ಬೆಂಗಳೂರು ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದಲ್ಲಿ ಆಯೋಜಿಸಿದ್ದ 108 ಆರೋಗ್ಯ ಕವಚ ತುರ್ತು ವೈದ್ಯಕೀಯ ಸೇವೆಗೆ ನೂತನವಾಗಿ 120 ನೂತನ ಆಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡುತ್ತಿದ್ದರು. ಬೆಂಗಳೂರು ಆರೋಗ್ಯ ಸೇವೆಗಳು ಸಂಪೂರ್ಣವಾಗಿ ಒಂದು ಪ್ರಾಧಿಕಾರದಡಿಗೆ ಬರಬೇಕು. ಮುಂಬರುವ ದಿನಗಳಲ್ಲಿ ಇದನ್ನು ಕಾರ್ಯಗತಗೊಳಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಆರೋಗ್ಯಕ್ಕೆ ಜೀವನಾಡಿ ಆಂಬ್ಯುಲೆನ್ಸ್. ಆರೋಗ್ಯ ಯಾವಾಗ ಕೆಡುತ್ತದೆ ಎಂದು ತಿಳಿಯುವುದು […]
ಶ್ರೀ ಗಜಾನನ ಉತ್ಸವ ಮಹಾಮಂಡಳದ ಆಶ್ರಯದಲ್ಲಿ ಕೊರೊನಾ ಲಸಿಕೆ ಅಭಿಯಾನ
ವಿಜಯಪುರ: ವಿಜಯಪುರ ನಗರ ಛತ್ರಪತಿ ಶಿವಾಜಿ ಸರ್ಕಲ್ ನಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀ ಗಜಾನನ ಉತ್ಸವ ಮಹಾಮಂಡಳದಲ್ಲಿ ಕೊರೊನಾ ಲಸಿಕೆ ಅಭಿಯಾನ ನಡೆಯಿತು. ಗಣೇಶೋತ್ಸವಕ್ಕೆ ಷರತ್ತು ಬದ್ಧ ಅನುಮತಿ ನೀಡಿರುವ ರಾಜ್ಯ ಸರಕಾರ ಸಾರ್ವಜನಿಕ ಗಣೇಶ ಉತ್ಸವ ಸ್ಥಳಗಳಲ್ಲಿ ಕೊರೊನಾ ಲಸಿಕೆ ಅಭಿಯಾನವನ್ನೂ ನಡೆಸುವಂತೆ ಸೂಚನೆ ನೀಡಿದೆ. ಅದರಂತೆ ವಿಜಯಪುರದ ಶ್ರೀ ಗಜಾನನ ಉತ್ಸವ ಮಹಾಮಂಡಳದ ಸ್ಥಳದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿ ಆಗಮಿಸಿ ಕೊರೊನಾ ಲಸಿಕೆ ಅಭಿಯಾನ ಕೈಗೊಂಡರು. ಈ ಸಂದರ್ಭದಲ್ಲಿ 60 ಜನರಿಗೆ […]
ಪರಿಸರ ನಷ್ಟ ತುಂಬಲು ಪ್ರತಿ ವರ್ಷ ಪರಿಸರ ಆಯವ್ಯಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ
ಬೆಂಗಳೂರು: ರಾಜ್ಯದಲ್ಲಿನ ಪರಿಸರ ಹಾನಿಯನ್ನು ತುಂಬಲು ಪರಿಸರ ಆಯವ್ಯಯವನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.. ಬೆಂಗಳೂರಿನಲ್ಲಿ ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ಹುತಾತ್ಮರಿಗೆ ನಮನ ಸಲ್ಲಿಸಿ ಅವದು ಮಾತನಾಡುತ್ತಿದ್ದರು. ಪ್ರತಿ ವರ್ಷ ರಾಜ್ಯದಲ್ಲಿ ನಾಶವಾಗಿರುವ ಒಟ್ಟು ಹಸಿರು ಪ್ರದೇಶ ಎಷ್ಟು ಎಂಬುದನ್ನು ಅಂದಾಜಿಸುವ ವಿಧಾನ ಪ್ರಾರಂಭಿಸಬೇಕು. ಆಗ ಹಸಿರಿನ ಕೊರತೆ ಎಷ್ಟು ಎಂಬುದು ಸಹ ಗೊತ್ತಾಗುತ್ತದೆ. ಪರಿಸರ ಆಯವ್ಯಯವನ್ನು ಪ್ರಾರಂಭಿಸಿದಾಗ ಮಾತ್ರ ಈ ನಷ್ಟವನ್ನು ತುಂಬಿಸಿಕೊಳ್ಳಬಹುದು ಎಂದು ಅವರು ಹೇಳಿದರು. ಅರಣ್ಯ ನಮಗಿಂತ […]
ಗಣೇಶೋತ್ಸವಕ್ಕೆ ಸರಕಾರದ ಅನುಮತಿ ವಿಷಯದಲ್ಲಿ ಕ್ರೆಡಿಟ್ ಬೇಡ- ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ
ವಿಜಯಪುರ: ಗಣೇಶೋತ್ಸವಕ್ಕೆ ಅನುಮತಿ ಮತ್ತು ಈ ಸಂಬಂಧ ಶಾಸಕ ಯತ್ನಾಳ ನೀಡಿರುವ ಹೇಳಿಕೆ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಟಾಂಗ್ ನೀಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣೇಶೊತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡುವಂತೆ ವಿಜಯಪುರ ಗಣೇಶ ಮಹಾಮಂಡಳ ಜಿಲ್ಲಾಧಿಕಾರಿ ಮತ್ತು ಮುಖ್ಯಮಂತ್ರಿಗಳಿಗೆ ಮೊದಲು ಮನವಿ ಮಾಡಿದೆ. ತಮ್ಮ ಪರಿಶ್ರಮಕ್ಕೆ ಪ್ರತಿಫಲದಿಂದಾಗಿ ಸರಕಾರದಿಂದ ಮಾರ್ಗಸೂಚಿ ಸಡಿಲಿಕೆ ಮಾಡಿದೆ. ಆದರೆ, ಈ ವಿಷಯದಲ್ಲಿ ಕೆಲವರು ರಾಜಕೀಯ ದುರುದ್ದೇಶದಿಂದ ಕ್ರೆಡಿಟ್ ತೆಗೆದುಕೊಳ್ಳುತ್ತಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ […]
ವಿಜಯಪುರದಲ್ಲಿ ಭೂಕಂಪ ದಾಖಲಾಗಿಲ್ಲ ಎಂದ ಜಿಲ್ಲಾಡಳಿತ- ಆಗಿದ್ದಾದರೂ ಏನು?
ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಬೆಳಗಿನ ಜಾವ ಜನರಿಗೆ ಭೂಕಂಪದ ಅನುಭವವಾಗಿತ್ತು. ಕಳೆದ ವಾರ ಮದ್ಯರಾತ್ರಿ ವೇಳೆಗೆ ಉಂಟಾಗಿದ್ದ ಭೂಕಂಪದಿಂದ ಗಾಬರಿಯಾಗಿದ್ದ ಗುಮ್ಮಟ ನಗರಿಯ ಜನತೆ ಈಗ ಬೆಳಗಿನ ಜಾವ ಭೂಮಿ ಕಂಪಿಸಿದ ಅನುಭವದಿಂದ ಬೆಚ್ಚಿ ಬಿದ್ದಿದ್ದರು. ಬೆಳಿಗ್ಗೆ 8.18 ಮತ್ತು 8.20ರ ಅವಧಿಯಲ್ಲಿ ಎರಡು ಬಾರಿ ಒಂದೆರಡು ಸೆಕೆಂಡ್ ಕಾಲ ಭೂಮಿ ನಡುಗಿದ ಅನುಭವವಾಗಿತ್ತು. ಭೂಕಂಪ ದಾಖಲಾಗಿಲ್ಲ ಎಂದ ಜಿಲ್ಲಾಡಳಿತ ಬೆಳಿಗ್ಗೆ ಭೂಕಂಪ ಉಂಟಾಗಿದೆ ಎಂದು ಮನೆ ಮತ್ತು ಇತರ ಕಟ್ಟಡಗಳ ಮೊದಲ ಮತ್ತು ಎರಡನೆ […]
ಗುಮ್ಮಟ ನಗರಿಯಲ್ಲಿ ಮತ್ತೆ ಕಂಪಿಸಿದ ಭೂಮಿ- ಮೊನ್ನೆ ರಾತ್ರಿ ವೇಳೆ, ಈಗ ಬೆಳಿಗ್ಗೆ ಲಘು ಭೂಕಂಪದ ಅನುಭವ
ವಿಜಯಪುರ: ಕಳೆದ ಕೆಲವು ದಿನಗಳ ಹಿಂದಷ್ಟೇ ಮದ್ಯರಾತ್ರಿ ವೇಳೆಗೆ ಭೂಕಂಪದಿಂದ ಗಾಬರಿಯಾಗಿದ್ದ ಗುಮ್ಮಟ ನಗರಿಯ ಜನತೆ ಈಗ ಬೆಳಗಿನ ಜಾವ ಭೂಮಿ ಕಂಪಿಸಿದ ಅನುಭವದಿಂದ ಬೆಚ್ಚಿ ಬಿದ್ದಿದ್ದಾರೆ. ಬೆಳಿಗ್ಗೆ 8.18 ಮತ್ತು 8.20ರ ಅವಧಿಯಲ್ಲಿ ಎರಡು ಬಾರಿ ಒಂದೆರಡು ಸೆಕೆಂಡ್ ಕಾಲ ಭೂಮಿ ನಡುಗಿದ ಅನುಭವವಾಗಿದೆ. ಇದು ಮನೆ ಮತ್ತು ಇತರ ಕಟ್ಟಡಗಳ ಮೊದಲ ಮತ್ತು ಎರಡನೆ ಹಾಗೂ ಅದಕ್ಕೂ ಹೆಚ್ಚಿನ ಮಹಡಿಗಳಲ್ಲಿ ವಾಸಿಸುವವರ ಗಮನಕ್ಕೆ ಬಂದಿದೆ. ಏಕಾಏಕಿ ಉಂಟಾದ ಈ ಅನುಭವದಿಂದ ಜನರು ಗಾಬರಿಯಾಗಿದ್ದಾರೆ. ಅಲ್ಲದೇ, […]
ಜಿಲ್ಲೆಗಳಲ್ಲಿ ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನಕ್ಕೆ ಸಚಿವರ ನೇಮಕ
ಬೆಂಗಳೂರು: ಭಾರತದ ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ಘೋಷಿಸಲಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಹಾಗೂ ಫಲಾನುಭವಿಗಳ ಆಯ್ಕೆ ಮಾಡಲು ನಡೆಯುವ ಸಭೆಯ ಅಧ್ಯಕ್ಷತೆ ವಹಿಸಲು ಜಿಲ್ಲಾವಾರು ಸಚಿವನ್ನು ನೇಮಕ ಮಾಜಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಗಳಲ್ಲಿ ಕೋವಿಡ್ ಮತ್ತು ನೆರೆ ಪರಿಹಾರ ಉಸ್ತುವಾರಿಗಾಗಿ ನೇಮಕ ಮಾಡಿರುವ ಸಚಿವರಿಗೆ ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನದ ಉಸ್ತುವಾರಿ ವಹಿಸಲಾಗಿದೆ. ಸಚಿವರು ಮತ್ತು ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನಕ್ಕೆ ವಹಿಸಲಾಗಿರುವ ಜಿಲ್ಲೆಗಳ ಮಾಹಿತಿ ಇಲ್ಲಿದೆ. 1. ಗೋವಿಂದ ಎಂ.ಕಾರಜೋಳ – ಬೆಳಗಾವಿ 2. […]
ಗಣೇಶೋತ್ಸವ ನಿರ್ಬಂಧ ಸಡಿಲಿಕೆ- ಸಿಎಂ ರಿಂದ ದೂರವಾಣಿ ಮೂಲಕ ಮಾಹಿತಿ- ಯತ್ನಾಳ ಪೇಸ್ ಬುಕ್ ಮೂಲಕ ಮಾಹಿತಿ
ವಿಜಯಪುರ: ಗಣೇಶೋತ್ಸವ ಆಚರಣೆಗಳಿಗೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಸರಕಾರ ತಮ್ಮ ಬೇಡಿಕೆಯಂತೆ ಸಡಿಲಗೊಳಿಸಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖುದ್ದಾಗಿ ತಮಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಕುರಿತು ಪೇಸ್ ಬುಕ್ ನಲ್ಲಿ ತಿಳಿಸಿರುವ ಯತ್ನಾಳ, ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿಯವರು, ವಿಜಯಪುರ ನಗರ ಶಾಸಕರಾದ ಶ್ರೀ ಬಸನಗೌಡ ಪಾಟೀಲ ಯತ್ನಾಳರವರಿಗೆ ಇಂದು […]
ವಸತಿ ಯೋಜನೆಗಳಡಿ ನಾಲ್ಕು ಲಕ್ಷ ಫಲಾನುಭವಿಗಳ ಆಯ್ಕೆಗೆ ಸಿಎಂ ಬಸವರಾಜ ಬೊಮ್ನಾಯಿ ಸೂಚನೆ
ಬೆಂಗಳೂರು: ನಾನಾ ವಸತಿ ಯೋಜನೆಗಳಡಿ ನಾಲ್ಕು ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಲುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ. ಈ ಬಗ್ಗೆ ಸರಕಾರಿ ಆದೇಶ ಹೊರಡಿಸಲಾಗಿದ್ದು, ಕೇಂದ್ರ ಸರಕಾರದಿಂದ ನಾಲ್ಲು ಲಕ್ಷ ಹೊಸ ಮನೆಗಳ ಗುರಿಗೆ ಅನುಮೋದನೆ ದೊರೆಯದಿದ್ದಲ್ಲಿ ಅಥವಾ ಅದಕ್ಕಿಂತ ಕಡಿಮೆ ಮನೆಗಳಿಗೆ ಅನುಮೋದನೆ ದೊರೆತಲ್ಲಿ ಉಳಿದ ಮನೆಗಳನ್ನು ರಾಜ್ಯದ ವಸತಿ ಯೋಜನೆಗಳಡಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿತ್ತು. ಅದರಂತೆ ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ ಹಾಗೂ […]
ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮಾಂಬೆಯ ಸಂದೇಶಗಳು ಎಲ್ಲರಿಗೂ ದಾರಿದೀಪವಾಗಿವೆ- ಎಸ್. ಆರ್. ಪಾಟೀಲ
ವಿಜಯಪುರ: ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಪುರಾಣ ಮಂಗಲೋತ್ಸವ ಕಾರ್ಯಕ್ರಮ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಶರಣಸೋಮನಾಳ ಗ್ರಾಮದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪಾಲ್ಗೋಂಡ ವಿಧಾನ ಪರಿಷತ ಪ್ರತಿಪಕ್ಷದ ನಾಯಕ ಎಸ್. ಆರ್. ಪಾಟೀಲ ಮಾತನಾಡಿದರು ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮಾಂಬೆಯ ಸಂದೇಶಗಳು ಇಂದಿಗೂ ಪ್ರಸ್ತುತವಾಗಿದ್ದು, ಎಲ್ಲರಿಗೂ ದಾರಿದೀಪಗಳಾಗಿವೆ. ಎಲ್ಲರೂ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ನಾನಾ ಸ್ವಾಮೀಜಿಗಳು ಮತ್ತು ಗ್ರಾಮದ ಮುಖಂಡರು ಉಪಸ್ಥಿತರಿದ್ದರು.