ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಓಬವ್ವ ಆತ್ಮರಕ್ಷಣಾ ಕಲೆ ತರಬೇತಿ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಓಬವ್ವ ಆತ್ಮ ರಕ್ಷಣಾ ಕಲೆ  ತರಬೇತಿ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಉದ್ಘಾಟಿಸಿದರು.   ವಿಧಾನಸೌಧದ ಮಹಾ ಮೆಟ್ಟಿಲುಗಳ ಮೇಲೆ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ನೀರೆರೆಯುವ ಮೂಲಕ ಸಿಎಂ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಆತ್ಮ ರಕ್ಷಗೆ ಕಲಿತ ವಿದ್ಯೆಯನ್ನು ಪ್ರದರ್ಶಿಸಿದರು.  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವ ಹಾಲಪ್ಪ ಆಚಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, […]

ವಿಜಯಪುರ ಜಿ. ಪಂ. ಸಿಇಓ ಗೋವಿಂದ ರೆಡ್ಡಿ, ಇಂಡಿ ಎಸಿ ರಾಹುಲ ಶಿಂಧೆ ವರ್ಗಾವಣೆ- ಎಲ್ಲಿಗೆ ಗೊತ್ತಾ?

ವಿಜಯಪುರ: ರಾಜ್ಯ ಸರಕಾರ ನಾಲ್ಕು ಜನ ಐಎಎಸ್ ಅಧಿಕಾರಿಗಳನ್ನು ವರ್ಗವಾಣೆ ಮಾಡಿ ಆದೇಶ ಹೊರಡಿಸಿದೆ. ವಿಜಯಪುರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದರೆಡ್ಡಿ ಅವರನ್ನು ಬೀದರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಇತ್ತ ವಿಜಯಪುರ ಜಿಲ್ಲೆಯ ಇಂಡಿ ಉಪವಿಭಾಗಾಧಿಕಾರಿಯಾಗಿರುವ ರಾಹುಲ ಶಿಂಧೆ ಅವರನ್ನು ವಿಜಯಪುರ ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಅದೇ ರೀತಿ ಬೀದರ ಜಿಲ್ಲಾಧಿಕಾರಿಯಾಗಿರುವ ರಾಮಚಂದ್ರನ್ ಆರ್. ಅವರನ್ನು ಬೆಂಗಳೂರಿನ ಪಿಯು ಶಿಕ್ಷಣ ಮಂಡಳಿ ನಿರ್ದೇಶಕರಾಗಿ […]

ಸೋಮವಾರ ನವದೆಹಲಿಗೆ ತೆರಳುವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸೋಮವಾರ ನವದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮ ನಿರ್ಭರ ಅರ್ಥ ವ್ಯವಸ್ಥೆಯ ಕುರಿತ ಭಾಷಣವನ್ನು ವೀಕ್ಷಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ನವದೆಹಲಿಯಲ್ಲಿ ರಾಜ್ಯದ ಸಂಸದರು ಹಾಗೂ ಕಾನೂನು ತಜ್ಞರೊಂದಿಗೆ ಸಭೆ ನಡೆಸಬೇಕಾಗಿದೆ.  ಈ ಹಿನ್ನೆಲೆಯಲ್ಲಿ ಸೋಮವಾರ ನವದೆಹಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರೈತರು, ಯುವಕರು, ಮಧ್ಯಮ ವರ್ಗದವರ ಪಾಲಿಗೆ ನಿರಾಶಾದಾಯಕ ಬಜೆಟ್- ಎಂ. ಬಿ. ಪಾಟೀಲ

ಬೆಂಗಳೂರು: ಕೇಂದ್ರ ಬಜೆಟ್ ನೌಕರರು, ಮಧ್ಯಮ ವರ್ಗದವರು, ಬಡವರು, ರೈತರು ಮತ್ತು ಆರ್ಥಿಕವಾಗಿ ಸಂಕಷ್ಟದಲ್ಲಿರುವವರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ನಿರಾಸೆ ಮೂಡಿಸಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಮಾಜಿ ಸಚಿವ ಎಂ. ಬಿ. ಪಾಟೀಲ ಪ್ರತಿಕ್ರಿಯೆ ನೀಡಿದ್ದಾರೆ. ಗೋವಾ ಚುನಾವಣೆ ಹಿನ್ನೆಲೆ ಎಐಸಿಸಿ ವೀಕ್ಷಕರಾಗಿ ತೆರಳಿರುವ ಎಂ. ಬಿ. ಪಾಟೀಲ ಅಲ್ಲಿಂದಲೇ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ನಿರಾಶಾದಾಯಕವಾಗಿದ್ದು, ಜನಸಾಮಾನ್ಯರ ಪಾಲಿಗೆ ಹೊರೆಯಾದ ಬಜೆಟ್ ಆಗಿದೆ […]

ಆರ್ಥಿಕ ಸುಧಾರಣೆ, ಸ್ಥಿರೀಕರಣ ಮತ್ತು ಬೆಳೆವಣಿಗೆಗೆ ಪೂರಕವಾದ ಕೇಂದ್ರ ಬಜೆಟ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಂಬರುವ ವರ್ಷದಲ್ಲಿ ಆರ್ಥಿಕ ಸುಧಾರಣೆ, ಸ್ಥಿರೀಕರಣ ಮತ್ತು ಬೆಳೆವಣಿಗೆಗೆ ಪೂರಕವಾದ ಕೇಂದ್ರ ಬಜೆಟ್ ಮಂಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.  ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, 2022-23ನೇ ಆರ್ಥಿಕ ವರ್ಷದ ಕೇಂದ್ರ ಮುಂಗಡ ಪತ್ರಕ್ಕೆ ಸಂಬಂಧಿಸಿದಂತೆ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕೋವಿಡ್ ನೆರಳಿನಲ್ಲಿ ಭಾರತದ ಆರ್ಥಿಕತೆಯನ್ನು ಶೇ.9.2 %  ಹೆಚ್ಚಿಸುವ ಗುರಿಯಯನ್ನು ಹೊಂದಿದೆ. ಬಂಡವಾಳ ಹೂಡಿಕೆ ಹಾಗೂ ಬಳಕೆ […]

ಬಿಜೆಪಿ, ಕಾಂಗ್ರೆಸ್ ಬಿಡುವವರ ಪಟ್ಟಿ ನನ್ನ ಬಳಿ ಇದೆ- ಚುನಾವಣೆ ಆರು ತಿಂಗಳಿರುವಾಗ ಸಂಪುಟ ವಿಸ್ತರಿಸಿದರೆ ಸಚಿವನಾಗಲ್ಲ- ಯತ್ನಾಳ

ವಿಜಯಪುರ: ಬಿಜೆಪಿ ಮತ್ತು ಕಾಂಗ್ರೆಸ್ ಬಿಡುವವರ ಲಿಸ್ಟ್ ತಮ್ಮ ಬಳಿ ಇದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಬಿಡುವವರ ಲಿಸ್ಟ್ ನನ್ನ ಬಳಿ ಇದೆ. ಅದೇ ರೀತಿ, ಬಿಜೆಪಿ ಬಿಡುವವರ ಲಿಸ್ಟ್ ಕೂಡ ನನ್ನ ಬಳಿ ಇದೆ. ಸಮಯ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಎಂದು ತಿಳಿಸಿದರು. ಆರು ತಿಂಗಳು ತಡೆಯಿರಿ. ಜಾದು ಹೇಗೆ ನಡೆಯುತ್ತದೆ ಎಂಬುದನ್ನು ನೋಡುತ್ತೀರಿ. ಕಾಂಗ್ರೆಸ್ ಬಿಡುವವರ ಸಂಖ್ಯೆ […]

ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ವೀಕ್ಷಿಸಿದ ಸಚಿವ ಸಿ. ಸಿ. ಪಾಟೀಲ

ಬೆಂಗಳೂರು: ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ 85ನೇ ಆವೃತ್ತಿಯನ್ನು ನಡೆಸಿಕೊಟ್ಟರು.  ಪ್ರಧಾನಿಗಳು ನಡೆಸಿಕೊಟ್ಟ ಈ ಕಾರ್ಯಕ್ರಮವನ್ನು ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ಬಿಜೆಪಿ ಶಾಸಕ ಕಳಕಪ್ಪ ಬಂಡಿ ಮತ್ತು ಇತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸಿ. ಸಿ. ಪಾಟೀಲ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿ ಕೊಡುವ ಮನ್ ಕಿ ಬಾತ್ ತಮಗೆಲ್ಲರಿಗೂ […]

ಬೆಂಗಳೂರಿನಲ್ಲಿ ಅಬಕಾರಿ ಪೊಲೀಸರ ಕಾರ್ಯಾಚರಣೆ- ಇಬ್ಬರ ಬಂಧನ, ರೂ. 2 ಲಕ್ಷ ಮೌಲ್ಯದ ಗಾಂಜಾ ವಶ

ಬೆಂಗಳೂರು: ಎರಡು ಪ್ರತ್ಯೇಕ ಕಡೆ ಧಾಳಿ ನಡೆಸಿರುವ ಬೆಂಗಳೂರಿನ ಮಹಾದೇವಪುರ ಅಬಕಾರಿ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ ರೂ. 2 ಲಕ್ಷ ಮೌಲ್ಯದ ಒಟ್ಟು 1.92 ಕೆಜಿ ಒಣಗಿದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಅಬಕಾರಿ ಜಂಟಿ ಆಯುಕ್ತ ಜೆ. ಗಿರಿ ಮತ್ತು ಉಪ ಆಯುಕ್ತ ಬಸವರಾಜ ಸಂದಿಗವಾಡ ಮಾರ್ಗದರ್ಶನದಲ್ಲಿ ಮಹದೇವಪುರ ಅಬಕಾರಿ ಠಾಣೆಯ ಇನ್ಸಪೆಕ್ಟರ್ ಎ. ಎ. ಮುಜಾವರ ಮತ್ತು ಸಿಬ್ಬಂದಿ ಈ ಧಾಳಿ ನಡೆಸಿದ್ದಾರೆ. ದೊಡ್ಡನೆಕ್ಕುಂಡಿಯ ಎರಡು ಕಡೆ ಈ ಧಾಳಿ ನಡೆದಿದ್ದು, ಆಂಧ್ರ ಪ್ರದೇಶದ […]

ಸಿಎಂ ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಿದ್ದಾರೆ- ಕೆಲವು ಮುಖಂಡರ ಹೇಳಿಕೆಗಳು ಬಿಜೆಪಿ ವರ್ಚಸ್ಸಿಗೆ ಧಕ್ಕೆ ತರುತ್ತಿವೆ- ಅಂಥವರಿಗೆ ವರಿಷ್ಠರು ಕಡಿವಾಣ ಹಾಕಲಿ- ರಮೇಶ ಜಿಗಜಿಣಗಿ

ವಿಜಯಪುರ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ನಾಯಕರು ಮನಬಂದಂತೆ ಕೊಡುವ ಹೇಳಿಕೆಗಳಿಂದ ಉತ್ತಮ ಆಡಳಿತಕ್ಕೆ ಸಮಸ್ಯೆಯಾಗುತ್ತಿದೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 30 ತಿಂಗಳಾಯಿತು.  ಮೊದಲಿನ 24 ತಿಂಗಳು ಹಿರಿಯ ನಾಯಕ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರು.  ಅವರ ಕಾಲದಲ್ಲೂ ಪಕ್ಷದ ನಾಯಕರು ಮನಬಂದಂತೆ ಹೇಳಿಕೆ ನೀಡಿದ ಪರಿಣಾಮ ಅನೇಕ ಸಮಸ್ಯೆ ಉಂಟಾಗಿವೆ.  ಅದರಲ್ಲೂ ಸಂಪುಟ ವಿಸ್ತರಣೆ ಕುರಿತಾದ […]

ಕಮಾಂಡೆಂಟ್ ಎಸ್. ಡಿ. ಪಾಟೀಲ ಅವರ ಕಾರ್ಯವೈಖರಿ, ಸೇವಾ ನಿಷ್ಠೆ ಇತರರಿಗೂ ಮಾದರಿ- ಕೆ ಎಸ್ ಆರ್ ಪಿ ಎಡಿಜಿಪಿ ಅಲೋಕಕುಮಾರ

ವಿಜಯಪುರ: ವಿಜಯಪುರ ಜಿಲ್ಲೆಯ ಐ ಆರ್ ಬಿ ಕಮಾಂಡೆಂಟ್ ಎಸ್. ಡಿ  ಪಾಟೀಲ ಅವರ ಕಾರ್ಯವೈಖರಿ ಮತ್ತು ಸೇವಾ ನಿಷ್ಠೆ ಇತರರಿಗೂ ಮಾದರಿಯಾಗಿದೆ ಎಂದು ಕೆ ಎಸ್ ಆರ್ ಪಿ ಎಡಿಜಿಪಿ ಅಲೋಕಕುಮಾರ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಅರಕೇರಿ ಬಳಿ ಇರುವ ಭಾರತೀಯ ಮೀಸಲು ಪಡೆ ಕಚೇರಿಗೆ ಭೇಟಿ ನೀಡಿದ ಅವರು, ಜ. 31 ರಂದು ನಿವೃತ್ತರಾಗಲಿರುವ ವಿಜಯಪುರ ಐ ಆರ್ ಬಿ ಕಮಾಂಡೆಂಟ್ ಎಸ್. ಡಿ. ಪಾಟೀಲ ಅವರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.  ಅಲ್ಲದೇ, ಎಸ್. […]