ರಾಜ್ಯದಲ್ಲಿ ಪೆಟ್ರೋಲ್ ರೂ. 13.30, ಡೀಸೆಲ್ ರೂ.19.47 ಇಳಿಕೆ

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸಲ್ ದರದಲ್ಲಿ ರೂ. 7. ಇಳಿಕೆ ಮಾಡಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸಲ್ ದರವನ್ನು ಕ್ರಮವಾಗಿ ರೂ. 10 ಹಾಗೂ ರೂ. 5 ಕ್ಕೆ ಇಳಿಕೆ ಮಾಡಿತ್ತು.  ಇದಕ್ಕೆ ಪೂರಕವಾಗಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಆದೇಶ ಹೊರ ಬಿದ್ದ ತಕ್ಷವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿಯೂ ತೆರಿಗೆ ಕಡಿಮೆ ಮಾಡುವ ನಿರ್ಧಾರ ಪ್ರಕಟಿಸಿದ್ದಸರೆ.‌‌  ಆ ಮೂಲಕ ಇಂಧನ ದರ ಇಳಿಸಿದ ದೇಶದ […]

ಪ. ಗು. ಹಳಕಟ್ಟಿ ಸಂಶೋಧನಾ ಕೇಂದ್ರದಿಂದ ಶುಕ್ರವಾರ ವೆಬಿನಾರ್- ಡಾ. ಸ್ಯಾಮ್ ಪಿತ್ರೊಡ ಭಾಗಿ

ವಿಜಯಪುರ: ಭಾರತದ ಸಂಪರ್ಕ ವ್ಯವಸ್ಥೆಯಲ್ಲಿ ಅಭೂತಪೂರ್ವ ಕ್ರಾಂತಿ ಮಾಡಿದವರು ಅಂತಾರಾಷ್ಟ್ರೀಯ ಖ್ಯಾತಿಯ ವಿಜ್ಞಾನಿ ಡಾ. ಸ್ಯಾಮ್ ಪಿತ್ರೋಡಾ. ಅವರು ಇತ್ತೀಚೆಗೆ ರಚಿಸಿರುವ ಕನ್ವರ್ಶೇಷನ್ ಆನ್ ರಿಡಿಸೈನಿಂಗ್ ದಿ ವರ್ಲ್ಡ್: ಗ್ಲೋಬಲ್ ಕಾಲ್ ಟು ಆ್ಯಕ್ಷನ್ ಪುಸ್ತಕದ ಕುರಿತು ವೆಬಿನಾರ ಆಯೋಜಿಸಲಾಗಿದೆ. ವಿಜಯಪುರದ ಪ್ರತಿಷ್ಟಿತ ಬಿ ಎಲ್ ಡಿ ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನೆ ಕೇಂದ್ರ ಈ ವೆಬಿನಾರ ಆಯೋಜಿಸಿದೆ. ಶುಕ್ರವಾರ ಸಂ. 5 ಕ್ಕೆ ಈ ವೆಬಿನಾರ ನಡೆಯಲಿದ್ದು, ಭಾರತದಲ್ಲಿ ಇದೇ […]

ಅ. 30ಕ್ಕೆ ಸಿಂದಗಿ, ಹಾನಗಲ್ ಬೈ ಎಲೆಕ್ಷನ್ ಮುಹೂರ್ತ ಫಿಕ್ಸ್

ನವದೆಹಲಿ: ವಿಜಯಪುರ ಜಿಲ್ಲೆಯ ಸಿಂದಗಿ ಮತ್ತು ಹಾವೇರಿ ಜಿಲ್ಲೆಯ ಹಾನಗಲ್ ಬೈ ಎಲೆಕ್ಷನ್ ಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಕರ್ನಾಟಕದ ಸಿಂದಗಿ ಮತ್ತು ಹಾನಗಲ್ ವಿಧಾನಸಭೆ ಸೇರಿದಂತೆ ದೇಶದ ಒಟ್ಟು 30 ವಿಧಾನಸಭೆ ಮತ್ತು ಮೂರು ಲೋಕಸಭೆ ಬೈ ಎಲೆಕ್ಷನ್‍ಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಅ.1ರಂದು ಚುನಾವಣೆ ಅಧಿಸೂಚನೆ ಪ್ರಕಟವಾಗಲಿದ್ದು, ಅ.8 ರವೆರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಅ.11ರಂದು ನಾಮಪತ್ರಗಳ ಪರಿಷ್ಕರಣೆ ನಡೆಯಲಿದ್ದು, ಅ.13 ರಂದು ನಾಮಪತ್ರ ಹಿಂಪಡೆಯಲು ಕೊನೆಯದಿನವಾಗಿದೆ. ಅ.30 ರಂದು ಮತದಾನ […]

ಬಸವ ನಾಡಿನ ಯುವಕ ಸಾಗರ ವಾಡಿಗೆ ಯು ಪಿ ಎಸ್ ಸಿ ಯಲ್ಲಿ 385ನೇ ಸ್ಥಾನ- ಸರಕಾರಿ ಶಾಲೆಗಳಲ್ಲಿಯೇ ಓದಿ ಸಾಧನೆ ಮಾಡಿದ ಪ್ರತಿಭಾವಂತ ಯುವಕ

ವಿಜಯಪುರ: ಬಸವ ನಾಡಿನ ಯುವಕ ಮತ್ತು ಸಧ್ಯಕ್ಕೆ ಕೇಂದ್ರ ಸರಕಾರದಲ್ಲಿ ಎಂಜಿನಿಯರ್ ಆಗಿರುವ ಸಾಗರ ವಾಡಿ ಅವರು ಯು ಪಿ ಎಸ್ ಸಿ ಪರೀಕ್ಷೆಯಲ್ಲಿ 385ನೇ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿಂಗಣಿ ಮೂಲದವರಾದ ಮತ್ತು ಸಧ್ಯಕ್ಕೆ ವಿಜಯಪುರ ನಗರದ ಘೇವರಚಂದ ಕಾಲನಿಯಲ್ಲಿ ವಾಸಿಸುತ್ತಿರುವ ಅಮಗೊಂಡ ವಾಡಿ ಮತ್ತು ವಿಜಯಲಕ್ಷ್ಮಿ ದಂಪತಿಯ ಹಿರಿಯ ಪುತ್ರ ಸಾಗರ ವಾಡಿ ಯು ಪಿ ಎಸ್ ಸಿ ಪರೀಕ್ಷೆಯಲ್ಲಿ 385ನೇ ಸ್ಥಾನ ಪಡೆಯುವ […]

ಗುಜರಾತಿಗೆ ತೆರಳಿ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಶುಭ ಕೋರಿದ ಸಿಎಂ ಬಸವರಾಜ ಬೊಮ್ಮಾಯಿ

ಗಾಂಧಿನಗರ(ಗುಜರಾತ): ಗುಜರಾತಿನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ ಅವರಿಗೆ‌ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಕೋರಿದ್ದಾರೆ. ಗಾಂಧಿನಗರದ ರಾಜಭವನದಲ್ಲಿ ನೂತನ ಸಿಎಂ ಪಟೇಲ್ ಅವರನ್ನು ಮಧ್ಯಾಹ್ನ ಭೇಟಿ ಮಾಡಿದರು. ವಿಶೇಷ ವಿಮಾನದ ಮೂಲಕ ಗಾಂಧಿನಗರಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ಎದುರಿಸುವಂತೆ ಶುಭ ಕೋರಿದರು.   ಬೆಂಗಳೂರಿನಿಂದ ಮುಖ್ಯಮಂತ್ರಿಗಳೊಂದಿಗೆ ತೆರಳಿದ್ದ ಸಚಿವರಾದ ಆರ್. ಅಶೋಕ, ಮುರುಗೇಶ ನಿರಾಣಿ, ಡಾ. ಕೆ. ಸುಧಾಕರ ಅವರೂ ಕೂಡ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ […]

ಕೊರೊನಾ ಸೋಂಕಿನ ವಿರುದ್ಧ ಹೊರಾಟದಲ್ಲಿ ಬಹುತೇಕ ಜಯದ ಹೊಸ್ತಿಲಲ್ಲಿದ್ದೇವೆ- ಅಮಿತ್ ಶಾ

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಪ್ರಪಂಚದಲ್ಲಿಯೇ ಕೊರೊನಾವನ್ನು ಅತ್ಯುತ್ತಮವಾಗಿ ನಿರ್ವಹಿಸುತ್ತಿದ್ದೇವೆ. ಕೊರೊನಾ ಸೋಂಕಿನ ವಿರುದ್ಧ ಹೊರಾಟದಲ್ಲಿ ಬಹುತೇಕ ಜಯದ ಹೊಸ್ತಿಲಲ್ಲಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ ಶಾ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ದೇಶ ಮತ್ತು ಜಗತ್ತು ಹಿಂದೆಂದೂ ಕಂಡಿರದ ಮತ್ತು ಮಾನವಕುಲಕ್ಕೆ ಸವಾಲಾಗಿದ್ದ ಕೊರೊನಾ ಮಹಾಮಾರಿಯನ್ನು ಕರ್ನಾಟಕ ಸರಕಾರ ಅತ್ಯುತ್ತಮವಾಗಿ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಸರಕಾರಕ್ಕೆ ಶಹಬ್ಬಾಶಗಿರಿ ನೀಡಿದರು. ಕೊರೊನಾ ನಿರ್ಹವಣೆಗೆ ರಾಜ್ಯ […]

ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬರಲಿದೆ- ಅಮಿತ ಶಾ ವಿಶ್ವಾಸ

ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಡಳಿತದಲ್ಲಿ, ಸಾರ್ವಜನಿಕ ಜೀವನದಲ್ಲಿ ಅಪಾರ ಅನುಭವ ಹೊಂದಿದ್ದು, ಅವರ ನೇತೃತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ ತಮಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ತಿಳಿಸಿದ್ದಾರೆ. ದಾವಣಗೆರೆಯ ಜಿಎಂಐಟಿ ಆವರಣದಲ್ಲಿ ನಾನಾ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಇತ್ತೀಚೆಗೆ ಕರ್ನಾಟಕದ ನೇತೃತ್ವವನ್ನು ಬೇರೆಯವರಿಗೆ ವಹಿಸುವ ಕುರಿತು ಯಡಿಯೂರಪ್ಪಜೀ ಅವರು ಸ್ವತಃ ತೀರ್ಮಾನ ಕೈಗೊಂಡರು. ಬಿಜೆಪಿಯು ಬಸವರಾಜ ಬೊಮ್ಮಾಯಿ ಅವರಿಗೆ ನೂತನ ಮುಖ್ಯಮಂತ್ರಿಯ ಜವಾಬ್ದಾರಿ […]

ಇಂದಿರಾ ಕ್ಯಾಂಟೀನ್‌ ನಿರ್ವಹಣೆ ಕಂಪನಿಗೆ ಪ್ರತಿಷ್ಠಿತ ಶೆಫ್‌ಟಾಕ್ ರಾಷ್ಟ್ರೀಯ ಪ್ರಶಸ್ತಿ

ನವದೆಹಲಿ: ದಕ್ಷಿಣ ಭಾರತದ ಪ್ರತಿಷ್ಠಿತ ಶೆಫ್‌ಟಾಕ್ ಸಂಸ್ಥೆಯ ಸಾಧನೆಯ ಕಿರೀಟಕ್ಕೆ ಇದೀಗ ರಾಷ್ಟ್ರೀಯ ಮಟ್ಟದ ಪ್ರಶಸ್ತಿಯ ಲಭಿಸಿದೆ. ದೆಹಲಿಯಲ್ಲಿ ಕರುನಾಡಿನ ಕಾರ್ಮಿಕರತ್ನ ಖ್ಯಾತಿಯ ಉದ್ಯಮಿ ChefTalk ಕಂಪನಿಯ ಮುಖ್ಯಸ್ಥ ಗೋವಿಂದ ಬಾಬು ಪೂಜಾರಿ ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ನಾನಾ ರಾಜ್ಯಗಳಲ್ಲಿ ಉತ್ತಮ ಗುಣಮಟ್ಟಕ್ಕಾಗಿ ನೀಡಲಾಗುವ ಪ್ರಶಸ್ತಿ ಇದಾಗಿದ್ದು, ಪ್ರತೀ ವರ್ಷ ರಾಷ್ಟ್ರೀಯ ಮಟ್ಟದಲ್ಲಿ ಕ್ವಾಲಿಟಿ ಫುಡ್ ಕಸ್ಟಮರ್ ಸ್ಯಾಟಿಸ್ಫ್ಯಾಕ್ಷನ್ ಅವಾರ್ಡ್’ ನೀಡಲಾಗುತ್ತಿದೆ. ಈ ಬಾರಿ ಈ ಪ್ರಶಸ್ತಿ ಬೆಂಗಳೂರು ಪಾಲಾಗಿದೆ. ಇಂಟರ್‌ ನ್ಯಾಷನಲ್ ಅಚೀವರ್ಸ್ ಕಾನ್ಫರೆನ್ಸ್ ಮೂಲಕ […]

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ತಂದ ಮೊದಲ ರಾಜ್ಯ ಎಂಬ ಖ್ಯಾತಿಗೆ ಪಾತ್ರವಾದ ಕರ್ನಾಟಕ.

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಞಾನಗೊಳಿಸುತ್ತಿರುವ ದೇಶದ ಮೊಟ್ಟ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.‌ ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2020 ಸಾಲಿನಿಂದ ಅನುಷ್ಠಾನ ಕಾರ್ಯಕ್ಕೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ ನವದೆಹಲಿಯಿಂದ ವರ್ಚುವಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿದರು. ಇತ್ತ ಬೆಂಗಳೂರಿನ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರುವ NEP ಸಹಾಯವಾಣಿ ಉದ್ಘಾಟನೆ ಮಾಡಿದತು. ಅಲ್ಲದೇ, NEP ಪ್ರವೇಶಾತಿಗೆ ರೂಪಿಸಲಾಗಿರುವ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಯ […]

ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಬೆಂಗಳೂರು: ಭಾರತದ ಉಪರಾಷ್ಟ್ರತಿ ಎಂ. ವೆಂಕಯ್ಯನಾಯ್ಡು ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ , ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ್, ಬಿಜೆಪಿ ಸಂಸದ ಪಿ.‌ ಸಿ. ಮೋಹನ ಉಪಸ್ಥಿತರಿದ್ದರು.