ಬೆತ್ತಲೆಯಾಗಿ ಮೊಬೈಲ್ ಟವರ್ ಹತ್ತಿ ತುತ್ತತುದಿಯಲ್ಲಿ ಯುವಕನ ಹುಚ್ಚಾಟ- ಮದ್ಯ, ಗುಟ್ಕಾ ಆಮಿಷ ತೋರಿಸಿ ಕೆಳಗಿಳಿಸಿದ ಗ್ರಾಮಸ್ಖರು, ಪೊಲೀಸರು

ವಿಜಯಪುರ: ಮೊಬೈಲ್ ಟವರ್ ಹತ್ತಿದ ಯುವಕನೊಬ್ಬ ಬೆತ್ತಲೆಯಾಗಿ ಹುಚ್ಚಾಟ ತೋರಿಸುತ್ತ ಆವಾಂತರ ಸೃಷ್ಠಿಸಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ನಡೆದಿದೆ. ಬೆಳಿಗ್ಗೆಯಿಂದಲೇ ಮೊಬೈಲ್ ಟವರ್ ಮೇಲಿದ್ದ ಯುವಕ ಬೆತ್ತಲೆಯಾಗಿಯೇ ಟಾವರ್ ನ ತುತ್ತ ತುದಿಯ ಮೇಲೆ ನಿಂತು ಬೇಕಾದಂತೆ ಕೈ ಬೀಸುತ್ತಿದ್ದ.  ಈ ಸುದ್ದಿ ಇಡೀ ಗ್ರಾಮವಷ್ಟೇ ಅಲ್ಲ, ಅಕ್ಕಪಕ್ಕದ ಹಳ್ಳಿಗಳಲ್ಲಿಯೂ ಕಾಳ್ಗಿಚ್ಚಿನಂತೆ ಹರಡಿತು.  ಸುದ್ದಿ ತಿಳಿದ ಗ್ರಾಮಸ್ಥರೂ ಸೇರಿದಂತೆ ಅಕ್ಕಪಕ್ಕದ ಜನರೂ ಆ ಸ್ಥಳಕ್ಕೆ ದೌಡಾಯಿಸಿದರು.  ಮಾಹಿತಿ ಪಡೆದ ಆಲಮೇಲ ಪೊಲೀಸರು […]

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ನ್ಯೂನ್ಯತೆಗಳ ಕುರಿತು ತನಿಖೆ- ಎಂ. ಬಿ. ಪಾಟೀಲ

ವಿಜಯಪುರ: ಬುರಣಾಪುರ ಬಳಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಗಳನ್ನು ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯ ಬದಲು ಲೋಕೋಪಯೋಗಿ ಇಲಾಖೆಯ ಮೂಲಕ ಟೆಂಡರ್ ಮಾಡಿಸಲು ಕಾರಣಗಳ ಕುರಿತು ತನಿಖೆ ನಡೆಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ.ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯಲ್ಲಿ ಬಹಳಷ್ಟು ನ್ಯೂನ್ಯತೆಗಳಾಗಿವೆ.  ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ(ಐಡಿಡಿ) ಮಾಡಬೇಕಿದ್ದ ಕೆಲಸವನ್ನು ಲೋಕೋಪಯೋಗಿ ಇಲಾಖೆಗೆ ನೀಡಿದ್ದಾರೆ.  ಐಡಿಡಿ ಮಾಡಬೇಕಿದ್ದ […]

ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಪ್ರಸ್ತಾಪಿಸಿರುವ ನಾನಾ ತೆರಿಗೆಗಳ ಮಾಹಿತಿ ಇಲ್ಲಿದೆ

ಬೆಂಗಳೂರು: ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ರಾಜ್ಯ ಬಜೆಟ್ ನಲ್ಲಿ ನಾನಾ ತೆರಿಗೆಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.  ಈ ತೆರಿಗೆಗಳ ಮಾಹಿತಿ ಇಲ್ಲಿದೆ. ತೆರಿಗೆ ಪ್ರಸ್ತಾವನೆಗಳು ವಾಣಿಜ್ಯ ತೆರಿಗೆಗಳು 356. ದೇಶದ ದೊಡ್ಡ ರಾಜ್ಯಗಳಲ್ಲಿ ನಮ್ಮ ರಾಜ್ಯವು ಜಿ.ಎಸ್‍.ಟಿ ತೆರಿಗೆ ಸಂಗ್ರಹಣೆಯಲ್ಲಿ ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ. 21 ರಷ್ಟು ಅತ್ಯಧಿಕ ಬೆಳವಣಿಗೆ ದರವನ್ನು ಸಾಧಿಸಿದೆ. ಪ್ರಸ್ತುತ ಸಾಲಿನ ಮೊದಲನೇ ತ್ರೈಮಾಸಿಕದಲ್ಲಿ ಕೆ.ಜಿ.ಎಸ್‍.ಟಿ ರಾಜಸ್ವ ಸಂಗ್ರಹವು 18,962 ಕೋಟಿ ರೂ.ಗಳಾಗಿರುತ್ತದೆ. 357. ಪರಿಣಾಮಕಾರಿ ತೆರಿಗೆ ಆಡಳಿತಕ್ಕಾಗಿ ಹಾಗೂ ವಾಣಿಜ್ಯೋದ್ಯಮಗಳಿಗೆ […]

ಒಳಾಡಳಿತ ಇಲಾಖೆಗೆ ಸಿಎಂ ಬಜೆಟ್ ನಲ್ಲಿ ಘೋಷಣೆ ಮಾಡಿರುವ ಪ್ರಮುಖ ಅಂಶಗಳು

ಬೆಂಗಳೂರು: ಒಳಾಡಳಿತ ಇಲಾಖೆಗೆ ಸಿಎಂ ಎಸ್.ಸಿದ್ಧಾರಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿರುವ ಪ್ರಮುಖ ಅಂಶಗಳು. ಒಳಾಡಳಿತ 337. ನಮ್ಮ ಸರ್ಕಾರವು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಹೆಚ್ಚಿನ ಮಹತ್ವ ನೀಡಲಿದೆ. ʻನೈತಿಕ ಪೊಲೀಸ್ ಗಿರಿʼಯ ಹೆಸರಿನಲ್ಲಿ ನಡೆಯುವ ದಬ್ಬಾಳಿಕೆ, ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಹರಡುವ, ಸೌಹಾರ್ದ ಕೆಡಿಸುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಆ ಮೂಲಕ ಸಮಾಜದಲ್ಲಿ ಹದಗೆಟ್ಟಿದ್ದ ಸಾಮರಸ್ಯದ ವಾತಾವರಣವನ್ನು ಮರುನಿರ್ಮಿಸಲು ನಮ್ಮ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ. […]

ಅರಣ್ಯ, ಕಂದಾಯ, ಇ- ಆಡಳಿತ ಇಲಾಖೆಗಳಿಗೆ ಸಿಎಂ ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳು

ಬೆಂಗಳೂರು: ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ, ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ 304. ರಾಜ್ಯದಲ್ಲಿ ಮಾನವ – ಕಾಡಾನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಒಂದು 520 ಕಿ.ಮೀ.ಗಳ ಬ್ಯಾರಿಕೇಡ್‌ಗಳನ್ನು ನಿರ್ಮಿಸಲು ಘೋಷಿಸಲಾಗಿತ್ತು. ಈ ಯೋಜನೆಯಡಿಯಲ್ಲಿ ಇಲ್ಲಿಯವರೆಗೂ 312 ಕಿ.ಮೀ. ನಷ್ಟು ಬ್ಯಾರಿಕೇಡ್‌ ನಿರ್ಮಿಸಲಾಗಿದ್ದು, ಬಾಕಿ ಉಳಿದಿರುವ ಬ್ಯಾರಿಕೇಡ್‌ ನಿರ್ಮಾಣ ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು. ಈ ಕಾಮಗಾರಿಗಳ ಅನುಷ್ಠಾನಕ್ಕೆ 2023-24 ರಲ್ಲಿ 120 ಕೋಟಿ […]

ವಾಣಿಜ್ಯ, ಕೈಗಾರಿಕೆ, ಐಟಿ, ಬಿಟಿಗಳಿಗೆ ಸಿಎಂ ನೀಡಿರುವ ಯೋಜನೆಗಳು ಇಲ್ಲಿವೆ

ಬೆಂಗಳೂರು: ವಾಣಿಜ್ಯ, ಕೈಗಾರಿಕೆ, ಐಟಿ ಮತ್ತು ಬಿಟಿ ಇಲಾಖೆಗಳಿಗೂ ಹೊಸ ಯೋಜನೆಗಳನ್ನು ಸಿಎಂ ಎಸ್. ಸಿದ್ಧರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ. ವಾಣಿಜ್ಯ ಮತ್ತು ಕೈಗಾರಿಕೆ ʻಉದ್ಯೋಗಾಕಾಂಕ್ಷಿ ಯುವಜನತೆ ಉದ್ಯೋಗದಾತರಾಗುವಂತಾಗಬೇಕು.ʼ – ಭಾರತರತ್ನ ಡಾ. ಎ.ಪಿ.ಜೆ. ಅಬ್ದುಲ್‌ ಕಲಾಂ. 252. ನಿರುದ್ಯೋಗವೆನ್ನುವುದು ದೇಶದ ಯುವಜನತೆಯ ಆತ್ಮಸ್ಥೈರ್ಯವನ್ನೇ ಕುಂದಿಸುತ್ತಿದೆ. ಇದನ್ನು ನಿವಾರಿಸಲು ಬಂಡವಾಳ ಹೂಡಿಕೆಯನ್ನು ಹೆಚ್ಚಿಸುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಕೆಲಸ ಒಂದೆಡೆ ನಡೆಯಬೇಕು, ಮತ್ತೊಂದೆಡೆ ದೇಶದ ಯುವಜನರ ಔದ್ಯೋಗಿಕ ಕೌಶಲ್ಯವನ್ನು ವೃದ್ಧಿಪಡಿಸಬೇಕು. ಈ ನಿಟ್ಟಿನಲ್ಲಿ […]

ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗಳಿಗೆ ಸಿಎಂ ನೀಡಿರುವ ಕೊಡುಗೆ ಇಲ್ಲಿದೆ

ಬೆಂಗಳೂರು: ಮೂಲಕಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗಳಿಗೂ ಸಿಎಂ ಎಸ್. ಸಿದ್ಧರಾಮಯ್ಯ ಭರ್ಜರಿ ಕೊಡುಗೆ ನೀಡಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ 242. ರೈಲ್ವೆ ಜಾಲದ ಸಾಂದ್ರತೆಯನ್ನು ಹೆಚ್ಚಿಸಿ, ಕರ್ನಾಟಕದ ಎಲ್ಲಾ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಮೂಲಕ, ಪ್ರಾದೇಶಿಕ ಅಸಮತೋಲನ ಕಡಿಮೆ ಮಾಡುವುದು, ಜನಸಾಮಾನ್ಯರ ಸುಗಮ ಸಂಚಾರ ಹಾಗೂ ಸರಕು ಸಾಗಾಣಿಕೆಗೆ ಅನುವು ಮಾಡಿಕೊಡುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಸುಮಾರು 8,766 ಕೋಟಿ ರೂ.ಗಳ ರಾಜ್ಯದ ಹೂಡಿಕೆಯೊಂದಿಗೆ, 1,110 […]

ಯೋಜನೆ ಮತ್ತು ಪ್ರದೇಶಾಭಿವೃದ್ಧಿ, ನಗರಾಭಿವೃದ್ಧಿ ಇಲಾಖೆ ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳು

ಬೆಂಗಳೂರು: ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರು ಯೋಜನೆ ಮತ್ತು ಪ್ರದೇಶಾಭಿವೃದ್ಧಿ ಹಾಗೂ ನಗರಾಭಿವೃದ್ಧಿ ಇಲಾಖೆಗಳಿಗೂ ಉತ್ತಮ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಯೋಜನೆ ಮತ್ತು ಪ್ರದೇಶಾಭಿವೃದ್ಧಿ 211. ರಾಜ್ಯದ ಜಿ.ಎಸ್.ಡಿ.ಪಿ ಬೆಳವಣಿಗೆ ದರವನ್ನು ಶೇ.13 ರಿಂದ ಶೇ.17ಕ್ಕೆ ಹೆಚ್ಚಿಸುವ ಮೂಲಕ ರಾಜ್ಯವನ್ನು 1 ಟ್ರಿಲಿಯನ್ ಡಾಲರ್‌ ಎಕಾನಮಿಯಾಗಿ ಏರಿಸುವ (1 Trillion Dollar Economy) ಗುರಿಯೊಂದಿಗೆ ಕೃಷಿ, ಉದ್ಯಮ ಮತ್ತು ಸೇವಾ ವಲಯಗಳ ಸಾಮರ್ಥ್ಯ ವೃದ್ಧಿ, ಮೂಲಸೌಕರ್ಯ ಬೆಂಬಲ, ಅಧಿಕಾರ ಪ್ರತ್ಯಾಯೋಜನೆ, ಆಡಳಿತ ವಿಕೇಂದ್ರೀಕರಣ ಮತ್ತಿತರ ಉಪಕ್ರಮಗಳನ್ನು ಜಾರಿಗೆ ತರಲಾಗುವುದು. […]

ಸಮಾಜ ಕಲ್ಯಾಣ, ಪರಿಶಿಷ್ಠ ಜಾತಿ ಪರಿಶಿಷ್ಠ ಪಂಗಡಗಳು, ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಸಿದ್ಧರಾಮಯ್ಯ ಬಜೆಟ್ ನಲ್ಲಿ ಪ್ರಸ್ತಾಪಿಸಿರುವ ವಿಷಯಗಳು

ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ಸಮಾಜ ಕಲ್ಯಾಣ ಮತ್ತು ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆಗಳಿಗೆ ಸಿಎಂ ಎಸ್. ಸಿದ್ಧಾರಾಮಯ್ಯ ನೀಡಿರುವ ಕೊಡುಗೆಗಳ ಮಾಹಿತಿ ಇಲ್ಲಿದೆ. ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ʻಭೇದ ಭಾವ ನೀಗಬೇಕು, ದುಡಿದು ಹಿರಿಮೆ ಗಳಿಸಬೇಕು ಭಾರತೀಯರೆನಿಸುವೆಲ್ಲ ಜಾತಿ ಮತದ ಮಕ್ಕಳುʼ – ಕೆ.ಎಸ್. ನಿಸಾರ್‌ ಅಹ್ಮದ್‌ 137. ಸಮಾಜದಲ್ಲಿ ಹಲವು ಪೀಳಿಗೆಗಳಿಂದ ತುಳಿತಕ್ಕೊಳಗಾದ, ಅವಕಾಶ ವಂಚಿತರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಅಭ್ಯುದಯಕ್ಕೆ […]

ವೈದ್ಯಕೀಯ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಬಗ್ಗೆ ಬಜೆಟ್ ನಲ್ಲಿ ಸಿಎಂ ಪ್ರಸ್ತಾಪಿಸಿರುವ ವಿಷಯಚಗಳು

ಬೆಂಗಳೂರು: ವೈದ್ಯಕೀಯ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಬಗ್ಗೆ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಬಜೆಟ್ ನಲ್ಲಿ ಪ್ರಸ್ತಾಪಿಸಿರುವ ಪ್ರಮುಖ ಅಂಶಗಳು ಇಲ್ಲಿವೆ. ವೈದ್ಯಕೀಯ ಶಿಕ್ಷಣ 119. ರಾಜ್ಯದಲ್ಲಿ ಈಗಾಗಲೇ ಆರಂಭಿಸಲಾಗಿರುವ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ 450 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಗದಗ, ಕೊಪ್ಪಳ, ಕಾರವಾರ ಮತ್ತು ಕೊಡಗು ಜಿಲ್ಲೆಗಳಲ್ಲಿ 450 ಬೆಡ್‌ ಆಸ್ಪತ್ರೆಗಳ ನಿರ್ಮಾಣ ಕಾರ್ಯವನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲಾಗುವುದು. 120. ರಾಜೀವ್‌ ಗಾಂಧಿ ಆರೋಗ್ಯ […]