ವಿಧಾನ ಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಎರಡು ಹೋಳಾದರೆ ಅಚ್ಚರಿಯಿಲ್ಲ- ಸಚಿವ ಕೆ. ಎಸ್. ಈಶ್ವರಪ್ಪ
ವಿಜಯಪುರ: ಮುಂಬರುವ ವಿಧಾನ ಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಎರಡು ಹೋಳಾದರೆ ಅಚ್ಚರಿಯಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯ ಸಿಂದಗಿ ಮತ್ತು ಹಾವೇರಿ ಜಿಲ್ಲೆಯ ಹಾನಗಲ ಬೈ ಎಲೆಕ್ಷನ್ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಉಪ ಚುನಾವಣೆ ಬಳಿಕ ಕಾಂಗ್ರೆಸ್ […]
ಬಸವ ಕಲ್ಯಾಣ ಮಾದರಿಯಲ್ಲಿ ಸಿಂದಗಿ ಬೈ ಎಲೆಕ್ಷನ್ ನಲ್ಲಿಯೂ 20 ಸಾವಿರ ಮತಗಳ ಅಂತರದಿಂದ ಬಿಜೆಪಿ ಗೆಲ್ಲಲಿದೆ- ಮಾಜಿ ಡಿಸಿಎಂ ಲಕ್ಷ್ಮಣ ಸವದಿ
ವಿಜಯಪುರು: ಬಸವ ಕಲ್ಯಾಣ ಮಾದರಿಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ನಲ್ಲಿಯೂ ಬಿಜೆಪಿ ಅಭ್ಯರ್ಥಿ 20 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಎಂದು ಮಾಜಿ ಡಿಸಿಎಂ ಮತ್ತು ಸಿಂದಗಿ ಬಿಜೆಪಿ ಉಸ್ತುವಾರಿ ಲಕ್ಷ್ಮಣ ಸವದಿ ಭವಿಷ್ಯ ನುಡಿದಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾತನಾಡಿದ ಅವರು, ಚುನಾವಣಾ ಪ್ರಚಾರಕ್ಕೆ ಬಿಜೆಪಿ ಏಳು ತಂಡಗಳನ್ನ ರಚನೆ ಮಾಡಿದೆ. ನಾನಾ ಸಚಿವರು, ವಿಜಯಪುರ ಸಂಸದ ರಮೇಶ ಜಿಗಜಿಣಗಿ, […]
ಮಾಜಿ ಸಚಿವ ಎಂ. ಸಿ. ಮನಗೂಳಿ ಬದುಕಿದ್ದಾಗ ತಮ್ಮ ಮಗನನ್ನು ಕಾಂಗ್ರೆಸ್ಸಿಗೆ ಸೇರಿಸಿಕೊಳ್ಳಲು ಮನವಿ ಮಾಡಿದ್ದರು- ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ
ವಿಜಯಪುರ: ಮಾಜಿ ಸಚಿವ ಎಂ. ಸಿ. ಮನಗೂಳಿ ಬದುಕಿದ್ದಾಗ ತಮ್ಮನ್ನು ಭೇಟಿ ಮಾಡಿ ತಮ್ಮ ಪತ್ರು ಅಶೋಕ ಮನಗೂಳಿ ಅವರನ್ನು ಕಾಂಗ್ರೆಸ್ಸಿಗೆ ಸೇರಿಕೊಳ್ಳುವಂತೆ ಹೇಳಿದ್ದರು. ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಎಲ್ಲ ಕಾಂಗ್ರೆಸ್ ನಾಯಕರ ಅಭಿಪ್ರಾಯ ಪಡೆದು ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ಚುನಾವಣೆ ಕಣಕ್ಕಿಳಿಸಿದ್ದೇವೆ ಎಂದು ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬೈ ಎಲೆಕ್ಷನ್ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಅವರು ಮಾತನಾಡಿದರು. ಸಿಂದಗಿ ಮತ್ತು […]
ಗುಮ್ಮಟ ನಗರಿಯಲ್ಲಿ ಮಧ್ಯರಾತ್ರಿ ಮತ್ತೆ ಕಂಪಿಸಿದ ಭೂಮಿ- ಆತಂಕದಲ್ಲಿ ಜನತೆ
ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಗುರುವಾರ ಮಧ್ಯರಾತ್ರಿ ವೇಳೆಗೆ ಭೂಕಂಪದ ಅನುಭವವಾಗಿದೆ. ಮಧ್ಯರಾತ್ರಿ 12.20 ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಬಹುತೇಕ ಜನರು ಈ ಸಂದರ್ಭದಲ್ಲಿ ನಿದ್ದೆಯಲ್ಲಿದ್ದರು. ಆದರೆ, ಎಚ್ಚರವಿದ್ದವರಿಗೆ ಮತ್ತು ಕಟ್ಟಡಗಳ ಮೊದಲ ಮತ್ತು ಎರಡನೇ ಮಹಡಿಯಲ್ಲಿದ್ದ ಬಹುತೇಕರಿಗೆ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ. ಭೂಮಿ ಕಂಪಿಸಿದ ಕುರಿತು ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಆದರೆ, ಈ ಕಂಪನದ ಕೇಂದ್ರ ಮತ್ತು ತೀವ್ರತೆ ಹಾಗೂ ಇದು ಭೂಕಂಪ ಹೌದು ಅಥವಾ ಅಲ್ಲ ಎಂಬುದರ […]
ಉತ್ತರ ಕರ್ನಾಟಕದ ಪ್ರಥಮ ನೋವು ನಿರ್ವಹಣೆ ಕೇಂದ್ರಕ್ಕೆ ಚಾಲನೆ ನೀಡಿ ಹೆಲ್ತ್ ಕಾರ್ಡ್ ಬಿಡುಗಡೆ ಮಾಡಿದ ಮಾಜಿ ಸಚಿವ ಎಂ. ಬಿ. ಪಾಟೀಲ
ವಿಜಯಪುರ: ವಿಜಯಪುರ ಸೇರಿದಂತೆ ಸುತ್ತಮುತ್ತಲಿನ ಏಳೆಂಟು ಜಿಲ್ಲೆಗಳ ಬಡವರಿಗೆ ಕಡಿಮೆ ದರದಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸಲು ಬಿ ಎಲ್ ಡಿ ಇ ಆರೋಗ್ಯ ಕವಚ ಹೆಲ್ತ್ ಕಾರ್ಡ್ ಬಹಳ ಉಪಯೋಗವಾಗಲಿದೆ ಎಂದು ಮಾಜಿ ಸಚಿವ, ಬಬಲೇಶ್ವರ ಕಾಂಗ್ರೆಸ್ ಶಾಸಕ ಮತ್ತು ಬಿ ಎಲ್ ಡಿ ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯ ಬಿ. ಎಂ. ಪಾಟೀಲ ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ಎಂ. […]
ಮಾಜಿ ಶಾಸಕ ರಮೇಶ ಭೂಸನೂರ ಅವರಿಗೆ ಸಿಂದಗಿ ಬಿಜೆಪಿ ಟಿಕೆಟ್
ವಿಜಯಪುರ: ಸಿಂದಗಿ ಬೈ ಎಲೆಕ್ಷನ್ ಗೆ ನಿರೀಕ್ಷೆಯಂತೆ ಮಾಜಿ ಶಾಸಕ ರಮೇಶ ಭೂಸನೂರ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಬಿಜೆಪಿ ಹೈಕಮಾಂಡ್ ಸಿಂದಗಿಗೆ ರಮೇಶ ಭೂಸನೂರ ಮತ್ತು ಹಾನಗಲ ಗೆ ಶಿವರಾಜ ಸಜ್ಜನರ ಅವರನ್ಮು ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ. ರಮೇಶ ಭೂಸನೂ 2008 ಮತ್ತು 2013ರಲ್ಲಿ ಸತತವಾಗಿ ಎರಡು ಬಾರಿ ಬಿಜೆಪಿಯಿಂದ ಆಯ್ಜೆಯಾಗಿದ್ದರು. ಆದರೆ, 2018ರಲ್ಲಿ ಜೆಡಿಎಸ್ ಅಭ್ಯರ್ಥಿ ಮತ್ತು ಮಾಜಿ ಸಚಿವ ಎಂ. ಸಿ. ಮನಗೂಳಿ ವಿರುದ್ಧ ಪರಾಭವಗೊಂಡಿದ್ದರು. ಈ ಮಧ್ಯೆ ಸಮ್ಮಿಶ್ರ ಸರಕಾರದಲ್ಲಿ ತೋಟಗಾರಿಕೆ […]
ನಿನ್ನೆ ಮಸೂತಿ, ಇಂದು ಸಿಂದಗಿಯಲ್ಲಿ ಭೂಕಂಪ
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪ ಉಂಟಾಗಿದೆ. ಬೆಳಗಿನ ಜಾವ 8.30ರ ಸುಮಾರಿಗೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಸಿಂದಗಿ ಪಟ್ಟಣದ ನಾಗೂರು ಬಡಾವಣೆ, ಶಿವಶಂಕರ ಬಡಾವಣೆ, ವಿದ್ಯಾನಗರ, ಜ್ಯೋತಿ ನಗರ ಸೇರಿದಂತೆ ಇಡೀ ಪಟ್ಟಣಾದ್ಯಂತ ಭೂಕಂಪದ ಅನುಭವವಾಗಿದೆ. ಇದರಿಂದಾಗಿ ಸಿಂದಗಿ ಪಟ್ಟಣದ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಶಬ್ದದ ಬಳಿಕ ಭೂಮಿ ಕಂಪಿಸಿದ ಅನುಭವ ಉಂಟಾದ ಹಿನ್ನೆಲೆಯಲ್ಲಿ ಸಾರ್ವಜನಿಕರು ಮನೆಯಿಂದ ಹೊರ ಬಂದು ಅಕ್ಕಪಕ್ಕದ ಮನೆಯವರ ಜೊತೆ ತಮಗಾದ ಅನುಭವ ಹಂಚಿಕೊಂಡಿದ್ದಾರೆ. […]
ಆರ್ ಎಸ್ ಎಸ್ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನಗು ತರಿಸುತ್ತಿದೆ ಎಂದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ
ವಿಜಯಪುರ: ಆರ್ ಎಸ್ ಎಸ್ ಕುರಿತು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಗಹಗಹಿಸಿ ನಗುವ ಮೂಲಕ ಉತ್ತರ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಮಾತನಾಡಿದ ಅವರು, ಸಿಂದಗಿ ಬೈ ಎಲೆಕ್ಷನ್ ನಲ್ಲಿ ನಮ್ಮ ಅಭ್ಯರ್ಥಿ ಹಿಂದಿನ ಚುನಾವಣೆಗಿಂತಲೂ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆರ್ ಎಸ್ ಎಸ್ ಐಎಎಸ್ ಐಪಿಎಸ್ ಟ್ರೇನಿಂಗ್ ನೀಡಿದೆ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ನೀಡಿರುವ […]
ಆರ್ ಎಸ್ ಎಸ್ ಬಗ್ಗೆ ಮಾಜಿ ಸಿಎಂ ಎಚ್ ಡಿ ಕೆ ಹೇಳಿಕೆಗೆ ಯತ್ನಾಳ ನೀಡಿದ ಪ್ರತ್ಯುತ್ತರ ಏನು ಗೊತ್ತಾ?
ವಿಜಯಪುರ: ಐಎಎಸ್ ಮತ್ತು ಐಪಿಎಸ್ ಗಳಿಗೆ ಆರ್ ಎಸ್ ಎಸ್ ತರಬೇತಿ ನೀಡುತ್ತದೆ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿ ಕಾರಿದ್ದಾರೆ. ವಿಜಯಪುರ ಜಿಲ್ಲೆಯ ಕಗ್ಗೋಡದಲ್ಲಿ ಮಾತನಾಡಿದ ಅವರು, ಅನೇಕ ಅಧಿಕಾರಿಗಳು ಆರ್ ಎಸ್ ಎಸ್ ಸ್ವಯಂ ಸೇವಕರಾಗಿರಬಹುದು. ತಾಲಿಬಾನಿಗಳಂತೂ ಆಗಿಲ್ಲವಲ್ಲ ಎಂದು ತಿರುಗೇಟು ನೀಡಿದ್ದಾರೆ. ಇವರೆಲ್ಲರ ಸರಕಾರ ಇದ್ದಿದ್ದರೆ ತಾಲಿಬಾನಿಗಳನ್ನೇ ಮಾಡುತ್ತಿದ್ದರು. ಆರ್ ಎಸ್ ಎಸ್. ದೇಶ ಭಕ್ತಿ ಕಲಿಸುವ […]
ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ- ಮಸೂತಿ ಬಳಿ ಕಂಪಿಸಿದ ಭೂಮಿ- ರಿಕ್ಚರ್ ಮಾಪಕದಲ್ಲಿ ತೀವ್ರತೆ ದಾಖಲು
ವಿಜಯಪುರ: ಐತಿಹಾಸಿಕ ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪ ದಾಖಲಾಗಿದೆ. ಕಳೆದ ಎರಡು ವಾರಗಳಿಂದ ಜಿಲ್ಲೆಯ ಅಲ್ಲಲ್ಲಿ ಭೂಮಿ ಒಳಗಿನಿಂದ ಶಬ್ದ ಹೊರ ಬರುತ್ತಿದ್ದು, ಭೂಮಿ ಕಂಪಿಸಿದ ಅನುಭವವೂ ಆಗುತ್ತಿದೆ. ಈ ಬಾರಿ ಮಟಮಟ ಮಧ್ಯಾಹ್ನ ಭೂಮಿ ಕಂಪಿಸಿದ್ದು, ಇದು ಭೂಕಂಪನ ಎಂದು ಜಿಲ್ಲಾಡಳಿತ ದೃಢಪಡಿಸಿದೆ. ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಮುಳವಾಡ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಭೂಮಿ ಕಂಪಿಸಿದ್ದರಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಮಧ್ಯಾಹ್ನ 3.09 ನಿಮಿಷಕ್ಕೆ ಜೋರಾದ ಶಬ್ದ ಕೇಳಿ ಬಂದಿದ್ದು, ಭೂಕಂಪನದಿಂದ ಶಾಲೆಯಲ್ಲಿ ನಡೆಯುತ್ತಿದ್ದ ತರಗತಿಗಳಿಂದ […]