ವಿ. ಪ. ಚುನಾವಣೆ: ಸಿದ್ಧರಾಮಯ್ಯ, ಡಿಕೆಶಿ ಭೇಟಿ ಮಾಡಿದ ವಿಜಯಪುರ ಕಾಂಗ್ರೆಸ್ ಮುಖಂಡರು
ವಿಜಯಪುರ: ವಿಧಾನ ಪರಿಷತ ಚುನಾವಣೆ ದಿನಾಂಕ ನಿಗದಿಯಾಗಿದ್ದು, ವಿಜಯಪುರ ಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಂದ ದ್ವಿಸದಸ್ಯ ಸ್ಥಾನಕ್ಕೆ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿಜಯಪುರದಿಂದ ಹಾಲಿ ಸದಸ್ಯ ಸುನಿಲಗೌಡ ಪಾಟೀಲ ಅವರಿಗೆ ಮತ್ತೆ ಟಿಕೆಟ್ ನೀಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಮುಖಂಡರು ಬೆಂಗಳೂರಿಗೆ ತೆರಳಿ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿದ್ದಾರೆ. ವಿಜಯಪುರ ಜಿಲ್ಲಾ ಕಾಂಗ್ರೆಸ್ ಮುಖಂಡರು ತಮ್ಮನ್ನು ಭೇಟಿ ಮಾಟಿದ ಸಂಗತಿಯನ್ನು ಕಾಂಗ್ರೆಸ್ ನಾಯಕರಾದ ಎಸ್. ಸಿದ್ಧರಾಮಯ್ಯ ಮತ್ತು ಡಿ. ಕೆ. ಶಿವಕುಮಾರ ತಮ್ಮ ಫೇಸ್ […]
ಬಾಗಲಕೋಟೆ ಜಿಲ್ಲೆಯ ಮುಧೋಳ ಸೇರಿ ಎಂಟು ನಗರಗಳಿಗೆ ಸ್ವಚ್ಛ ಸರ್ವೇಕ್ಷಣ್ ಪ್ರಶಸ್ತಿ- ಸಚಿವ ಕಾರಜೋಳ ಸಂತಸ
ವಿಜಯಪುರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರಕಾರ ಏರ್ಪಡಿಸಿದ್ದ ಸ್ವಚ್ಛ ಸರ್ವೇಕ್ಷಣ್- 2021 ಸಫಾಯಿ ಮಿತ್ರ ಸುರಕ್ಷಾ ಸ್ಪರ್ಧೆಯಲ್ಲಿ ಕರ್ನಾಟಕದ ಮುಧೋಳ ಸೇರಿದಂತೆ ಎಂಟು ನಗರಗಳು ಪ್ರಶಸ್ತಿಗೆ ಆಯ್ಕೆಯಾಗಿವೆ. ಬೃಹತ್ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಮೈಸೂರು, ಮುಧೋಳ, ಹೊಸದುರ್ಗ ಕೃಷ್ಣರಾಜನಗರ, ಕುಮಟಾ ಮತ್ತು ಪಿರಿಯಾಪಟ್ಟಣ ನಗರಗಳಿಗೆ ಪ್ರಶಸ್ತಿ ಲಭ್ಯವಾಗಿದೆ. ಸಚಿವ ಗೋವಿಂದ ಕಾರಜೋಳ ಸಂತಸ ಈ ಮಧ್ಯೆ, ತಮ್ಮ ಸ್ವಕ್ಷೇತ್ರ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರಕ್ಕೆ ಪ್ರಶಸ್ತಿ ಲಭ್ಯವಾಗಿರುವುದಕ್ಕೆ ಜಲಸಂಪನ್ಮೂಲ ಸಚಿವ ಗೋವಿಂದವ ಕಾರಜೋಳ ಸಂತಸ ವ್ಯಕ್ತಪಡಿಸಿದ್ದಾರೆ. […]
ಅಂತಾರಾಜ್ಯ ಜಲ ವಿವಾದಗಳ ಬಗ್ಗೆ ವಕೀಲರೊಂದಿಗೆ ಚರ್ಚೆ ಹಿನ್ನೆಲೆ- ದೆಹಲಿಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಅಂತಾರಾಜ್ಯ ಜಲ ವಿವಾದಗಳ ಕುರಿತು ಹಾಗೂ ರಾಜ್ಯಕ್ಕೆ ಸಂಬಂಧಿಸಿದ ಇತರೆ ವಿಷಯಗಳ ಕುರಿತು ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಲು ನವ ದೆಹಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಆರ್. ಟಿ. ನಗರದ ನಿವಾಸದ ಬಳಿ ಮಾಧ್ಯಮದವರ ಜೊತೆ ಅವರು ಮಾತನಾಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಮಯ ಕೋರಲಾಗಿದೆ. ಖಾಸಗಿ ಚಾನೆಲ್ವೊಂದರ ಆಲ್ ಇಂಡಿಯಾ ಕಾನ್ ಕ್ಲೇವ್ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ರಾಜ್ಯಪಾಲರನ್ನು ಭೇಟಿ ಮಾಡಿ ಗೌರವಿಸಿದ ರಾಷ್ಟ್ರ ಯುವ ಪ್ರಶಸ್ತಿ ವಿಜೇತರ ಸಂಘದ ಅಧ್ಯಕ್ಷ ಜಾವೇದ ಜಮಾದಾರ
ವಿಜಯಪುರ: ವಿಜಯಪುರಕ್ಕೆ ಭೇಟಿ ನೀಡಿದ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರನ್ನು ನ್ಯಾಷನಲ್ ಅವಾರ್ಡಿ ಫೆಡರೇಷನ್ ಆಫ ಇಂಡಿಯಾದ ಅಧ್ಯಕ್ಷ ವಿಜಯಪುರದ ಜಾವೇದ ಜಮಾದಾರ ಭೇಟಿ ಮಾಡಿದರು. ಈ ವೇಳೆ ಗಣೇಶನ ಪ್ರತಿಮೆ, ಮೈಸೂರು ಪೇಟ ತೊಡಿಸಿ ರಾಜ್ಯಪಾಲರನ್ನು ಹೃದಯಸ್ಪರ್ಶಿಯಾಗಿ ಸನ್ಮಾನಿಸಿದರು. ಈ ಹಿಂದೆ 2017 ರಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಸಚಿವರಾಗಿದ್ದ ಸಂದರ್ಭದಲ್ಲಿ ಥಾವರಚಂದ ಗೆಹ್ಲೋಟ್ ಅವರು ಯುವ ಸಶಕ್ತೀಕರಣ ಅಭಿಯಾನಕ್ಕಾಗಿ ನ್ಯಾಷನಲ್ ಅವಾರ್ಡಿ ಫೆಡರೇಷನ್ ಆಫ ಇಂಡಿಯಾಕ್ಕೆ ರೂ. 50 ಲಕ್ಷ ಅನುದಾನ ನೀಡಿ […]
ಮಹಿಳಾ ವಿವಿಯಿಂದ ಶಿಷ್ಟಾಚಾರ ಉಲ್ಲಂಘನೆ- ಸಂಸದ ರಮೇಶ ಜಿಗಜಿಣಗಿ ಗಂಭೀರ ಆರೋಪ
ವಿಜಯಪುರ: ವಿಜಯಪುರ ಜಿಲ್ಲೆಯ ತೊರವಿಯಲ್ಲಿರುವ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಅಧಿಕಾರಿಗಳು ಶಿಷ್ಠಾಚಾರ ಉಲ್ಲಂಘಿಸಿದ್ದಾರೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಗಂಭೀರ ಆರೋಪ ಮಾಡಿದ್ದಾರೆ. ಮಹಿಳಾ ವಿಶ್ವವಿದ್ಯಾಲಯದಲ್ಲಿ ನಡೆದ ಮತ್ರು ರಾಜ್ಯಪಾಲರು ಭಾಗವಹಿಸಿದ ಘಟಿಕೋತ್ಸವ ಕಾರ್ಯಕ್ರಮಕ್ಕೆ ತಮ್ಮನ್ನು ಅಮಂತ್ರಿಸದೆ ಶಿಷ್ಠಾಚಾರವನ್ನು ಉಲ್ಲಂಘಿಸಿದ್ದಾರೆ ಎಂದು ರಮೇಶ ಜಿಗಜಿಣಗಿ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸೋಮವಾರ ರಾಜ್ಯಪಾಲ ಥಾವರ್ಚಂದ ಗೆಹ್ಲೋಟ್ ಅವರು ವಿಜಯಪುರ ತಲುಪುತ್ತಿದ್ದಂತೆ ನನಗೆ ದೂರವಾಣಿ […]
ಭೂಕಂಪನ ಪೀಡಿತ ಪ್ರದೇಶಗಳಿಗೆ ತಜ್ಞರ ಭೇಟಿ: ಅನಗತ್ಯವಾಗಿ ಆತಂಕಕ್ಕೆ ಒಳಗಾಗದಂತೆ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ನಾನಾ ಕಡೆ ಸಂಭವಿಸುತ್ತಿರುವ ಲಘು ಭೂಕಂಪನಗಳು ಹಾಗೂ ಭೂಗರ್ಭದಿಂದ ಶಬ್ದ ಹೊರಡುತ್ತಿರುವ ಹಿನ್ನೆಲೆಯಲ್ಲಿ ಮನಗೂಳಿ, ಮಸೂತಿ ಭಾಗದ ಜನರು ಅನಗತ್ಯವಾಗಿ ಯಾವುದೇ ಆತಂಕಕ್ಕೆ ಒಳಗಾಗಬಾರದು. ಆತ್ಮಸ್ಥೈರ್ಯದಿಂದಿದ್ದು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಬೇಕು. ವಿಜಯಪುರ ಜಿಲ್ಲಾಡಳಿತ ನಿಮ್ಮೊಂದಿಗಿದೆ ಎಂದು ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ ಅವರು ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಲವೆಡೆ 2019 ರಿಂದ ಸಂಭವಿಸುತ್ತಿರುವ ಲಘು ಭೂಕಂಪನಗಳು ಹಾಗೂ ಭೂಗರ್ಭದಿಂದ ಶಬ್ದ ಹೊರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣೆ ಪ್ರಾಧಿಕಾರ, ಕರ್ನಾಟಕ […]
ಹೈಕೋರ್ಟಿನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನಾಲ್ಕು ಜನ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಕರ್ನಾಟಕ ಹೈಕೋರ್ಟಿನ ಹೆಚ್ಚುವರಿ ನ್ಯಾಯಮೂರ್ತಿಗಳಾ ನಾಲ್ಕು ಪ್ರಮಾಣ ವಚನ ಸ್ವೀಕರಿಸಿದರು. ಬೆಂಗಳೂರಿನಲ್ಲಿ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಅನಂತ ಪದ್ಮನಾಭ ಹೆಗಡೆ, ಸಿದ್ಧಯ್ಯ ರಾಚಯ್ಯ ಹಾಗೂ ಶ್ರೀಮತಿ ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಅವರು ರಾಜ್ಯ ಹೈಕೋರ್ಟಿನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.
ಬಸವ ನಾಡಿನಲ್ಲಿ ಮತ್ತೆ ಭೂಕಂಪ- ರಿಕ್ಟರ್ ಮಾಪಕದಲ್ಲಿ 1.9 ತೀವ್ರತೆ ದಾಖಲು
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಬಸವನ ಬಾಗೇವಾಡಿ ತಾಲೂಕಿನ ಕರಭಂಟನಾಳ ಗ್ರಾಮದಿಂದ ದಕ್ಷಿಣಕ್ಕೆ 2 ಕಿ. ಮೀ. ದೂರದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣೆ ಕೇಂದ್ರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಮತ್ತು ಸುತ್ತಮುತ್ತ ಬೆ. 11.15ಕ್ಕೆ ಭಾರಿ ಶಬ್ದ ಕೇಳಿ ಬಂದಿದ್ದು ನಂತರ ಭೂಮಿ ಕಂಪಿಸಿದೆ ಎಂದು ಮನಗೂಳಿ ಪಟ್ಟಣ […]
ಮಳೆ ಸಂಬಂಧಿತ ಸಮಸ್ಯೆಗಳಿಗೆ ಸ್ಪಂದಿಸಲು ತುರ್ತು ಕ್ರಮ ಕೈಗೊಳ್ಳಿ- ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ
ಬೆಂಗಳೂರು: ಈ ವರ್ಷ ಅಕಾಲಿಕ ಮಳೆ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿದ್ದು, ತುರ್ತು, ಅಲ್ಪಾವಧಿ, ದೀರ್ಘಾವಧಿ ಕ್ರಮಗಳನ್ನು ತಕ್ಷಣವೇ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ನಗರದಲ್ಲಿ ಸುರಿಯುತ್ತಿರುವ ಮಳೆಯಿಂದ ಉಂಟಾಗಿರುವ ಹಾನಿಗೆ ಸಂಬಂಧಿಸಿದಂತೆ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಇನ್ನೆರಡು ದಿನಗಳ ಕಾಳ ಬೆಂಗಳೂರಿನಲ್ಲಿ ಮಳೆಯಾಗುವ ಸಂಭವವಿರುವ ಬಗ್ಗೆ ಹವಾಮಾನ ಮುನ್ಸೂಚನೆ ಇದೆ. ಬೆಂಗಳೂರು ಮಳೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಮಳೆಯನ್ನು ನಿಭಾಯಿಸುವ ವಿಧಾನ ಬದಲಾಯಿಸಿ, ಮಳೆಯಿಂದ ಆಗುತ್ತಿರುವ ಹಾನಿಗೆ […]
ರಾಜ್ಯ ಸರಕಾರದಿಂದ ತೈಲ ಬೆಲೆ ಇಳಿಕೆ ಕುರಿತು ಸಂಜೆ ಅಧಿಸೂಚನೆ- ಜ. 26ರ ನಂತರ ಜನಸೇವಕ ಯೋಜನೆ ರಾಜ್ಯಾದ್ಯಂತ ವಿಸ್ತರಣೆ- ಸಿಎಂ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಕೇಂದ್ರ ಸರಕಾರ ಈಗಾಗಲೇ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಕಡಿತ ಮಾಡಿದ್ದು, ಇದಕ್ಕೆ ಪೂರಕವಾಗಿ ರಾಜ್ಯ ಸರಕಾರವೂ ಸಂಜೆಯಿಂದಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತಲಾ ರೂ. 7 ಕಡಿತ ಮಾಡಿ ಅಧಿಸೂಚನೆ ಹೊರಡಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ನಿನ್ನೆ ಸಂಜೆ ವೇಳೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆ ಮಾಡುವ ನಿರ್ಧಾರ ಪ್ರಕಟಿಸಿದ ತಕ್ಷಣ ನಾನು ಹಣಕಾಸು ಮತ್ತು ಗೃಹ ಸಚಿವರೊಂದಿಗೆ […]