ಉಕ್ರೇನ್ ನಿಂದ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಮನವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಉಕ್ರೇನ್(Ukrain)ನಿಂದ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ(Center) ವಿದೇಶಾಂಗ(MEA) ಸಚಿವರಲ್ಲಿ(Minister) ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ(CM) ಬಸವರಾಜ ಬೊಮ್ಮಾಯಿ (Basavaraj Bommayi) ತಿಳಿಸಿದ್ದಾರೆ.  ಬೆಂಗಳೂರಿನಲ್ಲಿ ಆರ್. ಟಿ. ನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಬೆಳಿಗ್ಗೆ ಕೇಂದ್ರ ವಿದೇಶಾಂಗ ಸಚಿವರ ಜೊತೆ ಚರ್ಚಿಸಲಾಗಿದೆ.  ಕೇಂದ್ರ ಸರಕಾರ ಭಾರತೀಯರ ವಾಪಸಾತಿಗೆ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ.  ವಿಮಾನಯಾನ ಸ್ಥಗಿತಗೊಂಡಿರುವ ಕಾರಣ ಭೂ ಸಾರಿಗೆ ಮೂಲಕ ಭಾರತೀಯರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುವ ಸಾಧ್ಯತೆಯ ಬಗ್ಗೆ ಪರಿಶೀಲಿಸಲಾಗುತ್ತಿದೆ.  ಉಕ್ರೇನ್ ನ […]

ಉಕ್ರೇನ್ ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಸೂಕ್ತ ಕ್ರಮ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಉಕ್ರೇನ್(Ukrain) ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು(Karnataka Students) ಸುರಕ್ಷಿತವಾಗಿ ತಾಯ್ನಾಡಿಗೆotherland) ಕರೆತರಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ(CM) ಬಸವರಾಜ ಬೊಮ್ಮಾಯಿ(Basavaraj Bommayi) ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ಈ ಮಾಹಿತಿ ನೀಡಿದ್ದಾರೆ. ರಷ್ಯಾ(Russia) ಮತ್ತು ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಸುಮಾರು ಭಾರತದ ವಿದ್ಯಾರ್ಥಿಗಳು ವಿಮಾನ ನಿಲ್ದಾಣಕ್ಕೆ ತಲುಪುವಾಗ ಯುದ್ಧ ಪ್ರಾರಂಭವಾಗಿದ್ದರಿಂದ 100 ವಿದ್ಯಾರ್ಥಿಗಳು ಎರಡು ಬಸ್‌ಗಳಲ್ಲಿ ಸಿಲುಕಿಕೊಂಡಿದ್ದಾರೆ. ಇವರಲ್ಲಿ ೧೦ ಕ್ಕಿಂತ ಹೆಚ್ಚು ಕನ್ನಡಿಗರಿದ್ದು, ಅವರ ಬಗ್ಗೆ ಸಂಪೂರ್ಣ ಮಾಹಿತಿ […]

ಸೌಹಾರ್ದತೆ ಹಾಗೂ ತಾಳ್ಮೆಯಿಂದ ವರ್ತಿಸುವಂತೆ ವಿದ್ಯಾರ್ಥಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ

ನವದೆಹಲಿ: ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಸೌಹಾರ್ದತೆ ಹಾಗೂ ತಾಳ್ಮೆಯಿಂದ ವರ್ತಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು. ನವದೆಹಲಿಯಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರನ್ನು ಭೇಟಿಯಾದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ರಾಜ್ಯದ ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಯಿಸಿ, ನಾನಾ ರಾಜ್ಯಗಳಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಹಲವಾರು ತೀರ್ಪುಗಳು ಬಂದಿವೆ. ಕರ್ನಾಟಕದ ಉಚ್ಛ ನ್ಯಾಯಾಲಯದಲ್ಲಿ ವಸ್ತ್ರ ಸಂಹಿತೆಯ ಬಗ್ಗೆ ವಿಚಾರಣೆ ನಡೆಯುತ್ತಿದೆ. ಸಂವಿಧಾನ ಮತ್ತು ಕಾನೂನಿನನ್ವಯ […]

ಮೂರು ದಿನಗಳ ಕಾಲ ಹೈಸ್ಕೂಲು-ಕಾಲೇಜುಗಳಿಗೆ ರಜೆ ಘೋಷಿಸಿದ ಸಿಎಂ- ಯಾಕೆ ಗೊತ್ತಾ?

ನವದೆಹಲಿ: ಮೂರು ದಿನಗಳ‌ ಕಾಲ ಹೈಸ್ಕೂಲು ಮತ್ತು ಕಾಲೇಜುಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಜೆ ಘೋಷಿಸಿದ್ದಾರೆ. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಆದೇಶ ಹೊರಡಿಸಿದ್ದು, ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ‌. ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದ್ದು, ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರುತ್ತೇನೆ. — Basavaraj […]

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಗೆ ಅನುಮೋದನೆ ನೀಡಲು ರಕ್ಷಣಾ ಸಚಿವ ರಾಜನಾಥಸಿಂಗ್ ಗೆ ಸಿಎಂ ಮನವಿ

ನವದೆಹಲಿ: ಎರಡು ದಿನಗಳ ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ನಾನಾ ವಿಷಯಗಳ ಕುರಿತು ಚರ್ಚಿಸಿದರು. ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಸಂಗೊಳ್ಳಿಯಲ್ಲಿ ರೂ. 189 ಕೋ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಮುಕ್ತಾಯದ ಹಂತದಲ್ಲಿದ್ದು ಈ ಶಾಲೆಯನ್ನು ಸೈನಿಕ ಸ್ಕೂಲ್ ಸೊಸೈಟಿಗೆ ಹಸ್ತಾಂತರಿಸಲು ಅನುವು ಮಾಡಿ ಕೊಡುವಂತೆ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಮನವಿ ಮಾಡಿದರು.   ಸೈನಿಕ್ ಸ್ಕೂಲ್ […]

ಕೇಂದ್ರದಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಕುರಿತು ಸಂಸದರೊಂದಿಗೆ ಚರ್ಚೆ: ಮುಖ್ಯಮಂತ್ರಿ ಬೊಮ್ಮಾಯಿ

ನವದೆಹಲಿ: ನವದೆಹಲಿಯಲ್ಲಿ ಸಂಸದರ ಜೊತೆ ನಡೆದ ಸಭೆಯಲ್ಲಿ ಕೇಂದ್ರಕ್ಕೆ ಸಂಬಂಧಿಸಿದಂತೆ ರಾಜ್ಯದ ನೀರಾವರಿ , ರೈಲ್ವೆ, ನಗರಾಭಿವೃದ್ಧಿ, ಬಂದರು, ರಸ್ತೆ  ಯೋಜನೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚೆಯಾಗಿದೆ.  ಕೇಂದ್ರದಲ್ಲಿ ಯಾವ ವಿಷಯಗಳನ್ನು ಪ್ರಸ್ತಾಪ ಮಾಡಬೇಕೆನ್ನುವ ವಿಚಾರಗಳ ಬಗ್ಗೆ ಸೌಹಾರ್ದಯುತವಾಗಿ ಚರ್ಚೆ ನಡೆಸಲಾಯಿತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ನಡೆಸಲಾದ ಸಂಸದರ ಸಭೆಯ ಬಳಿಕ ಮಾಧ್ಯಮದವರಿಗೆ ಮಾಹಿತಿ ನೀಡಿದ ಮುಖ್ಯಮಂತ್ರಿಗಳು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡ ಸಂಸದರ ಸಭೆಯಲ್ಲಿ […]

ಎಸ್ಕಾಂ ಗಳಿಗೆ ಸಾಲ: ಷರತ್ತುಗಳನ್ನು ಕೈಬಿಡಲು ಕೇಂದ್ರಕ್ಕೆ ಮನವಿ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನವದೆಹಲಿ: ಎಸ್ಕಾಂ ಗಳಿಗೆ ಸಾಲ ಪಡೆಯಲು ವಿಧಿಸಿರುವ ಕೆಲವು ಷರತ್ತುಗಳನ್ನು ಕೈಬಿಡುವಂತೆ ಕೇಂದ್ರ ಇಂಧನ ಸಚಿವ ಆರ್. ಕೆ. ಸಿಂಗ್ ಅವರಲ್ಲಿ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.  ನವದೆಹಲಿಯಲ್ಲಿ ರಾಜ್ಯದ ಸಂಸದರ ಸಭೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಎಸ್ಕಾಂ ಗಳಿಗೆ ಸಹಾಯಧನ, ಅಂತರ ಇಲಾಖಾ ಬಿಲ್ ಗಳನ್ನು ಕೊಡಬೇಕೆನ್ನುವ ಷರತ್ತುಗಳನ್ನು ವಿಧಿಸಲಾಗಿದೆ. ಒಂದೇ ವರ್ಷಕ್ಕೆ ಇಷ್ಟು ಷರತ್ತುಗಳನ್ನು ಹಾಕದಿರುವಂತೆ ಮನವಿ ಮಾಡಲಾಗಿದೆ.  ಅವುಗಳನ್ನು ಮನ್ನಾ ಮಾಡಿದರೆ ಎಸ್ಕಾಂ ಗಳಿಗೆ ಬ್ಯಾಂಕ್ […]

ಕಲ್ಯಾಣ ಕರ್ನಾಟಕಕ್ಕೆ ರೂ. 5030 ಕೋ. ಅನುದಾನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನಗೆ ಸಿಎಂ ಮನವಿ

ನವದೆಹಲಿ: ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕೇಂದ್ರ ಪುರಸ್ಕೃತ ಯೋಜನೆಗಳಡಿ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ 5030 ಕೋಟಿ ರೂ. ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದರು. ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ ಅವರನ್ನು ಭೇಟಿ ಮಾಡಿದ ಅವರು ಈ ಮನವಿ ಮಾಡಿದರು. ಇತ್ತೀಚೆಗೆ ತಿರುಪತಿಯಲ್ಲಿ ನಡೆದ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಚರ್ಚಿಸಿದಂತೆ, ಆಂಧ್ರ ಪ್ರದೇಶ ರಾಜ್ಯವು […]

ನದಿ ಜೋಡಣೆ ವಿಚಾರ: ಕರ್ನಾಟಕಕ್ಕೆ ಸಮರ್ಪಕ ಪಾಲು ದೊರೆಯಬೇಕು- ಸಿಎಂ ಬಸವರಾಜ ಬೊಮ್ಮಾಯಿ

ನವದೆಹಲಿ: ನದಿ ಜೋಡಣೆ ವಿಚಾರದಲ್ಲಿ ಕರ್ನಾಟಕಕ್ಕೆ ಸಮರ್ಪಕ ಪಾಲು ದೊರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ನದಿ ಪಾತ್ರದಲ್ಲಿ ಉತ್ಪಾದನೆಯಾಗುವ ನೀರು, ನಮ್ಮ ಅಗತ್ಯ ಹಾಗೂ ಈಕ್ವಿಟಿ ಆಧರಿಸಿ ಪಾಲು ನಿರ್ಧಾರವಾಗಬೇಕೆನ್ನುವುದು ನಮ್ಮ ನಿಲುವಾಗಿದೆ ಎಂದು ಸ್ಪಷ್ಟಪಡಿಸಿದರು. ಡಿಪಿಆರ್ ಅಂತಿಮಗೊಳಿಸುವ ಮುನ್ನ ಎಲ್ಲಾ ರಾಜ್ಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಕೂಡ ತಿಳಿಸಿದ್ದೇವೆ. ಕರ್ನಾಟಕಕ್ಕೆ ನ್ಯಾಯಸಮ್ಮತವಾದ ಪಾಲನ್ನು ಪಡೆದುಕೊಳ್ಳಲು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಜೀವನದಿಗಳಾಗಿರುವ ಕೃಷ್ಣ ಮತ್ತು ಕಾವೇರಿ […]

ಎಂ. ಬಿ. ಪಾಟೀಲ ಅವರಿಗೆ ಗೋವಾ ಚುನಾವಣೆ ವೀಕ್ಷಕರ ಜವಾಬ್ದಾರಿ- ಮಂಗಳವಾರ ಗೋವಾ ತೆರಳಲಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ

ವಿಜಯಪುರ: ಮಾಜಿ ಸಚಿವ ಎಂ. ಬಿ. ಪಾಟೀಲ ಅವರಿಗೆ ಕಾಂಗ್ರೆಸ್ ಹೈಕಮಾಂಡ ಮತ್ತೋಂದು ಜವಾಬ್ದಾರಿ ವಹಿಸಿದೆ. ಇತ್ತೀಚೆಗಷ್ಟೇ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ನೇಮಕ ಮಾಡಿತ್ತು. ಇದೀಗ ಪಂಚ ರಾಜ್ಯಗಳ ಚನಾವಣೆಯಲ್ಲಿ ಮತ್ತೋಂದು ಜವಾಬ್ದಾರಿ ವಹಿಸಿದೆ‌ ಗೋವಾ ಚುನಾವಣೆ ಕಾಂಗ್ರೆಸ್ ವೀಕ್ಷರನ್ನಾಗಿ ಎಂ. ಬಿ. ಪಾಟೀಲ ಅವರನ್ನು ಎಐಸಿಸಿ ನೇಮಕ ಮಾಡಿ ಮತ್ತೋಂದು ಹೊಸ ಜವಾಬ್ದಾರಿ ನೀಡಿದೆ.  ಇದು ಎಐಸಿಸಿಯಲ್ಲಿ ಎಂ. ಬಿ. ಪಾಟೀಲ ಅವರು ವರ್ಚಸ್ಸು ಮತ್ತಷ್ಟು ಹೆಚ್ಚಾಗಲು ಕಾರಣವಾಗಿದೆ. ಮಂಗಳವಾರ ಗೋವಾಕ್ಕೆ ಎಂ. ಬಿ. […]