ಭಾರತದಲ್ಲೂ ಪಿಕಲ್‌ಬಾಲ್ ಆಟವನ್ನು ಜನಪ್ರಿಯಗೊಳಿಸಲು ಆಲ್ ಇಂಡಿಯಾ ಪಿಕಲ್‌ಬಾಲ್ ಅಸೋಸಿಯೇಷನ್‌ನೊಂದಿಗೆ ಸಹಯೋಗ
ಬೆಂಗಳೂರು: ವಿಶ್ವದೆಲ್ಲೆಡೆ ಹೆಚ್ಚು ಚಾಲ್ತಿಯಲ್ಲಿರುವ ಪಿಕಲ್‌ಬಾಲ್ ಆಟವನ್ನು ಭಾರತದಲ್ಲೂ ಪ್ರಸಿದ್ಧಿಗೆ ತರುವ ಉದ್ದೇಶದಿಂದ ಆಲ್ ಇಂಡಿಯಾ ಪಿಕಲ್‌ಬಾಲ್ ಅಸೋಸಿಯೇಷನ್ ಐಟಿಸಿ ಅವರ ಬಿಂಗೋ ತಿಂಡಿಯೊಂದಿಗೆ ಸಹಯೋಗತ್ವವನ್ನು ಘೋಷಿಸಿದೆ. ಬಿಂಗೊ ಸಹಭಾಗಿತ್ವದಲ್ಲಿ ವಿಶ್ವ ಪಿಕಲ್‌ಬಾಲ್ ಚಾಂಪಿಯನ್‌ಶಿಪ್ ಗೆ ನಟಿ ಮಂದಿರಾ ಬೇಡಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಐಟಿಸಿ ಸ್ನ್ಯಾಕ್ಸ್, ನೂಡಲ್ಸ್ ಮತ್ತು ಪಾಸ್ಟಾ ವಿಭಾಗದ ವಿಪಿ ಸುರೇಶ್ ಚಂದ್, ವಿಶ್ವ ಪಿಕಲ್‌ಬಾಲ್ ಚಾಂಪಿಯನ್‌ಶಿಪ್ (WPC), ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಗಳಲ್ಲಿ ಒಂದಾಗಿದ್ದು, ಈ ಕ್ರೀಡೆಯನ್ನು […]
ಲಕ್ಷ್ಮಣ ನಿಂಬರಗಿ ವಿಜಯಪುರ ನೂತನ ಎಸ್ಪಿಯಾಗಿ ವರ್ಗಾವಣೆ
ವಿಜಯಪುರ: 2014ರ ಬ್ಯಾಚಿನ ಐಪಿಎಸ್ ಅಧಿಕಾರಿ ಲಕ್ಷ್ಮಣ ನಿಂಬರಗಿ ಅವರನ್ನು ವಿಜಯಪುರ ನೂತನ ಎಸ್ಪಿಯಾಗಿ ಸರಕಾರ ವರ್ಗಾವಣೆ ಮಾಡಿದೆ. ರಾಜ್ಯ ಕ್ರೈಂ ಬ್ಯೂರೊ ಎಸ್ಪಿಯಾಗಿರುವ ಲಕ್ಷ್ಮಣ ನಿಂಬರಗಿ ಅವರನ್ನು ಈಗ ವಿಜಯಪುರ ನೂತನ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಲಕ್ಷ್ಮಣ ನಿಂಬರಗಿ ಅವರು ಇದಕ್ಕೂ ಮುಂಚೆ ಬೆಳಗಾವಿ ಮತ್ತು ಬಳ್ಳಾರಿ ಎಸ್ಪಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.
ಆಯ್ಕೆ ಮಾಡಿದ ಮತದಾರರ ಋಣ ತೀರಿಸುವ, ಉಭಯ ಜಿಲ್ಲೆಗಳ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದೇನೆ- ಸುನೀಲಗೌಡ ಪಾಟೀಲ
ಬಾಗಲಕೋಟೆ: ಆಯ್ಕೆ ಮಾಡಿರುವ ಮತದಾರರು ಮತ್ತು ಉಭಯ ಜಿಲ್ಲೆಗಳ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದೇನೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ವಿಧಾನ ಪರಿಷತ್ ಸದಸ್ಯರಾದ ಶ್ರೀ ಸುನೀಲಗೌಡ ಪಾಟೀಲ ರವರನ್ನು ಸನ್ಮಾನಿಸಲಾಯಿತು, ನನ್ನ ವಿಧಾನ ಪರಿಷತ್ ಶಾಸಕತ್ವದ ಅವಧಿ ಇನ್ನೂ ನಾಲ್ಕು ವರ್ಷವಿದೆ. ಈ ಸಮಯವನ್ನು ನನ್ನ ಮೇಲೆ ಭರವಸೆ ಇಟ್ಟು ವಿಧಾನ ಪರಿಷತ್ ಗೆ ಕಳಿಸಿದ ವಿಜಯಪುರ ಮತ್ತು ಬಾಗಲಕೋಟೆ ಉಭಯ […]
ಬಸವ ನಾಡಿಗೆ ವಂದೇ ಭಾರತ ರೈಲು ಕಾರ್ಯಸಾಧುವಲ್ಲ- ರೇಲ್ವೆ ಇಲಾಖೆ ಉತ್ತರಕ್ಕೆ ಶಾಸಕ ಸುನೀಲಗೌಡ ಪಾಟೀಲ ಆಕ್ರೋಶ
ವಿಜಯಪುರ: ವಿಜಯಪುರ-ಬಾಗಲಕೋಟೆ-ಬೆಂಗಳೂರು ಮತ್ತು ಮುಂಬಯಿ-ವಿಜಯಪುರ ಮಧ್ಯೆ ವಂದೇ ಭಾರತ ರೈಲು ಸೇವೆ ಪ್ರಾರಂಭಿಸುವುದು ಕಾರ್ಯಸಾಧುವಲ್ಲ ಎಂದು ಕೇಂದ್ರ ರೇಲ್ವೆ ಇಲಾಖೆ ತಿಳಿಸಿದ್ದು, ಇದು ಕೇಂದ್ರ ಸರಕಾರ ಬಸವನಾಡಿನ ಬಗ್ಗೆ ಹೊಂದಿರುವ ಮಲತಾಯಿ ಧೋರಣಗೆ ಸಾಕ್ಷಿಯಾಗಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಿಜಯಪುರ-ಬಾಗಲಕೋಟೆ-ಬೆಂಗಳೂರು ಮಧ್ಯೆ ಹೊಸದಾಗಿ ವಂದೇ ಭಾರತ ರೈಲು ಸೇವೆ ಪ್ರಾರಂಭಿಸಬೇಕು ಮತ್ತು ಮುಂಬಯಿ-ಸೋಲಾಪುರ ನಡುವೆ ಸಂಚರಿಸುವ ವಂದೇ ಭಾರತ ರೈಲನ್ನು ವಿಜಯಪುರವರೆಗೆ ವಿಸ್ತರಿಸುವಂತೆ […]
ಬೆಂಗಳೂರು ಸಮಸ್ಯೆಗಳಿಗೆ ನಿಮ್ಮ ಬಳಿ ಪರಿಹಾರವಿದೆಯೇ? ನೀವೂ ನಮ್ಮ ಬೆಂಗಳೂರು ಚಾಲೆಂಜ್ ನಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಬಹುದು
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಟ್ರಾಫಿಕ್ ಸೇರಿದಂತೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ವಿಭಿನ್ನ ಆಲೋಚನೆ, ಐಡಿಯಾ ನಿಮ್ಮಲ್ಲಿದೆಯೇ? ಹಾಗಿದ್ದರೆ ಇಲ್ಲಿದೆ ಉತ್ತಮ ಅವಕಾಶ. ಅನ್‌ಬಾಕ್ಸಿಂಗ್ ಬೆಂಗಳೂರು ಹಾಗೂ WT ಫಂಡ್ ಸಹಯೋಗದೊಂದಿಗೆ ಬೆಂಗಳೂರು ಸಮಸ್ಯೆಗೆ ಪರಿಹಾರ ಸೂಚಿಸುವ ಐದು ವಿಭಿನ್ನ ಆಲೋಚನೆಗಳಿಗೆ ತಲಾ 10 ಲಕ್ಷ ರೂ ಅನುದಾನ ನೀಡುವ “ನಮ್ಮ ಬೆಂಗಳೂರು ಚಾಲೆಂಜ್” ಉಪಕ್ರಮವನ್ನು ಘೊಷಣೆ ಮಾಡಿದೆ. ಉತ್ತಮ ಐಡಿಯಾ ನೀಡುವ 5 ವ್ಯಕ್ತಿಗಳು ಅಥವಾ ಸ್ಟಾರ್ಟ್‌ಅಪ್ ಅಥವಾ ಸಮುದಾಯ […]
ವಕ್ಫ್ ನೊಟೀಸ್ ವಿಚಾರ: ನ. 4 ಸೋಮವಾರದಿಂದ ಅಹೋರಾತ್ರಿ ಧರಣಿ ಆರಂಭಛ ಶಾಸಕ ಬಸನಗೌಡ ಪಾಟೀಲ ಯತ್ನಾಳ
ವಿಜಯಪುರ: ಕಾನೂನು ಬಾಹಿರವಾಗಿ ರೈತರ, ಸಂಘ-ಸಂಸ್ಥೆಗಳ, ಮಠ ಮಾನ್ಯಗಳ ಜಮೀನು, ಅಲ್ಲದೇ ಸರಕಾರಿ ಜಮೀನು, ಇತ್ಯಾದಿ ಆಸ್ತಿಗಳ ಉತಾರೆಯಲ್ಲಿ ವಕ್ಪ್ ಆಸ್ತಿ ಎಂದು ಎಂಟ್ರಿ ಮಾಡಿರುವುದನ್ನು ತಕ್ಷಣ ತೆಗೆದು ಹಾಕುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇದೇ ನವೆಂಬರ್ 4 ಸೋಮವಾರದಿಂದ ಬೆ. 11 ಕ್ಕೆ ವಿಜಯಪುರ ನಗರದ ಶ್ರೀ ಸಿದ್ದೇಶ್ವರ ಗುಡಿಯಿಂದ ಮೆರವಣಿಗೆ ಮೂಲಕ ತೆರಳಿ ನಗರದ ಜಿಲ್ಲಾಧಿಕಾರಿ ಕಚೇರಿ ಹೊರಭಾಗದಲ್ಲಿ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಆರಂಭಿಸಲಾಗುವುದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. […]
ನೋಟೀಸುಗಳನ್ನು ವಾಪಸ್ ಪಡೆಯುವಂತೆ ವಕ್ಫ್ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ ಸಚಿವ ಜಮೀರ್ ಅಹ್ಮದ್ ಖಾನ್
ವಿಜಯಪುರ: ರೈತರಿಗೆ ನೀಡಲಾಗಿರುವ ನೋಟೀಸ್ ನ್ನು ಹಿಂಪಡೆಯುವಂತೆ ಸಿಎಂ ವಕ್ಫ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಬಿ. ಝ್. ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ವಿಜಯಪುರದಲ್ಲಿ ತಮ್ನನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮತನಾಡಿದ ಅವರು, ವಕ್ಪ್ ನೋಟಿಸ್ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನನ್ನನ್ನು ಸಹ ಮೀಟಿಂಗ್ ಗೆ ಕರೆದಿದ್ದರು. ಆದರೆ, ನಾನು ಸಂಡೂರಿನಲ್ಲಿದ್ದ ಕಾರಣ ಹೋಗಲು ಆಗಿಲ್ಲ. ಹೀಗಾಗಿ ಸಿಎಂ ಮೀಟಿಂಗ್ ಮಾಡಿ ನಿರ್ಧಾರ ತಗೆದುಕೊಂಡಿದ್ದಾರೆ. ಎಲ್ಲ ನೋಟಿಸ್ […]
ಆಲಮಟ್ಟಿ, ಹೆರಕಲ್ ಗ್ರಾಮಗಳಲ್ಲಿರುವ ಉದ್ದೇಶಿತ ಯೋಜನಾ ಸ್ಥಳಗಳಿಗೆ ಕೆಎಂಬಿ ಸಿಇಒ ಭೇಟಿ
ಬಾಗಲಕೋಟೆ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಸಾಗರಮಾಲ ಯೋಜನೆಯಡಿ ಪ್ರವಾಸೋದ್ಯಮ ಪೂರಕವಾಗಿ ಮತ್ತು ಸ್ಥಳೀಯ ಜನರಿಗೆ ಅನುಕೂಲವಾಗುವ ಆಲಮಟ್ಟಿ, ಹೆರಕಲ್ ಗ್ರಾಮಗಳಲ್ಲಿರುವ ಉದ್ದೇಶಿತ ಯೋಜನೆಯನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಜಯರಾಮ್ ರಾಯಪುರ ಅವರು ತಿಳಿಸಿದರು. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಮತ್ತು ಹೆರಕಲ್ ಗ್ರಾಮಗಳಲ್ಲಿರುವ ಉದ್ದೇಶಿತ ಯೋಜನಾ ಸ್ಥಳಗಳ ಕಾರ್ಯಸಾಧ್ಯತೆ, ಯೋಜನೆಯ ಭೂಸ್ವಾಧೀನ ಮತ್ತು ಜಲಸಾರಿಗೆ ಉಪಯುಕ್ತತೆ ಬಗ್ಗೆ ಪರಿಶೀಲನೆ ಹಾಗೂ ಆಲಮಟ್ಟಿ ಆಣೆಕಟ್ಟಿನ […]
ವಕ್ಫ್ ಆಸ್ತಿ ಬರೀ 11 ಎಕರೆ, ಮಿಕ್ಕಿದ್ದು ಹೊನವಾಡ ಗ್ರಾಮದ ರೈತರದು: 1974ರ ಗೆಜೆಟ್ ನಲ್ಲಿನ ತಪ್ಪನ್ನು 1977ರಲ್ಲಿ ವಕ್ಫ್ ಮಂಡಳಿ ಸರಿ ಮಾಡಿದೆ- ಸಚಿವ ಎಂ. ಬಿ. ಪಾಟೀಲ
ಬೆಂಗಳೂರು: ಗೆಜೆಟ್‌ನಲ್ಲಿ ತಪ್ಪಾಗಿ ನಮೂದಿಸಿದ್ದರಿಂದಾಗಿ ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದ 1,200 ಎಕರೆ ವಕ್ಫ್ ಆಸ್ತಿ ಎನ್ನುವ ಗೊಂದಲ ಸೃಷ್ಟಿಯಾಗಿದೆಯಷ್ಟೆ. ಇಲ್ಲಿ 11 ಎಕರೆ ಮಾತ್ರ ವಕ್ಫ್ ಗೆ ಸೇರಿದ್ದು, ಇದರಲ್ಲಿ 10 ಎಕರೆ 14 ಗುಂಟೆಯಲ್ಲಿ ಖಬರಸ್ತಾನವಿದೆ. ಉಳಿದ 24 ಗುಂಟೆಯಲ್ಲಿ ಈದ್ಗಾ, ಮಸೀದಿ ಇತ್ಯಾದಿ ಕಟ್ಟಡಗಳಿವೆ. ಉಳಿದ ಜಮೀನೆಲ್ಲ ರೈತರಿಗೆ ಸೇರಿದೆ. ಇದನ್ನು ತಹಸೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳು ಕೂಡ ಸ್ಪಷ್ಟಪಡಿಸಿದ್ದಾರೆ ಎಂದು ಆ ಜಿಲ್ಲೆಯ ಉಸ್ತುವಾರಿಯೂ ಆಗಿರುವ ಬೃಹತ್ ಮತ್ತು ಮಧ್ಯಮ […]
ಎ. ಎಸ್. ಪಿ ಕಾಲೇಜಿನ ವ್ಯವಹಾರ ಅಧ್ಯಯನ ಮತ್ತು ಸಂಶೋಧನೆ ಕೇಂದ್ರ- ಬಿಸ್ಲೇರಿ ಇಂಟರನ್ಯಾಶನಲ್ ಪ್ರೈವೆಟ್ ಲಿಮಿಟೆಡ್ ಜೊತೆ ಒಡಂಬಡಿಕೆ
ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯ ವ್ಯವಹಾರ ಅಧ್ಯಯನ ಮತ್ತು ಸಂಶೋಧನೆ ಕೇಂದ್ರ ಮತ್ತು ಬಿಸ್ಲೇರಿ ಇಂಟರನ್ಯಾಶನಲ್ ಪ್ರೈವೆಟ್ ಲಿಮಿಟೆಡ್ ಜೊತೆ ಗಳ ಮಧ್ಯೆ ಪಾನಿಯಗಳ ಪ್ಲಾಸ್ಟಿಕ್ ಬಾಟಲ್ ಮರುಬಳಕೆ ಕುರಿತು ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಬಿ.ಎಲ್.ಡಿ.ಇ ಸಂಸ್ಥಾಪನ ದಿನಾಚರಣೆ ಅಂಗವಾಗಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪರವಾಗಿ ವ್ಯವಹಾರ ಅಧ್ಯಯನ ಮತ್ತು ಸಂಶೋಧನೆ ಕೇಂದ್ರದ ನಿರ್ದೇಶಕ ಡಾ. ಚಿದಾನಂದ ಬ್ಯಾಹಟ್ಟಿ ಮತ್ತು ಬಿಸ್ಲೇರಿ ಕಂಪನಿಯ ಪರವಾಗಿ ಬಿಸ್ಲೇರಿ ಸಿಎಸ್ಆರ್ ವಿಭಾಗದ ದಕ್ಷಿಣ ವಲಯ […]