NPS Bicycle: ಹೊಸ ಪಿಂಚಣಿ ಯೋಜನೆ ವಿರೋಧಿಸಿ ಬಸವ ನಾಡಿನಿಂದ ರಾಜಧಾನಿಗೆ ಸೈಕಲ್ ಮೂಲಕ ಸಂಚರಿಸಿ ಗಮನ ಸೆಳೆದ ಗುಮ್ಮಟ ನಗರಿಯ ಶಿಕ್ಷಕ

ವಿಜಯಪುರ: ಹೊಸ ಪಿಂಚಣಿ ಯೋಜನೆ(ಎನ್‌ಪಿಎಸ್) ವಿರೋಧಿಸಿ ಸರಕಾರಿ ನೌಕರರು ಬೆಂಗಳೂರಿನಲ್ಲಿ ಕಳೆದ ಹಲವಾರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.  ಈ ಪ್ರತಿಭಟನೆ ಬೆಂಬಲಿಸಿ ಬಸವ ನಾಡು ವಿಜಯಪುರದ ಶಿಕ್ಷಕ ತೌಸೀಫ್ ಪಟೇಲ್ ವಿನೂತನವಾಗಿ ಹೋರಾಟ ನಡೆಸಿದ್ದಾರೆ.  ಗುಮ್ಮಟ ನಗರಿ ವಿಜಯಪುರದಿಂದ ರಾಜಧಾನಿ ಬೆಂಗಳೂರಿಗೆ ಸೈಕಲ್ ಮೂಲಕ ತೆರಳಿ ಈ ಶಿಕ್ಷಕ ಗಮನ ಸೆಳೆದಿದ್ದಾರೆ. ಸೈಕಲ್ ಮೇಲೆ ಬೆಂಗಳೂರಿಗೆ ಬಂದ ಶಿಕ್ಷಕರನ್ನು ಪ್ರತಿಭಟನಾ ನಿರತರು ಸನ್ಮಾನಿಸಿದರು ಸೈಕಲ್ ಮೇಲೆ ಪ್ರತಿಭಟನಾ ಸ್ಥಳಕ್ಕೆ ಬಂದ ಯುವ ಶಿಕ್ಷಕರನ್ನು ಅಲ್ಲಿ ಧರಣಿ ನಡೆಸುತ್ತಿದ್ದ ಎನ್‌ […]

Entrepreneurship Programme: ಉದ್ಯಮಶೀಲತಾಭಿವೃದ್ದಿ ತರಬೇತಿಗೆ ಚಾಲನೆ ನೀಡಿದ ಜಿ. ಪಂ. ಯೋಜನಾ ನಿರ್ದೇಶಕ ಸಿ. ಬಿ. ದೇವರಮನಿ

ವಿಜಯಪುರ: ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ವಿಜಯಪುರ ವತಿಯಿಂದ ಜಿ. ಪಂ. ಯ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ  ಸಂಜೀವಿನಿ -ಕೆಎಸ್‍ಆರ್‍ಎಲ್‍ಪಿಎಸ್ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರುಗಳಿಗೆ ಆರು ದಿನಗಳ ಉದ್ಯಮಶೀಲತಾಭಿವೃದ್ದಿ ತರಬೇತಿ ಕಾರ್ಯಕ್ರಮಕ್ಕೆ ಜಿ. ಪಂ. ಯೋಜನಾ ನಿರ್ದೇಶಕ ಸಿ. ಬಿ. ದೇವರಮನಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಿಡಾಕ್ ಸಂಸ್ಥೆಯಿಂದ  ಮಹಿಳಾ ಸ್ವ-ಸಹಾಯ ಸಂಘಗಳಿಗೆ ಉದ್ಯಮದ ಆಯ್ಕೆ ಪ್ರಾರಂಭಿಸುವ ವಿಧಾನ, ಮಾರುಕಟ್ಟೆ ಸಮೀಕ್ಷೆ ,ಬ್ರ್ಯಾಂಡಿಂಗ್ ,ಲೇಬಲಿಂಗ್‍ಗಳ ಕುರಿತು ತರಬೇತಿ ನೀಡಲಿದ್ದು, ತರಬೇತಿಯಲ್ಲಿ ಆಸಕ್ತಿಯಿಂದ ಭಾಗವಹಿಸಿ […]

KSAWU Convocation: ಮಹಿಳಾ ಶಿಕ್ಷಣ ಸಮಾಜದ ಅಭಿವೃದ್ದಿಗೆ ಪೂರಕವಾಗಿದೆ- ರಾಜ್ಯಪಾಲ ಥಾವರಚಂದ್ ಗೆಹ್ಲೋಟ್

ವಿಜಯಪುರ: ಮಹಿಳಾ ಶಿಕ್ಷಣ ಸಮಾಜದ ಅಭಿವೃದ್ದಿಗೆ ಪೂರಕವಾಗಿದ್ದು, ಈ ನಿಟ್ಟಿನಲ್ಲಿ 2003ರಲ್ಲಿ ಆರಂಭಿಸಲಾಗಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮಹಿಳಾ ಸಶಸ್ತ್ರೀಕರಣಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೊಟ್ ಸಂತಸ ವ್ಯಕ್ತಪಡಿಸಿದ್ದಾರೆ. ವಿಜಯಪುರ ಜಿಲ್ಲೆಯ ತೊರವಿ ಬಳಿ ಇರುವ ವಿಶ್ವವಿದ್ಯಾಲಯದ ಜ್ಞಾನಶಕ್ತಿ ಆವರಣದಲ್ಲಿ ನಡೆದ 13 ಮತ್ತು 14ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶ್ರೇಷ್ಠ ಭಾರತ, ನಿರ್ಭರ ಭಾರತ ಮಾಡಲು ರಾಷ್ಟ್ರೀಯ ಶಿಕ್ಷಣ ನೀತಿ ಪ್ರಧಾನ ಕಾರ್ಯ ನಿರ್ವನಿರ್ವಹಿಸುತ್ತಿದ್ದು, ಮಹಿಳೆಯರು ಅದರ […]

Varsity Convocation: ಡಿ.19ರಂದು ಅಕ್ಕಮಹಾದೇವಿ ಮಹಿಳಾ ವಿವಿ 13, 14ನೇ ಘಟಿಕೋತ್ಸವ- ರಾಜ್ಯಪಾಲರು ಭಾಗಿ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 13 ಮತ್ತು 14ನೇ ಘಟಿಕೋತ್ಸವ ಡಿ.19ರಂದು ಡಿ. 19ರಂದು ಸೋಮವಾರ ನಡೆಯಲಿದೆ ಎಂದು ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲಾ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ತೊರವಿಯಲ್ಲಿರುವ ವಿವಿ ಯಲ್ಲಿ ಜಂಟಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವವಿದ್ಯಾಲಯದ ಜ್ಞಾನಶಕ್ತಿ ಕ್ಯಾಂಪಸ್‍ನಲ್ಲಿ ಈ ಘಟಿಕೋತ್ಸವ ನಡೆಯಲಿದೆ ಎಂದು ತಿಳಿಸಿದರು. ನಾಳೆ ಸೋಮವಾರ ಮಧ್ಯಾಹ್ನ 12 ಗಂಟೆಗೆ ನಡೆಯುವ ಘಟಿಕೋತ್ಸವ ವಿಶ್ವವಿದ್ಯಾಲಯಗಳ ಕುಲಾಧಿಪತಿಗಯಾಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ, ಐಟಿ […]

Yatnal Case: 2014ರ ಗಲಾಟೆ ಪ್ರಕರಣ: ಶಾಸಕ ಯತ್ನಾಳ ಸೇರಿ 58 ಕಾರ್ಯಕರ್ತರು ನಿರ್ದೋಷಿ-ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ

ವಿಜಯಪುರ: 2014ರ ಮೇ 26ರಂದು ನರೇಂದ್ರ ಮೋದಿ ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ವಿಜಯಪುರ ನಗರದಲ್ಲಿ ಗಲಾಟೆ ನಡೆದಿತ್ತು. ಅಂದು ನರೇಂದ್ರ ಮೋದಿ ಪ್ರಧಾನಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ವಿಜಯೋತ್ಸವ ಮೆರವಣಿಗೆ ನಡೆಯುತ್ತಿತ್ತು. ವಿಜಯಪುರ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಆರಂಭವಾದ ಈ ಮೆರವಣಿಗೆ ಗಾಂಧಿ ಚೌಕಿಗೆ ಬಂದಾಗ ಪರಸ್ಪರ ಕಲ್ಲು ತೂರಾಟ ನಡೆದು ಗಲಾಟೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಯತ್ನಾಳ ಸೇರಿದಂತೆ ಹಲವಾರು […]

KUWJ Conference: ಜನೇವರಿ‌ 9, 10 ರಂದು ಬಸವ ನಾಡಿನಲ್ಲಿ ಕಾನಿಪ ರಾಜ್ಯ ಸಮ್ಮೇಳನ ಸಿಎಂ ಭಾಗಿ

ವಿಜಯಪುರ: ಕಾರ್ಯನಿರತ ಪತ್ರಕರ್ತರ ಸಂಘದ 37ನೇ ರಾಜ್ಯಮಟ್ಟದ ಸಮ್ಮೇಶನ ಜನೇವರಿ 9 ಮತ್ತು 10ರಂದು ವಿಜಯಪುರದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಮಾಹಿತಿ ನೀಡಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ತಿಳಿಸಿದ್ದಾರೆ.          

Veerendra Heggade: ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನ

ಮಂಗಳೂರು : ವಿಜಯಪುರದಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 37 ನೇ ರಾಜ್ಯ ಸಮ್ಮೇಳನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ರಾಜ್ಯಸಭೆ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಭೇಟಿಯಾಗಿ ಆಹ್ವಾನ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಡಾ. ಹೆಗ್ಗಡೆ ಅವರಿಗೆ ಆಮಂತ್ರಣ ನೀಡಲಾಯಿತು. ರಾಜ್ಯಸಭೆ ಸದಸ್ಯರಾಗಿರುವ ಅವರನ್ನು ಅಭಿನಂದಿಸಲಾಯಿತು. ಮಂಗಳೂರಿನಲ್ಲಿ ಪತ್ರಕರ್ತರ ಸಮ್ಮೇಳನ ಸಾನಿಧ್ಯ ವಹಿಸಿ ಅಚ್ಚುಕಟ್ಟಾಗಿ ನಡೆಸಿಕೊಟ್ಟ ಸಂದರ್ಭವನ್ನು […]

KUWJ Conference: ಜನೇವರಿ ಮೊದಲ ವಾರದಲ್ಲಿ ಕಾನಿಪ ರಾಜ್ಯ ಸಮ್ಮೇಳನಕ್ಕೆ ಸಿಎಂ ಒಪ್ಪಿಗೆ- ರಾಜ್ಯಪಾಲರಿಗೂ ಆಹ್ವಾನ

ಬೆಂಗಳೂರು: ವಿಜಯಪುರದಲ್ಲಿ ನಡೆಯಲಿರುವ 37ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸುವುದಾಗಿ ತಿಳಿಸಿದ್ದಾರೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ಕಾನಿಪ ಪದಾಧಿಕಾರಿಗಳ ನಿಯೋಗ ವಿಧಾನ ಸೌಧದಲ್ಲಿ ಭೇಟಿ ಮಾಡಿದಾಗ ಸಿಎಂ ಈ ಭರವಸೆ ನೀಡಿದ್ದಾರೆ. ಡಿಸೆಂಬರ ಅಂತ್ಯದವರೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಡಿಸೆಂಬರನಲ್ಲಿ ಸಮ್ಮೇಳನ ಮಾಡುವುದು ಸಾಧ್ಯವಿಲ್ಲ. 2023ರ ಜನೇವರಿ ಮೊದಲ ವಾರದಲ್ಲಿ ಸಮ್ಮೇಳನದ ದಿನಾಂಕ ನಿಗದಿ […]

Men Operation: ಸಂತಾನ ಹರಣ ಶಸ್ತ್ರಚಿಕಿತ್ಸೆಗೊಳಗಾಗಿ ಮಾದರಿಯಾದ ಬಸವ ನಾಡಿನ 16 ಪುರುಷರು

ವಿಜಯಪುರ: ಜಿಲ್ಲೆಯ 15 ಜನ ಪುರುಷರು ಸಂತಾನ ಹರಣ ಚಿಕಿತ್ಸೆ ಒಳಗಾಗುವ ಮೂಲಕ ಗಮನ ಸೆಳೆದಿದ್ದಾರೆ. ಬಿ.ಎಲ್.ಡಿ.ಇ ಡೀಮ್ಡ್ ವಿವಿ, ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಪುರುಷರ ಸಂತಾನ ಹರಣ ಶಸ್ತ್ರಚಿಕಿತ್ಸೆ ಶಿಬಿರ ನಡೆಯಿತು. ಈ ಶಿಬಿರದಲ್ಲಿ ಡಾ.ಗಿರೀಶ ಕುಲ್ಲೋಳ್ಳಿ, ಡಾ.ತೇಜಸ್ವೀನಿ ವಲ್ಲಭ ಹಾಗೂ ಡಾ.ಎಂ.ಬಿ.ಪಾಟೀಲ ಶಸ್ತ್ರಚಿಕಿತ್ಸಾ ತಂಡವು ಈ ಶಿಬಿರದಲ್ಲಿ ಸ್ವಯಂ ಪ್ರೇರಿತರಾಗಿ ಆಗಮಿಸಿದ 15 ಜನ ಪುರುಷರು ಸಂತಾನ ಹರಣ ಶಸ್ತ್ರಚಿಕಿತ್ಸೆ ನೇರವೇರಿಸಿದರು. […]

Honey Trap, Online Cheating: ಹನಿಟ್ರ್ಯಾಪ್, ಆನಲೈನ್ ವಂಚನೆ, ಕೊಲೆ ಪ್ರಕರಣಗಳನ್ನು ಭೇದಿಸಿದ ಸಿಇಎನ್, ಜಲನಗರ, ಸಿಂದಗಿ ಪೊಲೀಸರು

ವಿಜಯಪುರ: ವಿಜಯಪುರ ಜಿಲ್ಲೆಯ ನಾನಾ ಠಾಣೆಗಳ ಪೊಲೀಸರು ಹನಿಟ್ರ್ಯಾಪ್, ಆನಲೈನ್ ವಂಚನೆ ಮತ್ತು ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ಕು ಕೇಸ್ ಗಳನ್ನು ಭೇದಿಸಿದ್ದಾರೆ ಎಂದು ವಿಜಯಪುರ ಎಸ್ಪಿ ಡಾ. ಎಚ್. ಡಿ. ಆನಂದಕುಮಾರ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ನಾಲ್ಕೂ ಪ್ರಕರಣಗಳ ತನಿಖೆಗಾಗಿ ವಿಜಯಪುರ ಎಎಸ್ಪಿ ಶಂಕರ ಮಾರಿಹಾಳ ಅವರ ಮಾರ್ಗದರ್ಶನದಲ್ಲಿ ನಾನಾ ತಂಡಗಳನ್ನು ರಚನೆ ಮಾಡಲಾಗಿತ್ತು.  ಈ ತಂಡ ಪ್ರಕರಣಗಳನ್ನು ಪತ್ತೆ ಮಾಡಿ ಆರೋಪಿಗಳನ್ನು ಬಂಧಿಸಿದೆ ಎಂದು ತಿಳಿಸಿದ್ದಾರೆ. ಮೊದಲ ಪ್ರಕರಣ […]