ವಿಜಯಪುರದಲ್ಲಿರುವ ಮಹಿಳಾ ವಿವಿಗೆ ಒಂದು ವಾರ ರಜೆ- ಯಾಕೆ ಗೊತ್ತಾ?
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಒಂದು ವಾರ ರಜೆ ನೀಡಲಾಗಿದೆ. ಜನೇವರಿ 27ರ ವರೆಗೆ ಮಹಿಳಾ ವಿಶ್ವವಿದ್ಯಾಲಯಕ್ಕೆ ರಜೆ ನೀಡಲಾಗಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯಾವುದೇ ಒಂದು ಶಾಲೆ, ಕಾಲೇಜು ಅಥವಾ ವಿಶ್ವವಿದ್ಯಾಲಯಗಳಲ್ಲಿ ಐದಕ್ಕಿಂತ ಹೆಚ್ಚು ಜನರಿಗೆ ಕೊರೊನಾ ಸೋಂಕು ತಗುಲಿದರೆ ಒಂದು ವಾರ ರಜೆ ನೀಡುವಂತೆ ಸರಕಾರದ ಮಾರ್ಗಸೂಚಿ ಅನ್ವಯ ವಿಜಯಪುರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದರು. ಈಗ ಮಹಿಳಾ ವಿಶ್ವವಿದ್ಯಾಲಯದಲ್ಲಿ ಐದಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೇ, ಕೊರೊನಾ […]
ಕೋವಿಡ್ ನಿಂದ ಗುಣಮಖರಾದ ಸಿಎಂ- ಕೋವಿಡ್ ನಿರ್ಬಂಧ ಸಡಲಿಕೆ ಬಗ್ಗೆ ಹೇಳಿದ್ದೇನು ಗೊತ್ತಾ?
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೋವಿಡ್ ನಿಂದ ಗುಣಮುಖರಾಗಿದ್ದು, ದಿನಿನಿತ್ಯದ ಕಚೇರಿ ಕೆಲಸಗಳಲ್ಲಿ ತೊಡಗಿಸಿಕೊಡೇದಿದ್ದಾರೆ. ಕೊರೊನಾದಿಂದ ಗುಣಮುಖರಾದ ನಂತರ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ 11 -12 ದಿನಗಳ ಕಾಲ ಕ್ವಾರಂಟೈನ್ ಅವಧಿ ಮುಗಿದಿದ್ದು, ಕೋವಿಡ್ ಪರೀಕ್ಷೆ ವರದಿ ನೆಗೆಟಿವ್ ಬಂದಿದೆ. ಇಂದಿನಿಂದ ದಿನದ ಕೆಲಸ ಕಾರ್ಯಗಳಲ್ಲಿ ತೊಡಗುವುದಾಗಿ ತಿಳಿಸಿದರು. ಕೋವಿಡ್ ನಿಯಮ ಸಡಿಲಿಕೆ ಕುರಿತು ವಿಚಾರ ಈ ಬಾರಿ ಕೊರೊನಾ ಸೋಂಕಿತರು ಆಸ್ಪತ್ರೆ ದಾಖಲಾಗುವ ಪ್ರಮಾಣ ಕಡಿಮೆಯಿದೆ. ಹೀಗಾಗಿ […]
ಕೆಲ ಸಂಘಟನೆಗಳಿಂದ ಎಂ. ಬಿ. ಪಾಟೀಲ ಅವರ ತೇಜೋವಧೆ ಆರೋಪ- ನಾನಾ ಸಂಘಟನೆಗಳ ಸಭೆಯಲ್ಲಿ ಮುಖಂಡರು ಮಾತುಗಳು
ವಿಜಯಪುರ: ಮೇಕೆದಾಟು ವಿಚಾರದಲ್ಲಿ ಜಲಸಂಪನ್ಮೂಲ ಖಾತೆ ಹಾಲಿ ಮತ್ತು ಮಾಜಿ ಸಚಿವರ ಮಧ್ಯೆ ಆರೋಪ ಪ್ರತ್ಯೋರೋಪಗಳು ನಡೆದಿದ್ದವು. ಈ ಸಂದರ್ಭದಲ್ಲಿ ಕೆಲವು ಸಂಘಟನೆಗಳು ಮಾಜಿ ಸಚಿವ ಎಂ. ಬಿ. ಪಾಟೀಲ ಅವರ ವಿಜಯಪುರ ನಿವಾಸದ ಎದುರು ಪ್ರತಿಭಟನೆ ನಡೆಸಿ, ಪ್ರತಿಕೃತಿ ಕೂಡ ದಹನ ಮಾಡಿದ್ದರು. ಇದಾದ ಬಳಿಕ ಕೆಲವು ಸಂಘಟನೆಗಳ ಕಾರ್ಯಕರ್ತರು ಎಂ. ಬಿ. ಪಾಟೀಲ ವಿರುದ್ಧ ಮೂರು ಪ್ರತ್ಯೇಕ ಪೊಲೀಸ್ ಠಾಣೆಗಳಲ್ಲಿ ಜಾತಿನಿಂದನೆ ಪ್ರಕರಣ ದಾಖಲಿಸಲು ದೂರು ನೀಡಿದ್ದವು. ಈ ಹಿನ್ನೆಲೆಯಲ್ಲಿ, […]
ವಿಜಯಪುರ ಜಿಲ್ಲಾಧಿಕಾರಿ, ಜಿ. ಪಂ. ಸಿಇಓ ಗೆ ಶಹಬ್ಬಾಸ್ ಎಂದ ಸಿಎಂ ಬಸವರಾಜ ಬೊಮ್ಮಾಯಿ- ಯಾಕೆ ಗೊತ್ತಾ?
ವಿಜಯಪುರ: ವಿಜಯಪುರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಕಾರ್ಯವೈಖರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಷಯಿ ಶಹಬ್ಬಾಷ್ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕೊರೊನಾ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 18 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಈ ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಸಿಎಂ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮತ್ತು ಜಿಲ್ಲಾ ಪಂಚಾಯಿತಿ […]
ಮೇಕೆದಾಟು ಪಾದಯಾತ್ರೆ ವಿಚಾರ: ಸರಕಾರ, ಕಾಂಗ್ರೆಸ್ಸನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್
ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಡೆಯುತ್ತಿರುವ ಪಾದಯಾತ್ರೆಗೆ ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. ಈ ಪಾದಯಾತ್ರೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ ಅವಸ್ಥಿ ವಿಭಾಗೀಯ ಪೀಠ ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಪಾದಯಾತ್ರೆ ನಡೆಸಲು ಅನುಮತಿ ನೀಡಿದ್ದು ಯಾರು? ಎಂದು ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅನುಮತಿ ಕೊಟ್ಟಿಲ್ಲ ಎಂದಾದರೆ ಕ್ರಮ ಕೈಗೊಳ್ಳದಿರುಲು ಏನು ಕಾರಣ? ಸೂಕ್ತ ಕ್ರಮ ಕೈಗೊಳ್ಳಿ ಎಂದು ನ್ಯಾಯಲಯ ಹೇಳಬೇಕೇ ಎಂದು ಖಾರವಾಗಿ […]
ಮಹಿಳಾ ವಿವಿ ಮುಚ್ಚಿದರೆ ಉಗ್ರ ಹೋರಾಟ- ನ್ಯಾಯವಾದಿ ಶ್ರೀನಾಥ ಪೂಜಾರಿ ಎಚ್ಚರಿಕೆ
ವಿಜಯಪುರ: ರಾಜ್ಯದ ಪ್ರಥಮ ಮತ್ತು ಏಕೈಕ ಮಹಿಳಾ ವಿಶ್ವವಿದ್ಯಾಲಯ ಎಂದೇ ಹೆಸರಾಗಿರುವ ಹಾಗೂ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಆರಂಭಿಸಲಾಗಿರುವ ಅಕ್ಕ ಮಹಾದೇವಿ ಮಹಿಳಾ ವಿವಿಯನ್ನು ಮುಚ್ಚಲು ಸರಕಾರ ಹುನ್ನಾರ ನಡೆಸಿದೆ ಎಂದು ನ್ಯಾಯವಾದಿ ಶ್ರೀನಾಥ ಪೂಜಾರಿ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಎಸ್. ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಲಾಗಿರುವ ವಿಜಯಪುರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚಲು ಸರಕಾರ ಮತ್ತು ಉನ್ನತ ಶಿಕ್ಷಣ ಇಲಾಖೆ ಹುನ್ನಾರ ನಡೆಸಿದೆ ಎಂದು ನ್ಯಾಯವಾದಿ ಶ್ರೀನಾಥ ಪೂಜಾರಿ ಆರೋಪಿಸಿದರು. ಒಂದು ವೇಳ […]
ವಿಧಾನ ಪರಿಷತ ನೂತನ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ ಸಮಾರಂಭ- ಸಭಾಪತಿ ಹೊರಟ್ಟಿ, ಸಿಎಂ ಬೊಮ್ಮಾಯಿ ಉಪಸ್ಥಿತಿ
ಬೆಂಗಳೂರು: ಕಳೆದ ವರ್ಷ ಡಿಸೆಂಬರ್ ನಲ್ಲಿ ನಡೆದ ವಿಧಾನ ಪರಿಷತ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು. ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತಿನ ನೂತನವಾಗಿ ಆಯ್ಕೆಯಾದ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ನೂತನ ಸದಸ್ಯರು […]
ಎಂ ಎಲ್ ಸಿ ಸುನೀಲಗೌಡ ಪಾಟೀಲ ಬೇಡಿಕೆಗೆ ಸರಕಾರ ಸ್ಪಂದನೆ- ಹೊಸದಾಗಿ 5 ಲಕ್ಷ ಮನೆ ನಿರ್ಮಿಸಲು ಆದೇಶ- ಸರಕಾರಕ್ಕೆ ಶಾಸಕರ ಕೃತಜ್ಞತೆ
ವಿಜಯಪುರ: ಕಳೆದ ಕೆಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ನಾನಾ ಆಶ್ರಯ ಯೋಜನೆಗಳಡು ಮನೆಗಳ ನಿರ್ಮಾಣ ಕುರಿತು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ರಾಜ್ಯ ಸರಕಾರದ ಗಮನ ಸೆಳೆದಿದ್ದರು. ಅಲ್ಲದೇ, ಸೂರು ವಂಚಿತರಿಗೆ ಮನೆಗಳ ನಿರ್ಮಾಣದ ಅವಶ್ಯಕತೆ ಹಾಗೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕನಿಷ್ಠ 50 ಮನೆಗಳನ್ನಾದರೂ ಪ್ರತಿವರ್ಷ ನಿರ್ಮಿಸುವಂತೆ ಅಧಿವೇಶನದಲ್ಲಿಯೂ ಒತ್ತಾಯಿಸಿದ್ದರು. ಅಲ್ಲದೇ, ವಿಧಾನ ಪರಿಷತ ಚುನಾವಣೆ ಸಂದರ್ಭದಲ್ಲಿಯೂ ಈ ವಿಷಯ ಪ್ರಸ್ತಾಪಿಸಿ ಸರಕಾರ ಗಮನ ಹರಿಸುವಂತೆ ಆಗ್ರಹಿಸಿದ್ದರು. ಇದೀಗ ರಾಜ್ಯ ಸರಕಾರ ಶಾಸಕರ ಬೇಡಿಕೆಗೆ ಸ್ಪಂದಿಸಿದ್ದು, […]
ಗ್ರಾಮೀಣ ಪತ್ರಕರ್ತರಿಗಾಗಿ ಆರೋಗ್ಯ ಕಾರ್ಡು, ಬಸ್‌ಪಾಸ್ ಸೌಲಭ್ಯಗಳಿಗೆ ಬಜೆಟ್‌ನಲ್ಲಿ ಆದ್ಯತೆ- ಸಿಎಂ ಬಸವರಾಜ ಬೊಮ್ಮಾಯಿ
ಕಲಬುರಗಿ: ಸಣ್ಣ ಪತ್ರಿಕೆಗಳು ಪ್ರಸಾರದಲ್ಲಿ ಕಡಿಮೆ ಸಂಖ್ಯೆ ಹೊಂದಿದ್ದರೂ ಕೂಡ ಅಲ್ಲಿನ ಸುದ್ದಿ, ಲೇಖನ, ಅಂಕಣಗಳ ಮೌಲ್ಯ ದೊಡ್ಡದು. ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್‌ಪಾಸ್ ಸೇರಿದಂತೆ ಇತರ ಸೌಲಭ್ಯಗಳನ್ನು ಒದಗಿಸಲು ಮುಂಬರುವ ಬಜೆಟ್ ನಲ್ಲಿ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಏರ್ಪಡಿಸಿರುವ 36 ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಿಕಾ ರಂಗ ಹಲವಾರು ಸವಾಲುಗಳನ್ನು […]
ಕಲಬುರಗಿಯಲ್ಲಿ ರಾಜ್ಯ ಪತ್ರಕರ್ತರ 36ನೇ ಸಮ್ಮೇಳನ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ
ಕಲಬುರಗಿ: ರಾಜ್ಯ ಪತ್ರಕರ್ತರ 36ನೇ ಸಮ್ಮೇಳನ ಕಲಬುರಗಿಯಲ್ಲಿ ಆರಂಭವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ಸಂಸದ ಉಮೇಶ ಜಾಧವ, ವಿಧಾನ ಪರಿಷತ ಮಾಜಿ ಸದಸ್ಯೆ ಹಾಗೂ ಕಲಾವಿದೆ ತಾರಾ ಅನುರಾಧ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಕಲಬುರಗಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.