ಸಿಎಂ ಸೂಚನೆ ಹಿನ್ನೆಲೆ- ಮಹಾರಾಷ್ಟ್ರದ ಗಡಿ ಚೆಕ್ ಪೋಸ್ಟ್ ಗೆ ಎಸ್ಪಿ ಎಚ್. ಡಿ. ಆನಂದ ಕುಮಾರ ಭೇಟಿ, ಪರಿಶೀಲನೆ

ವಿಜಯಪುರ: ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿ. 31 ರಂದು ಸಭೆ ನಡೆಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಹಾರಾಷ್ಟ್ರದ ಗಡಿಯಲ್ಲಿರುವ ಧೂಳಖೇಡ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಚೆಕ್‍ಪೋಸ್ಟ್ ನಲ್ಲಿರುವ ವ್ಯವಸ್ಥೆಯ ಬಗ್ಗೆ ಪರಿಶೀಲನೆ […]

ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಆರೋಪಿಗೆ 20 ವರ್ಷ ಜೈಲು ರೂ. 1.50 ಲಕ್ಷ ದಂಡ ವಿಧಿಸಿದ ವಿಜಯಪುರ ಪೊಕ್ಸೊ ನ್ಯಾಯಾಲಯ

ವಿಜಯಪುರ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಎಸಗಿದ ಆರೋಪಿಗೆ ವಿಜಯಪುರ ಪೊಕ್ಸೊ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಮತ್ತು ರೂ. 1.50 ಲಕ್ಷ ದಂಡ ವಿಧಿಸಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಪಡನೂರ ಗ್ರಾಮದ ಆರೋಪಿ ಗಣಪತಿ ಭೀಮಾಶಂಕರ ವೀರಶೆಟ್ಟಿ 16.06.2017 ರಂದು 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ತನ್ನ ತೋಟದ ವಸ್ತಿಯಲ್ಲಿ ಸುಮಾರು ಎರಡು ತಿಂಗಳವರೆಗೆ ಇಟ್ಟುಕೊಂಡು ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ವಿಜಯಪುರ ಪೊಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಸವಿತಾ […]

ಕೊರೊನಾ ಒಮಿಕ್ರಾನ್: ದೀರ್ಘಾವಧಿ ಕ್ರಮಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಒಟ್ಟಾರೆ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಹಾಗೂ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಚರ್ಚೆ ಮಾಡಿ ದೀರ್ಘಾವಧಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.    ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಕೋವಿಡ್ ಮತ್ತು ಒಮಿಕ್ರಾನ್ ವೈರಸ್ ವೇಗವಾಗಿ ದೇಶ ಹಾಗೂ ರಾಜ್ಯಗಳಲ್ಲಿ ಹರಡುತ್ತಿದೆ. ಈ ಬಗ್ಗೆ ತಜ್ಞರೊಂದಿಗೆ ಮಂಗಳವಾರ ಸಂಜೆ ಸಭೆ ನಡೆಸಿ ಚರ್ಚೆ ನಡೆಸಲಾಗುವುದು.  ಈ ಹಿಂದೆ ಎರಡು ಅಲೆಗಳನ್ನು ನಿಭಾಯಿಸಿರುವ ಅನುಭವದ ಹಿನ್ನೆಲೆಯಲ್ಲಿ […]

ಆಹಾರ ಪದಾರ್ಥಗಳ ಕಸದಿಂದ ಗೊಬ್ಬರ ತಯಾರಿಸುವ ಯಂತ್ರ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಆಹಾರ ಮತ್ತು ತಿನ್ನುವ ಪದಾರ್ಥಗಳಿಂದ ಉಂಟಾಗುವ ಕಸದಿಂದ ಗೊಬ್ಬರ ತಯಾರು ಮಾಡುವ ಯಂತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಉದ್ಘಾಟಿಸಿದರು. ಪ್ರತಿ ಸಲ 100 ರಿಂದ 150 ಕೆಜಿ ತ್ಯಾಜ್ಯ ಆಹಾರ ಪದಾರ್ಥಗಳಿಂದ ಈ ಯಂತ್ರದಲ್ಲಿ ಗೊಬ್ಬರ ತಯಾರಿಸಬಹುದಾಗಿದೆ. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಶಾಸಕ ಸತೀಶ ರೆಡ್ಡಿ ಮತ್ತು ಇತರರು ಉಪಸ್ಥಿತರಿದ್ದರು  

ಒಟ್ಟಾಗಿ ಸವಾಲು ಎದುರಿಸೋಣ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ

ಬೆಂಗಳೂರು: ಆರ್ಥಿಕವಾಗಿ, ಆಡಳಿತದ ದೃಷ್ಟಿಯಿಂದ 2022 ಸವಾಲಿನ ವರ್ಷವಾಗಿದ್ದು, ಇದನ್ನು ಎಲ್ಲರೂ ಒಗ್ಗೂಡಿ ಸಮರ್ಥವಾಗಿ ಎದುರಿಸುವ ಸಂಕಲ್ಪ ಮಾಡಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.  ಬೆಂಗಳೂರಿನಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹೊಸ ವರ್ಷಧ ಸಂದರ್ಭದಲ್ಲಿ ಅಧಿಕಾರಿಗಳಿಗೆ ಶುಭಾಶಯ ಕೋರಿ ಮಾತನಾಡಿದರು. ಕೋವಿಡ್ ಸಂಭಾವ್ಯ ಮೂರನೇ ಅಲೆಗೆ ನಾವು ಸಿದ್ಧರಾಗಬೇಕಾಗಿದೆ. ಜೊತೆಗೆ ಆರ್ಥಿಕತೆಯೂ ಮುನ್ನಡೆಯಬೇಕಾಗಿದೆ. ಕೇವಲ ನಿರ್ಬಂಧಗಳನ್ನು ಜಾರಿಗೊಳಿಸಿ ಸುಮ್ಮನಿರಲಾಗದು. ನಾವು ಈ ಸವಾಲನ್ನು ವಿಭಿನ್ನ ಕಾರ್ಯತಂತ್ರದಿಂದ ಎದುರಿಸಬೇಕು. ಇದಕ್ಕಾಗಿ ಹೆಚ್ಚಿನ ಶ್ರಮ ವಹಿಸಿ […]

ಡಬಲ್ ಎಂಜಿನ್ ಸರಕಾರಗಳಿರುವ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗೆ ಪ. ಪಂ. ಚುನಾವಣೆಯಲ್ಲಿ ಕೇವಲ 1 ಮತ- ಎಲ್ಲಿ ಗೊತ್ತಾ?

ವಿಜಯಪುರ: ರಾಜ್ಯ ಮತ್ತು ಕೇಂದ್ರದಲ್ಲಿ ಡಬಲ್ ಎಂಜಿನ್ ಸರಕಾರಗಳಿವೆ.  ಮೇಲಾಗಿ ಬಿಜೆಪಿ ರಾಷ್ಟ್ರ್ಯೀಯ ಪಕ್ಷ ಬೇರೆ.  ಇಷ್ಟಾದರ ಆ ಪಕ್ಷದ ಅಭ್ಯರ್ಥಿಯೊಬ್ಬರು ಕೇವಲ ಒಂದೇ ಮತ ಪಡೆಯುವ ಮೂಲಕ ಹೀನಾಯ ಸೋಲು ಅನುಭವಿಸಿದ ಪ್ರಸಂಗ ವಿಜಯಪುರ ಜಿಲ್ಲೆಯಲ್ಲಿ ನಡೆದ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ನಡೆದಿದೆ.  ಅಂದ ಹಾಗೆ ಈ ಅಭ್ಯರ್ಥಿ ಇರುವ ಪಟ್ಟಣ ಪಂಚಾಯಿತಿಯ ಶಾಸಕರು ಬಿಜೆಪಿಯವರಾಗಿದ್ದಾರೆ.  ಆದರೆ, ಈ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಒಂದೂ ಸ್ಥಾನ ಗೆಲ್ಲಲು ಸಾಧ್ಯವಾಗಿಲ್ಲ.  ಮೇಲಾಗಿ ಈ ಪಟ್ಟಣ ಪಂಚಾಯಿತಿ ವ್ಯಾಪ್ತಿಯ […]

ರಾಜ್ಯ ಲಿಂಗಾಯತ ನೌಕರರ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಎಂ. ಬಿ. ಪಾಟೀಲ

ವಿಜಯಪುರ: ರಾಜ್ಯ ಲಿಂಗಾಯತ ನೌಕರರ ಸಂಘದ 2022ನೇ ವರ್ಷದ ಕ್ಯಾಲೆಂಡರನ್ನು ಮಾಜಿ ಸಚಿವ, ಶಾಸಕ ಎಂ. ಬಿ. ಪಾಟೀಲ ಅವರು ವಿಜಯಪುರ ನಗರದ ತಮ್ಮ ನಿವಾಸದಲ್ಲಿ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, ಲಿಂಗಾಯತ ನೌಕರರ ಸಂಘವು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಲಿಷ್ಟವಾಗಿ ಬೆಳೆಯಲಿ ಮತ್ತು ದಿನದರ್ಶಿಕೆಯು ಬಸವ ತತ್ವದ ನಿಜಾಚರಣೆಗಳನ್ನು ಒಳಗೊಂಡಿದ್ದು ಉಪಯುಕ್ತ, ಸಂಗ್ರಹಿಸಿಡಬಲ್ಲ ಮಾಹಿತಿಗಳಿಂದ ತುಂಬಿದೆ. ಇದನ್ನು ಬಹಳ ಸಂತೋಷದಿಂದ ಬಿಡುಗಡೆಗೊಳಿಸಿದ್ದೇನೆ ಎಂದು ಹೇಳಿದರು.   ಈ ಸಂದರ್ಭದಲ್ಲಿ ರಾಜ್ಯ ಲಿಂಗಾಯತ ನೌಕರರ ಸಂಘದ […]

ಹೊಸ ವರ್ಷಚರಣೆ ಸಂಭ್ರಮಕ್ಕೆ ಕಡಿವಾಣ- ಕೋವಿಡ್ ನೂತನ ಮಾರ್ಗಸೂಚಿ ಬಿಡುಗಡೆ: ಸಿಎಂ

ಮೈಸೂರು: ಈ ಬಾರಿಯ ಕೋವಿಡ್ ರೂಪಾಂತರಿಯಿಂದ ಹೆಚ್ಚಿನ ಅನಾಹುತ ತಪ್ಪಿಸುವ ಸಲುವಾಗಿ ಹಾಗೂ ಹೊಸ ವರ್ಷ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಹೊಸದಾಗಿ ಕೊರೊನಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿ ಗಮನಿಸುತ್ತಿದ್ದರೆ ನಿಯಂತ್ರಣದಲ್ಲಿದೆ. ಇದಕ್ಕಿಂತ ಹೆಚ್ಚಿನ ಪ್ರಕರಣಗಳನ್ನು ತಡೆಗಟ್ಟಲು ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದ್ದರೂ ಸಹ ನೈಟ್ ಕರ್ಫ್ಯೂ ಅನ್ನು ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 05 ಗಂಟೆಯವರೆಗೆ ಜಾರಿ ಮಾಡಲಾಗಿದೆ […]

ಡಾ. ಕುಶಾಲ ದಾಸ ಅವರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ವಿಜಯಪುರ: ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆಯ ಪ್ರಾಧ್ಯಾಪಕ ಮತ್ತು ಯುನೆಸ್ಕೋ ಜೀವ ವಿಜ್ಞಾನ ಪೀಠದ ಮುಖ್ಯಸ್ಥ ಡಾ. ಕುಶಾಲ ದಾಸ ಅವರಿಗೆ ಬೊಲಿವಿಯಾ ದೇಶದ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಬೊಲಿವಿಯಾದ ಪ್ಲುರಿನ್ಯಾಷನಲ್ ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಉದ್ಯಮಕ್ಕೆ ಡಾ.ಕುಶಾಲ ದಾಸ್ ಅವರು “ದಿ ಎಫೆಕ್ಟ್ ಆಫ್ ಹೈ ಅಲ್ಟಿಟ್ಯೂಡ್ ಆನ್ ದಿ ಇನ್ಸಿಡೆನ್ಸ್ ಆ್ಯಂಡ್ ಸಿವಿಯಾರಿಟಿ ಆಫ್ ಕೊವಿಡ್-19” ವಿಷಯಕ್ಕೆ ಸಂಬಂಧಿಸಿದಂತೆ ನೀಡಿದ ಕೊಡುಗೆಯನ್ನು […]

ಸುನೀಲಗೌಡ ಪಾಟೀಲ ಚುನಾವಣೆ ರಾಜಕೀಯಕ್ಕೆ ಬರಲು ಕಾರಣವನ್ನು ಬಿಚ್ಚಿಟ್ಟ ಮಾಜಿ ಸಚಿವ ಎಂ. ಬಿ. ಪಾಟೀಲ

ವಿಜಯಪುರ: ತಮ್ಮ ಸಹೋದರ ಮತ್ತು ವಿಧಾನ ಪರಿಷತ ಸದಸ್ಯ ಹಾಗೂ ಹಾಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ ಅವರನ್ನು ರಾಜಕೀಯಕ್ಕೆ ಕರೆತರಲು ಇಷ್ಟವಿರಲಿಲ್ಲ ಎಂದು ಮಾಜಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆದ ವಿಧಾನ ಪರಿಷತ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ತಮ್ಮ ಸಹೋದರ ರಾಜಕೀಯಕ್ಕೆ ಬರಲು ಏನು ಕಾರಣ ಎಂಬುದನ್ನು ಬಹಿರಂಗ ಪಡಿಸಿದರು. 2018ರಲ್ಲಿ ಯತ್ನಾಳ ರಾಜೀನಾಮೆಯಿಂದಾಗಿ ವಿಧಾನ ಪರಿಷತ್ತಿಗೆ ಬೈ ಎಲೆಕ್ಷನ್ ನಡೆದಿತ್ತು.  ಈ ಚುನಾವಣೆಯಲ್ಲಿ ಸುನೀಲಗೌಡ ಪಾಟೀಲ […]