ಇತರರಿಗೆ ಮಾದರಿಯಾದ ಮುಖ್ಯಮಂತ್ರಿ- ಅಂಗಾಂಗ ದಾನಕ್ಕೆ ಸಹಿ ಹಾಕಲು ಸಿಎಂ ಬಸವರಾಜ ಬೊಮ್ಮಾಯಿ ನಿರ್ಧಾರ
ಉಡುಪಿ: ವಿಶ್ವ ಅಂಗಾಂಗ ದಾನ ದಿನದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಮತ್ತು ಮಾದರಿ ನಿರ್ಧಾರ ಕೈಗೊಳ್ಳುವ ಮೂಲಕ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಉಡುಪಿಯಲ್ಲಿ ಕಂಟ್ರಿ ಹೊಟೇಲ್ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಂದು ವಿಶ್ವ ಅಂಗಾಂಗ ದಾನ ದಿನ ಆಚರಿಸಲಾಗುತ್ತಿದೆ. ಅಂಗಾಂಗ ದಾನದಿಂದ ಬಹಳಷ್ಟು ಜನರ ಜೀವ ಉಳಿಸಬೇಕಾಗಿದೆ ಎಂದು ತಿಳಿಸಿದರು. ಮಣ್ಣಲ್ಲಿ ಮಣ್ಣಾಗಿ ಹೋಗುವ ಜೀವ ಅಂಗಾಂಗ ದಾನದ ಮೂಲಕ ಜನರ ಜೀವ ಉಳಿಸಲು ಸಹಾಯವಾದರೆ ಯಾಕೆ ಮಾಡಬಾರದು ಎಂಬುದನ್ನು ಅರಿಯಬೇಕು. ಅಂಗಾಂಗ ದಾನ […]
ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಮಹಾರಾಷ್ಟ್ರದ ನೀರಾವರಿ ಸಚಿವ ಜಯಂತ ಪಾಟೀಲ- ಜಲ ವಿಷಯಗಳ ಕುರಿತು ಚರ್ಚೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಹಾರಾಷ್ಟ್ರ ನೀರಾವರಿ ಸಚಿವ ಜಯಂತ ಪಾಟೀಲ ಭೇಟಿ ಮಾಡಿದರು. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಅವರು, ಉಭಯ ರಾಜ್ಯಗಳ ನಡುವಿನ ಜಲ ವಿಷಯಗಳ ಕುರಿತು ಪರಸ್ಪರ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವ ಮುರುಗೇಶ ನಿರಾಣಿ ಉಪಸ್ಥಿತರಿದ್ದರು. ಬೆಳಿಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಶರದ ಪವಾರ ಚರ್ಚೆ ಈ ಮಧ್ಯೆ, ಬೆಳಿಗ್ಗೆ ಮಹಾರಾಷ್ಟ್ರದ ಮಾಜಿ ಸಿಎಂ ಮತ್ತು ಎನ್ ಸಿ ಪಿ ಮುಖ್ಯಸ್ಥ ಶರದ […]
ಮಹಾರಾಷ್ಟ್ರ ಮಾಜಿ ಸಿಎಂ ಶರದ ಪವಾರ ಅವರಿಂದ ರಾಜ್ಯ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ
ಬೆಂಗಳೂರು: ಮಹಾರಾಷ್ಟ್ರದ ಮಾಜಿ ಸಿಎಂ ಮತ್ತು ಎನ್ ಸಿ ಪಿ ಮುಖ್ಯಸ್ಥ ಶರದ ಪವಾರ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೌಜನ್ಯಯುತವಾಗಿ ಭೇಟಿ ಮಾಡಿದ ಶರದ ಪವಾರ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ ಮತ್ತು ಡಾ. ಕೆ. ಸುಧಾಕರ ಉಪಸ್ಥಿತರಿದ್ದರು.
ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾದ ಭಾರತದಲ್ಲಿನ ಬ್ರಿಟಿಷ್ ಹೈ ಕಮಿಷನರ್
ಬೆಂಗಳೂರು: ಭಾರತದಲ್ಲಿನ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಇ ಈ ಸಂದರ್ಭದಲ್ಲಿ ನಾನಾ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರದ ಕುರಿತು ಚರ್ಚಿ ನಡೆಸಿದರು. ಇ ಈ ಸಂದರ್ಭದಲ್ಲಿ ಬೆಂಗಳೂರಿನ ಬ್ರಿಟಿಷ್ ಡೆಪ್ಯುಟಿ ಹೈ ಕಮಿಷನರ್ ಜೆರೆಮಿ ಪಿಲ್ಮೋರ್ ಬೆಡ್ ಫೋರ್ಡ್, ಸಚಿವರಾದ ಆರ್. ಅಶೋಕ್, ಡಾ. ಸಿ. ಎನ್. ಅಶ್ವತ್ಥನಾರಾಯಣ, ಮುಖ್ಯಮಂತ್ರಿಯವರ ಕಾರ್ಯದರ್ಶಿ ವಿ. ಪೊನ್ನುರಾಜ್ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತ […]
ಇಂದು ಸೀಲ್ ಮಾಡಿದ ಲಕೋಟೆಯಲ್ಲಿ ಸಚಿವರ ಪಟ್ಟಿ ತರ್ತಿದ್ದಾರಾ ಸಿಎಂ? ಸುಮಾರು 15 ಜನರಿಗೆ ಸಚಿವ ಸ್ಥಾನ ನಿರೀಕ್ಷೆ
ನವದೆಹಲಿ: ದೆಹಲಿಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಎರಡು ದಿನಗಳ ಸತತ ಚರ್ಚೆಯ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ನಿನ್ನೆ ತಡರಾತ್ರಿ ನವದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 2-3 ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ಸಂಪುಟ ವಿಸ್ತರಣೆ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರೊಂದಿಗೆ ಎರಡು ಸಲ ಚರ್ಚೆ ನಡೆಸಲಾಗಿದೆ. ಕೆಲವು ಸ್ಪಷ್ಠೀಕರಣ ಕೇಳಿದ್ದರು. ಅವುಗಳಗೆ ಸ್ಪಷ್ಟನೆ ನೀಡಲಾಗಿದೆ ಎಂದು ತಿಳಿಸಿದರು.ಬುಧವಾರ ಬೆಳಿಗ್ಗೆ ಹೈಕಮಾಂಡನಿಂದ ಬೇಗ […]
ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳ- ಭೀಮಾ ತೀರ ಸೇರಿದಂತೆ ಮಹಾರಾಷ್ಟ್ರದ ಗಡಿ ಚೆಕ್ ಪೋಸ್ಚ್ ಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ
ವಿಜಯಪುರ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯಲ್ಲಿ ಮಹಾರಾಷ್ಟ್ರದ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಗಡಿ ಚೆಕ್ ಪೋಸ್ಟ್ ಗಳಿಗೆ ಖುದ್ದಾಗಿ ತೆರಳಿ ಪರಿಶೀಲನೆ ನಡೆಸಿದರು. ಮೊದಲಿಗೆ ಇಂಡಿ ತಾಲೂಕಿನ ಧೂಳಖೇಡ್ ಚೆಕ್ ಪೋಸ್ಟ್ ಗೆ ತೆರಳಿದ ಅವರು, ವಿಜಯಪುರ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೈಗೊಳ್ಳಲಾಗಿರುವ ಬಂದೋಬಸ್ತ್ ಮತ್ತು ತಪಾಸಣೆ ಕುರಿತು ಪರಿಶೀಲನೆ ನಡೆಸಿದರು. ನಂತರ ಚಡಚಣ ತಾಲೂಕಿನ ಶಿರಾಡೋಣ […]
ಭೀಮಾ ತೀರದ ಜನರ ದುಸ್ಸಾಹಸ- ಕೊರೊನಾ ಮಹಾ ಕಂಟಕ ತಪ್ಪಿಸಲು ಬಂದ್ ಮಾಡಿರುವ ಬ್ಯಾರೇಜ್ ಮೇಲಿನ ರಸ್ತೆಯ ಮೇಲೆ ಬೈಕ್ ಹತ್ತಿಸಿ ಸಂಚಾರ
ವಿಜಯಪುರ: ಈ ಜನರೇ ಹೀಗೆ. ಸರಕಾರ ಕೈಗೊಳ್ಳುವ ನಿರ್ಧಾರಗಳು ಅವರ ಒಳಿತಿಗೆ ಇವೆ ಎಂಬುದನ್ನು ಮೈ ಮರೆತು ತಮ್ಮ ಚತುರತನವನ್ನು ಯಾವ್ಯಾವ ರೀತಿ ತೋರಿಸುತ್ತಾರೆ ಎಂಬುದಕ್ಕೆ ಉದಾಹರಣೆ ಇಲ್ಲಿದೆ. ಕರ್ನಾಟಕದಲ್ಲಿ ಕೊರೊನಾ ಸೋಂಕು ಸಾಕಷ್ಟು ನಿಯಂತ್ರಣಕ್ಕೆ ಬಂದಿದ್ದರೂ ನೆರೆಯ ಮಹಾರಾಷ್ಟ್ರದಲ್ಲಿ ಹೆಚ್ಚಾಗುತ್ತಿರುವ ಸೋಂಕಿನ ಪ್ರಮಾಣ ಗಡಿಭಾಗ ಅಷ್ಟೇ ಅಲ್ಲ, ಇಡೀ ಕರ್ನಾಟಕಕ್ಕೂ ಕಂಟಕ ತರುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗಡಿಯಲ್ಲಿರುವ ವಿಜಯಪುರ ಜಿಲ್ಲೆಯಲ್ಲಿಯೂ ಮಹಾರಾಷ್ಟ್ರವನ್ನು ಸಂಪರ್ಕಿಸುವ ರಸ್ತೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೊರೊನಾ ಮೂರನೇ ಅಲೆಯ […]
ನವದೆಹಲಿಯಲ್ಲಿ ಉಪರಾಷ್ಟ್ರಪತಿ, ಬಿಜೆಪಿ ರಾಜ್ಯ ಉಸ್ತುವಾರಿ ಭೇಟಿ ಮಾಡಿದ ಸಿಎಂ
ಸನವದೆಹಲಿ: ಸಚಿವ ಸಂಪುಟ ವಿಸ್ತರಣೆ ಸಂಬಂಧ ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಷ್ಟ್ರ ನಾಯಕರ ಭೇಟಿ ಮುಂದುವರೆಸಿದ್ದಾರೆ. ರಾಜ್ಯಸಭೆಗೆ ತೆರಳಿದ ಸಿಎಂ, ಅಲ್ಲಿ ಉಪರಾಷ್ಟ್ರಪತಿ ಮತ್ತು ಸಭಾಫತಿಯಾಗಿರುವ ಎಂ. ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿ ಕುಷಲೋಪರಿ ವಿಚಾರಿಸಿದರು. ಬಳಿಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದ ಅವರು, ಮಾತುಕತೆ ನಡೆಸಿದರು. ಅಲ್ಲದೇ, ತಾವು ಮುಖ್ಯಮಂತ್ರಿಯಾಗಲು ಸಹಕರಿಸಿದ್ದಕ್ಕೆ ಕೃತಹಜ್ಞತೆ ಸಲ್ಲಿಸಿದರು.
ಸಂಪುಟ ವಿಸ್ತರಣೆ- ಇಂದು ರಾತ್ರಿ ಹೈಕಮಾಂಡ್ ಸಚಿವ ಪಟ್ಟಿ ಪ್ರಕಟಿಸಲಿದೆ- ನಂತರ ಪ್ರಮಾಣ ವಚನ ದಿನ ನಿಗದಿ- ಸಿಎಂ ಬಸವರಾಜ ಬೊಮ್ಮಾಯಿ
ನವದೆಹಲಿ: ರಾಜ್ಯ ಸಚಿವ ಸಂಪುಟ ಸೇರಲಿರುವವ ಪಟ್ಟಿಯನ್ನು ಇಂದು ರಾತ್ರಿ ಹೈಕಮಾಂಡ ಪ್ರಕಟಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಆವರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿಎಂ ಈ ಕುರಿತು ಮಾಹಿತಿ ನೀಡಿದರು. ಮಂಗಳವಾರ ಲೋಕಸಭೆ ಅಧಿವೇಶನ ಮುಗಿದ ಬಳಿಕ ಎಷ್ಟು ಜನರಿಗೆ ಮತ್ತು ಯಾರಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದರ ಕುರಿತು ಹೈಕಮಾಂಡ್ ಸಭೆ ನಡೆಸಿ ನಿರ್ಧರಿಸಲಿದೆ. ಹೈಕಮಾಂಡ್ ಪಟ್ಟಿ ಪ್ರಕಟಿಸಿದ ನಂತರ ಬಿಜೆಪಿ […]
ಸಿಎಂ ದೆಹಲಿ ಪ್ರವಾಸ- ಪ್ರಧಾನಿ, ಕೇಂದ್ರ ಸಚಿವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಭೇಟಿ
ನವದೆಹಲಿ: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ನವದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷರನ್ನು ಭೇಟಿ ಮಾಡಿ ರಾಜ್ಯಕ್ಕೆಸಂಬಂಧಿಸಿದ ನಾನಾ ವಿಷಯಗಳ ಕುರಿತು ಚರ್ಚೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಸಿಎಂ, ತಮ್ಮನ್ನು ಈ ಹುದ್ದೆಗೆ ಆಯ್ಕೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು. ಅಲ್ಲದೇ, ಪ್ರಧಾನಿಯವರ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುವುದಾಗಿ ಭರವಸೆ ನೀಡಿದರು. ಸುಮಾರು 40 ನಿಮಿಷಗಳಿಗೂ ಹೆಚ್ಚು ಕಾಲ […]