ಗ್ರಾ. ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಧನ ಹೆಚ್ಚಳಕ್ಕೆ ಪರಿಶೀಲನೆ-ಎಂ ಎಲ್ ಸಿ ಸುನೀಲಗೌಡ ಪಾಟೀಲ ಪ್ರಶ್ನೆಗೆ ಸಚಿವ ಕೋಟ ಹೇಳಿಕೆ

ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರಿಗೆ ಸಧ್ಯಕ್ಕೆ ನೀಡಲಾಗುತ್ತಿರುವ ಗೌರವ ಧನವನ್ನು ಹೆಚ್ಚಿಸುವ ಕುರಿತು ಸರಕಾರ ಪರಿಶೀಲಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಅವರ ಪರವಾಗಿ ಸಮಾಜ ಕಲ್ಯಾಣ ಸಚಿವ ಮತ್ತು ವಿಧಾನ ಪರಿಷತ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಈ ಕುರಿತ ವಿಜಯಪುರ- ಬಾಗಲಕೋಟೆ ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಸುನೀಲಗೌಡ ಪಾಟೀಲ ಸದನದಲ್ಲಿ ಪ್ರಸ್ತಾಪಿಸಿದರು. ಗ್ರಾ. ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು […]

ಎನ್ ಇ ಪಿ ಬಗ್ಗೆ ಮುಕ್ತವಾಗಿ ಚರ್ಚಿಸಲು ಸರಕಾರ ಸಿದ್ಧವಿದೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಎನ್ ಇ ಪಿ(ನ್ಯೂ ಎಜುಕೇಶನ್ ಪಾಲಿಸಿ) ಬಗ್ಗೆ ಮುಕ್ತವಾಗಿ ಚರ್ಚಿಸಲು ಸರಕಾರ ಸಿದ್ಧವಿದ್ದು, ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬಿಬಿಎಂಪಿ ಆಯೋಜಿಸಿದ್ದ ಭಾರತದ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ 161 ನೇ ಜಯಂತಿ ಅಂಗವಾಗಿ ನಾನಾ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ನೆರವೇರಿಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು. ಇಂದಿನ ಕಾಲಕ್ಕೆ ತಕ್ಕ ಹಾಗೆ ಪ್ರಸ್ತುತವಾಗುವಂತೆ, ಯುವಕರಿಗೆ ಉತ್ತಮ ಭವಿಷ್ಯ ನೀಡುವಂತೆ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಸದುದ್ದೇಶವಿದೆ. […]

ಸರ್ ಎಂ ವಿಶ್ವೇಶ್ವರಯ್ಯ ನಾಡು ಕಟ್ಟುವ ಶ್ರಮಿಕ ವರ್ಗದವರ ಪ್ರತಿನಿಧಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ದೇಶದ ಆರ್ಥಿಕತೆಯನ್ನು ಬಲಪಡಿಸುವ ರೈತರು, ಶ್ರಮಿಕ ವರ್ಗದವರೇ ನಿಜವಾಗಿ ನಾಡು ಕಟ್ಟುವವರು. ಈ ವರ್ಗದವರನ್ನು ಸರ್. ಎಂ. ವಿಶ್ವೇಶ್ವರಯ್ಯ ಪ್ರತಿನಿಧಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಎಂಜಿನಿಯರುಗಳ ದಿನಾಚರಣೆಯ ಅಂಗವಾಗಿ ಕೆ. ಆರ್. ವೃತ್ತದಲ್ಲಿ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿದ ಅವರು ಬಿಬಿಎಂಪಿ ವತಿಯಿಂದ ನಿರ್ಮಿಸಿರುವ 160 ಅಡಿ ಕಾರಂಜಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಪಿರಮಿಡ್ ನ ಅತ್ಯಂತ ಕೆಳಸ್ತರದಲ್ಲಿ ದುಡಿಯುವ ವರ್ಗದವರು ನಮ್ಮ […]

ಎಂಜಿನಿಯರ್ಸ್ ದಿನಾಚರಣೆ- ವಿಶ್ವೇಶ್ವರಯ್ಯ ಪ್ರತಿಮೆಗೆ ಸಿಎಂ ನಮನ‌ ಸಲ್ಲಿಕೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಂಜಿನಿಯರ್ಸ್ ದಿನಾಚರಣೆ ಅಂಗವಾಗಿ ಸರ್ ಎಂ. ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬೆಂಗಳೂರಿನಲ್ಲಿ ನಡೆಷ ಕಾರ್ಯಕ್ರಮದಲ್ಲಿ ಸಿಎಂ ಚಂದನ್ ಎಂಬ ಐಟಿಐ ಪದವಿಧರನಿಂದಲೂ ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿಸಿದರು. ಈ ಸಂದರ್ಭದಲ್ಲಿ ವಿಶ್ವೇಶ್ವರಯ್ಯ ಅವರ 161 ಜಯಂತಿ ಉತ್ಸವದ ಅಂಗವಾಗಿ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಸಿ. ಸಿ. ಪಾಟೀಲ ಮತ್ತು ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಶೇ. 71 ರಷ್ಟು ಜನರಿಗೆ ಕೊರೊನಾ ಲಸಿಕೆ ಮೊದಲ ಡೋಸ್ ಪೂರ್ಣ- ಸೆ. 17 ರಂದು ಬೃಹತ್ ಲಸಿಕೆ ಅಭಿಯಾನ- ಸಿಎಂ

ಬೆಂಗಳೂರು: ಸೆ. 17 ರಂದು ಶುಕ್ರವಾರ ರಾಜ್ಯಾದ್ಯಂತ ಬೃಹತ್ ಕೋವಿಡ್ ಲಸಿಕೆ ಅಭಿಯಾನ ಆಯೋಜಿಸಿದ್ದು, ಈ ಕಾರ್ಯಕ್ರಮದಡಿ 30 ಲಕ್ಷ ಜನರಿಗೆ ಕೊರೊನಾ ಲಸಿಕೆ ಹಾಕಲು ನಿರ್ಧರಿಸಲಾಗಿದೆ.  ಆ ಹಿನ್ನಲೆಯಲ್ಲಿ ಅದಕ್ಕೆ ಬೇಕಾದ ಸೂಕ್ತ ತಯಾರಿ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬೃಹತ್ ಲಸಿಕೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಅವರು ಮಾತನಾಡಿದರು.   ರಾಜ್ಯದಲ್ಲಿ ಲಸಿಕೆ ಕಾರ್ಯಕ್ರಮ ಚುರುಕಾಗಿ ಸಾಗಿದ್ದು, ಉತ್ತರ ಪ್ರದೇಶದ ನಂತರ ಅತಿ […]

ಪ್ರಸಕ್ತ ವರ್ಷದಿಂದಲೇ ಹೊಸ ಕೋರ್ಸುಗಳಿಗೆ ವಿದ್ಯಾರ್ಥಿಗಳ ಪ್ರವೇಶಾತಿಗೆ ಅವಕಾಶ- ಐಟಿಐ ಗೆ ಆರು ಹೊಸ ಸಂಯೋಜನೆ ಸೇರ್ಪಡೆ- ರಾಜ್ಯ ವೃತ್ತಿ ಶಿಕ್ಷಣ ಪರಿಷತ್ ಅನುಮೋದನೆ

ಬೆಂಗಳೂರು: ಟಾಟಾ ಕಂಪನಿಯ ಸಹಯೋಗದಲ್ಲಿ ರಾಜ್ಯದ 150 ಕೈಗಾರಿಕೆ ತರಬೇತಿ ಸಂಸ್ಥೆಗಳನ್ನು ಉನ್ನತೀಕರಿಸುವ ಕಾರ್ಯಕ್ರಮದಡಿ ಈಗಿನ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ಆರು ಹೊಸ ಕೋರ್ಸ್ ಗಳಿಗೆ ರಾಜ್ಯ ವೃತ್ತಿ ಶಿಕ್ಷಣ ಪರಿಷತ್ (ಎಸ್ ವಿ ಸಿ ಟಿ) ಅನುಮೋದನೆ ನೀಡಿದೆ. ಉನ್ನತ ಶಿಕ್ಷಣ ಸಚಿವ ಹಾಗೂ ಕೌಶಾಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯಗಳ ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ನಿರ್ಣಯ ಎಲ್ಲಾ 150 ಐಟಿಐ ಗಳಿಗೆ ಅನ್ವಯವಾಗುತ್ತದೆ.  […]

ಪಿಓಪಿ, ಮಣ್ಣಿನ ಗಣೇಶ ಮೂರ್ತಿಗಳ ಕಡೆಗಣನೆ- ಸರಕಾರಿ ನಿಯಮಗಳ ಪಾಲನೆ- ಮಹಾಮಂಡಳದಿಂದ ಗಣೇಶೋತ್ಸವದ ವಿಶೇಷ

ವಿಜಯಪುರ: ಸಾರ್ವಜನಿಕ ಗಣೇಶೋತ್ಸವಗಳಿಗೆ ಅನುಮತಿ ವಿಚಾರದಲ್ಲಿ ಸರಕಾರದ ಮಟ್ಟದಲ್ಲಿ ನಡೆದ ವಿದ್ಯಮಾನಗಳು ಎಲ್ಲರಿಗೂ ಗೊತ್ತಿರುವ ವಿಚಾರ. ಇದರ ಜೊತೆ ಪಿಓಪಿ ಗಣೇಶ ನಿಷೇಧ ಬೃಹದಾಕಾರದ ಮೂರ್ತಿಗಳ ಪ್ರತಿಷ್ಠಾಪನೆಯ ಯುವಕರ ಕನಸಿಗೆ ತಣ್ಣೀರೆರಚಿತ್ತು. ಆದರೆ, ಸರಕಾರದ ಮಾರ್ಗಸೂಚಿ ಪಾಲಿಸುವುದರ ಜೊತೆಗೆ ಬಸವ ನಾಡಿನ ಶ್ರೀ ಗಜಾನನ ಮಹಾಮಂಡಳ ಯುವಕರು ಪಿಓಪಿ ಬೃಹತ್ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಬದಲಿಗೆ ಪರ್ಯಾಯ ಮಾರ್ಗ ಕಂಡುಕೊಂಡು ಹೊಸ ಟ್ರೆಂಡ್ ಹುಟ್ಟು ಹಾಕಿದ್ದಾರೆ. ಸರಕಾರ ಪಿಓಪಿ ಗಣೇಶ ಮೂರ್ತಿ ಬ್ಯಾನ್ ಮಾಡಿದ್ರನೂ ಕೂಡಾ ಜನರ […]

ಗುಜರಾತ ನೂತನ ಸಿಎಂ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತೆರಳಿದ ಬೊಮ್ಮಾಯಿ

ಬೆಂಗಳೂರು: ಗುಜರಾತ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅವರು ಮಧ್ಯಾಹ್ನ ಪ್ರಮಾಣ ವಚನ ಸ್ವೀಕಾರಿಸಲಿದ್ದಾರೆ. ‌ ಈ ಸಮಾರಂಭ ಗಾಂಧಿನಗರದಲ್ಲಿ ನಡೆಯಲಿದ್ದು,‌ ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ವಿಮಾನದ ಮೂಲಕ ಅಹ್ಮದಾಬಾದಿಗೆ ತೆರಳಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್, ಮುರುಗೇಶ ನಿರಾಣಿ, ಡಾ. ಸುಧಾಕರ ಕೂಡ ಸಿಎಂ ಜತೆ ತೆರಳಿದರು.

ಬೆಳಗಾವಿ ಬಿಜೆಪಿ ಕಾರ್ಪೊರೇಟರ್ ಗಳಿಂದ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಬೆಂಗಳೂರು: ಬೆಳಗಾವಿ ಮಹಾನಗರ ಪಾಲಿಕೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಜಯ ಗಳಿಸಿದ ಬಿಜೆಪಿಯ 35 ಜನ ನೂತನ ಕಾರ್ಪೊರೇಟರ್ ಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿಗೆ ಆಗಮಿಸಿರುವ ನೂತನ ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ನೂತನ ಕಾರ್ಪೊರೇಟರ್ ಗಳನ್ನು ಸಿಎಂ ಈ ಸಂದರ್ಭದಲ್ಲಿ ಅಭಿನಂದಿಸಿದರರು. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಇದೇ ಮೊದಲ ಬಾರಿ ಬಿಜೆಪಿ ಅಧಿಕಾರದ ಗದ್ದುಗೆಗೆ ಏರಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವದ್ದಾಗಿದೆ. ಈ […]

ಇಂದು ಅಹ್ಮದಾಬಾದಿಗೆ ಸಿಎಂ ಬೊಮ್ಮಾಯಿ- ಗುಜರಾತ ನೂತನ ಸಿಎಂ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಹ್ಮದಾಬಾದಿಗೆ ತೆರಳುತ್ತಿದ್ದ, ಗುಜರಾತ ನೂತನ ಸಿಎಂ ಭೂಪೇಂದ್ರ ಪಟೇಲ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲಿದ್ದಾರೆ. ಮಧ್ಯಾಹ್ನ 12ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ತೆರಳಲಿರುವ ಸಿಎಂ ಮ. 1.50ಕ್ಕೆ ಅಹ್ಮದಾಬಾದ ತಲುಪಲಿದ್ದು, ಮ. 2.20ಕ್ಕೆ ಗಾಂಧಿನಗರದಲ್ಲಿರುವ ರಾಜಭವನದಲ್ಲಿ ನಡೆಯಲಿರುವ ಗುಜರಾತ ನೂತನ ಸಿಎಂ ಭೂಪೇಂದ್ರ ಪಟೇಲ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ ಶಾ ಸೇರಿದಂತೆ ನಾನಾ ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳು ಪಾಲ್ಗೋಳ್ಳುವ ನಿರೀಕ್ಷೆಯಿದೆ. […]