ದೆಹಲಿ ಪ್ರವಾಸ ಫಲಪ್ರದವಾಗಿದೆ- ಹಾರ್ಡವೇರ್ ಪಾರ್ಕ್ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ನವದೆಹಲಿಗೆ ತಾವು ನೀಡಿದ ಭೇಟಿ ಫಲಪ್ರದವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದ ಸಹಭಾಗಿತ್ವದಲ್ಲಿ ಬೆಂಗಳೂರು- ಕೋಲಾರ ಮಧ್ಯ ಭಾಗದಲ್ಲಿ ಹಾರ್ಡವೇರ್ ಪಾರ್ಕ್ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಕೇಂದ್ರ ಐಟಿ-ಬಿಟಿ ಮತ್ತು ಕೌಶಲ್ಯ ಅಭಿವೃದ್ಧಿ ಖಾತೆ ಸಹಾಯಕ ಸಚಿವ ರಾಜೀವ ಚಂದ್ರಶೇಖರ ಅವರನ್ನು ಭೇಟಿ ಮಾಡಿ ಈ ವಿಷಯದ ಕುರಿತು ಚರ್ಚೆ ಮಾಡಿದ್ದೇನೆ. ಈ ಯೋಜನೆ ಜಾರಿಗೆ ಅವರು ಆಸಕ್ತಿ ತೋರಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಡಿಜಿಟಲ್ ಸೌಲಭ್ಯ […]

ಬಸವ ನಾಡಿನಲ್ಲಿ ಏಳು ವರ್ಷಗಳಿಂದ ಸದ್ದಿಲ್ಲದೆ ನಡೆಯುತ್ತಿದೆ ಪರಿಸರಕ್ಕೆ ಪೂರಕವಾದ ಸಮಾಜಮುಖಿ ಕೆಲಸ

ವಿಜಯಪುರ: ಈಗ ಗಣೇಶ ಚತುರ್ಥಿ ಸಮೀಪಿಸುತ್ತಿದೆ. ತರಹೇವಾರಿ ಗಣೇಶ ಮೂರ್ತಿಗಳೂ ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ಆದರೆ, ಪರಿಸರಕ್ಕೆ ಪೂರಕವಾಗುವ ಮತ್ತು ಸಮಾಜಕ್ಕೆ ಉಪಯೋಗಿವಾಗುವ ಕಾರ್ಯವೊಂದನ್ನು ಬಸವ ನಾಡಿನ ಯುವಕರ ಗುಂಪು ವಿಜಯಪುರ ಜಿಲ್ಲೆಯಲ್ಲಿ ಕಳೆದ ಏಳು ವರ್ಷಗಳಿಂದ ಸದ್ದಿಲ್ಲದೆ ನಡೆಸುತ್ತಿದೆ. ಕಳೆದ ಏಳು ವರ್ಷಗಳಿಂದ ಪರಿಸರ ರಕ್ಷಣೆಗಾಗಿ ಹಲವು ಕಾರ್ಯಕ್ರಮ ಆಯೋಜಿಸುವ ಮೂಲಕ ಮನೆ ಮಾತಾಗಿರುವ ನನ್ನ ಗಿಡ, ನನ್ನ ಭೂಮಿ ಸಂಘಟನೆ ಕಳೆದ ಮೂರು ವರ್ಷಗಳಿಂದ ಮಹತ್ವದ ಕಾರ್ಯವೊಂದನ್ನು ಮಾಡುತ್ತಿದೆ. ಪರಿಸರ ಸ್ನೇಹಿ ಗಣೇಶ ಉತ್ಸವ […]

ವಿಜಯಪುರ-ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿ ಸುಧಾರಣೆ ಯೋಜನೆ ವಿಸ್ತರಣೆ ಸೇರಿ ನಾನಾ ಯೋಜನೆಗಳಿಗೆ ಆಗ್ರಹ- ನವದೆಹಲಿಯಲ್ಲಿ ಕೇಂದ್ರ ಸಚಿವರೊಂದಿಗೆ ಸಿಎಂ ಚರ್ಚೆ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸದಲ್ಲಿದ್ದು, ಕೇಂದ್ರ ಭೂಸಾರಿಗೆ, ರಾಷ್ಟ್ರೀಯ ಹೆದ್ದಾರಿ ಮತ್ತು ಎಂಎಸ್‌ಎಂಇ ಸಚಿವ ನಿತೀನ ಗಡ್ಕರಿ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಆಗಬೇಕಿರುವ ಕಾಮಗಾರಿಗಳಿಗೆ ಆದ್ಯತೆ ನೀಡುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಕುರಿತು ನಿತೀನ ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಿರುವ ಅವರು, ವಿಜಯಪುರ- ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ NH-548B ಸುಧಾರಣೆ ಯೋಜನೆಯನ್ನು ಈಗ 80 ಕಿ. ಮೀ. ಗೆ ಸೀಮಿತಗೊಳಿಸಿ […]

ಡೋಣಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ- ಎಲ್ಲಿ ಗೊತ್ತಾ?

ವಿಜಯಪುರ: ತುಂಬಿ ಹರಿಯುತ್ತಿದ್ದ ಡೋಣಿ ನದಿಯನ್ನು ದಾಟಲು ಯತ್ನಿಸಿದ ಬೈಕ್ ಸವಾರನೊಬ್ಬ ಕೊಚ್ಚಿ ಹೋಗುತ್ತಿದ್ದಾಗ, ಆತನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಹಡಗಿನಾಳ ಡೋಣಿ ಸೇತುವೆ ಬಳಿ ನಡೆದಿದೆ. ಈ ಸೇತೇವೆ ಡೋಣಿ ನಧಿಯ ಕೆಳಮಟ್ಟದಲ್ಲಿದ್ದು ತುಂಬಿ ಹರಿಯುತ್ತಿದೆ. ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಮೂಕಿಹಾಳ ಗ್ರಾಮದ ಯುವಕ ಇಸ್ಮಾಯಿಲ ಭಾವಿಕಟ್ಟಿ(23) ನೀರಿನ ಆಳವನ್ನು ಗಮನಿಸದೇ ಭಂಡ ಧೈರ್ಯದಿಂದ ಬೈಕಿನಲ್ಲಿ ಸಂಚರಿಸಿದ್ದಾರೆ. ಆಗ ಬೈಕ್ ಸಮೇತವಾಗಿ ನೀರಿನ ರಬಸಕ್ಕೆ […]

ರೇಲ್ವೆ ಸಚಿವರನ್ನು ಭೇಟಿ ಮಾಡಿದ ಸಿಎಂ- ಕಲಬುರಗಿ ರೇಲ್ವೆ ಡಿವಿಜನ್, ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಬೇಡಿಕೆ ಈಡೇರಿಸಲು ಮನವಿ

ನವದೆಹಲಿ: ಕರ್ನಾಟಕದಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ರೈಲ್ವೆ ಅಭಿವೃದ್ಧಿ ಯೋಜನೆಗಳ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಕಾರ್ಯಗತಗೊಳಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲಬುರ್ಗಿಯಲ್ಲಿ ರೈಲ್ವೆ ವಲಯ ಸ್ಥಾಪಿಸುವ ಬೇಡಿಕೆ ಇದೆ. ಇದರಿಂದ ಆ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಹುಬ್ಬಳ್ಳಿ-ಅಂಕೋಲಾ ರೈಲ್ವೇ ಮಾರ್ಗ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದೆ. ಈ ಪ್ರಕರಣ ಹೈಕೋರ್ಟಿನಲ್ಲಿದೆ. ಹೊಸ ಡಿಪಿಆರ್ ಮಾಡಲಾಗಿದ್ದರೂ ಅದನ್ನು […]

ಗುಮ್ಮಟ ನಗರಿಯ ಸ್ವಚ್ಛತೆಗೆ ಆದ್ಯತೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ನಗರದ ಇಟಗಿ ಪೆಟ್ರೋಲ್ ಪಂಪದಿಂದ ಗೋಳಗುಮ್ಮಟ ವರೆಗೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2021-22 ನೇ ವರ್ಷದ ನೆಹರು ಯುವ ಕೇಂದ್ರ ಜಿಲ್ಲಾ ಸಲಹಾ ಸಮಿತಿಯ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ಸ್ವಚ್ಛತಾ ಹಾಗೂ ಕೋವಿಡ್ ನಂತಹ ಜಾಗೃತಿ ಕಾರ್ಯಕ್ರಮಗಳನ್ನು ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಆಯೋಜಿಸಬೇಕು ಎಂದು ಸೂಚನೆ ನೀಡಿದರು. ಯುವ ಸಬಲೀಕರಣ, ಕ್ರೀಡಾ ಇಲಾಖೆ […]

ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡುವೆ- ಕಲಬುರಗಿಯಲ್ಲಿ ಜೆಡಿಎಸ್ ಜೊತೆಗೂಡಿ ಅಧಿಕಾರ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಲಿದ್ದು, ನೀಡಿ ಹಣಕಾಸು, ಲೋಕೋಪಯೋಗಿ ಸಚಿವರನ್ನು ಭೇಟಿಯಾಗಲಿರುವುದಾಗಿ ತಿಳಿಸಿದರು. ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಎರಡು ದಿನಗಳ ದೆಹಲಿ ಪ್ರವಾಸದಲ್ಲಿ ಕೇಂದ್ರ ಸಚಿವರಾದ ನಿತಿನ ಗಡ್ಕರಿ ಅವರನ್ನು ಭೇಟಿಯಾಗಿ ಲೋಕೋಪಯೋಗಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಸ್ತಾವನೆಗಳ ಬಗ್ಗೆ ಚರ್ಚೆ ನಡೆಸಲಿರುವುದಾಗಿ ತಿಳಿಸಿದರು. ವಸತಿ ಹಾಗೂ ನಗರಾಭಿವೃದ್ಧಿ ಸಚಿವರನ್ನೂ ಭೇಟಿಯಾಗುತ್ತೇನೆ. ರಾಜ್ಯದ ನಾನಾ ಪ್ರಸ್ತಾವನೆಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ಹಣಕಾಸು ಸಚಿವರ ಬಳಿ ಕೇಂದ್ರ […]

ಬೊಮ್ಮಾಯಿ, ನಾನು ಬಿಜೆಪಿಗೆ ಬರದಿದ್ದರೆ 2004 ರಲ್ಲಿ ಯಡಿಯೂರಪ್ಪ ಸಿಎಂ ಆಗುತ್ತಿರಲಿಲ್ಲ- ಬಿಜೆಪಿ ನಾಯಕರಿಗೆ ನೇರವಾಗಿ, ಖಾರವಾಗಿ ಎಚ್ಚರಿಕೆ ನೀಡಿದ ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಬಸವರಾಜ ಬೊಮ್ಮಾಯಿ ಮತ್ತು ತಾವು 2004ರಲ್ಲಿ ಜನತಾ ದಳ ಬಿಟ್ಟು ಬಿಜೆಪಿಗೆ ಬರದಿದ್ದರೆ ಅಂದು ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಿರಲಿಲ್ಲ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಬಿಜೆಪಿಯಲ್ಲಿ ನಾಯಕತ್ವದ ಬಗ್ಗೆ ಅಪಸ್ವರ ಎತ್ತಿರುವ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ಮುಂದಿನ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿಯೇ ನಡೆಯಲಿದೆ ಎಂದು ಹೇಳಿದ್ದಾರೆ. ಆದರೆ, ಇದಕ್ಕೆ ಬಿಜೆಪಿಯ ಕೆಲವು ಜನ ನಾಯಕರು […]

ಗಣೇಶ ಚತುರ್ಥಿ ಆಚರಣೆಗೆ ಏಳು ದಿನ ಕಾಲಾವಕಾಶ ನೀಡಿ, ಮೆರವಣಿಗೆ ನಡೆಸಲು ಬಿಡಿ- ಇಲ್ಲದಿದ್ದರೆ ತಾಲಿಬಾನ್ ರೀತಿ ವರ್ತಿಸಿದಂತಾಗುತ್ತದೆ- ಶಾಸಕ ಯತ್ನಾಳ ವಾಗ್ದಾಳಿ

ವಿಜಯಪುರ: ಗಣೇಶೋತ್ಸವ ಆಚರಣೆಗೆ ಸರಕಾರ ವಿಧಿಸಿರುವ ಷರತ್ತುಗಳ ಬಗ್ಗೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಗಣೇಶ ಚತುರ್ಥಿ ಆಚರಣೆಗೆ ಸರಕಾರ ಅವಕಾಶ ನೀಡಿರುವುದು ಸಮಾಧಾನ ತಂದಿಲ್ಲ. ನಮ್ಮ ಹೋರಾಟದ ಫಲವಾಗಿ ಶೇ. 50ರಷ್ಟು ಈ ವಿಚಾರದಲ್ಲಿ ಗೆದ್ದಿದ್ದೇವೆ. ಐದು ದಿನಗಳ ಬದಲು ಏಳು ದಿನಗಳ ಕಾಲ ಅವಕಾಶ ನೀಡಬೇಕಿತ್ತು. ಮೆರವಣಿಗೆಗೆ ಅವಕಾಶ ಕೊಡಬೇಕಿತ್ತು. ಅಲ್ಲದೇ, ಪ್ರತಿ ವಾರ್ಡಿಗೆ ಕೇವಲ ಒಂದು ಗಣೇಶ ಮೂರ್ತಿ ಪ್ರತಿಷ್ಠಾಪನೆ […]

ಈ ವರ್ಷ 5 ಸಾವಿರ ಶಿಕ್ಷಕರ ನೇಮಕ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷದಲ್ಲಿ 5000 ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಈ ಸಮಾರಂಭದಲ್ಲಿ ಶಿಕ್ಷಕರ ಕೊರತೆ ನೀಗಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ ಅವರು ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು 5000 ಶಿಕ್ಷಕರನ್ನು ನೇಮಕ ಮಾಡುವುದಾಗಿ ತಿಳಿಸಿದರು. 21ನೇ ಶತಮಾನ ಜ್ಞಾನದ […]