ಎಂ. ಬಿ. ಪಾಟೀಲ ಅವರಿಗೆ ಗೋವಾ ಚುನಾವಣೆ ವೀಕ್ಷಕರ ಜವಾಬ್ದಾರಿ- ಮಂಗಳವಾರ ಗೋವಾ ತೆರಳಲಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ
ವಿಜಯಪುರ: ಮಾಜಿ ಸಚಿವ ಎಂ. ಬಿ. ಪಾಟೀಲ ಅವರಿಗೆ ಕಾಂಗ್ರೆಸ್ ಹೈಕಮಾಂಡ ಮತ್ತೋಂದು ಜವಾಬ್ದಾರಿ ವಹಿಸಿದೆ. ಇತ್ತೀಚೆಗಷ್ಟೇ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ನೇಮಕ ಮಾಡಿತ್ತು. ಇದೀಗ ಪಂಚ ರಾಜ್ಯಗಳ ಚನಾವಣೆಯಲ್ಲಿ ಮತ್ತೋಂದು ಜವಾಬ್ದಾರಿ ವಹಿಸಿದೆ ಗೋವಾ ಚುನಾವಣೆ ಕಾಂಗ್ರೆಸ್ ವೀಕ್ಷರನ್ನಾಗಿ ಎಂ. ಬಿ. ಪಾಟೀಲ ಅವರನ್ನು ಎಐಸಿಸಿ ನೇಮಕ ಮಾಡಿ ಮತ್ತೋಂದು ಹೊಸ ಜವಾಬ್ದಾರಿ ನೀಡಿದೆ. ಇದು ಎಐಸಿಸಿಯಲ್ಲಿ ಎಂ. ಬಿ. ಪಾಟೀಲ ಅವರು ವರ್ಚಸ್ಸು ಮತ್ತಷ್ಟು ಹೆಚ್ಚಾಗಲು ಕಾರಣವಾಗಿದೆ. ಮಂಗಳವಾರ ಗೋವಾಕ್ಕೆ ಎಂ. ಬಿ. […]
ಪಂಜಾಬಿನಲ್ಲಿ ಪ್ರಧಾನಿಗೆ ಭದ್ರತೆ ಒದಗಿಸಲು ವೈಫಲ್ಯ ವಿಚಾರ: ಪಂಜಾಬ ಸರಕಾರ ವಜಾ ಮಾಡಬೇಕು- ಸಿಎಂ ಬಸವರಾಜ ಬೊಮ್ಮಾಯಿ
ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೂಕ್ತ ಭದ್ರತೆ ಒದಗಿಸಲು ಸಾಧ್ಯವಾಗದ ಪಂಜಾಬ್ ಸರಕಾರಕ್ಕೆ ಆಡಳಿತ ನಡೆಸುವ ಯೋಗ್ಯತೆ ಇಲ್ಲ. ಹೀಗಾಗಿ ಪಂಜಾಬ ಸರಕಾರವನ್ನು ಕೂಡಲೇ ಬರಖಾಸ್ತು ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಕ್ಷೇತ್ರದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಂಜಾಬಿನಲ್ಲಿ ಪ್ರಧಾನಿ ನರೇಂದ್ರ ಮೋದಿಯ ಅವರಿಗೆ ರಕ್ಷಣೆ ನೀಡುವಲ್ಲಿ ಭದ್ರತಾ ಲೋಪವಾಗಿರುವ ಕುರಿತು ಸುದ್ದಿದಾರರ ಪ್ರಶ್ನೆಗಳಿಗೆ ಉತ್ತರಿಸಿದರು. ಪಂಜಾಬ ಗಡಿಯಲ್ಲಿ ಅಲ್ಲಿನ ಸರಕಾರ ಪ್ರಧಾನ […]
ಪುಂಡಾಟಿಕೆ ತಡೆಗೆ ನಿರ್ಣಾಯಕ ಕ್ರಮ: ಸಿಎಂ ಬಸವರಾಜ ಬೊಮ್ಮಾಯಿ
ಬೆಳಗಾವಿ: ಪುಂಡಾಟಿಕೆ ತಡೆಗಟ್ಟಲು ನಿರ್ಣಾಯಕ ಕ್ರಮಗಳನ್ನು ಕೈಗೊಂಡು ಕಾನೂನು ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಬಂಧಿಸಲಾಗಿದೆ. ಪುಂಡಾಟಿಕೆ ಮುಂದುವರೆಸಲು ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದರು. ಮಹಾರಾಷ್ಟ್ರ ಸರಕಸರದೊಂದಿಗೆ ನಮ್ಮ ರಾಜ್ಯದ ಗೃಹ ಕಾರ್ಯದರ್ಶಿಗಳು ಹಾಗೂ ಪೊಲೀಸ್ ಮಹಾನಿರ್ದೇಶಕರು ಮಾತನಾಡಿ ಕನ್ನಡಿಗರು ಹಾಗೂ ಕನ್ನಡಿಗರ ಆಸ್ತಿ ಹಾಗೂ ಸರಕಾರಿ ವಾಹನಗಳ ರಕ್ಷಣೆಗೆ ಕ್ರಮ […]
ಬ್ಯಾಂಕ್ ಠೇವಣಿದಾರರ ವಿಮೆ ಸೌಲಭ್ಯದಲ್ಲಿ ಹೆಚ್ಚಳ- ಕೇಂದ್ರ ಸಚಿವ ಭಗವಂತ ಖೂಬಾ
ವಿಜಯಪುರ: ನಾನಾ ಬ್ಯಾಂಕುಗಳಲ್ಲಿ ಹಣ ಠೇವಣಿ ಮಾಡುವ ಬಡ ಮತ್ತು ಮಧ್ಯಮ ವರ್ಗದ ಠೇವಣಿದಾರರ ಅನುಕೂಲಕ್ಕಾಗಿ ಕೇಂದ್ರ ಸರಕಾರ ಠೇವಣಿ ವಿಮೆ ಹಾಗೂ ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಶನ್ (ಡಿಐಸಿಜಿಸಿ)ಯೋಜನೆ ಜಾರಿಗೆ ತಂದಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ. ವಿಜಯಪುರ ನಗರದ ಕಂದಗಲ ಹಣಮಂತರಾಯ ರಂಗಮಂದಿರದಲ್ಲಿ ಕೆನರಾ ಬ್ಯಾಂಕ್ ತನ್ನ ಲೀಡ್ ಬ್ಯಾಂಕ್ ಗಳ ಸಂಯೋಜನೆಯೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡೆಪಾಸಿಟ್ ಇನ್ಸೂರೆನ್ಸ ಪೇಮೆಂಟ್ ಫಲಾನುಭವಿಗಳಿಗೆ […]
ನೈಜಿರಿಯನ್ ಆನಲೈನ್ ವಂಚಕನನ್ನು ಗುಜರಾತಿನಲ್ಲಿ ಬಂಧಿಸಿದ ಬಸವ ನಾಡಿನ ಪೊಲೀಸರು
ವಿಜಯಪುರ: ವಿಜಯಪುರ ಸಿಇಎನ್ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಆನಲೈನ್ ಮೂಲಕ ವಂಚಿಸುತ್ತಿದ್ದ ನೈಜಿರಿಯನ್ ಪ್ರಜೆಯನ್ನು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ನಿವಾಸಿ ಕಿರಣ ಕಲ್ಲಪ್ಪ ದೇಸಾಯಿ ಎಂಬುವರಿಗೆ ಆಯಿಲ್ ವ್ಯವಹಾರ ಮಾಡುವುದಾಗಿ ಹೇಳಿ ಆನ್‌ಲೈನ್ ಮೂಲಕ ಲಕ್ಷಾಂತರ ರೂಪಾಯಿ ವಂಚಿಸಿದ್ದ. ಈ ಕುರಿತು ತನಿಖೆ ಕೈಗೊಂಡ ವಿಜಯಪುರ ಸೈಬರ್ ಕ್ರೈಂ, ಆರ್ಥಿಕ ಅಪರಾಧ ಮತ್ತು ಮಾದಕ ದ್ರವ್ಯ ಘಟಕದ(ಸಿಇಎನ್) ಸಿಪಿಐ ಸುರೇಶ ಬೆಂಡೆಗುಂಬಳ ನೇತೃತ್ವದ ಪೊಲೀಸರ ತಂಡ ಆರೋಪಿಯನ್ನು ಗುಜರಾಜಿನ ಜಾಮನಗರದಲ್ಲಿ ಬಂಧಿಸಿ ಕರೆತಂದಿದೆ. ನೈಜೀರಿಯ […]
ಮಾನವಸಹಿತ ಗಗನಯಾನ ಯೋಜನೆ ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಬೇಡ- ಪ್ರಧಾನಿ, ಸಿಎಂ ಗೆ ಡಿ. ಕೆ. ಶಿವಕುಮಾರ ಪತ್ರ
ಬೆಂಗಳೂ: ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡಲಾಗುತ್ತಿದೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ ಕೇಂದ್ರ ಸತಕಾರದ ಕ್ರಮ ವಿರೋಧಿಸಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರ ಇಂತಿದೆ. ಸನ್ಮಾನ್ಯ ಪ್ರಧಾನಮಂತ್ರಿಗಳಿಗೆ, ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿ ಭಾರತೀಯ ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಪ್ರಸ್ತಾಪವನ್ನು ಕೂಡಲೇ ಕೈಬಿಡಬೇಕಾಗಿ ವಿನಂತಿ. ನಿಮ್ಮ […]
ತಿರುಪತಿಯಲ್ಲಿ ಶ್ರೀ ವೆಂಕಟೇಶ್ವರ ದರ್ಶನ ಪಡೆದ ಸಿಎಂ ಬಸವರಾಜ ಬೊಮ್ಮಾಯಿ
ವಿಜಯಪುರ: ಆಂಧ್ರ ಪ್ರದೇಶ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಪತಿ ಶ್ರೀ ವೆಂಕಟೇಶ್ವರ ದರ್ಶನ ಪಡೆದಿದ್ದಾರೆ. ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ದರ್ಶನ ಪಡೆದರು. ನಂತರ ಟಿಟಿಡಿ ವತಿಯಿಂದ ಸನ್ಮಾನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಡಾ. ಸುಧಾಕರ್, ಮುನಿರತ್ನ, ಶಾಸಕ ಎಸ್. ಆರ್. ವಿಶ್ವನಾಥ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಮತ್ತು ಇತರರು ಉಪಸ್ಥಿತರಿದ್ದರು.
ತಿರುಪತಿಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನ ಕಟ್ಟಡ ಕಾಮಗಾರಿ ಪರಿಶೀಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ತಿರುಪತಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಿಗ್ಗೆ ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನ ನಿರ್ಮಾಣದ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು. ರೂ. 200 ಕೋ. ವೆಚ್ಚದಲ್ಲಿ ಇಲ್ಲಿ ಕರ್ನಾಟಕ ಭವನ ನಿರ್ಮಾಣವಾಗುತ್ತಿದೆ. ಈ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಕರ್ನಾಟಕ ಭವನವನ್ನು ಲೋಕಾರ್ಪಣೆ ಮಾಡುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸಿಎಂ ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಡಾ. ಕೆ. ಸುಧಾಕರ, ಮುನಿರತ್ನ, ಬೆಂಗಳೂರು ಬಿಡಿಎ ಅಧ್ಯಕ್ಷ ಎಸ್. ಆರ್. ವಿಶ್ವನಾಥ, ಮುಖ್ಯಮಂತ್ರಿಗಳ […]
ಬಿಟ್ ಕಾಯಿನ್ ವಿಚಾರದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ- ಪ್ರಧಾನಿ ಅಭಯ ನೀಡಿದ್ದಾರೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ನವದೆಹಲಿ: ಬಿಟ್ ಕಾಯಿನ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ತಮಗೆ ಅಭಯ ನೀಡಿದ್ದಾರೆ. ಬಿಟ್ ಕಾಯಿನ್ ವಿಚಾರವಾಗಿ ತಲೆಕೆಡಿಸಿಕೊಳ್ಳದೆ ಜನಪರ ಕೆಲಸ ಮಾಡಿ ಎಂದು ಹೇಳುವ ಮೂಲಕ ತಮ್ಮ ನಾಯಕತ್ವವನ್ನು ಸಮರ್ಥಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿಯ ಬಳಿಕ ಮಾತನಾಡಿದ ಅವರು, ಪ್ರಧಾನಿಯವರನ್ನು ಭೇಟಿ ಮಾಡಿ ನೂರು ದಿನಗಳ ಆಡಳಿತದ ಕುರಿತು ಚರ್ಚೆ ಮಾಡಿದ್ದಾಗಿ ತಿಳಿಸಿದರು. ಬಿಟ್ ಕಾಯಿನ್ ವಿಚಾರವಾಗಿ ಪ್ರಧಾನಿಗಳು ಹೆಚ್ಚು ಮಾತನಾಡಲು ಇಷ್ಟ ಪಡಲಿಲ್ಲ. […]
ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ರೂ. 10 ಕೋ. ಅನುದಾನ ಬಿಡುಗಡೆ- ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ರೂ. 10 ಕೋ. ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಈ ಭರವಸೆ ನೀಡಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಗೋವಾ ರಾಜ್ಯದಲ್ಲಿ ಉತ್ತರ ಕರ್ನಾಟಕ […]