ಚಡಚಣ ಶೂಟೌಟ್ ಪ್ರಕರಣ ಭೇದಿಸಿದ ಪೊಲೀಸರು- ಇಬ್ಬರು ಅರೆಸ್ಟ್- ಎಸ್ಪಿ ಸೋನಾವಣೆ

ವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಶನಿವಾರ ನಡೆದ ಶೂಟೌಟ್ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಎಸ್ಪಿ ಋಷಿಕೇಶ ಸೋನಾವಣೆ, ಈ ಪ್ರಕರಣ ಸಂಬಂಧ ಚಡಚಣ ಪಟ್ಟಣದವರೇ ಆದ ಆರೋಪಿ ಇಸ್ಮಾಯಿಲ್ ಗುಲಾಬಸಾಬ ಶೇಖ(29) ಮತ್ತು ಜಾಫರ್ ಲಾಲಸಾಬ ಮಸಳಿ(36) ಎಂಬುವರನ್ನು ಇಂದು ಮಧ್ಯಾಹ್ನ 12.10ರಕ್ಕೆ ಮಹಾರಾಷ್ಟ್ರದ ಸೋಲಾಪೂರದಲ್ಲಿ ಬಂಧಿಸಲಾಗಿದೆ.  ಅಲ್ಲದೇ ಅವರ ಬಳಿಯಿದ್ದ ಒಂದು ಕಂಟ್ರಿ ಪಿಸ್ತೂಲು ಮತ್ತು ಮೂರು ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು […]

ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾಗಿ ಸಂಗಮೇಶ ಬಬಲೇಶ್ವರ ನೇಮಕ

ವಿಜಯಪುರ: ಕಳೆದ ಒಂದು ವರ್ಷದಿಂದ ಖಾಲಿ ಇದ್ದ ಕರ್ನಾಟಕ ಬಾಲ‌ವಿಕಾಸ ಅಕಾಡೆಮಿಗೆ ಸತಕಾರ ಕೊನೆಗೂ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ನೂತನ ಅಧ್ಯಕ್ಷ ವಿಜಯಪುರದ ಸಂಗಮೇಶ ಅಪ್ಪಾಸಿ ಬಬಲೇಶ್ವರ ಅವರನ್ನು ನೇಮಕ ಮಾಡಲಾಗಿದೆ.  ಅಮ್ಮ ಚಾರಿಟೆಬಲ್ ಸಂಸ್ಥೆಯ ಸಙಸ್ಥಾಪಕ ಅಧ್ಯಕ್ಷರಾಗಿ, ಕೆಪಿಸಿಸಿ ಪ್ರಚಾರ ಸಮಿತಿ ವಕ್ತಾರರಾಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಸಂಗಮೇಶ.ಅಪ್ಪಾಸಿ ಬಬಲೇಶ್ವರ ಅವರು ಧಾರವಾಡ ನಗರದ ಯಾಲಕ್ಕಿಶೆಟ್ಟರ್ ಕಾಲನಿಯಲ್ಲಿರುವ ಅಕಾಡೆಮಿ ಕಚೇರಿಯಲ್ಲಿ ಅಧಿಕಾರವಹಿಸಿಕೊಳ್ಳಲಿದ್ದಾರೆ.

ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಕಿರುಕುಳ ನೀಡಬಾರದು: ಸಿಎಂ ಎಸ್. ಸಿದ್ಧರಾಮಯ್ಯ ಸ್ಪಷ್ಟ ಸೂಚನೆ

ಬೆಂಗಳೂರು: ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯವಾಗಿ ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು ಈ ಸೂಚನೆ ನೀಡಿದರು. ಇಲಾಖೆಯ ತೆರಿಗೆ ಸಂಗ್ರಹ ಸಾಮರ್ಥ್ಯವನ್ನು ಆಧರಿಸಿಯೇ ನಿಗದಿ ಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕು ಎಂದು ಅವರು‌ ಸೂಚಿನೆ ನೀಡಿದರು. ಚುನಾವಣೆ ನೀತಿ […]

ಭೂಅಕ್ರಮ ತನಿಖೆ ಸಿಓಡಿಗೆ ವಹಿಸಲು ಆಗ್ರಹ- ಸಿಎಂ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ ಅಪ್ಪು ಪಟ್ಟಣಶೆಟ್ಟಿ

ಬೆಂಗಳೂರು: ವಿಜಯಪುರ ನಗರ ಮತ್ತು ಜಿಲ್ಲೆಯಲ್ಲಿ ನಕಲಿ ಭೂದಾಖಲೆ ಸೃಷ್ಟಿಸಿ ಜನರನ್ನು ವಂಚಿಸುತ್ತಿರುವ ಭೂಮಾಫಿಯಾ ಮಟ್ಟ ಹಾಕಲು ಈ ಪ್ರಕರಣದ ಸಮಗ್ರ ತನಿಖೆಯನ್ನು ಸಿಓಡಿಗೆ ವಹಿಸುವಂತೆ ಆಗ್ರಹಿಸಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಭೇಟಿ ಮಾಡಿದ ಅವರು, ಜಿಲ್ಲೆಯಲ್ಲಿ ಭೂ ಅಕ್ರಮಗಳ ಕುರಿತು ಮುಖ್ಯಮಂತ್ರಿಗಳಿಗೆ ಸುದೀರ್ಘವಾಗಿ ಮಾಹಿತಿ ನೀಡಿದರು. ವಿಜಯಪುರ ನಗರ ಮತ್ತು ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಭೂದಾಖಲೆ ಸೃಷ್ಟಿಸಿ ಜಿಲ್ಲೆಯಲ್ಲಿ ಭೂಮಿ […]

ಕನಿಷ್ಠ ಒಂದು ಮತದಿಂದಾದರೂ ಗೆಲ್ಲುವೆ- ಚುನಾವಣೆ ಬಳಿಕ ರಾಜ್ಯ ಸರಕಾರ ತಂತಾನೆ ಪತನವಾಗಲಿದೆ- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಈ ಬಾರಿ ಚುನಾವಣೆಯಲ್ಲಿ ಕನಿಷ್ಠ ಒಂದು ಮತದ ಅಂತರದಿಂದಾದರೂ ಗೆಲ್ಲುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಪುನರುಚ್ಚರಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ವಿಜಯಪುರದಲ್ಲಿ ಒನ್ ಸೈಡೆಡ್ ಚುನಾವಣೆ ನಡೆದಿದೆ ಎಂದು ತಿಳಿಸಿದರು. ದೇವರು ಒಳ್ಳೆಯದನ್ನು ಮಾಡುತ್ತಾನೆ ಎಂದು ಸಂಪೂರ್ಣ ವಿಶ್ವಾಸವಿದೆ.  ನನ್ನ ಜೀವನದಲ್ಲಿ ಇದು ಹೊಸ ಅನುಭವ.  ನಾನೇನು ಮೇಲಿನಿಂದ ಬಂದವನಲ್ಲ.  ನಾನು ಏಕಾಏಕೆ ಬಂದು ಎಂಎಲ್ಎ, ಮಂತ್ರಿಯಾದವನಲ್ಲ.  ಹಂತಹಂತವಾಗಿ ಪ್ರತಿಯೊಬ್ಬ ಕಾರ್ಯಕರ್ತರ ಭಾವನೆ, ಅಭಿಪ್ರಾಯಗಳಿಗೆ ಮನ್ನಣೆ ನೀಡಿ ರಾಜಕಾರಣದಲ್ಲಿ ಬೆಳೆದು […]

ಬಸ್ ಪಾಸ್, ಮಾಶಾಸನ ಸೇರಿ ನಾನಾ ಬೇಡಿಕೆ ಕುರಿತು ವಾರ್ತಾ ಇಲಾಖೆ ಆಯುಕ್ತರ ಭೇಟಿ ಮಾಡಿದ ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ನೇತೃತ್ವದ ನಿಯೋಗ

ಬೆಂಗಳೂರು:ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ(ಕೆಯೂಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು, ವಾರ್ತಾ ಇಲಾಖೆಯ ಆಯುಕ್ತ ಸೂರಳ್‌ಕರ್ ವಿಕಾಸ್ ಕಿಶೋರ್ ಅವರನ್ನು ಭೇಟಿ ಮಾಡಿ ಪತ್ರಕರ್ತರ ಸಮಸ್ಯೆ ಮತ್ತು ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಿತು. ನಿವೃತ್ತರಾಗಿರುವ ಹಿರಿಯ ಪತ್ರಕರ್ತರುಗಳಿಗೆ ಸರ್ಕಾರದಿಂದ ಪ್ರತಿ ತಿಂಗಳು ಬರಬೇಕಾಗಿರುವ ಮಾಸಾಶನ ಹಣ 2-3 ತಿಂಗಳಾದರೂ ಬರುತ್ತಿಲ್ಲ. ಇದರಿಂದಾಗಿ ಅನೇಕರಿಗೆ ಜೀವನ ನಿರ್ವಹಣೆ ಮಾಡಲು ಔಷಧಿ ಖರೀದಿಸಲು ಹಣವಿಲ್ಲದೆ ಪರದಾಡುವ ಸ್ಥಿತಿ ಎದುರಾಗಿದೆ. ಆದ್ದರಿಂದ ಕೂಡಲೇ ಈ ಬಗ್ಗೆ ಆಗಿರುವ […]

ಸಿಎಂ ಎಸ್. ಸಿದ್ಧರಾಮಯ್ಯ ಎಲ್ಲ ಡಿಸಿ, ಜಿ. ಪಂ. ಸಿಇಓಗಳ ಜೊತೆ ವಿಡಿಯೋ ಸಂವಾದ- ಮುಂಗಾರು, ಕೃಷಿ ಚಟುವಟಿಕೆಗಳ ಕುರಿತು ಚರ್ಚೆ, ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಚುನಾವಣೆ ನೀತಿ ಸಂಹಿತೆ ಸಮಯ ಈ ಬಾರಿ ದೀರ್ಘವಾಗಿತ್ತು. ಇದರಿಂದ ಆಡಳಿತ ಯಂತ್ರ ಸ್ಥಗಿತವಾದಂತೆ ಆಗಿತ್ತು.  ಅಭಿವೃದ್ಧಿ ಕೆಲಸಗಳಿಗೆ ಗಮನ ಹರಿಸಲು ಅಧಿಕಾರಿಗಳಿಂದ ಸಾಧ್ಯ ಆಗಿರಲಿಲ್ಲ.  ನಮ್ಮ ಮನವಿ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಿಸಿದೆ.  ಈಗ ಮಳೆ ವಾಡಿಕೆಗಿಂತ ಅಧಿಕವಾಗಿದೆ.  ಕೃಷಿ ಚಟುವಟಿಕೆ ಆರಂಭವಾಗಿದೆ. ಚುನಾವಣಾ […]

ಭೂಮಿ, ಆನಲೈನ್ ವಂಚನೆ, ಸುಲಿಗೆ ಸೇರಿ ನಾನಾ ಪ್ರಕರಣ ಬೇಧಿಸಿದ ಬಸವನಾಡಿನ ಪೊಲೀಸರು

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯ ನಾನಾ ಠಾಣೆಗಳ ಪೊಲೀಸರು ಜಿಲ್ಲೆಯಲ್ಲಿ ದಾಖಲಾಗಿದ್ದ ಭೂ ಹಗರಣ, ಆನಲೈನ್ ವಂಚನೆ ಹಾಗೂ ದರೋಡೆ ಸೇರಿದಂತೆ ನಾನಾ ಪ್ರಕರಣಗಳನ್ನು ಭೇದಿಸುವ ಮೂಲಕ ಗಮನ ಸೆಳೆದಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಎಸ್ಪಿ ಋಷಿಕೇಶ ಸೋನಾವಣೆ, ಮೊದಲ ಪ್ರಕರಣದಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿ ವಂಚಿಸಿ ಭೂ ಹಗರಣ ಮಾಡುತ್ತಿದವರನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಬಳಿ ಬಾಬಾನಗರ ಗ್ರಾಮದ ನಿವಾಸಿ ಸಾಹೇಬಗೌಡ ಮಲ್ಲನಗೌಡ […]

ವಿದ್ಯಾರ್ಥಿನಿಯರಿಗೆ ಟಾಟಾ ಮೋಟಾರ್ಸ್ ನಿಂದ ಸ್ಟೈಫಂಡ್ ಸಹಿತ ಉಚಿತವಾಗಿ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ- ಅರ್ಹತೆ, ಅರ್ಜಿ ಸಲ್ಲಿಕೆ ಕುರಿತ ಮಾಹಿತಿ ಇಲ್ಲಿದೆ

ವಿಜಯಪುರ: ಜನಪರ ಸೇವೆಯ ಮೂಲಕ ಸಾರ್ವಜನಿಕ ಉದ್ಯಮದಲ್ಲಿ ಅದರದೇ ಆದ ಕೊಡುಗೆ ನೀಡುವ ಮೂಲಕ ಮನೆಮಾತಾಗಿರುವ ಟಾಟಾ ಮೋಟಾರ್ಸ್ ಈಗ ಪಿಯುಸಿ ಪಾಸಾಗಿರುವ ವಿದ್ಯಾರ್ಥಿನಿಯರಿಗಾಗಿ ಮೂರು ವರ್ಷದ ಡಿಪ್ಲೋಮಾ ಕೋರ್ಸಿಗೆ ಅರ್ಜಿ ಆಹ್ವಾನಿಸಿದ್ದು, ಪ್ರತಿ ತಿಂಗಳು ಸ್ಟೈಫಂಡ್ ಸಹಿತಿ ತರಬೇತಿ ನೀಡಲಿದೆ. ಗ್ರಾಮೀಣ ವಿದ್ಯಾರ್ಥಿನಿಯರ ಪಾಲಿಗೆ ಇದು ವಿದ್ಯಾಭ್ಯಾಸದ ಜೊತೆಗೆ ಸ್ಟೈಫಂಡ್ ಸಹಿತ ವೃತ್ತಿಕೌಶಲ್ಯ ಹೆಚ್ಚಿಸುವ ಸದಾವಕಾಶವಾಗಿದ್ದು, ಧಾರವಾಡ ಟಾಟಾ ಮೋಟಾರ್ಸ್ ಲಿಮಿಟೆಡ್ ಫುಲ್ ಟರ್ಮ್ ಅಪ್ರೆಂಟಿಸ್ಶಿಪ್ ಗಾಗಿ ಆನಲೈನ್ ಅರ್ಜಿಗಳನ್ನು ಅಹ್ವಾನಿಸಿದೆ.  50 ವಿದ್ಯಾರ್ಥಿನಿಯರಿಗೆ ಪ್ರವೇಶಕ್ಕೆ […]

Video News: ಮೊಸರ ನಾಡಿನ ಬಳಿ ರೂ. 32 ಲಕ್ಷ ದರೋಡೆ- ಲಾರಿ ಚಾಲಕ, ಕ್ಲಿನರ್ ಮೇಲೆ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ದರೋಡೆ ನಡೆದಿದೆ. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಹೊರ ವಲಯದಲ್ಲಿ ಶುಕ್ರವಾರ ತಡರಾತ್ರಿ ಕ್ಯಾಂಟರ್ ವಾಹವ ತಡೆದ ದುಷ್ಕರ್ಮಿಗಳು ಚಾಲಕ ಮತ್ತೋರ್ವನ ಮೇಲೆ ಖಾರದ ಪುಡಿ ಎರಚಿ ರಾಡ್ ನಿಂದ ಹಲ್ಲೆ ಮಾಡಿ ಕ್ಯಾಂಟರ್ ನಲ್ಲಿದ್ದ ರೂ. 32 ಲಕ್ಷ ರೂಪಾಯಿ ನಗದನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಈ ಘಟನೆಯಲ್ಲಿ ದರೋಡೆಕೋರರಿಂದ ಹಲ್ಲೆಗೀಡಾದ ಕ್ಯಾಂಟರ್ ಚಾಲಕ ಮಹಾಂತೇಶ ಕುಂಬಾರ ಹಾಗೂ ಕ್ಲೀನರ್ ಮಲ್ಲು ಕೊಡಚಿ ಅವರಿಗೆ ಕೊಲ್ಹಾರ ಪಟ್ಟಣದಲ್ಲಿರುವ ಪ್ರಾಥಮಿಕ ಆರೋಗ್ಯ […]