ಆರ್ಥಿಕಾಭಿವೃದ್ಧಿಗಾಗಿ ಕೈಗಾರಿಕೆ, ಇಂಧನ, ನಗರಾಭಿವೃದ್ಧಿ, ಲೋಕೋಪಯೋಗಿ ಇಲಾಖೆಗಳಿಗೆ ಸಿಎಂ ನೀಡಿರುವ ಕೊಡುಗೆ ಮಾಹಿತಿ ಇಲ್ಲಿದೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್ ನಲ್ಲಿ ಆರ್ಥಿಕ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದಾರೆ. ಆರ್ಥಿಕ ಅಭಿವೃದ್ಧಿಗೆ ಪ್ರಚೋದನೆ ತಲೆಬರಹದಡಿ ಬಜೆಟ್ ನಲ್ಲಿ ಕೈಗಾರಿಕೆ, ಇಂಧನ, ನಗರಾಭಿವೃದ್ಧಿ, ಲೋಕೋಪಯೋಗಿ ಸೇರಿದಂತೆ ಆದಾಯ ತರುವ ಪ್ರಮುಖ ಇಲಾಖೆಗಳಿಗೆ ನೀಡಲಾಗಿರುವ ಆದ್ಯತೆಗಳನ್ನು ಬಹಿರಂಗಪಡಿಸಿದ್ದಾರೆ. 227. ಕರ್ನಾಟಕ ರಾಜ್ಯವು ಹೂಡಿಕೆ ಆಕರ್ಷಿಸುವಲ್ಲಿ ದೇಶದಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡು ಬಂದಿದೆ. ವಿವಿಧ ವಲಯಗಳಿಗೆ ನಿರ್ದಿಷ್ಟ ನೀತಿ ನಿರೂಪಣೆ, ಪ್ರೋತ್ಸಾಹಕಗಳು ಹಾಗೂ Ease of Doing Business ಉಪಕ್ರಮಗಳ ಮೂಲಕ ಹೂಡಿಕೆದಾರರ ನೆಚ್ಚಿನ […]
ಶಿಕ್ಷಣ, ಉನ್ನತ ಶಿಕ್ಷಣ, ಆರೋಗ್ಯ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಸೇರಿದಂತೆ ನಾನಾ ಇಲಾಖೆಗಳಿಗೆ ಸಂಬಂಧಿಸಿದ ಬಜೆಟ್ ಮಾಹಿತಿ ಇಲ್ಲಿದೆ.
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್ ನಲ್ಲಿ ಶಿಕ್ಷಣ, ಉನ್ನತ ಶಿಕ್ಷಣ, ಆರೋಗ್ಯ, ಸಮಾಜ ಕಲ್ಯಾಣ ಮತ್ತು ಇತರ ಇಲಾಖೆಗಳ ಬಗ್ಗೆ ಪ್ರಸ್ತಾಪಿಸಿರುವ ಅಂಶಗಳು ಇಲ್ಲಿವೆ. ರಾಷ್ಟ್ರಕವಿ ಡಾ. ಜಿ. ಎಸ್. ಶಿವರುದ್ರಪ್ಪ ಅವರ ಕವನ ವಾಚಿಸುವ ಮೂಲಕ ಸಿಎಂ ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ಹೆಸರಿನಲ್ಲಿ ನಾನಾ ಇಲಾಖೆಗಳಿಗೆ ಬಜೆಟ್ ನಲ್ಲಿ ಮೀಸಲಿಟ್ಟಿರುವ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಸುತ್ತಲು ಕವಿಯುವ ಕತ್ತಲೆಯೊಳಗೆ ಪ್ರೀತಿಯ ಹಣತೆಯ ಹಚ್ಚೋಣ ಮತಗಳೆಲ್ಲವು ಪಥಗಳು ಎನ್ನುವ ಹೊಸ ಎಚ್ಚರದಲ್ಲಿ ಬದುಕೋಣ. – […]
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ನಲ್ಲಿಯ ಪ್ರಮುಖಾಂಶಗಳು
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ್ದಾರೆ. ಮುಖ್ಯಮಂತ್ರಿಗಳು ಮಂಡಿಸಿರುವ ಬಜೆಟ್ ಆಯ್ದ ಪ್ರಮುಖಾಂಶಗಳು ಇಲ್ಲಿವೆ. 2023-24ನೇ ಸಾಲಿನ ಆಯವ್ಯಯ ಸನ್ಮಾನ್ಯ ಸಭಾಧ್ಯಕ್ಷರೆ, 1. 2023-24ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸುತ್ತಿದ್ದೇನೆ. 2. ಕೋವಿಡ್ ನಂತರದ ದಿನಗಳಲ್ಲಿ ಜಾಗತಿಕ ಚೇತರಿಕೆಗಿಂತ ತೀವ್ರಗತಿಯಲ್ಲಿ ಭಾರತ ಪುಟಿದೆದ್ದಿದೆ. ಇದೇ ಹಾದಿಯಲ್ಲಿ ಕರ್ನಾಟಕವೂ ದೃಢವಾಗಿ ಮುನ್ನಡೆಯುತ್ತಿದೆ. 3. ಜಾಗತಿಕವಾಗಿ ಹಲವಾರು ದೇಶಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಆರ್ಥಿಕ ಸ್ಥಿರತೆಗಾಗಿ ತೆಗೆದುಕೊಂಡ […]
ಭೀಮಾ ತೀರದ ಚಡಚಣ, ಭೈರಗೊಂಡ ಕುಟುಂಬಗಳ ಮಧ್ಯೆ ರಾಜಿ ಸಂಧಾನ ಮಾಡಿಸಿದ ಎಡಿಜಿಪಿ ಅಲೋಕಕುಮಾರ
ವಿಜಯಪುರ: ನಾಲ್ಕೈದು ದಶಕಗಳಿಂದ ವೈರತ್ವ ಹೊಂದಿರುವ ವಿಜಯಪುರ ಜಿಲ್ಲೆಯ ಭೀಮಾ ತೀರದ ಉಮರಾಣಿ ಗ್ರಾಮದ ಚಡಚಣ ಮತ್ತು ಭೈರಗೊಂಡ ಕುಟುಂಬಗಳ ನಡುವಿನ ದ್ವೇಷ ಪ್ರಕರಣಕ್ಕೆ ಪೊಲೀಸರು ರಾಜಿ ಸಂಧಾನ ಮಾಡಿಸಿದ್ದಾರೆ. ಚಡಚಣ ಪಟ್ಟಣದಲ್ಲಿ ಎಡಿಜಿಪಿ ಅಲೋಕಕುಮಾರ ನೇತೃತ್ವದಲ್ಲಿ ಎರಡೂ ಕುಟುಂಬಗಳು ಮತ್ತು ಅವರ ಬೆಂಬಲಿಗರ ಸಭೆ ನಡೆಯಿತು. ರಾತ್ರಿವರೆಗೆ ನಡೆದ ಸಂಧಾನ ಸಭೆಯಲ್ಲಿ ಅಲೋಕಕುಮಾರ ವಿಮಲಾಬಾಯಿ ಚಡಚಣ ಮತ್ತು ಮಹಾದೇವ ಸಾಹುಕಾರ ಭೈರಗೊಂಡ ಅವರನ್ನು ಒಂದೇ ವೇದಿಕೆಯಲ್ಲಿ ಮುಖಾಮುಖಿ ಮಾಡಿಸಿ ದಶಕಗಳ ವೈಮನಸ್ಸನ್ನು ಮರೆತು ದೇವರು, ಸ್ವಾಮೀಜಿಗಳು, […]
ಪತ್ರಕರ್ತರ ಛಲ ಪ್ರಜಾಪ್ರಭುತ್ವಕ್ಕೆ ಬಲವಿದ್ದಂತೆ- ಆ ಛಲ ಪ್ರಜಾಸತ್ತೆಗೆ ಮಾರಕವಾಗಬಾರದು- ಶಿವಾನಂದಪಾಟೀಲ
ವಿಜಯಪುರ: ಪತ್ರಕರ್ತರ ಛಲ ಪ್ರಜಾಪ್ರಭುತ್ವಕ್ಕೆ ಬಲವಿದ್ದಂತೆ. ಆದರೆ ಈ ಛಲ ಪ್ರಜಾಪ್ರಭುತ್ವಕ್ಕೆ ಮಾರಕವಾಗಬಾರದು ಎಂದು ಮಾಜಿ ಸಚಿವ ಮತ್ತು ಬಸವನ ಬಾಗೇವಾಡಿ ಶಾಸಕ ಶಿವಾನಂದ ಎಸ್. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ನಡೆದ ಕಾರ್ಯನಿರತ ಪತ್ರಕರ್ತರ ಸಂಘದ 37ನೇ ರಾಜ್ಯ ಮಟ್ಟದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಪತ್ರಕರ್ತರು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮತ್ತು ಸಮಾಜದ ಹಿತವನ್ನು ಗಮನದಲ್ಲಿ ಇಟ್ಟುಕೊಂಡು ಸಮಯೋಚಿತ ನಿರ್ಧಾರಗಳ ಮೂಲಕ ವರದಿ ಮಾಡಬೇಕು. ಪ್ರಜಾಪ್ರಭುತ್ವ ರಕ್ಷಣೆಗೆ ಎಲ್ಲ ರಂಗಗಳು ಕೈ ಜೋಡಿಸಿ ಕಾರ್ಯ […]
ಹಳಕಟ್ಟಿ ಅವರ ತ್ಯಾಗ, ಬದ್ಧತೆ ಗುಣವನ್ನು ಪತ್ರಕರ್ತರು ಅಳವಡಿಸಿಕೊಳ್ಳಬೇಕು
ವಿಜಯಪುರ: ಪತ್ರಕರ್ತ, ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಅವರ ತ್ಯಾಗ, ಬದ್ಧತೆ ಗುಣವನ್ನು ಪತ್ರಕರ್ತರು ಅಳವಡಿಸಿಕೊಳ್ಳಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಕರೆ ನೀಡಿದ್ದಾರೆ. ವಿಜಯಪುರ ನಗರದ ಕಂದಗಲ್ ಶ್ರೀ ಹಣಮಂತರಾಯ ರಂಗಮಂದಿರದಲ್ಲಿ ನಡೆದ 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಸಮಾರೋಪ ಸಮಾರಂಭದ ಪತ್ರಕರ್ತರಿಗೆ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದರು. ಡಾ. ಫ. ಗು. ಹಳಕಟ್ಟಿ ಅವರು ಶಿವಾನುಭವ, ನವ ಕರ್ನಾಟಕ ಮಾಸ ಪತ್ರಿಕೆ ಆರಂಭಿಸಿ, ಮನೆಯನ್ನು ಮಾರಾಟ ಮಾಡಿ […]
ಪತ್ರಕರ್ತರ ಸೌಲಭ್ಯಕ್ಕಾಗಿ ಹಕ್ಕೊತ್ತಾಯ ಮಂಡನೆ- ದಾವಣಗೆರೆಯಲ್ಲಿ ಮುಂದಿನ ಸಮ್ಮೇಳನ- ಕಾನಿಪ ಸಮ್ಮೇಳನದ ಪ್ರತಿನಿಧಿ ಸಮಾವೇಶದಲ್ಲಿ ನಿರ್ಣಯ
ವಿಜಯಪುರ: ಗ್ರಾಮೀಣ ಪತ್ರಕರ್ತರಿಗೂ ಉಚಿತ ಬಸ್ ಪಾಸ್ ಸೌಲಭ್ಯ ವಿಸ್ತರಣೆ, ನಿವೃತ್ತ ಪತ್ರಕರ್ತರಿಗೆ 20 ಸಾವಿರ ರೂ.ಗೆ ಏರಿಕೆ ಸೇರಿದಂತೆ ಹಲವಾರು ಪ್ರರ್ತಕರ್ತರ ಪರವಾದ ಬೇಡಿಕೆಗಳಿಗೆ ಹಕ್ಕೊತ್ತಾಯ ಮಂಡಿಸಲು ನಿರ್ಣಯ ಮಂಡಿಸಲಾಯಿತು. ವಿಜಯಪುರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ 37 ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಪ್ರಯುಕ್ತ ನಡೆದ ಪ್ರತಿನಿಧಿಗಳ ಸಮಾವೇಶದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಈ ಹಕ್ಕೊತ್ತಾಯದ ನಿರ್ಣಯ ಮಂಡಿಸಿದರು. ಗ್ರಾಮೀಣ ಭಾಗದಲ್ಲಿ ಪತ್ರಕರ್ತರಿಗೂ ಉಚಿತ ಬಸ್ […]
ವಿಜಯಪುರದ ಜನರ ಹೃದಯ ವೈಶಾಲ್ಯತೆ ಇತರರಿಗೂ ಮಾದರಿಯಾಗಿದೆ- ಬಸನಗೌಡ ಪಾಟೀಲ ಯತ್ನಾಳ
ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯ ಜನರ ಹೃದಯ ವೈಶಾಲ್ಯತೆ ಇತರರಿಗೂ ಮಾದರಿಯಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ನಡೆಯುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ 37ನೇ ರಾಜ್ಯ ಮಟ್ಟದ ಸಮ್ಮೇಳನ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆ ಜನ ದಾನ, ಧರ್ಮ, ಮಾನವೀಯ ಮೌಲ್ಯಗಳ ಆಗರ. ವಿಜಯಪುರ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು, ಬಂಥನಾಳ ಶಿವಯೋಗಿಗಳು ಜನಿಸಿದ ಪುಣ್ಯ ಭೂಮಿ. ಬಸವನಾಡಿನ ಜನರ ಹೃದಯ ವೈಶಾಲ್ಯತೆ ಯಾವ ರೀತಿ ಎಂದರೆ ಮಿನಿಸ್ಟರ್ ಅಷ್ಟೇ […]
ಸ್ವಾತಂತ್ರ್ಯ ಪೂರ್ವದಲ್ಲಿದ್ದ ಮಾಧ್ಯಮಗಳ ಆಶಯ, ನೀತಿ ಸಂಹಿತೆ ಇಂದಿಗೂ ಅಳವಡಿಸಿಕೊಳ್ಳುವ ಅಗತ್ಯವಿದೆ- ಗೋವಿಂದ ಕಾರಜೋಳ
ವಿಜಯಪುರ: ಸ್ವಾತಂತ್ರ್ಯ ಪೂರ್ವದಲ್ಲಿ ಮಾಧ್ಯಮಗಳು ಹೊಂದಿದ್ದ ಆಶಯ ಮತ್ತು ವಿಚಾರಗಳನ್ನು ಈಗ ಮತ್ತೆ ಅಳವಡಿಸಿಕೊಂಡು ಮುನ್ನಡೆಯುವುದು ಅಗತ್ಯವಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಗೇಳಿದ್ದಾರೆ. ವಿಜಯಪುರದಲ್ಲಿ ನಡೆಯುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ 37ನೇ ಸಮ್ಮೇಳನ ಉದ್ಘಾಟನೆ ಸಮಾರಂಭದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ಸ್ವಾತಂತ್ರ್ಯ ಹೋರಾಟದಜದ ಸಂದರ್ಭದಲ್ಲಿ ಮಾಹಾತ್ಮಾ ಗಾಂಧಿ, ಡಾ. ಬಿ. ಆರ್. ಅಂಬೇಡ್ಕರ ಕೂಡ ಪತ್ರಕರ್ತರಾಗಿ ಬ್ರಿಟೀಷರ ದುರಾಡಳಿತವನ್ನು ವಿಶ್ವಕ್ಕೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಿದ್ದಾರೆ. ಮಹಾತ್ಮಾ […]
ಪತ್ರಕರ್ತರು ಅಖಂಡ ಕರ್ನಾಟಕದ ಭಾಗವಾಗಬೇಕು -ಸಿಎಂ ಬಸವರಾಜ ಬೊಮ್ಮಾಯಿ
ವಿಜಯಪುರ: ಪತ್ರಕರ್ತರು ಪ್ರದೇಶಗಳಿಗೆ ಸೀಮಿತವಾಗದೇ ಅಖಂಡ ಕರ್ನಾಟಕದ ಭಾಗಬೇಕು. ಆಗ ಮಾತ್ರ ರಾಜ್ಯದ ಗಟ್ಟಿ ಧ್ವನಿ ಎಲ್ಲೆಡೆ ಕೇಳುತ್ತದೆ. ಉತ್ತರ, ದಕ್ಷಿಣ ಎಂಬ ಬೇಧಭಾವ ಇರಬಾರದು. ಎಲ್ಲಾ ಭಾಗಗಳು ಅಭಿವೃದ್ಧಿಯಾಗಬೇಕಾದರೆ ಸಮಗ್ರ ಕರ್ನಾಟಕದ ಬಗ್ಗೆ ನಾವು ಮಾತನಾಡಬೇಕು. ಈ ವಿಷಯವನ್ನು ಪರ್ತಕರ್ತರು ಚರ್ಚೆ ಮಾಡಬೇಕು ಎಂದು ಮುಖ್ಯಮಂತ್ತಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿರುವ 37ನೇ ಪತ್ರಕರ್ತರ ರಾಜ್ಯ ಮಟ್ಟದ ಸಮ್ಮೇಳನ ಉದ್ಘಾಟಿ […]