ಮುಂದಿನ ಚುನಾವಣೆ ಬಳಿಕ ನಾವೆಲ್ಲ ಒಗ್ಗೂಡಿ ಮುಂದುವರೆಯುತ್ತೇವೆ- ಶಾಸಕ ಎಂ. ಬಿ. ಪಾಟೀಲ ಹೀಗೆ ಹೇಳಿದ್ದು ಯಾವ ವಿಷಯಕ್ಕೆ ಗೊತ್ತಾ?
ಬೆಂಗಗಳೂರು: ಮಾಜಿ ಸಚಿವ ಮತ್ತು ಕಾಂಗ್ರೆಸ್ ಶಾಸಕ ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಆದರೆ, ಈ ಸುದ್ದಿಗೋಷ್ಠಿ ಆರಂಭಕ್ಕೂ ಮುನ್ನ ಅವರು ಇತ್ತೀಚಿಗೆ ಬೆಂಗಳೂರಿನಲ್ಲಿ ತಾವು ನೀಡಿರುವ ಹೇಳಿಕೆಯ ವಿಡಿಯೋವನ್ನು ಪತ್ರಕರ್ತರಿಗೆ ತೋರಿಸಿ ನಂತರ ಮಾತನಾಡಿದರು. ಈ ಹಿಂದೆ ನಾವು ವೀರಶೈವ ಒಳಗೊಂಡಂತೆ 99 ಉಪಪಂಗಡಗಳನ್ನು ಸೇರಿಸಿ, ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆ ಕೇಳಿದ್ದೇವು. ಮುಂದಿನ ಚುನಾವಣೆ ನಂತರ ನಾವೇಲ್ಲ ಒಗ್ಗೂಡಿ ಮುನ್ನೆಡೆಯುತ್ತೇವೆ ಎಂದು ಇತ್ತೀಚೆಗೆ ಹೇಳಿದ್ದೆ. ಇಲ್ಲಿ ಹೋರಾಟ, ಕೂಗು, ಪ್ರತ್ಯೇಕ ಈ ಶಬ್ದಗಳನ್ನು […]
ನಿರ್ಬಂಧ ಹೇರದೆ ಲಸಿಕೆ ಹಾಕಲು ಜಿಲ್ಲಾಧಿಕಾರಿಗಳಿಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಸೂಚನೆ
ಬೆಂಗಳೂರು: ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಕೈಗೊಂಡು ಲಸಿಕೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶ ನೀಡಿದ್ದಾರೆ. ಕೋವಿಡ್ ಲಸಿಕೆ ಪಡೆಯದ ಸಾರ್ವಜನಿಕರಿಗೆ ಪಿಂಚಣಿ ಮತ್ತು ಪಡಿತರವನ್ನು ನೀಡುವುದಿಲ್ಲವೆಂಬ ವರದಿಗಳು ಪತ್ರಿಕೆಗಳಲ್ಲಿ ವರದಿಯಾಗಿದ್ದು ಸರಕಾರದ ಗಮನಕ್ಕೆ ಬಂದಿದೆ. ಪಿಂಚಣಿ ಹಾಗೂ ಪಡಿತರವನ್ನು ಯಾವುದೇ ಕಾರ್ಯಕ್ರಮ ಮತ್ತು ಯೋಜನೆಗಳಿಗೆ ಜೋಡಿಸಿರುವುದಿಲ್ಲ. ಲಸಿಕಾ ಕಾರ್ಯವನ್ನು ತಪ್ಪಾಗಿ ಜೋಡಿಸಿದ್ದಲ್ಲಿ ಕೂಡಲೇ ಕೈಬಿಡಬೇಕು ಎಂದು ಅವರು ಇಂದು […]
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪುತ್ರಿಯ ವಿವಾಹದಲ್ಲಿ ಪಾಲ್ಗೋಂಡ ಕೇಂದ್ರ ಗೃಹ ಸಚಿವ ಅಮಿತ ಶಾ
ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದು, ದಾವಣಗೆರೆಯಿಂದ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಅವರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪುತ್ರಿ ಅರ್ಪಿತಾ ಮತ್ತು ಹೃಷಿಕೇಶ ಅವರ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೋಂಡರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹಸೆಮಣೆ ಏರಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪುತ್ರಿ- ಶುಭ ಕೋರಿದ ಸಿಎಂ, ಗಣ್ಯರು
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪುತ್ರಿ ಅರ್ಪಿತಾ ಅವರು ಹೃಷಿಕೇಶ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ನಾನಾ ಗಣ್ಯರು ನವದಂಪತಿಗೆ ಶುಭ ಕೋರಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೋಂಡ ಸಿಎಂ ಬಸವರಾಜ ಬೊಮ್ಮಾಯಿ ಅವರು ನೂತನ ದಂಪತಿಗೆ ಶುಭ ಕೋರಿದರು. ರಾಜ್ಯಪಾಲ ಧಾವರಚಂದ ಗೆಹ್ಲೋಟ್ ಕೂಡ ನೂತನ ದಂಪತಿಗೆ ಶುಭ ಕೋರಿದರು. ಕಂದಾಯ ಸಚಿವ ಆರ್. ಅಶೋಕ ಕೂಡ ಹುಬ್ಬಳ್ಳಿಗೆ ಆಗಮಿಸಿ ನವ ದಂಪತಿಗೆ […]
ಜನ್ಮಕೊಟ್ಟ ಪುಣ್ಯಭೂಮಿಯ ಋಣವನ್ನು ತೀರಿಸುವ ಕೆಲಸ ಮಾಡುವೆ- ಸಚಿವ ಗೋವಿಂದ ಕಾರಜೋಳ
ವಿಜಯಪುರ: ನನಗೆ ಜನ್ಮಕೊಟ್ಟಂಥ ಪುಣ್ಣಭೂಮಿಯ ಋಣವನ್ನು ತೀರಿಸುವ ಕೆಲಸವನ್ನು ಮಾಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಬುರಣಾಪುರ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯಪುರ ನನ್ನ ಜನ್ಮಭೂಮಿ. ನಾನು ಯಾವುದೇ ಇಲಾಖೆಯಲ್ಲಿರಲಿ ಜನ್ಮ ನೀಡಿದ ಪುಣ್ಯ ಭೂಮಿಯ ಋಣ ತೀರಿಸುವ ಕೆಲಸ ಮಾಡುತ್ತೇನೆ. ಇಲ್ಲಿ ನಿರ್ಮಿಸಲಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಯಾವುದೇ ಲಾಭ ಅಥವಾ ನಷ್ಟದ ದೃಷ್ಠಿ ಇಟ್ಟುಕೊಂಡು ನೋಡುವುದಿಲ್ಲ. ವಿಜಯಪುರ ಐತಿಹಾಸಿಕ ನಗರ. ಇಲ್ಲಿ […]
ರಾತ್ರಿವೇಳೆ ಮನೆಬಿಟ್ಟು ಹೊರಗೋಡಿ ಬಂದ ಗ್ರಾಮಸ್ಥರು- ಎಲ್ಲಿ, ಯಾಕೆ ಗೊತ್ತಾ?
ವಿಜಯಪುರ: ಅವರೆಲ್ಲ ರಾತ್ರಿವೇಳೆ ನಿಶ್ಚಿಂತೆಯಿಂದ ಮಲಗುತ್ತಿದ್ದರು. ಆದರೆ, ಆ ಒಂದು ಘಟನೆ ಅವರು ಮನೆಯಿಂದ ಹೊರಗೆ ಓಡಿ ಬರುವಂತೆ ಮಾಡಿದೆ. ಆಗ ಎಲ್ಲರೂ ಒಬ್ಬರ ಮುಖವನ್ನೊಬ್ಬರು ನೋಡಿ ತಂತಮ್ಮ ಆತಂಕದ ಕ್ಷಣಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ರಾತ್ರಿಯಿಡೀ ಮನೆಯ ಹೊರಗಡೆಯೇ ಜಾಗರಣೆ ಮಾಡಿ ಆತಂಕದಲ್ಲಿಯೇ ಕಾಲ ಕಳೆದಿದ್ದಾರೆ. ಅಂದಹಾಗೆ, ಈ ಘಟನೆ ನಡೆದಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿಬಿ, ಕರಭಂಟನಾಳ ಹಾಗೂ ಇತರ ಗ್ರಾಮಗಳಲ್ಲಿ. ಎಂದಿನಂತೆ ಇವರು ರಾತ್ರಿವೇಳೆ ಆರಾಮಾಗಿ […]
ರಾಷ್ಟ್ರೀಯ ಹೆದ್ದಾರಿ ವಿಭಾಗದ ರೇಲ್ವೆ ಮೇಲಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಂಸದ ರಮೇಶ ಜಿಗಜಿಣಗಿ ಖಡಕ್ ಸೂಚನೆ
ವಿಜಯಪುರ: ರಾಷ್ಟ್ರೀಯ ಹೆದ್ದಾರಿ ವಿಭಾಗದ ರೇಲ್ವೆ ಮೇಲ್ಸೆತುವೆ ಕಾಮಗಾರಿಯನ್ನು 24 ತಿಂಗಳೊಳಗಾಗಿ ಪೂರ್ಣ ಗೊಳಿಸುವಂತೆ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರೇಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ ಅವರು ಮಾತನಾಡಿದರು. ಈ ಕಾಮಗಾರಿಯಡಿ ನಂ. 218 ಕಿ. ಮೀ. 15.00 ರಲ್ಲಿ ರೇಲ್ವೆ ಮೇಲ್ಸೇತುವೆ ರಸ್ತೆಯ ಉದ್ದ 1.51 ಕಿ. ಮೀ. ಇದ್ದು, ಅಂದಾಜು ರೂ. 58.13 ಕೋ. ರೂ […]
ವಿಜಯಪುರ ಜಿಲ್ಲೆಯ ಮುಮ್ಮಟ್ಟಿಗುಡ್ಡಕ್ಕೆ ಭೇಟಿ ನೀಡಿದ ಸಚಿವ ಕೆ ಎಸ್ ಈಶ್ವರಪ್ಪ ಪುತ್ರ ಕಾಂತೇಶ ಯಾಕೆ ಗೊತ್ತಾ?
ವಿಜಯಪುರ: ಹಾಲುಮತ ಸಮಾಜ ಮೀಸಲಾತಿ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಈಗಾಗಲೇ ಸ್ವಾಮೀಜಿಗಳ ನೇತೃತ್ವದಲ್ಲಿ ಹೋರಾಟ ನಡೆಸಿದೆ. ಈಗ ತಮ್ಮ ತಂದೆ ಕೆ. ಎಸ್. ಈಶ್ವರಪ್ಪ ಸಚಿವರಾಗಿದ್ದು, ಸರಕಾರದ ಬಾಕಿ ಇರುವ ಒಂದೂವರೆ ವರ್ಷದ ಅವಧಿಯಲ್ಲಿ ಸಾಧ್ಯವಾದಷ್ಟು ಬೇಡಿಕೆಗಳನ್ನು ಈಡೇರಿಸಲು ಶ್ರಮಿಸುವುದಾಗಿ ಸಚಿವ ಕೆ. ಎಸ್. ಈಶ್ವರಪ್ಪ ಅವರ ಪುತ್ರ ಕೆ. ಈ. ಕಾಂತೇಶ ಭರವಸೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಜಿಲ್ಲೆಯ ಮುಮ್ಮಟ್ಟಿಗುಡ್ಡಕ್ಕೆ ಭೇಟಿ ನೀಡಿದ ಅವರು, ಮುಮ್ಮೆಟ್ಟಿಗುಡ್ಡದ ಸುಕ್ಷೇತ್ತ ಶ್ರೀ ಅಮೋಘಸಿದ್ಧ ದೇವಾಲಯಕ್ಕೆ ಭೇಟಿ […]
ಕ್ಯಾನ್ಸರ್ ಪೀಡಿತ ಮುಸ್ಲಿಂ ಮಹಿಳೆಯರ ಚಿಕಿತ್ಸೆಗೆ ಸಹಾಯ ಧನ- ನಾನು ಘೋಷಣೆ ಮಾಡಿದ ಯೋಜನೆಯಲ್ಲ- ನಮಗೆ ಹಿಂದೂ-ಮುಸ್ಲಿಂ ಭೇದ-ಭಾವವಿಲ್ಲ- ಸಚಿವೆ ಶಶಿಕಲಾ ಜೊಲ್ಲೆ
ವಿಜಯಪುರ: ಕ್ಯಾನ್ಸರ್ ಪೀಡಿತ ಮುಸ್ಲಿಂ ಮಹಿಳೆಯರಿಗೆ ಸರಕಾರದಿಂತ ತಲಾ ಒಂದು ಲಕ್ಷ ರೂಪಾಯಿ ಸಹಾಯ ಧನ ನೀಡುವ ಯೋಜನೆ ತಾವು ಘೋಷಣೆ ಮಾಡಿದ್ದಲ. ಇದು 2009 ರಿಂದಲೇ ಜಾರಿಯಲ್ಲಿದೆ ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದ್ದಾರೆ. ವಿಜಯಪುರ ನಗರದ ಅದೃಷ್ಟ ಲಕ್ಷ್ಮೀ ದೇವಸ್ಥಾನದಲ್ಲಿ ನಡೆದ ಕೊರೊನಾ ವಾರಿಯರ್ಸ್ ಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಅವರು, ಈ ಯೋಜನೆ ಬಗ್ಗೆ ಬಹಳಷ್ಟು ಜನರು ತಪ್ಪು ತಿಳುವಳಿಕೆ ಹೊಂದಿದ್ದಾರೆ. ಹಜ್ ಮತ್ತು […]
ಯಾವ ಕ್ಲಾಸಲ್ಲಿ ಓದ್ತಾ ಇದಿಯಮ್ಮಾ? ಕ್ಲಾಸ್ ಶುರು ಆಗಿವೆಯಾ? ವಿದ್ಯಾರ್ಥಿಗಳನ್ನು ಪ್ರಶ್ನಿಸಿದ ಸಿಎಂ
ಹಾವೆರಿ: ಯಾವ ಕ್ಲಾಸಲ್ಲಿ ಓದ್ತಾ ಇದಿಯಮ್ಮಾ? ಕ್ಲಾಸ್ ಶುರು ಆಗಿವೆಯಾ? ಸರಿಯಾಗಿ ಓದಮ್ಮಾ. ಇವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯ ತಮ್ಮ ಸ್ವಕ್ಷೇತ್ರೆ ಶಿಗ್ಗಾವಿ ವಿಧಾನಸಭೆ ಕ್ಷೇತ್ರದ ಅರಟಾಳ ದುಂಡಸಿ ಗ್ರಾಮದ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಮಕ್ಕಳಿಗೆ ಕೇಳಿದ ಪ್ರಶ್ನೆಗಳಿವು. ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ ಮುಖ್ಯಮಂತ್ರಿಗಳು ತಡಸ ಗ್ರಾಮದಿಂದ ಹೊರಟ ನಂತರ ಮಾರ್ಗಮಧ್ಯದ ಅರಟಾಳದುಂಡಸಿ ಗ್ರಾಮಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದ ಪ್ರೌಢಶಾಲೆ ವಿದ್ಯಾರ್ಥಿಗಳು ಸಿಎಂ ಅವರನ್ನು ಸ್ವಾಗತಿಸಿದರು. […]