ಮೈಸೂರು ಗ್ಯಾಂಗ್ ರೇಪ್ ಆರೋಪ ಪ್ರಕರಣ- ಆದಷ್ಟು ಬೇಗ ಆರೋಪಿಗಳ ಬಂಧನ- ಸಿಎಂ
ಬೆಂಗಳೂರು: ಮೈಸೂರು ನಡೆದ ಗ್ಯಾಂಗ್ ರೇಪ್ ಆರೋಪ ಪ್ರಕರಣವನ್ನು ಬಹಳ ಗಂಭೀರವಾಗಿ ಪರಿಗಣಿಸಲಾಗಿದೆ. ಅತೀ ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತಮ್ಮ ತವರು ಜಿಲ್ಲೆ ಹಾವೇರಿಗೆ ಪ್ರಯಾಣ ಬೆಳೆಸುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಪೊಲೀಸರು ಈ ಪ್ರಕರಣವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಐದು ತಂಡಗಳನ್ನು ರಚಿಸಲಾಗಿದೆ. ಆ ತಂಡಗಳು ತಮ್ಮ ಕೆಲಸವನ್ನು ಮಾಡುತ್ತಿವೆ ಎಂದು ತಿಳಿಸಿದರು. ಆರೋಪಿಗಳನ್ನು ಬಂಧಿಸುವಂತೆ ನಾನು ಮೊನ್ನೆಯೇ ಪೊಲೀಸರಿಗೆ ಸೂಚನೆ ನೀಡಿದ್ದೇನೆ. […]
ಪಾರಂಪರಿಕ ಕಸುಬುದಾರರ ನೆರವಿಗೆ ಸರಕಾರ ಆದ್ಯತೆ ನೀಡಲಿದೆ- ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ದೈವಜ್ಞ ಬ್ರಾಹ್ಮಣ ಸಮಾಜ ಹಾಗೂ ಇತರ ಸಮುದಾಯದವರು ತಮ್ಮ ಪಾರಂಪರಿಕ ಕಸುಬನ್ನು ಉಳಿಸಿ ಬೆಳೆಸಲು ಸರಕಾರ ಎಲ್ಲ ರೀತಿಯ ನೆರವು ನೀಡಲು ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಸಂಘದ ಸಮುದಾಯ ಭವನ ನಿರ್ಮಾಣಕ್ಕೆ ವರ್ಚುವಲ್ ಕಾರ್ಯಕ್ರಮದಲಲ್ಲಿ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಬದಲಾಗುತ್ತಿರುವ ಆರ್ಥಿಕ ವ್ಯವಸ್ಥೆಯಲ್ಲಿ ಕುಲಕಸುಬುಗಳನ್ನು ಉಳಿಸಿ ಬೆಳೆಸಿಕೊಳ್ಳುವ ನಾನಾ ಸಮುದಾಯಗಳ ಪ್ರಯತ್ನ ಅತ್ಯಂತ ಅಭಿಮಾನ ಪಡುವ ವಿಷಯ […]
ಎಣ್ಣೆಕಾಳು ಉತ್ಪಾದನೆಗೆ ಉತ್ತೇಜನ- ಸಂರಕ್ಷಿತ ದರ ಒದಗಿಸಲು ಕ್ರಮ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಎಣ್ಣೆಕಾಳು ಉತ್ಪಾದನೆಗೆ ಒತ್ತು ನೀಡುವುದು ಮತ್ತು ತಾಳೆ ಬೆಳೆಗೆ ಉತ್ತೇಜನ, ಕೃಷಿ ಉತ್ಪನ್ನ ಸಂಸ್ಕರಣೆ ರಫ್ತಿಗೆ ಒತ್ತು ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಕೃಷಿ ಖಾತೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ ಚರ್ಚೆ ನಡೆಸಿದರು. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಕೃಷಿ ವಿಷಯಗಳ ಕುರಿತು ಚರ್ಚೆ ನಡೆಸಿದರು. ಚರ್ಚಿಸಲಾಯಿತು. ರಾಜ್ಯದಲ್ಲಿ ಎಣ್ಣೆಕಾಳು ಬೆಳೆಯಲು ಉತ್ತೇಜನ ನೀಡಲಾಗುತ್ತಿದೆ. ಆದರೆ ರೈತರಿಗೆ ವೈಜ್ಞಾನಿಕ ತರಬೇತಿ ಹಾಗೂ ಹೆಚ್ಚಿನ ಬೆಂಬಲದ ಅಗತ್ಯವಿದೆ. ಬೆಲೆಯಲ್ಲಿ ಭಾರಿ […]
ರಾಷ್ಟ್ರೀಯ ಅಸಂಘಟಿತ ಕಾರ್ಮಿಕರ ನೋಂದಣಿ ಇ-ಶ್ರಮ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ
ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಅಸಂಘಟಿತ ಕಾರ್ಮಿಕರ ನೋಂದಣಿ ಇ-ಶ್ರಮ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಈ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸ್ವಾತಂತ್ರ್ಯ ಬಂದ ನಂತರ ಅಸಂಘಟಿತ ಕಾರ್ಮಿಕರ ನೋಂದಣಿ ಮೊದಲ ಬಾರಿ ನಡೆಯುತ್ತಿದೆ. ಅವರನ್ನು ಗುರುತಿಸಲಾಗುತ್ತಿದೆ. ಅಸಂಘಟಿತ ಕಾರ್ಮಿಕರಿಗೆ ಉದ್ಯೋಗ ಭದ್ರತೆ, ಜೀವನದ ಭದ್ರತೆ, ಆರೋಗ್ಯ, ಶಿಕ್ಷಣ ಮೊದಲಾದ ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ. ಅವರಿಗೆ ಜೀವನ ಭದ್ರತೆಯೊಂದಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ದೊರೆಯುವಂತಾಗಬೇಕು ಎಂದು ಆಶಿಸಿದರು. […]
ಸತ್ಯಸಾಯಿ ಅವರ ಪ್ರಭಾವದಿಂದ ಜೀವನದಲ್ಲಿ ಸಾಕಷ್ಟು ಕಲಿತಿದ್ದೇನೆ- ಸಿಎಂ ಬಸವರಾಜ ಬೊಮ್ಮಾಯಿ
ಚಿಕ್ಕಬಳ್ಳಾಪುರ: ಸತ್ಯಸಾಯಿ ಅವರ ಪ್ರಭಾವದಿಂದಾಗಿ ತಾವು ಜೀವನದಲ್ಲಿ ಸಾಕಷ್ಟು ಕಲಿತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಪ್ರಶಾಂತಿ ಬಾಲಮಂದಿರ ಟ್ರಸ್ಟ್ ವತಿಯಿಂದ ನಿರ್ಮಿಸಿರುವ 300 ಹಾಸಿಗೆಗಳ ಶ್ರೀ ಸತ್ಯಸಾಯಿ ಸರಳಾ ಸ್ಮಾರಕ ಆಸ್ಪತ್ರೆ ಮತ್ತು ಮಕ್ಕಳ ತೀವ್ರ ನಿಗಾ ಘಟಕವನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಸತ್ಯಸಾಯಿ ಅವರ ಪ್ರಭಾವ ತಮ್ಮ ಮೇಲೆ ಸಾಕಷ್ಠಿದೆ. ನಾನು 1998ರಲ್ಲಿ ಸತ್ಯಸಾಯಿ ಬಾಬಾ ಅವರ ದರ್ಶನ ಪಡೆದಿದ್ದೆ. ಆ ಸಂದರ್ಭದಲ್ಲಿ ಸಸ್ಯಾಹಾರ ಮತ್ತು […]
ರಾಜ್ಯದಲ್ಲಿ ಅತ್ಯಾಧುನಿಕ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಸರಕಾರದ ಬೆಂಬಲ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಉದ್ಯೋಗ ಸೃಷ್ಠಿಸುವ ಆಭರಣ ಉದ್ದಿಮೆ ಕೌಶಲ್ಯವಿರುವ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೀಗಾಗಿ ಆಧುನಿಕ ತಂತ್ರಜ್ಞಾನದಿಂದ ಆಭರಣ ಉತ್ಪಾದನೆಗೆ ಅನುಕೂಲವಾಗುವಂಥ ಅತ್ಯಾಧುನಿಕ ಜುವೆಲರಿ ಪಾರ್ಕ್ ನಿರ್ಮಾಣಕ್ಕೆ ಅಗತ್ಯವಿರುವ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜುವೆಲ್ಲರಿ ಸಂಸ್ಥೆಗೆ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ಸೌತ್ ಜ್ಯುವೆಲ್ಲರಿ ಷೋ ಉದ್ಘಾಟಿಸಿ ಅವರು ಮಾತನಾಡಿದರು. ಬ್ಯುಲಿಯನ್ ವಿನಿಮಯ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಭಾರತದ ಆಭರಣ ವ್ಯಾಪಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೈಪೋಟಿ ಮಾಡಬೇಕಾದ ಪರಿಸ್ಥಿತಿ ಇದೆ. […]
ರಾಜ್ಯಕ್ಕೆ ಪ್ರತಿದಿನ 5 ಲಕ್ಷ ಕೋವಿಡ್ ಲಸಿಕೆ ಪೂರೈಕೆ, ಮೆಗಾ ಟೆಕ್ಸಟೈಲ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಒಪ್ಪಿಗೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ನವದೆಹಲಿ: ರಾಜ್ಯಕ್ಕೆ ಪ್ರತಿ ದಿನ 5 ಲಕ್ಷ ಡೋಸ್ ಕೋವಿಡ್ ಲಸಿಕೆ ಪೂರೈಕೆ ಮಾಡಲು ಕೇಂದ್ರ ಸರಕಾರ ಒಪ್ಪಿಗೆ ಸೂಚಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಅವರನ್ನು ಭೇಟಿ ಮಾಡಿ ಈ ಕುರಿತು ಚರ್ಚೆ ನಡೆಸಲಾಗಿದೆ. ಈಗ ಪ್ರತಿ ದಿನ 3.50 ಲಕ್ಷ ದಿಂದ 4 ಲಸಿಕೆ ರಾಜ್ಯಕ್ಕೆ ಲಸಿಕೆ ಪೂರೈಕೆಯಾಗುತ್ತಿದೆ. ಸೆಪ್ಟೆಂಬರ್ ತಿಂಗಳಿಂದ ಪ್ರತಿ ದಿನ 5 ಲಕ್ಷ ಲಸಿಕೆ ಹಾಕಲು ರಾಜ್ಯ […]
ಕೈಗಾರಿಕೆಗಳ ಆಸ್ತಿ ತೆರಿಗೆ ಬಗ್ಗೆ ಕೈಗಾರಿಕೋದ್ಯಮಿಗಳೊಂದಿಗೆ ಚರ್ಚಿಸಿ ಕ್ರಮ-ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ
ವಿಜಯಪುರ: ಆಸ್ತಿ ತೆರಿಗೆ ಬಗ್ಗೆ ಕೈಗಾರಿಕೋದ್ಯಮಿಗಳ ಜೊತೆ ಚರ್ಚಿಸಿ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮಹಾಲ ಬಗಾಯತನಲ್ಲಿರುವ ಕೈಗಾರಿಕೆ ಘಟಕಗಳಿಗೆ ವಿಧಿಸಿರುವ ಆಸ್ತಿ ತೆರಿಗೆ ಬಗ್ಗೆ ಕೈಗಾರಿಕೋದ್ಯಮಿಗಳ ಜೊತೆ ಮಹಾನಗರಪಾಲಿಕೆಯ ಆಯುಕ್ತರು, ಮಹಾನಗರಪಾಲಿಕೆಯ ಕಂದಾಯ ಅಧಿಕಾರಿಗಳು, ಬೆಳಗಾವಿ ಸಹಾಯಕ ಪ್ರಧಾನ ವ್ಯವಸ್ಥಾಪಕರು ಜಂಟಿಯಾಗಿ ಚರ್ಚಿಸಿ ಈ ಕುರಿತು ಸೂಕ್ತ ನಿರ್ಣಯ […]
ಜಲವಿವಾದ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ ಸುದೀರ್ಘ ಕಾಲದಿಂದ ಬಾಕಿ ಉಳಿದಿರುವ ಎಲ್ಲ ಜಲ ವಿವಾದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ರಾಜ್ಯ ಸರಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕಾನೂನು ಮತ್ತು ತಾಂತ್ರಿಕ ತಜ್ಞರೊಂದಿಗೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ಹಾಗೂ ತಮಿಳುನಾಡು ಸರಕಾರ ಕೈಗೆತ್ತಿಕೊಂಡಿರುವ ಯೋಜನೆಗಳ ಕುರಿತು ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು […]
ನವದೆಹಲಿಯಲ್ಲಿ ಪೊಲೀಸ್ ಸ್ಮಾರಕ, ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿ ಸಂದರ್ಶಕರ ಪುಸ್ತಕದಲ್ಲಿ ಅಭಿಪ್ರಾಯ ದಾಖಲಿಸಿದ ಸಿಎಂ ಬಸವರಾಜ ಬೊಮ್ಮಾಯಿ
ನವದೆಹಲಿ: ರಾಷ್ಟ್ರ ರಾಜಧಾನಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವದೆಹಲಿಯಲ್ಲಿ ಪೊಲೀಸ್ ಸ್ಮಾರಕ ಮತ್ತು ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಂದರ್ಶಕರ ಪುಸ್ತಕದಲ್ಲಿ ತಮ್ಮ ಅಭಿಪ್ರಾಯ ದಾಖಲಿಸಿದ ಸಿಎಂ, ಸ್ಮಾರಕಕ್ಕೆ ಭೇಟಿ ನೀಡಿರುವುದು ಅವಿಸ್ಮರಣೀಯ ಘಳಿಗೆ. ಈ ಮ್ಯೂಸಿಯಂ ಪೊಲೀಸರ ಕರ್ತವ್ಯಪರತೆ ಹಾಗೂ ಸಮರ್ಪಣಾ ಭಾವದ ಕುರಿತು ಒಳನೋಟ ನೀಡುತ್ತದೆ. ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುತ್ತಿರುವ ಕಾರಣ ಪ್ರಜಾಪ್ರಭುತ್ವ ಯಶಸ್ವಿಯಾಗಿದೆ. ಈ ಭೇಟಿಯು ನನ್ನಲ್ಲಿ ಸಮರ್ಪಣಾ ಭಾವ ಮತ್ತು ಕರ್ತವ್ಯಪ್ರಜ್ಞೆಯನ್ನು ಜಾಗೃತಗೊಳಿಸಿದೆ. ದೇಶದ […]