಡಲಾಗಿತ್ತು. ಲಾಕಡೌನ್ ಹಿನ್ನೆಲೆಯಲ್ಲಿ ಈ ರಿಯಾಯಿತಿ ಅವಧಿಯನ್ನು ಜೂ. 30 ರವರೆಗೆ ವಿಸ್ತರಿಸಲಾಗಿದೆ ಎಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ ತಿಳಿಸಿದ್ದಾರೆ. ಈ ವರ್ಷ ಕೊರೊನಾ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಜಾರಿ ಮಾಡಿದ ಲಾಕಡೌನ ಕಾರಣದಿಂದ ಶೇ. 5ರ ರಿಯಾಯತಿ ಅವಧಿಯನ್ನು ಜೂ. 30ರ ವರೆಗೆ ವಿಸ್ತರಿಸಲಾಗಿದೆ. ನಾಗರಿಕರು ಜೂ. 30ರ […]

ವೀಕೆಂಡ್ ಕರ್ಫ್ಯೂ ಆರಂಭ- ವಿಜಯಪುರ ಜಿಲ್ಲೆಯಲ್ಲಿ ಯಾವುದಕ್ಕೆಲ್ಲ ಅವಕಾಶವಿದೆ- ಜಿಲ್ಲಾಧಿಕಾರಿ ಮಾಹಿತಿ

ವಿಜಯಪುರ: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರಕಾರ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂ ವಿಜಯಪುರ ಜಿಲ್ಲೆಯಲ್ಲಿಯೂ ಆರಂಭವಾಗಿದೆ. ಶುಕ್ರವಾರ ಸಂ. 7 ರಿಂದ ಸೋಮವಾರ ಬೆ. 5 ರವರೆಗೆ ಈ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದು, ಈ ಸಮಯದಲ್ಲಿ ಸಾರ್ವಜನಿಕರು ಪಾಲಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮಾಹಿತಿ ನೀಡಿದ್ದಾರೆ. ಮಾರ್ಗಸೂಚಿಗಳು ಇಂತಿವೆ. ತುರ್ತು, ಅಗತ್ಯ ಸೇವೆಗಳು ಮತ್ತು ಕೋವಿಡ್- 19 ಕಂಟೈನ್‌ಮೆಂಟ್ ಮತ್ತು ಮ್ಯಾನೇಜ್‌ಮೆಂಟ್ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಎಲ್ಲಾ ರಾಜ್ಯ ಮತ್ತು ಕೇಂದ್ರ […]

ಕೊರೊನಾ 3ನೇ ಅಲೆಯಿಂದ ತಮ್ಮ ಮಕ್ಕಳನ್ನು ರಕ್ಷಿಸಲು ಪಿಲೇಕಮ್ಮನ ಮೊರೆ ಹೋದ ಮಹಿಳೆಯರು

ವಿಜಯಪುರ: ಕೊರೊನಾ ಎರಡನೇ ಅಲೆಯಿಂದ ಜನ ಈಗಾಗಲೇ ಸಂಕಷ್ಟದಲ್ಲಿದ್ದು, ಮೂರನೇ ಅಲೆಯ ಬಗ್ಗೆಯೂ ಆತಂಕದಲ್ಲಿದ್ದಾರೆ. ಅದರಲ್ಲೂ ಕೊರೊನಾ 3ನೇ ಅಲೆ ಮಕ್ಕಳನ್ನು ಕಾಡಲಿದೆ ಎಂಬ ಮಾತುಗಳು ಕೇಳಿ ಬರುತ್ತಿರುವುದು ಪೋಷಕರು ಅದರಲ್ಲೂ ತಾಯಂದಿರು ಮತ್ತು ಮಹಿಳೆಯರನ್ನು ಹೆಚ್ಚು ಚಿಂತಾಕ್ರಾಂತರನ್ನಾಗಿ ಮಾಡಿದೆ. ಕೊರೊನಾ ಎರಡನೇ ಅಲೆಯ ಪ್ರಭಾವ ಕಡಿಮೆಯಾಗುತ್ತಿದ್ದರೂ ಸಂಭವನೀಯ ಮೂರನೇ ಅಲೆಯ ಭೀತಿ ಜನರನ್ನು ಕಾಡುತ್ತಿರುವುದರಿಂದ 3ನೇ ಅಲೆ ಪ್ರಭಾವ ಮಕ್ಕಳ ಮೇಲೆ. ಬೀರಬಾರದು ಎಂಬ ಸದುದ್ದೇಶದಿಂದ ಗ್ರಾಮಸ್ಥರು ಪಿಲೇಕಮ್ಮ ದೇವಿಯ ಮೊರೆ ಹೋಗಿದ್ದಾರೆ. ವಿಜಯಪುರ ಜಿಲ್ಲೆಯ […]

ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ನಿಂದ 34 ಜನ ಗುಣಮುಖ, ಹಲವರ ಜೀವ, ದೃಷ್ಠಿ ರಕ್ಷಣೆ- ಉಪಕುಲಪತಿ ಡಾ. ಆರ್. ಎಸ್. ಮುಧೋಳ

ವಿಜಯಪುರ: ಕೊರೊನಾ ನಂತರ ಕಾಣಿಸಿಕೊಂಡಿರುವ ಬ್ಲಾಕ್ ಫಂಗಸ್ (ಮೈಕಾರಮಿಕೊಸಿಸ್) ಕಾಯಿಲೆಯಿಂದ ಬಳಲಿದ ಹಲವರ ಜೀವ ಮತ್ತು ದೃಷ್ಠಿಯನ್ನು ರಕ್ಷಿಣೆ ಮಾಡಲಾಗಿದೆ ಎಂದು ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್. ಎಸ್. ಮುಧೋಳ ತಿಳಿಸಿದ್ದಾರೆ. ತಾವು ಸ್ವತಃ ಇ ಎನ್ ಟಿ ಸರ್ಜನ್ ಆಗಿ 40 ವರ್ಷಗಳಿಂದ ವೈದ್ಯಕೀಯ ಸೇವೆಯಲ್ಲಿದ್ದೇನೆ. ತಮ್ಮ ಸುಧೀರ್ಘ ಸೇವಾವಧಿಯಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಬ್ಲಾಕ್ ಫಂಗಸ್ ಕಾಣಿಸಿಕೊಂಡಿದ್ದು ಇದೇ ಮೊದಲು. ಈ ಹಿಂದೆ ತೀವ್ರತರ […]

ಇಬ್ರಾಹಿಂಪೂರ ರೇಲ್ವೆ ಮೇಲ್ಸೇತುವೆ ಕಾಮಗಾರಿ ಬೇಗ ಮುಗಿಸಲು ಸಂಸದ ರಮೇಶ ಜಿಗಜಿಣಗಿ ಸೂಚನೆ

ವಿಜಯಪುರ: ಬಹುದಿನಗಳಿಂದ ಕುಂಟುತ್ತ ಸಾಗಿರುವ ವಿಜಯಪುರ ನಗರದ ಇಬ್ರಾಹಿಂಪುರ ರೇಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಸೂಚನೆ ನೀಡಿದ್ದಾರೆ. ಇಬ್ರಾಹಿಂಪುರ ರೇಲ್ವೆ ಗೇಟ್ ಹತ್ತಿರದ ನಿರ್ಮಾಣ ಹಂತದಲ್ಲಿರುವ ರೇಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ವೀಕ್ಷಿಸಿದ ಅವರು, ಪರಿಶೀಲನೆ ನಡೆಸಿದರು. ಈ ಹಿಂದೆಯೇ ಪೂರ್ಣವಾಗಬೇಕಿದ್ದ ಈ ಕಾಮಗಾರಿ ಕುಂಟುತ್ತ ಸಾಗಿದೆ. ಇದರಿಂದಾಗಿ ಈ ಭಾಗದ ಜನರ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಈ ಕುರಿತು ಸಾರ್ವಜಬಿಕರ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಳಕ್ಕೆ […]

ಅಸಂಘಟಿತ ಕಾರ್ಮಿಕರಿಗೆ ಸಹಾಯ ಧನ: ಸದುಪಯೋಗಕ್ಕೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಕರೆ

ವಿಜಯಪುರ: ರಾಜ್ಯ ಸರಕಾರ ಅಸಂಘಟಿತ ಕಾರ್ಮಿಕರಾದ ಆಗಸರು, ಕ್ಷೌರಿಕರು, ಗೃಹ ಕಾರ್ಮಿಕರು, ಟೈಲ‌ರಗಳು, ಮೆಕ್ಯಾನಿಕ್ ಗಳು, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಚಮ್ಮಾರರುಹಾಗೂ ಭಟ್ಟಿ ಕಾರ್ಮಿಕರು ಸೇರಿದಂತೆ ಒಟ್ಟು 12 ವರ್ಗಗಳಿಗೆ ತಲಾ ರೂ.2000 ಗಳಂತೆ ಮತ್ತು ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ರೂ.3000 ಸಹಾಯ ಧನವನ್ನು ಘೋಷಿಸಿದೆ ಎಂದು ಜಿಲ್ಲಾಧಿಕಾರಿಗಳಾದ ಪಿ. ಸುನಿಲ ಕುಮಾರ ತಿಳಿಸಿದ್ದಾರೆ. ಅರ್ಹ ಫಲಾನುಭವಿಗಳು ಕರ್ನಾಟಕ ಸರಕಾರದ ಸೇವಾ ಸಿಂಧು ತಂತ್ರಾಂಶದಲ್ಲಿhttps://sevasindhu.karnataka.gov.in ಸಿಟಿಜನ್ ಲಾಗಿನ್ ಆಗಿ ಅಗತ್ಯ ದಾಖಲೆಗಳೊಂದಿಗೆ […]