ಮೂರು ತಿಂಗಳಲ್ಲಿ ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಕ್ರಮ: ಸಚಿವ ಗೋವಿಂದ ಕಾರಜೋಳ

ಬೆಂಗಳೂರು: ರಾಜ್ಯ ಸರಕಾರದ ನಾನಾ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ ಶಾಸನಬದ್ದ ಸರಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಪ್ರಕ್ರಿಯೆಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಲು ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ನೇಮಕಾತಿ ಪ್ರಕ್ರಿಯೆ ಅಂಗವಾಗಿ ಮುಂದಿನ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಲು ಮತ್ತು ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಉಸ್ತುವಾರಿಗಾಗಿ ನೇಮಕ ಗೊಂಡಿರುವ ಉಪಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.  ನೀರಾವರಿ ಸಚಿವ […]

ಭಾರತೀಯ ಮೀಸಲು ಪೊಲೀಸ್ ಪಡೆಯ ಅಧಿಕಾರಿಗಳು, ಸಿಬ್ಬಂದಿ ದೈಹಿಕ ತೂಕ ಇಳಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು- ಎಡಿಜಿಪಿ ಅಲೋಕ ಕುಮಾರ

ವಿಜಯಪುರ: ಭಾರತೀಯ ಮೀಸಲು ಪೊಲೀಸ್ ಪಡೆ(ಐ ಆರ್ ಬಿ)ಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ದೈಹಿಕ ತೂಕ ಇಳಿಸಿಕೊಳ್ಳುವ ಮೂಲಕ ಆರೋಗ್ಯವನ್ನು ಸದೃಢವಾಗಿ ಕಾಪಾಡಿಕೊಳ್ಳಬೇಕು ಎಂದು ಕೆ ಎಸ್ ಆರ್ ಪಿ ಯ ಎಡಿಜಿಪಿ ಅಲೋಕ ಕುಮಾರ ಕಿವಿಮಾತು ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಅರಕೇರಿ ಬಳಿ ಇರುವ ಭಾರತೀಯ ಮೀಸಲು ಪಡೆ ಕಚೇರಿಗೆ ಭೇಟಿ ನೀಡಿದ ಅವರು ಸೇವಾ ಕವಾಯತು ವಿಕ್ಷಿಸಿ ಅವರು ಮಾತನಾಡಿದ ಅವರು ಮುಂಬರುವ ಗೋವಾ ಮತ್ತು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ […]

ಮಹಿಳಾ ವಿವಿಗೆ ಅಕ್ಕಮಹಾದೇವಿ ನಾಮಕರಣ ಮಾಡಿದ ಶ್ರೇಯಸ್ಸು ಎಂ. ಬಿ. ಪಾಟೀಲ ಮತ್ತು ಕಾಂಗ್ರೆಸ್ಸಿಗೆ ಸಲ್ಲಬೇಕು- ಬಿಜೆಪಿಗೆ ಅಲ್ಲ- ಸಚಿವ ಕಾರಜೋಳಗೆ ಮಾಜಿ ಶಾಸಕ ಆಲಗೂರ ಪ್ರತ್ಯುತ್ತರ

ವಿಜಯಪುರ: ಬಸವ ನಾಡು ವಿಜಯಪುರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ನಾಮಕರಣ ಮಾಡಲು ಮಾಜಿ ಸಚಿವ ಎಂ. ಬಿ. ಪಾಟೀಲ ಮತ್ತು ಕಾಂಗ್ರೆಸ್ ಸರಕಾರ ಕಾರಣವೇ ಹೊರತು ಬಿಜೆಪಿ ಅಲ್ಲ ಎಂದು ಮಾಜಿ ಶಾಸಕ ಮತ್ತು ವಿಜಯಪುರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ ಹೇಳಿದ್ದಾರೆ. ವಿಜಯಪುದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ನಾಮಕರಣವನ್ನು ಬಿಜೆಪಿ ಮಾಡಿದೆ ಎಂದು ಹೇಳಿಕೆ ನೀಡಿದ್ದಾರೆ.  ಈ ವಿವಿ ನಾಮಕರಣ […]

ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮುಚ್ಚುವ ಪ್ರಶ್ನೇಯೇ ಇಲ್ಲ- ಸಚಿವ ಗೋವಿಂದ ಕಾರಜೋಳ

ವಿಜಯಪುರ: ವಿಜಯಪುರ ಜಿಲ್ಲೆಯ ತೊರವಿಯಲ್ಲಿರುವ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ. ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚುವ ಹುನ್ನಾರ ನಡೆದಿದೆ ಎಂಬ ವಿಷಯ ಮುನ್ನೆಲೆಗೆ ಬಂದಿರುವ ಹಿನ್ನೆಲೆಯಲ್ಲಿ ಸಚಿವರು ಈ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಗೋವಿಂದ ಕಾರಜೋಳ, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗುವಂತೆ ಆ ಭಾಗದ ಹೆಣ್ಣುಮಕ್ಕಳು ಹೆಚ್ಚೆಚ್ಚು ವಿದ್ಯಾವಂತರಾಗುವಂತೆ ಶೈಕ್ಷಣಿಕ ವ್ಯವಸ್ಥೆಯನ್ನು ಉನ್ನತೀಕರಿಸಲು ತನ್ಮೂಲಕ ಸುಸಂಸ್ಕೃತ, ಸುಶಿಕ್ಷಿತ ಸಮಾಜವನ್ನು ನಿರ್ಮಿಸಿ […]

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ- ವಿಜಯಪುರ ಜಿಲ್ಲಾ ಉಸ್ತುವಾರಿ ಯಾರು ಗೊತ್ತಾ?

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂತೂ ಇಂತೂ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದಾರೆ. ಈವರೆಗೆ ಕೊರೊನಾ ಮತ್ತು ಪ್ರವಾಹ ನಿರ್ವಹಣೆಗಾಗಿ ಮಾತ್ರ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡಲಾಗಿತ್ತು.  ಈಗ ಗಣರಾಜ್ಯೋತ್ಸವ ಸಮೀಪಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಗಳ ಉಸ್ತುವಾರಿಯನ್ನು ಹಂಚಿಕೆ ಮಾಡಲಾಗಿದೆ.  ಅಲ್ಲದೇ, ಅವರಿಗೆ ಕೊರೊನಾ ನಿರ್ವಹಣೆ ಜವಾಬ್ದಾರಿಯನ್ನೂ ನೀಡಲಾಗಿದೆ.   ಯಾರಿಗೆ ಯಾವ ಜಿಲ್ಲೆ ಉಸ್ತುವಾರಿ ನೀಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.   ಬಸವರಾಜ ಬೊಮ್ಮಾಯಿ- ಬೆಂಗಳೂರು ನಗರ ಗೋವಿಂದ ಕಾರಜೋಳ- ಬೆಳಗಾವಿ ಕೆ. ಎಸ್. ಈಶ್ವರಪ್ಪ- […]

ವಿಧಾನ ಸೌಧದ ಮುಂಭಾಗಕ್ಕೆ ನೇತಾಜಿ ಪ್ರತಿಮೆ ಸ್ಥಳಾಂತರ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ನೇತಾಜಿ ಸುಭಾಷಚಂದ್ರ ಬೋಸ್ ಅವರ ಪ್ರತಿಮೆಯನ್ನು ವಿಧಾನ ಸೌಧದ ಮುಂಭಾಗದ ಸೂಕ್ತ ಜಾಗಕ್ಕೆ ಸ್ಥಳಾಂತರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುಭಾಷಚಂದ್ರ ಬೋಸ್ ಅವರ ಜನ್ಮ ದಿನಾಚಾರಣೆಯ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮ ಪ್ರತಿನಿಧಿಯೊಂದಿಗೆ ಅವರು ಮಾತನಾಡಿದರು. ಸೂಕ್ತ ಸ್ಥಳದಲ್ಲಿ ನೇತಾಜಿ ಅವರ ಪ್ರತಿಮೆ ಇರುವುದು ಅವರಿಗೆ ನಾವು ಸಲ್ಲಿಸಬೇಕಾದ ಗೌರವವಾಗಿದೆ. ಈ ಬಗ್ಗೆ ಕೂಡಲೇ ತೀರ್ಮಾನವನ್ನು ಕೈಗೊಳ್ಳಲಾಗುವುದು.‌‌ನೇತಾಜಿ ಅವರ ಮುಂದಿನ ಜನ್ಮ ದಿನಾಚರಣೆಯನ್ನು […]

ಜಲವಿವಾದಗಳ ತ್ವರಿತ ವಿಚಾರಣೆಗೆ ಎಲ್ಲ ಪ್ರಯತ್ನ ಮಾಡಲು ಸಿಎಂ ಸೂಚನೆ ನೀಡಿದ್ದಾರೆ- ಸಚಿವ ಗೋವಿಂದ ಕಾರಜೋಳ

ಬೆಂಗಳೂರು: ಅಂತಾರಾಜ್ಯ ಜಲವಿವಾದಗಳ ತ್ವರಿತ ವಿಚಾರಣೆಗೆ ಅಗತ್ಯವಾಗಿರುವ ಎಲ್ಲ ಪ್ರಯತ್ನ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂತಾರಾಜ್ಯ ಜಲ ವಿವಾದಗಳ ಕುರಿತಂತೆ ಸಚಿವರು, ಕಾನೂನು ತಜ್ಞರು, ನೀರಾವರಿ ತಜ್ಞರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಭೆಯ ಬಳಿಕ ಸಚಿವ ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕೃಷ್ಣಾ ಜಲವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿನ […]

ಈ ವಾರ ವೀಕೆಂಡ್ ಕರ್ಫ್ಯೂ ಇಲ್ಲ- ಆಮೇಲೆ ಮುಂದಿನ ನಿರ್ಧಾರ

ಬೆಂಗಳೂರು: ಈ ವಾರ ವೀಕೆಂಡ್ ಕರ್ಫ್ಯೂ ಇಲ್ಲ.  ಮುಂದಿನ ವಾರದ ಬಗ್ಗೆ ನಂತರ ನಿರ್ಧರಿಸಲು ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ  ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಕೋವಿಡ್ ಸ್ಥಿತಿ ಗತಿ ಕುರಿತು‌ ಪರಿಶೀಲನೆ ಸಭೆ ನಡೆಯಿತು. ಈ ಸಭೆಯಲ್ಲಿ      ರಾತ್ರಿ ಕರ್ಫ್ಯೂ ಅವಧಿ ವಾರದ ಏಳೂ ದಿನಗಳಲ್ಲಿ ರಾ.10 ರಿಂದ ಬೆ. 5ರ ವರೆಗೆ ಮುಂದುವರೆಸಲು ನಿರ್ಧರಿಸಲಾಯಿತು.‌  ಅಲ್ಲದೇ, ಸಾರ್ವಜನಿಕರ ಬೇಡಿಕೆಯ ಮೇರೆಗೆ ಹಾಗೂ ತಜ್ಞರೊಂದಿಗೆ ಚರ್ಚಿಸಿದ ಅಂಶಗಳನ್ನು […]

ವಿಜಯಪುರದಲ್ಲಿರುವ ಮಹಿಳಾ ವಿವಿಗೆ ಒಂದು ವಾರ ರಜೆ- ಯಾಕೆ ಗೊತ್ತಾ?

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಒಂದು ವಾರ ರಜೆ ನೀಡಲಾಗಿದೆ. ಜನೇವರಿ 27ರ ವರೆಗೆ ಮಹಿಳಾ ವಿಶ್ವವಿದ್ಯಾಲಯಕ್ಕೆ ರಜೆ ನೀಡಲಾಗಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯಾವುದೇ ಒಂದು ಶಾಲೆ, ಕಾಲೇಜು ಅಥವಾ ವಿಶ್ವವಿದ್ಯಾಲಯಗಳಲ್ಲಿ ಐದಕ್ಕಿಂತ ಹೆಚ್ಚು ಜನರಿಗೆ ಕೊರೊನಾ ಸೋಂಕು ತಗುಲಿದರೆ ಒಂದು ವಾರ ರಜೆ ನೀಡುವಂತೆ ಸರಕಾರದ ಮಾರ್ಗಸೂಚಿ ಅನ್ವಯ ವಿಜಯಪುರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದರು. ಈಗ ಮಹಿಳಾ ವಿಶ್ವವಿದ್ಯಾಲಯದಲ್ಲಿ ಐದಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.  ಅಲ್ಲದೇ, ಕೊರೊನಾ […]

ಕೋವಿಡ್ ನಿಂದ ಗುಣಮಖರಾದ ಸಿಎಂ- ಕೋವಿಡ್ ನಿರ್ಬಂಧ ಸಡಲಿಕೆ ಬಗ್ಗೆ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೋವಿಡ್ ನಿಂದ ಗುಣಮುಖರಾಗಿದ್ದು, ದಿನಿನಿತ್ಯದ ಕಚೇರಿ ಕೆಲಸಗಳಲ್ಲಿ ತೊಡಗಿಸಿಕೊಡೇದಿದ್ದಾರೆ. ಕೊರೊನಾದಿಂದ ಗುಣಮುಖರಾದ ನಂತರ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ 11 -12 ದಿನಗಳ ಕಾಲ ಕ್ವಾರಂಟೈನ್ ಅವಧಿ ಮುಗಿದಿದ್ದು, ಕೋವಿಡ್ ಪರೀಕ್ಷೆ ವರದಿ ನೆಗೆಟಿವ್ ಬಂದಿದೆ.  ಇಂದಿನಿಂದ ದಿನದ ಕೆಲಸ ಕಾರ್ಯಗಳಲ್ಲಿ ತೊಡಗುವುದಾಗಿ ತಿಳಿಸಿದರು. ಕೋವಿಡ್ ನಿಯಮ ಸಡಿಲಿಕೆ ಕುರಿತು ವಿಚಾರ ಈ ಬಾರಿ ಕೊರೊನಾ ಸೋಂಕಿತರು  ಆಸ್ಪತ್ರೆ ದಾಖಲಾಗುವ ಪ್ರಮಾಣ ಕಡಿಮೆಯಿದೆ.  ಹೀಗಾಗಿ […]