ಗಲ್ಫ್ ರಾಷ್ಟ್ರಗಳಲ್ಲಿ ಕನ್ನಡ ಉಳಿಸಲು ಶ್ರಮಿಸುತ್ತಿರುವ ಮೊಹಮ್ಮದ್ ಮೀರಾನ್ ಸಾಹೇಬ್ ಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮೊಹಮ್ಮದ್ ಮೀರಾನ್ ಸಾಹೇಬ್ ಗಲ್ಫ್ ರಾಷ್ಟ್ರಗಳಲ್ಲಿ ಕನ್ನಡ ಉಳಿಸಿ ಬೆಳೆಸುವ ಮೂಲಕ ಕನ್ನಡ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರಿಗೆ 2020ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಆದರೆ, ಪ್ರಧಾನ ಮಾಡಲು ಸಾಧ್ಯವಾಗಿರಲಿಲ್ಲ. ಬೆಂಗಳೂರಿಗೆ ಆಗಮಿಸಿದ ಮೊಹಮ್ಮದ್ ಮೀರಾನ್ ಸಾಹೇಬ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಬಿಜೆಪಿ ಸಂಸದ ಬಿ. ವೈ. ರಾಘವೇಂದ್ರ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

ಮುಳುಗಡೆ ಜಮೀನು ಬೆಲೆ ಪರಿಷ್ಕರಣೆಗೆ ಆಗ್ರಹ- ಶಾಸಕ ಎಂ. ಬಿ. ಪಾಟೀಲ ನೇತೃತ್ವದಲ್ಲಿ ಕಂದಾಯ ಸಚಿವರನ್ನು ಭೇಟಿ ಮಾಡಿದ ಕೃಷ್ಣಾ ತೀರದ ರೈತರು

ಬೆಂಗಳೂರು: ಆಲಮಟ್ಟಿ ಜಲಾಷಯವನ್ನು 524.256 ಮೀ. ಎತ್ತರಿಸಿದಾಗ ಮುಳುಗಡೆಯಾಗುವ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಾನಾ ಗ್ರಾಮಗಳ ಜಮೀನಿಗೆ ನಿಗದಿ ಪಡಿಸಲಾಗಿರುವ ಪರಿಹಾರದ ಮಾರ್ಗಸೂಚಿ ಬೆಲೆಯನ್ನು ಪರಿಷ್ಕರಿಸುವಂತೆ ಆಗ್ರಹಿಸಿ ಈ ಭಾಗದ ರೈತರು ಮಾಜಿ ಸಚಿವ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಅವರ ನೇತೃತ್ವದಲ್ಲಿ ರೈತರ ನಿಯೋಗ ಕಂದಾಯ ಸಚಿವ ಆರ್. ಅಶೋಕ ಅವರನ್ನು ಭೇಟಿ ಮಾಡಿ ಆಗ್ರಹಿಸಿದರು. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಆಣೆಕಟ್ಟನ್ನು 524.256 ಮೀ. ಎತ್ತರಿಸುವುದರಿಂದ ಅಂದಾಜು […]

ಪ್ರಧಾನಿಯವರಿಂದ ಸರ್ವವ್ಯಾಪಿ. ಸರ್ವಸ್ಪರ್ಶಿ ಆಡಳಿತ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶ್ಲಾಘನೆ

ದಾವಣಗೆರೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಕ್ಷರಶಃ ಸರ್ವವ್ಯಾಪಿ, ಸರ್ವಸ್ಪರ್ಶಿ ಆಡಳಿತ ನೀಡುವ ಮೂಲಕ ದೇಶವನನ್ನು ಜೋಡಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ದಾವಣಗೆರೆಯಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ದೇಶಕ್ಕಾಗಿ ತ್ಯಾಗ ಮಾಡಬೇಕೆಂನ್ನುವ ಮನೋಭಾವ ಸಂಪೂರ್ಣವಾಗಿ ಮರೆತು ಹೋಗಿರುವ ಸಂದರ್ಭದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಜೋಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ನಮ್ಮ ನಾಯಕರಾದ ಬಿ. ಎಸ್. ಯಡಿಯೂರಪ್ಪ […]

ಅಧಿವೇಶನದ ಬಳಿಕ ರಾಜ್ಯ ಪ್ರವಾಸ- ಆಡಳಿತಕ್ಕೆ ಚುರುಕು- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಾವಣಗೆರೆ: ವಿಧಾನ ಡಲ ಅಧಿವೇಶನದ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡುವ ಮೂಲಕ ಆಡಳಿತಕ್ಕೆ ಚುರುಕು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ‌ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯ ಬಿಜೆಪಿ ಕಾರ್ಯಕಾರಣಿ ಅತ್ಯಂತ ಯಶಸ್ವಿಯಾಗಿದೆ. ಹಲವಾರು ವಿಚಾರಗಳ ಬಗ್ಗೆ ಇಲ್ಲಿ ಚರ್ಚೆಗಳು ನಡೆದಿವೆ ಎಂದು ತಿಳಿಸಿದ ಅವರು, ಹಿಂದುಳಿದ ವರ್ಗಗಳ ಜಾತಿ ಪಟ್ಟಿಗೆ ಹೊಸ ಜಾತಿಗಳನ್ನು ಸೇರ್ಪಡೆ ಮಾಡುವ ಅಧಿಕಾರವನ್ನು ಕೇಂದ್ರ ಸರಕಾರ ರಾಜ್ಯ ಸರಕಾರಕ್ಕೆ […]

ಉದ್ಯೋಗ ಸೃಷ್ಟಿಸುವ ಉದ್ಯಮಗಳಿಗೆ ಪ್ರೋತ್ಸಾಹ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಾವಣಗೆರೆ: ಉದ್ಯೋಗ ಸೃಷ್ಟಿ ಮಾಡುವ ಉದ್ಯಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಕಾಮಗಾರಿಗಳಿಗೆಗೆ ಶಿಲ್ಯಾನ್ಯಾಸ ನೆರವೇರಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಪಿ ಎಲ್ ಐ ಯೋಜನೆಯಡಿ ಕೇಂದ್ರ ಸರಕಾರ ಜವಳಿ ಹಾಗೂ ಆಟೋಮೊಬೈಲ್ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡಲು ಉದ್ದೇಶಿಸಿದೆ. ಉದ್ಯೋಗ ಸೃಷ್ಟಿಸುವ ಶ್ರೇಷ್ಟ ಯೋಜನೆ ಇದಾಗಿದೆ. ಈ ನಿಟ್ಟಿನಲ್ಲಿ ಮೆಗಾ ಟೆಕರ್ಸಟೈಲ್ ಪಾರ್ಕ್ ಮತ್ತು ಆಟೋಮೊಬೈಲ್ ಸೆಕ್ಟರ್ ಗಳ ಕ್ಲಸ್ಟರ್ […]

ಕೋವಿಡ್ ಲಸಿಕಾ ಅಭಿಯಾನ- ಬಸವ ನಾಡಿನಲ್ಲಿ ಶೇ. 100ಕ್ಕಿಂತಲೂ ಹೆಚ್ಚು ಸಾಧನೆ

ವಿಜಯಪುರ; ರಾಜ್ಯಾದ್ಯಂತ ಶುಕ್ರವಾರ ನಡೆದ ಕೊರೊಬಾ ಲಸಿಕೆ ಮಹಾ ಅಭಿಯಾನದಲ್ಲಿ ಬಸವ ನಾಡಿನಲ್ಲಿ ಗುರಿ ಮೀರಿದ ಸಾಧನೆ ಮಾಡಲಾಗಿದೆ. ಈ ಲಸಿಕಾ ಅಭಿಯಾನದಲ್ಲಿ ವಿಜಯಪುರ ಜಿಲ್ಲೆಗೆ ಒಂದು ಲಕ್ಷ ಲಸಿಕೆ ಹಾಕುವ ಗುರಿಯನ್ನು ಸರಕಾರ ನೀಡಿತ್ತು. ಆದರೆ, ವಿಜಯಪುರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಗುರಿ ಮೀರಿದ ಸಾಧನೆ ಮಾಡಿದೆ. ಈ ಲಸಿಕೆ ಅಭಿಯಾನದಲ್ಲಿ 117794 ಲಸಿಕೆಗಳನ್ನು ಹಾಕುವ ಮೂಲಕ ಗುರಿ ಮೀರಿ ಸಾಧನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ತಿಳಿಸಿದ್ದಾರೆ. ಲಕ್ಷ ಲಸಿಕಾ […]

ಭೀಮಾ ತೀರದ ಉಮರಾಣಿ ಬ್ರಿಡ್ಜ್ ಕಂ‌ ಬ್ಯಾರೇಜ್ ಕಾಮಗಾರಿ ವೀಕ್ಷಿಸಿದ ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಭೀಮಾ ತೀರದ ಉಮರಾಣಿ ಬಳಿ ನಿರ್ಮಿಸಲಾಗುತ್ತಿರುವ ಬ್ರಿಡ್ಜ್ ಬ್ಯಾರೇಜ್ ಕಾಮಗಾರಿಯನ್ನು ಬಿಜೆಪಿ ಸಂಸದ ರಮೇಶ ಜಿಗಜಿಣಗಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಕಾಮಗಾರಿಯಿಂದ ಈ ಭಾಗದ ಜನರಿಗೆ ಬಹಳ ಅನುಕೂಲವಾಗಲಿದೆ ಎಂದು ತಿಳಿಸಿದರು. ರೂ. 110 ಕೋ. ವೆಚ್ಚದಲ್ಲಿ ಭೀಮಾ ನದಿಗೆ ನಿರ್ಮಿಸಲಾಗುತ್ತಿರಿವ ಈ ಬ್ರಿಜ್ ಕಾಂ ಬ್ಯಾರೇಜ್ ಕಾಮಗಾರಿಯಿಂದ ಕರ್ನಾಟಕ ಮತ್ತು ಮಹಾರಾಷ್ಟ್ರಗಳ ಗಡಿ ಭಾಗದ ಜನರಿಗೆ ಅದರಲ್ಲೂ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು. […]

ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಖಾಲಿ ಇರುವ ಅರ್ಚಕ, ಸಹಾಯಕ ಅರ್ಚಕ, ಸ್ಥಾನಿಕ, ಪಾಚಕ, ಪರಿಚಾರಕ, ವೇದ ಪಾರಾಯಣ, ಪ್ರಬಂಧ ಪಾರಾಯಣ ಮಾಡುವವರು ಸೇರಿದಂತೆ ನಾನಾ ಹುದ್ದೆಗಳನ್ನು ಆದಷ್ಟು ಶೀಘ್ರದಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಪ್ ಮತ್ತು ಹಜ್‍ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಚಾಮರಾಜಪೇಟೆಯ ಹಿಂದೂ ದೇವಾಲಯಗಳ ಅಖಿಲ ಕರ್ನಾಟಕ ಅರ್ಚಕ, ಆಗಮಿಕ, ಉಪಾದೀವಂತರ ಒಕ್ಕೂಟದ ಸದಸ್ಯರು ಬೆಂಗಳೂರಿನಲ್ಲಿ ವಿಕಾಸ ಸೌಧದಲ್ಲಿ ಉನ್ನತ ಶಿಕ್ಷಣ ಹಾಗೂ ಐಟಿ ಮತ್ತುಬಿಟಿ ಸಚಿವ ಡಾ. […]

ಗ್ರಾ. ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಧನ ಹೆಚ್ಚಳಕ್ಕೆ ಪರಿಶೀಲನೆ-ಎಂ ಎಲ್ ಸಿ ಸುನೀಲಗೌಡ ಪಾಟೀಲ ಪ್ರಶ್ನೆಗೆ ಸಚಿವ ಕೋಟ ಹೇಳಿಕೆ

ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರಿಗೆ ಸಧ್ಯಕ್ಕೆ ನೀಡಲಾಗುತ್ತಿರುವ ಗೌರವ ಧನವನ್ನು ಹೆಚ್ಚಿಸುವ ಕುರಿತು ಸರಕಾರ ಪರಿಶೀಲಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಅವರ ಪರವಾಗಿ ಸಮಾಜ ಕಲ್ಯಾಣ ಸಚಿವ ಮತ್ತು ವಿಧಾನ ಪರಿಷತ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಈ ಕುರಿತ ವಿಜಯಪುರ- ಬಾಗಲಕೋಟೆ ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಸುನೀಲಗೌಡ ಪಾಟೀಲ ಸದನದಲ್ಲಿ ಪ್ರಸ್ತಾಪಿಸಿದರು. ಗ್ರಾ. ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು […]

ಎನ್ ಇ ಪಿ ಬಗ್ಗೆ ಮುಕ್ತವಾಗಿ ಚರ್ಚಿಸಲು ಸರಕಾರ ಸಿದ್ಧವಿದೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಎನ್ ಇ ಪಿ(ನ್ಯೂ ಎಜುಕೇಶನ್ ಪಾಲಿಸಿ) ಬಗ್ಗೆ ಮುಕ್ತವಾಗಿ ಚರ್ಚಿಸಲು ಸರಕಾರ ಸಿದ್ಧವಿದ್ದು, ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬಿಬಿಎಂಪಿ ಆಯೋಜಿಸಿದ್ದ ಭಾರತದ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ 161 ನೇ ಜಯಂತಿ ಅಂಗವಾಗಿ ನಾನಾ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ನೆರವೇರಿಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು. ಇಂದಿನ ಕಾಲಕ್ಕೆ ತಕ್ಕ ಹಾಗೆ ಪ್ರಸ್ತುತವಾಗುವಂತೆ, ಯುವಕರಿಗೆ ಉತ್ತಮ ಭವಿಷ್ಯ ನೀಡುವಂತೆ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಸದುದ್ದೇಶವಿದೆ. […]